ಹೊಸ ನವೀಕರಣಗಳೊಂದಿಗೆ ಸ್ಪಾಟ್ ಟೆಸ್ಟ್‌ನಲ್ಲಿ ಕಾಣಿಸಿಕೊಂಡ 2020ರ ಹುಂಡೈ ಐ20

ಹ್ಯುಂಡೈ ಕಂಪನಿಯು ತನ್ನ ಮೂರನೇ ತಲೆಮಾರಿನ ಐ20 ಕಾರನ್ನು ಭಾರತೀಯ ಮಾರುಕಟ್ಟೆಯಲ್ಲಿ ಶೀಘ್ರದಲ್ಲೇ ಬಿಡುಗಡೆಗೊಳಿಸಲಿದೆ. ಈ ಹೊಸ ಹ್ಯುಂಡೈ ಐ20 ಭಾರತೀಯ ಮಾರುಕಟ್ಟೆಯಲ್ಲಿ ಬಿಡುಗಡೆಯಾಗಲಿರುವ ಬಹುನಿರೀಕ್ಷಿತ ಕಾರುಗಳಲ್ಲಿ ಒಂದಾಗಿದೆ.

ಹೊಸ ನವೀಕರಣಗಳೊಂದಿಗೆ ಸ್ಪಾಟ್ ಟೆಸ್ಟ್‌ನಲ್ಲಿ ಕಾಣಿಸಿಕೊಂಡ 2020ರ ಹುಂಡೈ ಐ20

ಹೊಸ ತಲೆಮಾರಿನ ಐ20 ಕಾರು ಭಾರತದಲ್ಲಿ ಬಿಡುಗಡೆಗೂ ಮುನ್ನ ಸ್ಪಾಟ್ ಟೆಸ್ಟ್ ನಡೆಸಿದೆ. ಈ ಹೊಸ ಹ್ಯುಂಡೈ ಐ20 ಕಾರು ಬಾಡಿಯನ್ನು ಮರೆಮಾಚಿ ಸ್ಪಾಟ್ ಟೆಸ್ಟ್ ನಡೆಸುತ್ತಿರುವುದನ್ನು ರಶ್ಲೇನ್ ಬಹಿರಂಗಪಡಿಸಿದೆ. ಹೊಸ ಹ್ಯುಂಡೈ ಐ20 ಕಾರಿನ ಸ್ಪೈ ಚಿತ್ರದಲ್ಲಿ ಇ‍ಲ್‍ಇಡಿ ಟೈಲ್ ಲ್ಯಾಂಪ್ ಅನ್ನು ಕಾಣಿಸಿಕೊಂಡಿದೆ. ಇನ್ನು ಈ ಹ್ಯುಂಡೈ ಕಾರಿನ ಮುಂಭಾಗದಲ್ಲಿರು ಕ್ಯಾಸ್ಕೇಡಿಂಗ್ ಗ್ರಿಲ್ ಅನ್ನು ಹೊಂದಿದೆ. ಹಿಂದಿನ ಐ20 ಮಾದರಿಗೆ ಹೋಲಿಸಿದರೆ ಹೆಡ್ ಲ್ಯಾಂಪ್ ಮತ್ತು ಸೈಡ್ ಫ್ರೋಪೈಲ್ ವಿನ್ಯಾಸವನ್ನು ನವೀಕರಿಸಲಾಗಿದೆ ದೊಡ್ಡ ಕ್ರೀಸ್ ಲೈನ್ ಗಳನ್ನು ಒಳಗೊಂಡಿದೆ.

ಹೊಸ ನವೀಕರಣಗಳೊಂದಿಗೆ ಸ್ಪಾಟ್ ಟೆಸ್ಟ್‌ನಲ್ಲಿ ಕಾಣಿಸಿಕೊಂಡ 2020ರ ಹುಂಡೈ ಐ20

ಈ ಹೊಸ ಐ20 ಕಾರು ಸಾಕಷ್ಟು ಸ್ಪೋರ್ಟಿಯರ್ ಮತ್ತು ಸ್ಟೈಲಿಶ್ ಲುಕ್ ಅನ್ನು ಹೊಂದಿದೆ. ಈ ಐ20 ಕಾರಿನ ಹೊಸ ಲುಕ್ ಭಾರತದಲ್ಲಿ ಮತ್ತಷ್ಟು ಗ್ರಾಹಕರನ್ನು ಸೆಳೆಯಲು ನೆರವಾಗುತ್ತದೆ. ಹೊಸ ತಲೆಮಾರಿನ ಐ20 ಕಾರು ಭಾರತದಲ್ಲಿ ಇದೇ ತಿಂಗಳ 28 ರಂದು ಬಿಡುಗಡೆಯಾಗಲಿದೆ ಎಂದು ವರದಿಯಾಗಿದೆ.

MOST READ: ಬಿಡುಗಡೆಯ ಸನಿಹದಲ್ಲಿ ಹೊಸ ಮಾರುತಿ ಸುಜುಕಿ ಸೆಲೆರಿಯೊ

ಹೊಸ ನವೀಕರಣಗಳೊಂದಿಗೆ ಸ್ಪಾಟ್ ಟೆಸ್ಟ್‌ನಲ್ಲಿ ಕಾಣಿಸಿಕೊಂಡ 2020ರ ಹುಂಡೈ ಐ20

ಹೊಸ ಹುಂಡೈ ಐ20 ಕಾರಿನ ಪಿಲ್ಲರ್‍‍ಗಳು ಬ್ಲ್ಯಾಕ್ ಬಣ್ಣವನ್ನು ಹೊಂದಿದೆ. ವಿಡಬ್ಲ್ಯೂ ಟೈಗನ್‍‍‍ನಲ್ಲಿ ಇರುವಂತಹ ಕೆಂಪು ಇ‍ಲ್‍ಇಡಿ ಡಿಆರ್‍ಎಲ್ ಸ್ಟಾಪ್ ಲೈಟ್ ಹಿಂಭಾಗದಲ್ಲಿ ಇ‍ಲ್‍ಇಡಿ ಟೇಲ್‍‍ಲೈಟ್ ಹೊಂದಿದೆ. ಇನ್ನು ಹೊಸ ಹ್ಯುಂಡೈ ಕಾರಿನ ಇಂಟಿರಿಯರ್‍‍ನಲ್ಲಿ 4 ಸ್ಫೋಕ್ ಸ್ಟೀಟಿಯರಿಂಗ್ ವ್ಹೀಲ್ ಅನ್ನು ಅಳವಡಿಸಲಾಗಿದೆ.

ಹೊಸ ನವೀಕರಣಗಳೊಂದಿಗೆ ಸ್ಪಾಟ್ ಟೆಸ್ಟ್‌ನಲ್ಲಿ ಕಾಣಿಸಿಕೊಂಡ 2020ರ ಹುಂಡೈ ಐ20

ಇದು ಹೊಸ ಹ್ಯುಂಡೈ ಕ್ರೆಟಾ ಕಾರಿನಲ್ಲಿರುವ ಸ್ಟಿಟಿಯರಿಂಗ್ ಮಾದರಿಯಲ್ಲಿದೆ. ಹೊಸ ಹ್ಯುಂಡೈ ಐ20 ಕಾರಿನಲ್ಲಿ ಬೋಸ್ ಸೌಂಡ್ ಸಿಸ್ಟಂ, ಕ್ರೂಸ್ ಕಂಟ್ರೋಲ್ ಮತ್ತು ಫುಲ್-ಡಿಜಿಟಲ್ ಇನ್ಸ್ ಟ್ರೂಮೆಂಟ್ ಕ್ಲಸ್ಟರ್‌ ಅನ್ನು ಒಳಗೊಂಡಿದೆ. ಇದರೊಂದಿಗೆ ಬ್ಲೂ ಲಿಂಕ್ ಟೆಕ್ನಾಲಜಿಯನ್ನು ಕೂಡ ಹೊಂದಿರಲಿದೆ.

MOST READ: 2020ರ ಸಿಟಿ ಕಾರಿನ ಉತ್ಪಾದನೆಯನ್ನು ಪ್ರಾರಂಭಿಸಿದ ಹೋಂಡಾ

ಹೊಸ ನವೀಕರಣಗಳೊಂದಿಗೆ ಸ್ಪಾಟ್ ಟೆಸ್ಟ್‌ನಲ್ಲಿ ಕಾಣಿಸಿಕೊಂಡ 2020ರ ಹುಂಡೈ ಐ20

ಈ ಹೊಸ ಕಾರಿನಲ್ಲಿ 8.0 ಇಂಚಿನ ಡಿಜಿಟಲ್ ಕ್ಲಸ್ಟರ್ ಅನ್ನು ಅಳವಡಿಸಲಾಗಿದೆ. ಈ ಕಾರಿನ ಇಂಟಿರಿಯರ್‍‍ನಲ್ಲಿ ಆ್ಯಪಲ್ ಕಾರ್‍‍ಪ್ಲೇ ಮತ್ತು ಆಂಡ್ರಾಯ್ಡ್ ಆಟೋ, ಹ್ಯುಂಡೈನ ಕನೆಕ್ಟಿವಿಟಿ ಸೂಟ್ ಮತ್ತು ಇತರ ಹಲವಾರು ಫೀಚರ್‍‍ಗಳನ್ನು ಹೊಂದಿದೆ. ಯುಎಸ್‌ಬಿ ಪೋರ್ಟ್‌ ಮತ್ತು ವೈರ್‌ಲೆಸ್ ಚಾರ್ಜಿಂಗ್ ಪ್ಯಾಡ್ ಅನ್ನು ಸಹ ಹೊಂದಿರಲಿದೆ.

ಹೊಸ ನವೀಕರಣಗಳೊಂದಿಗೆ ಸ್ಪಾಟ್ ಟೆಸ್ಟ್‌ನಲ್ಲಿ ಕಾಣಿಸಿಕೊಂಡ 2020ರ ಹುಂಡೈ ಐ20

ಹೊಸ ಹ್ಯುಂಡೈ ಐ20 ಕಾರಿನಲ್ಲಿ ಹೊಸ 16 ಡ್ಯುಯಲ್ ಟೋನ್ ಅಲಾಯ್ ವ್ಹೀಲ್‍‍ಗಳು, ಇಂಟಿಗ್ರೇಟೆಡ್ ಟರ್ನ್ ಇಂಡಿಕೇಟರ್‍‍ಗಳೊಂದಿಗೆ ಸ್ಲಿಕ್ ಒಆರ್‍‍ವಿಎಂಗಳು ಮತ್ತು ಶಾರ್ಕ್ ಫಿನ್ ಆಂಟೆನಾವನ್ನು ಕೂಡ ಆಳವಡಿಸಲಾಗಿದೆ.

MOST READ: ಅನಾವರಣವಾಯ್ತು ಟೊಯೊಟಾ ಕೊರೊಲ್ಲಾ ಟೂರಿಂಗ್ ರಿಬ್ಯಾಡ್ಜ್ ಆವೃತ್ತಿ ಸುಜುಕಿ ಸ್ವೇಸ್

ಹೊಸ ನವೀಕರಣಗಳೊಂದಿಗೆ ಸ್ಪಾಟ್ ಟೆಸ್ಟ್‌ನಲ್ಲಿ ಕಾಣಿಸಿಕೊಂಡ 2020ರ ಹುಂಡೈ ಐ20

ಗ್ರ್ಯಾಂಡ್ ಐ10 ನಿಯೋಸ್ ಕಾರಿನಲ್ಲಿರುವಂತಹ 1.0 ಲೀಟರ್ ಪೆಟ್ರೋಲ್ ಟರ್ಬೊ ಎಂಜಿನ್ ಅನ್ನು ಅಳವಡಿಸುವ ಸಾಧ್ಯತೆಗಳಿದೆ. ಈ ಎಂಜಿನ್ 100 ಬಿ‍‍ಹೆಚ್‍‍ಪಿ ಪವರ್ ಮತ್ತು 172 ಎನ್‍ಎಂ ಟಾರ್ಕ್ ಅನ್ನು ಉತ್ಪಾದಿಸುತ್ತದೆ. ಈ ಎಂಜಿನ್‍‍ನೊಂದಿಗೆ 6-ಸ್ಪೀಡ್ ಐಎಂಟಿಯನ್ನು ಜೋಡಿಸುವ ಸಾಧ್ಯತೆಗಳಿದೆ. ಇನ್ನು 7-ಸ್ಪೀಡ್ ಡಿಸಿಟಿ ಗೇರ್ ಬಾಕ್ಸ್ ಅನ್ನು ಆಯ್ಕೆಯಾಗಿ ನೀಡಬಹುದು.

ಹೊಸ ನವೀಕರಣಗಳೊಂದಿಗೆ ಸ್ಪಾಟ್ ಟೆಸ್ಟ್‌ನಲ್ಲಿ ಕಾಣಿಸಿಕೊಂಡ 2020ರ ಹುಂಡೈ ಐ20

ಇದರೊಂದಿಗೆ ಪ್ರಸ್ತುತ ಮಾರುಕಟ್ಟೆಯಲ್ಲಿ ಇರುವ ಮಾದರಿಯಂತೆ 1.2-ಲೀಟರ್ ಪೆಟ್ರೋಲ್ ಎಂಜಿನ್ ಮತ್ತು ಕಿಯಾ ಸೆಲ್ಟೋಸ್‌ನಿಂದ ಎರವಲು ಪಡೆದ 1.5-ಲೀಟರ್ ಡಿಟೂನ್ಡ್ ಡೀಸೆಲ್ ಎಂಜಿನ್ ಅನ್ನು ಕೂಡ ಅಳವಡಿಸಬಹುದು.

ಹೊಸ ನವೀಕರಣಗಳೊಂದಿಗೆ ಸ್ಪಾಟ್ ಟೆಸ್ಟ್‌ನಲ್ಲಿ ಕಾಣಿಸಿಕೊಂಡ 2020ರ ಹುಂಡೈ ಐ20

ಮೂರನೇ ತಲೆಮಾರಿನ ಹ್ಯುಂಡೈ ಐ20 ಹಲವಾರು ಹೊಸ ಫೀಚರ್ ಗಳೊಂದಿಗೆ ನಯ ಲುಕ್ ನಲ್ಲಿ ಶೀಘ್ರದಲ್ಲೇ ಬಿಡುಗಡೆಯಾಗಲಿದೆ. ಹೊಸ ಹ್ಯುಂಡೈ ಐ20 ಕಾರು ಭಾರತೀಯ ಮಾರುಕಟ್ಟೆಯಲ್ಲಿ ಗ್ರಾಹಕರನ್ನು ಸೆಳೆಯುವಲ್ಲಿ ಯಶ್ವಸಿಯಾಗಬಹುದೆಂದು ನಿರೀಕ್ಷಿಸುತ್ತೇವೆ.

Article Published On: Monday, October 12, 2020, 9:50 [IST]
English summary
2020 Hyundai i20 LED Tail Lights Detailed During Night. Read In Kannada.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+