ಹೊಸ ಎಂಟ್ರಿ ಲೆವಲ್ ವೆರಿಯೆಂಟ್ ಪಡೆದುಕೊಳ್ಳಲಿದೆ 2020ರ ಹ್ಯುಂಡೈ ಐ20

ಹ್ಯುಂಡೈ ಇಂಡಿಯಾ ಕಂಪನಿಯು ಕಳೆದ ವಾರವಷ್ಟೇ ತನ್ನ ಜನಪ್ರಿಯ ಪ್ರೀಮಿಯಂ ಹ್ಯಾಚ್‌ಬ್ಯಾಕ್ ಕಾರು ಮಾದರಿಯಾದ ಐ20 ಆವೃತ್ತಿಯನ್ನು ಹೊಸ ತಲೆಮಾರಿನ ವೈಶಿಷ್ಟ್ಯತೆಗಳೊಂದಿಗೆ ಬಿಡುಗಡೆ ಮಾಡಿದ್ದು, ಹೊಸ ಕಾರು ಹ್ಯಾಚ್‌ಬ್ಯಾಕ್ ಕಾರು ಮಾರಾಟದಲ್ಲಿ ಭರ್ಜರಿ ಬೇಡಿಕೆ ಪಡೆದುಕೊಳ್ಳುತ್ತಿದೆ.

ಹೊಸ ಎಂಟ್ರಿ ಲೆವಲ್ ವೆರಿಯೆಂಟ್ ಪಡೆದುಕೊಳ್ಳಲಿದೆ 2020ರ ಹ್ಯುಂಡೈ ಐ20

ಹೊಸ ತಲೆಮಾರಿನ ಐ20 ಕಾರು ಮಾದರಿಯು ಬಿಡುಗಡೆಯಾದ ಆರಂಭದಲ್ಲೇ ಸುಮಾರು 15 ಸಾವಿರಕ್ಕೂ ಅಧಿಕ ಬುಕ್ಕಿಂಗ್ ಪಡೆದುಕೊಂಡಿದ್ದು, ಹೊಸ ಕಾರು ಮ್ಯಾಗ್ನಾ, ಸ್ಪೋರ್ಟ್ಜ್, ಆಸ್ಟಾ ಮತ್ತು ಆಸ್ಟಾ ಆಪ್ಷನ್ ವೆರಿಯೆಂಟ್‌ಗಳೊಂದಿಗೆ ದೆಹಲಿ ಎಕ್ಸ್‌ಶೋರೂಂ ಪ್ರಕಾರ ಆರಂಭಿಕವಾಗಿ ರೂ. 6.80 ಲಕ್ಷದಿಂದ ಟಾಪ್ ಎಂಡ್ ಮಾದರಿಗೆ ರೂ. 11.18 ಲಕ್ಷ ಬೆಲೆ ಹೊಂದಿದೆ. ಇದೀಗ ಲಭ್ಯವಾಗಿರುವ ಮಾಹಿತಿಗಳ ಪ್ರಕಾರ ಐ20 ಮಾದರಿಯಲ್ಲಿ ಮತ್ತೊಂದು ಹೊಸ ವೆರಿಯೆಂಟ್ ಬಿಡುಗಡೆಯಾಗಲಿದ್ದು, ಹೊಸ ವೆರಿಯೆಂಟ್ ಆರಂಭಿಕ ಮಾದರಿಯಾಗಿ ಮಾರಾಟಗೊಳ್ಳಲಿದೆ.

ಹೊಸ ಎಂಟ್ರಿ ಲೆವಲ್ ವೆರಿಯೆಂಟ್ ಪಡೆದುಕೊಳ್ಳಲಿದೆ 2020ರ ಹ್ಯುಂಡೈ ಐ20

ಹ್ಯುಂಡೈ ಕಂಪನಿಯು ಐ20 ಕಾರಿನಲ್ಲಿ ಹೊಸದಾಗಿ ಎರಾ ಎನ್ನುವ ವೆರಿಯೆಂಟ್ ಬಿಡುಗಡೆ ಮಾಡಲಿದ್ದು, ಎರಾ ವೆರಿಯೆಂಟ್ ಸದ್ಯ ಮಾರುಕಟ್ಟೆಯಲ್ಲಿರುವ ಮ್ಯಾಗ್ನಾ ಮಾದರಿಗಿಂತಲೂ ಕಡಿಮೆ ಬೆಲೆಯೊಂದಿಗೆ ಮಾರುಕಟ್ಟೆ ಪ್ರವೇಶಿಸಲಿದೆ.

ಹೊಸ ಎಂಟ್ರಿ ಲೆವಲ್ ವೆರಿಯೆಂಟ್ ಪಡೆದುಕೊಳ್ಳಲಿದೆ 2020ರ ಹ್ಯುಂಡೈ ಐ20

ಐ20 ಎರಾ ಕಾರು ಮಾದರಿಯು ಶೀಘ್ರದಲ್ಲೇ ಬಿಡುಗಡೆಯಾಗುವ ಮಾಹಿತಿ ಲಭ್ಯವಾಗಿದ್ದು, ಗ್ರಾಹಕರ ಬೇಡಿಕೆಗೆ ಅನುಗುಣವಾಗಿ ಹೊಸ ಕಾರು ಮಾದರಿಯನ್ನು ಅಭಿವೃದ್ದಿಗೊಳಿಸಲಾಗಿದೆ. ಹೊಸ ಕಾರು ಮಾದರಿಯು ಸಾಮಾನ್ಯ ಮಾದರಿಯ ಪೆಟ್ರೋಲ್ ಮಾದರಿಯಲ್ಲಿ ಮಾತ್ರವೇ ಖರೀದಿಗೆ ಲಭ್ಯವಿರಲಿದ್ದು, ಡೀಸೆಲ್ ಮಾದರಿಯನ್ನು ಹೊಂದಿರುವುದಿಲ್ಲ.

ಹೊಸ ಎಂಟ್ರಿ ಲೆವಲ್ ವೆರಿಯೆಂಟ್ ಪಡೆದುಕೊಳ್ಳಲಿದೆ 2020ರ ಹ್ಯುಂಡೈ ಐ20

2020ರ ಐ20 ಹ್ಯಾಚ್‌ಬ್ಯಾಕ್ ಮಾದರಿಯಲ್ಲಿ ಒಂದು ಡೀಸೆಲ್ ಮತ್ತು ಎರಡು ಪೆಟ್ರೋಲ್ ಎಂಜಿನ್‌ಗಳ ಆಯ್ಕೆ ನೀಡಿದಲಾಗಿದ್ದು, ಗ್ರಾಹಕರು ತಮ್ಮ ಬೇಡಿಕೆಗೆ ಅನುಗುಣವಾಗಿ 1.0-ಲೀಟರ್ ಟರ್ಬೊ ಪೆಟ್ರೋಲ್, 1.2-ಲೀಟರ್ ಕಪ್ಪಾ ಪೆಟ್ರೋಲ್ ಮತ್ತು 1.5-ಲೀಟರ್ ಸಾಮಾರ್ಥ್ಯದ ಡೀಸೆಲ್ ಎಂಜಿನ್ ಆಯ್ಕೆ ಹೊಂದಿದೆ. ಹೊಸದಾಗಿ ಬಿಡುಗಡೆಯಾಗಲಿರುವ ಎರಾ ವೆರಿಯೆಂಟ್‌ನಲ್ಲಿ ಸಾಮಾನ್ಯ ಮಾದರಿಯ 1.2-ಲೀಟರ್ ಪೆಟ್ರೋಲ್ ಎಂಜಿನ್ ಮಾತ್ರವೇ ನೀಡಲಾಗುತ್ತಿದ್ದು, ಎಕ್ಸ್‌ಶೋರೂಂ ಪ್ರಕಾರ ರೂ. 6 ಲಕ್ಷ ಬೆಲೆ ಅಂತರದಲ್ಲಿ ಬಿಡುಗಡೆಯಾಗಲಿದೆ.

ಹೊಸ ಎಂಟ್ರಿ ಲೆವಲ್ ವೆರಿಯೆಂಟ್ ಪಡೆದುಕೊಳ್ಳಲಿದೆ 2020ರ ಹ್ಯುಂಡೈ ಐ20

ಪೆಟ್ರೋಲ್ ಮ್ಯಾನುವಲ್ ಆವೃತ್ತಿಯಾಗಲಿರುವ ಎರಾ ವೆರಿಯೆಂಟ್ ಮ್ಯಾಗ್ನಾ ಮಾದರಿಯಲ್ಲೇ ಬಹುತೇಕ ಫೀಚರ್ಸ್‌ಗಳನ್ನು ಪಡೆದುಕೊಂಡಿರಲಿದ್ದು, ಬೆಲೆ ಇಳಿಕೆಗಾಗಿ ಕೆಲವು ಪ್ರೀಮಿಯಂ ಫೀಚರ್ಸ್ ಕಡಿತ ಮಾಡಲಾಗುತ್ತದೆ.

MOST READ: ಭಾರತದಲ್ಲಿ ಎರಡು ಹೊಸ ಎಸ್‌ಯುವಿ ಕಾರು ಮಾದರಿಗಳನ್ನು ಬಿಡುಗಡೆ ಮಾಡಲಿದೆ ಹ್ಯುಂಡೈ

ಹೊಸ ಎಂಟ್ರಿ ಲೆವಲ್ ವೆರಿಯೆಂಟ್ ಪಡೆದುಕೊಳ್ಳಲಿದೆ 2020ರ ಹ್ಯುಂಡೈ ಐ20

ಆರಂಭಿಕ ಮ್ಯಾಗ್ನಾ ಕಾರು ಮಾದರಿಯು ಸದ್ಯ ಪೆಟ್ರೋಲ್ ಮತ್ತು ಡೀಸೆಲ್ ಎರಡು ಮಾದರಿಯಲ್ಲೂ ಖರೀದಿಗೆ ಲಭ್ಯವಿದ್ದು, ಎರಾ ಕಾರು ಮಾದರಿಯು ಪೆಟ್ರೋಲ್ ಮ್ಯಾನುವಲ್ ಆಯ್ಕೆಯೊಂದಿಗೆ ಎಂಟ್ರಿ ಲೆವಲ್ ಕಾರು ಖರೀದಿದಾರರನ್ನು ಸೆಳೆಯಲಿದೆ.

ಹೊಸ ಎಂಟ್ರಿ ಲೆವಲ್ ವೆರಿಯೆಂಟ್ ಪಡೆದುಕೊಳ್ಳಲಿದೆ 2020ರ ಹ್ಯುಂಡೈ ಐ20

ಇನ್ನು ಹೊಸ ತಲೆಮಾರಿನ ಐ20 ಕಾರು ಆಕರ್ಷಕ ಎಕ್ಸ್‌ಟಿರಿಯರ್ ಡಿಸೈನ್‌ನೊಂದಿಗೆ ಏರೋ ಡೈನಾಮಿಕ್ ಸ್ಪೋರ್ಟಿ ಲುಕ್ ಹೊಂದಿದ್ದು, ಹೊಸ ಕಾರು ಹಳೆಯ ಮಾದರಿಗಿಂತಲೂ ಹೆಚ್ಚಿನ ಮಟ್ಟದ ವೀಲ್ಹ್ ಬೆಸ್‌ನೊಂದಿಗೆ ಆರಾಮದಾಯಕ ಸ್ಥಳಾವಕಾಶ ಹೊಂದಿದೆ.

MOST READ: ಬಿಡುಗಡೆಗೆ ಸಿದ್ದವಾದ ಹೋಂಡಾದ ಮೊದಲ ಎಲೆಕ್ಟ್ರಿಕ್ ಕಾರು

ಹೊಸ ಎಂಟ್ರಿ ಲೆವಲ್ ವೆರಿಯೆಂಟ್ ಪಡೆದುಕೊಳ್ಳಲಿದೆ 2020ರ ಹ್ಯುಂಡೈ ಐ20

ಈ ಮೂಲಕ ಹಳೆಯ ಮಾದರಿಗಿಂತಲೂ ಹೆಚ್ಚು ಸ್ಪೋರ್ಟಿ ಮತ್ತು ಶಾರ್ಪ್ ಎಡ್ಜ್ ಡಿಸೈನ್ ಹೊಂದಿರುವ ಹೊಸ ಕಾರು ಪ್ರತಿಸ್ಪರ್ಧಿ ಕಾರು ಮಾದರಿಗಳಾದ ಮಾರುತಿ ಸುಜುಕಿ ಬಲೆನೊ ಮತ್ತು ಟಾಟಾ ಆಲ್‌ಟ್ರೊಜ್ ಕಾರುಗಳಿಗೆ ಮತ್ತಷ್ಟು ಪೈಪೋಟಿ ನೀಡಲಿದ್ದು, ಸೆಗ್ಮೆಂಟ್ ಇನ್ ಫೀಚರ್ಸ್‌ಗಳಲ್ಲಿ ಪ್ರತಿಸ್ಪರ್ಧಿ ಕಾರುಗಳಿಂತಲೂ ಹೊಸ ಐ20 ಸಾಕಷ್ಟು ಸುಧಾರಿತ ಅಂಶಗಳನ್ನು ಪಡೆದುಕೊಂಡಿದೆ.

Article Published On: Friday, November 13, 2020, 14:54 [IST]
English summary
2020 Hyundai i20 Entry Level Trim Could Launch Soon In India.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+