ಹೊಸ ವಿನ್ಯಾಸದಲ್ಲಿ ಬಿಡುಗಡೆಯಾಗಲಿದೆ ಹ್ಯುಂಡೈ ಐ20 ಎನ್ ಲೈನ್
ಹ್ಯುಂಡೈ ಕಂಪನಿಯು ಈ ವರ್ಷದ ಫೆಬ್ರವರಿ ತಿಂಗಳಲ್ಲಿ ಮೂರನೇ ತಲೆಮಾರಿನ ಐ20 ಕಾರನ್ನು ಅನಾವರಣಗೊಳಿಸಿತ್ತು. ಇದೀಗ ಹ್ಯುಂಡೈ ಕಂಪನಿಯು ಹೊಸ ಐ20 ಎನ್ ಲೈನ್ ಅನ್ನು ಬಹಿರಂಗಪಡಿಸಿದೆ. ಇದು ಪ್ರೀಮಿಯಂ ಹ್ಯಾಚ್‌ಬ್ಯಾಕ್‌ನ ಸ್ಪೋರ್ಟಿಯರ್-ಲುಕಿಂಗ್ ಆವೃತ್ತಿಯಾಗಿದೆ.

ಹೊಸ ಹ್ಯುಂಡೈ ಐ20 ಎನ್ ಲೈನ್ ಕಾರಿನ ಮುಂಭಾಗ ಎನ್-ಲೈನ್ ಬ್ಯಾಡ್ಜ್ ನೊಂದಿಗೆ ಮರುವಿನ್ಯಾಸಗೊಳಿಸಲಾದ ಮುಂಭಾಗದ ಗ್ರಿಲ್ ಮತ್ತು ಫಾಗ್ ಲ್ಯಾಂಪ್ ನೊಂದಿಗೆ ಹೊಸ ಸ್ಪೋರ್ಟಿಯರ್ ಬಂಪರ್ ಅನ್ನು ಪಡೆಯುತ್ತದೆ. ಹೊಸ 17-ಇಂಚಿನ ಅಲಾಯ್ ವ್ಹೀಲ್ ಗಳು ಮತ್ತು ಬ್ಲ್ಯಾಕ್ ಔಟ್ ಸೈಡ್ ಸ್ಕಿರ್ಟಿಂಗ್ಗಾಗಿ ಸೈಡ್ ಪ್ರೊಫೈಲ್ ಬದಲಾಗದೆ ಉಳಿದಿದೆ. ಈ ಕಾರಿನ ಹಿಂಭಾಗದಲ್ಲಿ ಸ್ವಲ್ಪಮಟ್ಟಿಗೆ ನವೀಕರಿಸಿದ ಕನೆಕ್ಟಿವಿಟಿ ಟೈಲ್ ಲ್ಯಾಂಪ್‌ಗಳನ್ನು ಮತ್ತು ಟ್ವಿನ್ ಎಕ್ಸಾಸ್ಟ್ ಪೈಪ್ ಅನ್ನು ಹೊಂದಿದೆ.

ಹೊಸ ಹ್ಯುಂಡೈ ಐ20 ಎನ್ ಲೈನ್ ಕಾರಿನ ಇಂಟಿರಿಯರ್ ನಲ್ಲಿ ಬ್ಲ್ಯಾಕ್ ಥೀಮ್ ಅನ್ನು ಹೊಂದಿದೆ. ಎನ್ ಲೋಗೊ ಹೊಂದಿರುವ ಎನ್-ಬ್ರ್ಯಾಂಡೆಡ್ ಸ್ಪೋರ್ಟಿ ಸೀಟುಗಳು ಮತ್ತು ಎನ್-ಬ್ರ್ಯಾಂಡೆಡ್ ಸ್ಟೀಯರಿಂಗ್ ವ್ಹೀಲ್ ಅನ್ನು ಹೊಂದಿದೆ.
MOST READ: ಅನಾವರಣವಾಯ್ತು ಟೊಯೊಟಾ ಕೊರೊಲ್ಲಾ ಟೂರಿಂಗ್ ರಿಬ್ಯಾಡ್ಜ್ ಆವೃತ್ತಿ ಸುಜುಕಿ ಸ್ವೇಸ್

ಮೆಟಲ್ ಪೆಡಲ್ಗಳು ಮತ್ತು ರೆಡ್ ಸ್ಟಿಜ್ಜಿಂಗ್ ಎನ್ ಗೇರ್ ಶಿಫ್ಟ್ ನಾಬ್ ನಂತಹ ಕೆಲವು ಎನ್-ಲೈನ್ ವಿಶೇಷ ಅಂಶಗಳನ್ನು ಇದು ಒಳಗೊಂಡಿದೆ. ಈ ರೆಡ್ ಮುಖ್ಯಾಂಶಗಳು ಎಸಿ ವೆಂಟ್ಸ್ ಮತ್ತು ಡೋರ್ ಹ್ಯಾಂಡಲ್‌ಗಳಲ್ಲೂ ಇರುತ್ತದೆ.

ಹೊಸ ಹ್ಯುಂಡೈ ಐ20 ಎನ್ ಲೈನ್ ಕಾರಿನಲ್ಲಿ 1.2-ಲೀಟರ್ ಎಂಜಿನ್ ಅನ್ನು ಹೊಂದಿದೆ, ಇನ್ನು ಐ20 ಎನ್ ಲೈನ್ ಸ್ಟ್ಯಾಂಡರ್ಡ್ ಮಾದರಿಯಂತೆ ಹೆಚ್ಚು ಪವರ್ ಫುಲ್ 1.0-ಲೀಟರ್ ಟರ್ಬೊ ಎಂಜಿನ್ ಅನ್ನು ಸಹ ಹೊಂದಿದೆ.
MOST READ: 2020ರ ಸಿಟಿ ಕಾರಿನ ಉತ್ಪಾದನೆಯನ್ನು ಪ್ರಾರಂಭಿಸಿದ ಹೋಂಡಾ

ಹೊಸ ಹ್ಯುಂಡೈ ಐ20 ಎನ್ ಲೈನ್ ಕಾರಿನಲ್ಲಿ ಎರಡೂ 48ವಿ ಮೈಲ್ಡ್-ಹೈಬ್ರಿಡ್ ಸಿಸ್ಟಂ ಅನ್ನು ಹೊಂದಿದೆ. ಹ್ಯುಂಡೈ ಗ್ರ್ಯಾಂಡ್ ಐ10 ನಿಯೋಸ್ ಟರ್ಬೊ ಆವೃತ್ತಿಯಲ್ಲಿರುವ ಲೀಟರ್ ಟರ್ಬೊ ಎಂಜಿನ್ ಅನ್ನು ಇದರಲ್ಲಿ ಅಳವಡಿಸಬಹುದು.

ಈ 1.0-ಲೀಟರ್ ಟರ್ಬೊ ಎಂಜಿನ್ 100 ಬಿಹೆಚ್‍ಪಿ ಪವರ್ ಮತ್ತು 120 ಎನ್ಎಂ ಟಾರ್ಕ್ ಅನ್ನು ಉತ್ಪಾದಿಸುತ್ತದೆ. 1.0-ಲೀಟರ್ ಟರ್ಬೊ-ಪೆಟ್ರೋಲ್ ಎಂಜಿನ್‌ನೊಂದಿಗೆ ಐಎಂಟಿ (ಕ್ಲಚ್‌ಲೆಸ್ ಮ್ಯಾನ್ಯುವಲ್ ಟ್ರಾನ್ಸ್‌ಮಿಷನ್) ಆಯ್ಕೆಯನ್ನು ಸಹ ನೀಡುತ್ತಿದೆ. ಇದರ ಹೊರತಾಗಿ ಎನ್ ಲೈನ್ 7-ಸ್ಪೀಡ್ ಡಿಸಿಟಿ ಮತ್ತು ಮ್ಯಾನುಯಲ್ ಆಯ್ಕೆಯನ್ನು ಸಹ ಪಡೆಯುತ್ತದೆ.
MOST READ: ಬಿಡುಗಡೆಯ ಸನಿಹದಲ್ಲಿ ಹೊಸ ಮಾರುತಿ ಸುಜುಕಿ ಸೆಲೆರಿಯೊ

ಹೊಸ ಹ್ಯುಂಡೈ ಐ20 ಎನ್ ಲೈನ್ ಕಾರು ಮುಂದಿನ ವರ್ಷದ ಆರಂಭದಲ್ಲಿ ಯುರೋಪಿಯನ್ ಮಾರುಕಟ್ಟೆಗಳಲ್ಲಿ ಬಿಡುಗಡೆಯಾಗಲಿದೆ. ಆದರೆ ಈ ಹೊಸ ಹ್ಯುಂಡೈ ಐ20 ಎನ್ ಲೈನ್ ಕಾರು ಭಾರತೀಯ ಮಾರುಕಟ್ಟೆಯಲ್ಲಿ ಬಿಡುಗಡೆಯಾಗವುದಿಲ.

ಭಾರತೀಯ ಮಾರುಕಟ್ಟೆಗೆ ಸಂಬಂಧಿಸಿದಂತೆ, ಹ್ಯುಂಡೈ ಕಂಪನಿಯು ತನ್ನ ಮೂರನೇ ತಲೆಮಾರಿನ ಐ20 ಕಾರನ್ನು ಭಾರತೀಯ ಮಾರುಕಟ್ಟೆಯಲ್ಲಿ ಬಿಡುಗಡೆಗೊಳಿಸಲು ಸಜ್ಜಾಗಿದೆ. ಈ ಹೊಸ ಹ್ಯುಂಡೈ ಐ20 ಭಾರತೀಯ ಮಾರುಕಟ್ಟೆಯಲ್ಲಿ ಬಿಡುಗಡೆಯಾಗಲಿರುವ ಬಹುನಿರೀಕ್ಷಿತ ಕಾರುಗಳಲ್ಲಿ ಒಂದಾಗಿದೆ.

ಹೊಸ ಹ್ಯುಂಡೈ ಐ20 ಕಾರು ಈ ವರ್ಷದ ಹಬ್ಬದ ಸೀಸನ್ ನಲ್ಲಿ ಬಿಡುಗಡೆಯಾಗಲಿದೆ ಎಂದು ನಿರೀಕ್ಷಿಸುತ್ತೇವೆ. ಆದರೆ ಹ್ಯುಂಡೈ ಕಂಪನಿಯು ಈ ಹೊಸ ಕಾರಿನ ಬಿಡುಗಡೆಯ ದಿನಾಂಕವನ್ನು ಬಹಿರಂಗಪಡಿಸಿಲ್ಲ. ಇನ್ನು ಕೆಲವು ಡೀಲರುಗಳು ಅನಧಿಕೃತವಾಗಿ ಬುಕ್ಕಿಂಗ್ ಅನ್ನು ಪ್ರಾರಂಭಿಸಿದ್ದಾರೆ ಎಂದು ಕೆಲವು ವರದಿಗಳು ಪ್ರಕಟವಾಗಿದೆ.


Click it and Unblock the Notifications