ಮರ್ಸಿಡಿಸ್ ಬೆಂಝ್ ಕಾರುಗಳ ಫೀಚರ್ ಹೊಂದಲಿದೆ ಹೊಸ ಹ್ಯುಂಡೈ ಐ20
ಜನಪ್ರಿಯ ಕಾರು ಉತ್ಪಾದನಾ ಕಂಪನಿಯಾದ ಹ್ಯುಂಡೈ ತನ್ನ ಹೊಸ ಐ20 ಪ್ರೀಮಿಯಂ ಕಾರನ್ನು ಶೀಘ್ರದಲ್ಲೇ ಭಾರತೀಯ ಮಾರುಕಟ್ಟೆಯಲ್ಲಿ ಬಿಡುಗಡೆಗೊಳಿಸದೆ. ಈ ಹೊಸ ಹ್ಯುಂಡೈ ಐ20 ಕಾರಿನಲ್ಲಿ ಹಲವಾರು ಹೊಸ ಫೀಚರ್‌ಗಳನ್ನು ಹೊಂದಿರಲಿದೆ.

ಹೊಸ ತಲೆಮಾರಿನ ಐ20 ಕಾರು ಭಾರತೀಯ ಮಾರುಕಟ್ಟೆಯಲ್ಲಿ ಹಲವು ಬಾರಿ ಸ್ಪಾಟ್ ಟೆಸ್ಟ್ ಅನ್ನು ನಡೆಸಿದೆ.ಈ ಹ್ಯುಂಡೈ ಕಾರಿನ ಮುಂಭಾಗದಲ್ಲಿರು ಕ್ಯಾಸ್ಕೇಡಿಂಗ್ ಗ್ರಿಲ್ ಅನ್ನು ಹೊಂದಿದೆ. ಹಿಂದಿನ ಐ20 ಮಾದರಿಗೆ ಹೋಲಿಸಿದರೆ ಹೆಡ್ ಲ್ಯಾಂಪ್ ಮತ್ತು ಸೈಡ್ ಫ್ರೋಪೈಲ್ ವಿನ್ಯಾಸವನ್ನು ನವೀಕರಿಸಲಾಗಿದೆ ದೊಡ್ಡ ಕ್ರೀಸ್ ಲೈನ್ ಗಳನ್ನು ಒಳಗೊಂಡಿದೆ. ಈ ಹೊಸ ಐ20 ಕಾರು ಸಾಕಷ್ಟು ಸ್ಪೋರ್ಟಿಯರ್ ಮತ್ತು ಸ್ಟೈಲಿಶ್ ಲುಕ್ ಅನ್ನು ಹೊಂದಿದೆ.

ಹೊಸ ಹ್ಯುಂಡೈ ಐ20 ಕಾರು ಈ ವರ್ಷದ ಹಬ್ಬದ ಸೀಸನ್ ನಲ್ಲಿ ಬಿಡುಗಡೆಯಾಗಲಿದೆ. ಆದರೆ ಹ್ಯುಂಡೈ ಕಂಪನಿಯು ಈ ಕಾರಿನ ಬಿಡುಗಡೆಯ ದಿನಾಂಕವನ್ನು ಬಹಿರಂಗಪಡಿಸಿಲ್ಲ. ಹೊಸ ಹುಂಡೈ ಐ20 ಕಾರಿನ ಬದಿಯ ಪಿಲ್ಲರ್‍ಗಳು ಕಪ್ಪು ಬಣ್ಣವನ್ನು ಹೊಂದಿದೆ.
MOST READ: ಗ್ಲೋಬಲ್ ಎನ್‌ಸಿಎಪಿಯ ಸುರಕ್ಷತಾ ಟೆಸ್ಟ್ನಲ್ಲಿ ಅಗ್ರಸ್ಥಾನಗಳಿಸಿದ ಮಹೀಂದ್ರಾ ಕಾರು

ಇನ್ನು ಈ ಹೊಸ ಕಾರಿನಲ್ಲಿ ಎರಡು ಟೇಲ್ ಲ್ಯಾಂಪ್‍ಗಳನ್ನು ಅಳವಡಿಸಲಾಗಿದೆ. ವಿಡಬ್ಲ್ಯೂ ಟೈಗನ್‍ನಲ್ಲಿ ಇರುವಂತಹ ಕೆಂಪು ಇಲ್‍ಇಡಿ ಡಿಆರ್‍ಎಲ್ ಸ್ಟಾಪ್ ಲೈಟ್ ಹಿಂಭಾಗದಲ್ಲಿ ಟೇಲ್‍ಲೈಟ್ ಹೊಂದಿದೆ.

ಹೊಸ ಹ್ಯುಂಡೈ ಕಾರಿನ ಇಂಟಿರಿಯರ್‍ನಲ್ಲಿ 4 ಸ್ಫೋಕ್ ಸ್ಟೀಯರಿಂಗ್ ವ್ಹೀಲ್ ಅನ್ನು ಅಳವಡಿಸಲಾಗಿದೆ. ಇದು ಹೊಸ ಹ್ಯುಂಡೈ ಕ್ರೆಟಾ ಕಾರಿನಲ್ಲಿರುವ ಸ್ಟೀಯರಿಂಗ್ ಮಾದರಿಯಲ್ಲಿದೆ. ಹೊಸ ಹ್ಯುಂಡೈ ಐ20 ಕಾರಿನಲ್ಲಿ ಆಡಿಯೊ ಸಿಸ್ಟಂ, ಕ್ರೂಸ್ ಕಂಟ್ರೋಲ್ ಮತ್ತು ಫುಲ್-ಡಿಜಿಟಲ್ ಇನ್ಸ್ ಟ್ರೂಮೆಂಟ್ ಕ್ಲಸ್ಟರ್ ಅನ್ನು ಒಳಗೊಂಡಿದೆ. ಜೊತೆಗೆ ಬ್ಲೂ ಲಿಂಕ್ ಟೆಕ್ನಾಲಜಿಯನ್ನು ಕೂಡ ಹೊಂದಿರಲಿದೆ.
MOST READ: ಭಾರತಕ್ಕೆ ಲಗ್ಗೆ ಇಡಲಿದೆ ಹೊಸ ಹೋಂಡಾ ಹೆಚ್‌ಆರ್-ವಿ ಎಸ್‍ಯುವಿ

ಹೊಸ ಹ್ಯುಂಡೈ ಐ20 ಕಾರಿನಲ್ಲಿ ಬೋಸ್ ಸೌಂಡ್ ಸಿಸ್ಟ ಅನ್ನು ಹೊಂದಿರಲಿದೆ. ಇನ್ನು ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಬಿಡುಗಡೆಯಾಗಲಿರುವ ಹುಂಡೈ ಐ20 ಕಾರಿನಲ್ಲಿ 8-ಸ್ಪೀಕರ್ ಮ್ಯೂಸಿಕ್ ಸಿಸ್ಟಂ ಅನ್ನು ಹೊಂದಿರಲಿದೆ. ಇನ್ನು ಮುಂಭಾಗದ ಡೋರ್ ಗಳಲ್ಲಿ ಸೂಪರ್ 65 ಸ್ಪೀಕರ್‌ಗಳನ್ನು ಅಳವಡಿಸಲಾಗುತ್ತದೆ.

ಇದೇ ಮಾದರಿಯ ಮ್ಯೂಸಿಕ್ ಸಿಸ್ಟಂಗಳು ಮರ್ಸಿಡಿಸ್ ಬೆಂಝ್ ಮತ್ತು ಆಡಿ ಕಾರುಗಳಲ್ಲಿ ಲಭ್ಯವಿದೆ. ಭಾರತದಲ್ಲಿ ಬಿಡುಗಡೆಯಾಗಲಿರುವ ಹೊಸ ಐ20 ಕಾರಿನಲ್ಲಿ ಇದೇ ಮಾದರಿಯ ಸಿಸ್ಟಂ ಅನ್ನು ಹೊಂದಿರಬಹುದು ಎಂದು ವರದಿಗಳು ಪ್ರಕಟವಾಗಿದೆ.
MOST READ: ಮರ್ಸಿಡಿಸ್ ಬೆಂಝ್ ಜಿಎಲ್ಇ ಎಸ್‍ಯುವಿಯ ಎರಡು ಹೊಸ ರೂಪಾಂತರಗಳು ಬಿಡುಗಡೆ

ಗ್ರ್ಯಾಂಡ್ ಐ10 ನಿಯೋಸ್ ಕಾರಿನಲ್ಲಿರುವಂತಹ 1.0 ಲೀಟರ್ ಪೆಟ್ರೋಲ್ ಟರ್ಬೊ ಎಂಜಿನ್ ಅನ್ನು ಅಳವಡಿಸುವ ಸಾಧ್ಯತೆಗಳಿದೆ. ಈ ಎಂಜಿನ್ 100 ಬಿಹೆಚ್‍ಪಿ ಪವರ್ ಮತ್ತು 172 ಎನ್‍ಎಂ ಟಾರ್ಕ್ ಅನ್ನು ಉತ್ಪಾದಿಸುತ್ತದೆ. ಈ ಎಂಜಿನ್‍ನೊಂದಿಗೆ 5 ಸ್ಫೀಡ್ ಮ್ಯಾನುವಲ್ ಗೇರ್‍ಬಾಕ್ಸ್ ಅನ್ನು ಅಳವಡಿಸಲಿದೆ.

ಇದರೊಂದಿಗೆ ಪ್ರಸ್ತುತ ಮಾರುಕಟ್ಟೆಯಲ್ಲಿ ಇರುವ ಮಾದರಿಯಂತೆ 1.2-ಲೀಟರ್ ಪೆಟ್ರೋಲ್ ಎಂಜಿನ್ ಮತ್ತು ಕಿಯಾ ಸೆಲ್ಟೋಸ್‌ನಿಂದ ಎರವಲು ಪಡೆದ 1.5-ಲೀಟರ್ ಡಿಟೂನ್ಡ್ ಡೀಸೆಲ್ ಎಂಜಿನ್ ಅನ್ನು ಹೊಂದಿರಲಿದೆ. ಬಿಎಸ್-6 ಹ್ಯುಂಡೈ ಐ20 ಕಾರು ಭಾರತೀಯ ಮಾರುಕಟ್ಟೆಯಲ್ಲಿ ಬಿಡುಗಡೆಯಾದ ನಂತರ ಮಾರುತಿ ಸುಜುಕಿ ಕಂಪನಿಯ ಬಲೆನೊ, ಫೋರ್ಡ್ ಫ್ರೀಸ್ಟೈಲ್, ಟಾಟಾ ಆಲ್ಟ್ರೋಜ್ ಹಾಗೂ ಹೋಂಡಾ ಜಾಜ್ ಕಾರುಗಳಿಗೆ ಪೈಪೋಟಿ ನೀಡಲಿದೆ.


Click it and Unblock the Notifications