ಹೊಸ ಹ್ಯುಂಡೈ ಐ20 ಕಾರು ಬಿಡುಗಡೆ ವಿಳಂಬಕ್ಕೆ ಕಾರಣಗಳಿವು
ಹ್ಯುಂಡೈ ಕಂಪನಿಯು ತನ್ನ ಹೊಸ ತಲೆಮಾರಿನ ಐ20 ಕಾರನ್ನು ಭಾರತೀಯ ಮಾರುಕಟ್ಟೆಯಲ್ಲಿ ಬಿಡುಗಡೆಗೊಳಿಸಲು ಸಜ್ಜಾಗುತ್ತಿದೆ. ಇದರ ಭಾಗವಾಗಿ ಹ್ಯುಂಡೈ ಕಂಪನಿಯು ಹೊಸ ಐ20 ಕಾರಿನ ಸ್ಪಾಟ್ ಟೆಸ್ಟ್ ಅನ್ನು ಕೂಡ ನಡೆಸಲಾಗುತ್ತಿದೆ.

ಹೊಸ ಹ್ಯುಂಡೈ ಐ20 ಕಾರನ್ನು ಈ ವರ್ಷದ ಹಬ್ಬದ ಸೀಸನ್ ನಲ್ಲಿ ಭಾರತೀಯ ಮಾರುಕಟ್ಟೆಯಲ್ಲಿ ಬಿಡುಗಡೆಗೊಳಿಸಲಿದೆ. ಹ್ಯೂಂಡೈ ಕಂಪನಿಯು ಈ ಹೊಸ ಐ20 ಕಾರಿನ ಬಿಡುಗಡೆಗೊಳಿಸುವುದಕ್ಕೆ ವಿಳಂಬ ಮಾಡಲು ಪ್ರಮುಖ ಕಾರಣ ಎಂದರೆ ಹೊಸ ಕ್ರೆಟಾ ಮತ್ತು ವೆರ್ನಾ ಕಾರುಗಳಿಗೆ ಮಾರುಕಟ್ಟೆಯಲ್ಲಿ ಉತ್ತಮ ಬೇಡಿಕೆಯನ್ನು ಹೊಂದಿದೆ. ಹ್ಯುಂಡೈ ಕ್ರೆಟಾ ಎಸ್‍ಯುವಿಗೆ ಬಿಡುಗಡೆಯಾದ ಒಂದು ತಿಂಗಳಲ್ಲಿ 30,000 ಬುಕ್ಕಿಂಗ್‌ಗಳನ್ನು ಪಡೆದುಕೊಂಡಿದೆ.

ಇನ್ನು ಕೊರೊನಾ ಭೀತಿಯಿಂದ ಸಂಪೂರ್ಣವಾಗಿ ಲಾಕ್ ಡೌನ್ ಆಗಿದ್ದ ಸಂದರ್ಭದಲ್ಲಿ ಹ್ಯುಂಡೈ ಕಂಪನಿಯು ಉತ್ಪಾದನೆಯನ್ನು ಸ್ಥಗಿತಗೊಳಿಸಿದ್ದರು. ಈ ಕಾರಣಗಳಿಂದಾಗಿ ಹೊಸ ಐ20 ಕಾರಿನ ಬಿಡುಗಡೆಯು ವಿಳಂಬವಾಗಿದೆ.
MOST READ: ಭರ್ಜರಿಯಾಗಿ ಮಾರಾಟವಾಯ್ತು ಫೋಕ್ಸ್‌ವ್ಯಾಗನ್ ಟಿ-ರಾಕ್ ಎಸ್‍ಯುವಿ

ಹೊಸ ಹ್ಯುಂಡೈ ಐ20 ಕಾರಿನ ಕಾರಿನ ಮುಂಭಾಗದಲ್ಲಿರು ಕ್ಯಾಸ್ಕೇಡಿಂಗ್ ಗ್ರಿಲ್ ಅನ್ನು ಹೊಂದಿದೆ. ಹಿಂದಿನ ಐ20 ಮಾದರಿಗೆ ಹೋಲಿಸಿದರೆ ಹೆಡ್ ಲ್ಯಾಂಪ್ ಮತ್ತು ಸೈಡ್ ಫ್ರೋಪೈಲ್ ವಿನ್ಯಾಸವನ್ನು ನವೀಕರಿಸಲಾಗಿದೆ ದೊಡ್ಡ ಕ್ರೀಸ್ ಲೈನ್ ಗಳನ್ನು ಒಳಗೊಂಡಿದೆ. ಈ ಹೊಸ ಐ20 ಕಾರು ಸಾಕಷ್ಟು ಸ್ಪೋರ್ಟಿಯರ್ ಮತ್ತು ಸ್ಟೈಲಿಶ್ ಲುಕ್ ಹೊಂದಿದೆ.

ಇನ್ನು ಈ ಹೊಸ ಕಾರಿನಲ್ಲಿ ಎರಡು ಟೇಲ್ ಲ್ಯಾಂಪ್‍ಗಳನ್ನು ಅಳವಡಿಸಲಾಗಿದೆ. ವಿಡಬ್ಲ್ಯೂ ಟೈಗನ್‍ನಲ್ಲಿ ಇರುವಂತಹ ಕೆಂಪು ಇಲ್‍ಇಡಿ ಡಿಆರ್‍ಎಲ್ ಸ್ಟಾಪ್ ಲೈಟ್ ಹಿಂಭಾಗದಲ್ಲಿ ಟೇಲ್‍ಲೈಟ್ ಹೊಂದಿದೆ.
MOST READ: ಹೊಸ ಬಣ್ಣಗಳ ಆಯ್ಕೆಯನ್ನು ಹೊಂದಿದ ಸುಜುಕಿ ಸ್ವಿಫ್ಟ್ ಫೇಸ್‌ಲಿಫ್ಟ್

ಹೊಸ ಹ್ಯುಂಡೈ ಕಾರಿನ ಇಂಟಿರಿಯರ್‍ನಲ್ಲಿ 4 ಸ್ಫೋಕ್ ಸ್ಟೀಟಿಯರಿಂಗ್ ವ್ಹೀಲ್ ಅನ್ನು ಅಳವಡಿಸಲಾಗಿದೆ. ಇದು ಹೊಸ ಹ್ಯುಂಡೈ ಕ್ರೆಟಾ ಕಾರಿನಲ್ಲಿರುವ ಸ್ಟಿಟಿಯರಿಂಗ್ ಮಾದರಿಯಲ್ಲಿದೆ. ಹೊಸ ಹ್ಯುಂಡೈ ಐ20 ಕಾರಿನಲ್ಲಿ ಆಡಿಯೊ ಸಿಸ್ಟಂ, ಕ್ರೂಸ್ ಕಂಟ್ರೋಲ್ ಮತ್ತು ಫುಲ್-ಡಿಜಿಟಲ್ ಇನ್ಸ್ ಟ್ರೂಮೆಂಟ್ ಕ್ಲಸ್ಟರ್ ಅನ್ನು ಒಳಗೊಂಡಿದೆ. ಜೊತೆಗೆ ಬ್ಲೂ ಲಿಂಕ್ ಟೆಕ್ನಾಲಜಿಯನ್ನು ಕೂಡ ಹೊಂದಿರಲಿದೆ.

ಈ ಹೊಸ ಕಾರಿನಲ್ಲಿ 10.25 ಇಂಚಿನ ಡಿಜಿಟಲ್ ಕ್ಲಸ್ಟರ್ ಅನ್ನು ಅಳವಡಿಸಲಾಗಿದೆ. ಈ ಕಾರಿನ ಇಂಟಿರಿಯರ್‍ನಲ್ಲಿ ಆ್ಯಪಲ್ ಕಾರ್‍ಪ್ಲೇ ಮತ್ತು ಆಂಡ್ರಾಯ್ಡ್ ಆಟೋ, ಹ್ಯುಂಡೈನ ಕನೆಕ್ಟಿವಿಟಿ ಸೂಟ್ ಮತ್ತು ಇತರ ಹಲವಾರು ಫೀಚರ್‍ಗಳನ್ನು ಹೊಂದಿದೆ. ಯುಎಸ್‌ಬಿ ಪೋರ್ಟ್ ಮತ್ತು ವೈರ್‌ಲೆಸ್ ಚಾರ್ಜಿಂಗ್ ಪ್ಯಾಡ್ ಅನ್ನು ಸಹ ಹೊಂದಿದೆ.
MOST READ: ಮರ್ಸಿಡಿಸ್ ಬೆಂಝ್ ಜಿಎಲ್ಇ ಎಸ್‍ಯುವಿಯ ಎರಡು ಹೊಸ ರೂಪಾಂತರಗಳು ಬಿಡುಗಡೆ

ಈ ಹೊಸ ಕಾರಿನಲ್ಲಿ ಗ್ರ್ಯಾಂಡ್ ಐ10 ನಿಯೋಸ್ ಕಾರಿನಲ್ಲಿರುವಂತಹ 1.0 ಲೀಟರ್ ಪೆಟ್ರೋಲ್ ಟರ್ಬೊ ಎಂಜಿನ್ ಅನ್ನು ಅಳವಡಿಸುವ ಸಾಧ್ಯತೆಗಳಿದೆ. ಈ ಎಂಜಿನ್ 100 ಬಿಹೆಚ್‍ಪಿ ಪವರ್ ಮತ್ತು 172 ಎನ್‍ಎಂ ಟಾರ್ಕ್ ಅನ್ನು ಉತ್ಪಾದಿಸುತ್ತದೆ. ಈ ಎಂಜಿನ್‍ನೊಂದಿಗೆ 5 ಸ್ಫೀಡ್ ಮ್ಯಾನುವಲ್ ಗೇರ್‍ಬಾಕ್ಸ್ ಅನ್ನು ಅಳವಡಿಸಲಿದೆ.

ಇದರೊಂದಿಗೆ ಪ್ರಸ್ತುತ ಮಾರುಕಟ್ಟೆಯಲ್ಲಿ ಇರುವ ಮಾದರಿಯಂತೆ 1.2-ಲೀಟರ್ ಪೆಟ್ರೋಲ್ ಎಂಜಿನ್ ಮತ್ತು ಕಿಯಾ ಸೆಲ್ಟೋಸ್‌ನಿಂದ ಎರವಲು ಪಡೆದ 1.5-ಲೀಟರ್ ಡಿಟೂನ್ಡ್ ಡೀಸೆಲ್ ಎಂಜಿನ್ ಅನ್ನು ಹೊಂದಿರಲಿದೆ. ಜನಪ್ರಿಯ ಬಿಎಸ್-6 ಹ್ಯುಂಡೈ ಐ20 ಕಾರು ಭಾರತೀಯ ಮಾರುಕಟ್ಟೆಯಲ್ಲಿ ಬಿಡುಗಡೆಯಾದ ನಂತರ ಮಾರುತಿ ಸುಜುಕಿ ಕಂಪನಿಯ ಬಲೆನೊ, ಫೋರ್ಡ್ ಫ್ರೀಸ್ಟೈಲ್, ಟಾಟಾ ಆಲ್ಟ್ರೋಜ್ ಹಾಗೂ ಹೋಂಡಾ ಜಾಜ್ ಕಾರುಗಳಿಗೆ ಪೈಪೋಟಿ ನೀಡಲಿದೆ.


Click it and Unblock the Notifications