ಹೊಸ ಹ್ಯುಂಡೈ ಐ20 ಕಾರು ಬಿಡುಗಡೆ ಮಾಹಿತಿ ಬಹಿರಂಗ
ಹೊಸ ಹ್ಯುಂಡೈ ಐ20 ಭಾರತೀಯ ಮಾರುಕಟ್ಟೆಯಲ್ಲಿ ಬಿಡುಗಡೆಯಾಗಲಿರುವ ಬಹುನಿರೀಕ್ಷಿತ ಕಾರುಗಳಲ್ಲಿ ಒಂದಾಗಿದೆ. ಹ್ಯುಂಡೈ ಕಂಪನಿಯು ತನ್ನ ಮೂರನೇ ತಲೆಮಾರಿನ ಐ20 ಕಾರನ್ನು ಭಾರತೀಯ ಮಾರುಕಟ್ಟೆಯಲ್ಲಿ ಬಿಡುಗಡೆಗೊಳಿಸಲು ಸಜ್ಜಾಗಿದೆ.

ಹೊಸ ತಲೆಮಾರಿನ ಐ20 ಕಾರು ಭಾರತದಲ್ಲಿ ಇದೇ ತಿಂಗಳ 28 ರಂದು ಬಿಡುಗಡೆಯಾಗಲಿದೆ ಎಂದು ವರದಿಯಾಗಿದೆ. ಹೊಸ ಹ್ಯುಂಡೈ ಐ20 ಕಾರಿನ ವಿನ್ಯಾಸದ ಬಗ್ಗೆ ಹೇಳುವುದಾದರೆ, ಮುಂಭಾಗದಲ್ಲಿರು ಕ್ಯಾಸ್ಕೇಡಿಂಗ್ ಗ್ರಿಲ್ ಅನ್ನು ಹೊಂದಿದೆ. ಹಿಂದಿನ ಐ20 ಮಾದರಿಗೆ ಹೋಲಿಸಿದರೆ ಹೆಡ್ ಲ್ಯಾಂಪ್ ಮತ್ತು ಸೈಡ್ ಫ್ರೋಪೈಲ್ ವಿನ್ಯಾಸವನ್ನು ನವೀಕರಿಸಲಾಗಿದೆ ದೊಡ್ಡ ಕ್ರೀಸ್ ಲೈನ್ ಗಳನ್ನು ಒಳಗೊಂಡಿದೆ. ಈ ಹೊಸ ಐ20 ಕಾರು ಸಾಕಷ್ಟು ಸ್ಪೋರ್ಟಿಯರ್ ಮತ್ತು ಸ್ಟೈಲಿಶ್ ಲುಕ್ ಅನ್ನು ಹೊಂದಿದೆ. ಈ ಐ20 ಕಾರಿನ ಹೊಸ ಲುಕ್ ಭಾರತದಲ್ಲಿ ಮತ್ತಷ್ಟು ಗ್ರಾಹಕರನ್ನು ಸೆಳೆಯಲು ನೆರವಾಗುತ್ತದೆ.

ಹೊಸ ಹುಂಡೈ ಐ20 ಕಾರಿನ ಪಿಲ್ಲರ್‍ಗಳು ಬ್ಲ್ಯಾಕ್ ಬಣ್ಣವನ್ನು ಹೊಂದಿದೆ. ಇನ್ನು ಈ ಹೊಸ ಕಾರಿನಲ್ಲಿ ಎರಡು ಟೇಲ್ ಲ್ಯಾಂಪ್‍ಗಳನ್ನು ಅಳವಡಿಸಲಾಗಿದೆ. ವಿಡಬ್ಲ್ಯೂ ಟೈಗನ್‍ನಲ್ಲಿ ಇರುವಂತಹ ಕೆಂಪು ಇಲ್‍ಇಡಿ ಡಿಆರ್‍ಎಲ್ ಸ್ಟಾಪ್ ಲೈಟ್ ಹಿಂಭಾಗದಲ್ಲಿ ಟೇಲ್‍ಲೈಟ್ ಹೊಂದಿದೆ.
MOST READ: ಅನಾವರಣವಾಯ್ತು ಟೊಯೊಟಾ ಕೊರೊಲ್ಲಾ ಟೂರಿಂಗ್ ರಿಬ್ಯಾಡ್ಜ್ ಆವೃತ್ತಿ ಸುಜುಕಿ ಸ್ವೇಸ್

ಹೊಸ ಹ್ಯುಂಡೈ ಕಾರಿನ ಇಂಟಿರಿಯರ್‍ನಲ್ಲಿ 4 ಸ್ಫೋಕ್ ಸ್ಟೀಟಿಯರಿಂಗ್ ವ್ಹೀಲ್ ಅನ್ನು ಅಳವಡಿಸಲಾಗಿದೆ. ಇದು ಹೊಸ ಹ್ಯುಂಡೈ ಕ್ರೆಟಾ ಕಾರಿನಲ್ಲಿರುವ ಸ್ಟಿಟಿಯರಿಂಗ್ ಮಾದರಿಯಲ್ಲಿದೆ. ಹೊಸ ಹ್ಯುಂಡೈ ಐ20 ಕಾರಿನಲ್ಲಿ ಬೋಸ್ ಸೌಂಡ್ ಸಿಸ್ಟಂ, ಕ್ರೂಸ್ ಕಂಟ್ರೋಲ್ ಮತ್ತು ಫುಲ್-ಡಿಜಿಟಲ್ ಇನ್ಸ್ ಟ್ರೂಮೆಂಟ್ ಕ್ಲಸ್ಟರ್ ಅನ್ನು ಒಳಗೊಂಡಿದೆ. ಇದರೊಂದಿಗೆ ಬ್ಲೂ ಲಿಂಕ್ ಟೆಕ್ನಾಲಜಿಯನ್ನು ಕೂಡ ಹೊಂದಿರಲಿದೆ.

ಈ ಹೊಸ ಕಾರಿನಲ್ಲಿ 8.0 ಇಂಚಿನ ಡಿಜಿಟಲ್ ಕ್ಲಸ್ಟರ್ ಅನ್ನು ಅಳವಡಿಸಲಾಗಿದೆ. ಈ ಕಾರಿನ ಇಂಟಿರಿಯರ್‍ನಲ್ಲಿ ಆ್ಯಪಲ್ ಕಾರ್‍ಪ್ಲೇ ಮತ್ತು ಆಂಡ್ರಾಯ್ಡ್ ಆಟೋ, ಹ್ಯುಂಡೈನ ಕನೆಕ್ಟಿವಿಟಿ ಸೂಟ್ ಮತ್ತು ಇತರ ಹಲವಾರು ಫೀಚರ್‍ಗಳನ್ನು ಹೊಂದಿದೆ. ಯುಎಸ್‌ಬಿ ಪೋರ್ಟ್ ಮತ್ತು ವೈರ್‌ಲೆಸ್ ಚಾರ್ಜಿಂಗ್ ಪ್ಯಾಡ್ ಅನ್ನು ಸಹ ಹೊಂದಿರಲಿದೆ.
MOST READ: 2020ರ ಸಿಟಿ ಕಾರಿನ ಉತ್ಪಾದನೆಯನ್ನು ಪ್ರಾರಂಭಿಸಿದ ಹೋಂಡಾ

ಹೊಸ ಹ್ಯುಂಡೈ ಐ20 ಕಾರಿನಲ್ಲಿ ಹೊಸ 16 ಡ್ಯುಯಲ್ ಟೋನ್ ಅಲಾಯ್ ವ್ಹೀಲ್‍ಗಳು, ಇಂಟಿಗ್ರೇಟೆಡ್ ಟರ್ನ್ ಇಂಡಿಕೇಟರ್‍ಗಳೊಂದಿಗೆ ಸ್ಲಿಕ್ ಒಆರ್‍ವಿಎಂಗಳು ಮತ್ತು ಶಾರ್ಕ್ ಫಿನ್ ಆಂಟೆನಾವನ್ನು ಕೂಡ ಆಳವಡಿಸಲಾಗಿದೆ.

ಗ್ರ್ಯಾಂಡ್ ಐ10 ನಿಯೋಸ್ ಕಾರಿನಲ್ಲಿರುವಂತಹ 1.0 ಲೀಟರ್ ಪೆಟ್ರೋಲ್ ಟರ್ಬೊ ಎಂಜಿನ್ ಅನ್ನು ಅಳವಡಿಸುವ ಸಾಧ್ಯತೆಗಳಿದೆ. ಈ ಎಂಜಿನ್ 100 ಬಿಹೆಚ್‍ಪಿ ಪವರ್ ಮತ್ತು 172 ಎನ್‍ಎಂ ಟಾರ್ಕ್ ಅನ್ನು ಉತ್ಪಾದಿಸುತ್ತದೆ. ಈ ಎಂಜಿನ್‍ನೊಂದಿಗೆ 6-ಸ್ಪೀಡ್ ಐಎಂಟಿಯನ್ನು ಜೋಡಿಸುವ ಸಾಧ್ಯತೆಗಳಿದೆ. ಇನ್ನು 7-ಸ್ಪೀಡ್ ಡಿಸಿಟಿ ಗೇರ್ ಬಾಕ್ಸ್ ಅನ್ನು ಆಯ್ಕೆಯಾಗಿ ನೀಡಬಹುದು.
MOST READ: ಬಿಡುಗಡೆಯ ಸನಿಹದಲ್ಲಿ ಹೊಸ ಮಾರುತಿ ಸುಜುಕಿ ಸೆಲೆರಿಯೊ

ಇದರೊಂದಿಗೆ ಪ್ರಸ್ತುತ ಮಾರುಕಟ್ಟೆಯಲ್ಲಿ ಇರುವ ಮಾದರಿಯಂತೆ 1.2-ಲೀಟರ್ ಪೆಟ್ರೋಲ್ ಎಂಜಿನ್ ಮತ್ತು ಕಿಯಾ ಸೆಲ್ಟೋಸ್‌ನಿಂದ ಎರವಲು ಪಡೆದ 1.5-ಲೀಟರ್ ಡಿಟೂನ್ಡ್ ಡೀಸೆಲ್ ಎಂಜಿನ್ ಅನ್ನು ಕೂಡ ಅಳವಡಿಸಬಹುದು.

ಮೂರನೇ ತಲೆಮಾರಿನ ಹ್ಯುಂಡೈ ಐ20 ಹಲವಾರು ಹೊಸ ಫೀಚರ್ ಗಳೊಂದಿಗೆ ನಯ ಲುಕ್ ನಲ್ಲಿ ಬಿಡುಗಡೆಯಾಗಲಿದೆ. ಹೊಸ ಹ್ಯುಂಡೈ ಐ20 ಕಾರು ಭಾರತೀಯ ಮಾರುಕಟ್ಟೆಯಲ್ಲಿ ಗ್ರಾಹಕರನ್ನು ಸೆಳೆಯುವಲ್ಲಿ ಯಶ್ವಸಿಯಾಗಬಹುದೆಂದು ನಿರೀಕ್ಷಿಸುತ್ತೇವೆ.

ಮೂರನೇ ತಲೆಮಾರಿನ ಹ್ಯುಂಡೈ ಐ20 ಭಾರತೀಯ ಮಾರುಕಟ್ಟೆಯಲ್ಲಿ ಬಿಡುಗಡೆಯಾದ ಬಳಿಕ ಟಾಟಾ ಆಲ್ಟ್ರೊಜ್, ಟೊಯೊಟಾ ಗ್ಲಾಂಝಾ, ಪೋಕ್ಸ್‌ವ್ಯಾಗನ್ ಪೊಲೊ, ಫೋರ್ಡ್ ಫ್ರೀಸ್ಟೈಲ್ ಮತ್ತು ಹೋಂಡಾ ಜಾಝ್ ಕಾರುಗಳಿಗೆ ಪೈಪೋಟಿ ನೀಡುತ್ತದೆ.


Click it and Unblock the Notifications