Just In
Don't Miss!
- News
ಶಶಿಕಲಾಗೆ ಶ್ವಾಸಕೋಶ ಸೋಂಕು, ಕೊರೊನಾ ವರದಿ ನೆಗೆಟಿವ್
- Finance
ಬಜೆಟ್ 2021: ಆದಾಯ ತೆರಿಗೆ ಇಳಿಕೆ ಅನುಮಾನ; ವಿನಾಯಿತಿಗಳ ಕಡೆಗೆ ಗಮನ
- Sports
ಧೋನಿ ಜೊತೆಗೆ ನನ್ನನ್ನು ಹೋಲಿಸುವುದು ನ್ಯಾಯ ಅಲ್ಲ ಎಂದ ರಿಷಭ್ ಪಂತ್
- Movies
Breaking: ನಟಿ ರಾಗಿಣಿಗೆ ಜಾಮೀನು ನೀಡಿದ ಸುಪ್ರೀಂಕೋರ್ಟ್
- Lifestyle
ನೀವು ರಾತ್ರಿ ಭಾರೀ ಭೋಜನ ಮಾಡೋರಾದ್ರೆ ಈ ಸ್ಟೋರಿ ಓದಲೇಬೇಕು...!
- Education
BMRCL Recruitment 2021: ಸೀನಿಯರ್ ಅರ್ಬನ್ ಮತ್ತು ಟ್ರಾನ್ಸ್ ಪೋರ್ಟ್ ಪ್ಲಾನರ್ ಹುದ್ದೆಗಳಿಗೆ ಅರ್ಜಿ ಆಹ್ವಾನ
- Technology
ಒನ್ಪ್ಲಸ್ ನಾರ್ಡ್ ಜುಲೈ 15 ರಿಂದ ಅಮೆಜಾನ್ ತಾಣದಲ್ಲಿ ಪ್ರಿ-ಆರ್ಡರ್ಗೆ ಲಭ್ಯವಿದೆ; ಖರೀದಿಸುವಲ್ಲಿ ಮೊದಲಿಗರಾಗಿರಿ!
- Travel
ಭಾರತದಲ್ಲಿ ಜೂನ್ 1 ರಿಂದ ಚಲಿಸಲಿರುವ ರೈಲುಗಳ ಸಂಪೂರ್ಣ ಪಟ್ಟಿ
ಬಿಡುಗಡೆಯಾಗಲಿದೆ 50 ಕಿ.ಮೀ ಮೈಲೇಜ್ ನೀಡುವ ಹ್ಯುಂಡೈ ಟ್ಯೂಸಾನ್ ಹೈಬ್ರಿಡ್ ಆವೃತ್ತಿ
ಹ್ಯುಂಡೈ ಕಂಪನಿಯು ತನ್ನ ಬಹುನಿರೀಕ್ಷಿತ 2021ರ ಟ್ಯೂಸಾನ್ ಪ್ಲಗ್-ಇನ್ ಹೈಬ್ರಿಡ್ ಆವೃತ್ತಿಯನ್ನು ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಇತ್ತೀಚೆಗೆ ಅನಾವರಣಗೊಳಿಸಿತ್ತು. ಈ ಹೊಸ ಹ್ಯುಂಡೈ ಟ್ಯೂಸಾನ್ ಆವೃತ್ತಿಯು ಹಲವಾರು ಅಪ್ದೇಟ್ ಗಳನ್ನು ಪಡೆದುಕೊಂಡಿದೆ.

ಈ ಹೊಸ ಹ್ಯುಂಡೈ ಟ್ಯೂಸಾನ್ ಪ್ಲಗ್-ಇನ್ ಹೈಬ್ರಿಡ್ ಆವೃತ್ತಿಯು ಮುಂದಿನ ವರ್ಷ ಯುರೋಪಿನಾದ್ಯಂತ ಬಿಡುಗಡೆಯಾಗಲಿದೆ. ಇದರಲ್ಲಿ 1.6-ಲೀಟರ್ ನಾಲ್ಕು ಸಿಲಿಂಡರ್ ಸ್ಮಾರ್ಟ್ಸ್ಟ್ರೀಮ್ ಪೆಟ್ರೋಲ್ ಎಂಜಿನ್ ಅನ್ನು ಅಳವಡಿಸಳಾಗಿದೆ. ಈ ಎಂಜಿನ್ 90 ಬಿಹೆಚ್‍ಪಿ ಪವರ್ ಅನ್ನು ಉತ್ಪಾದಿಸುವ ಸಾಮರ್ಥ್ಯವನ್ನು ಹೊಂದಿದೆ. ಇದರೊಂದಿಗೆ ಎಲೆಕ್ಟ್ರಿಕ್ ಮೋಟರ್ ಮತ್ತು 13.8 ಕಿಲೋವ್ಯಾಟ್ ಲಿ-ಪಾಲಿಮರ್ ಬ್ಯಾಟರಿ ಪ್ಯಾಕ್ ಅನ್ನು ಅಳವಡಿಸಲಾಗಿದೆ.

ಇನ್ನು ಈ ಹೊಸ ಟ್ಯೂಸಾನ್ ಪ್ಲಗ್-ಇನ್ ಹೈಬ್ರಿಡ್ ಆವೃತ್ತಿಯ ಸಂಯೋಜಿತ ಮೋಟಾರ್ 261 ಬಿಹೆಚ್‍ಪಿ ಪವರ್ ಮತ್ತು 350 ಎನ್ಎಂ ಟಾರ್ಕ್ ಅನ್ನು ಉತ್ಪಾದಿಸುತ್ತದೆ. ಇನ್ನು ಡಬ್ಲ್ಯುಎಲ್‌ಟಿಪಿ ಎಲೆಕ್ಟ್ರಿಕ್-ಓನ್ಲಿ ಮೋಡ್‌ನಲ್ಲಿ ಹೊಸ ಹ್ಯುಂಡೈ ಟ್ಯೂಸಾನ್ ಪ್ಲಗ್-ಇನ್ ಹೈಬ್ರಿಡ್ ಆವೃತ್ತಿಯು 50 ಕಿ.ಮೀ ಗಿಂತ ಹೆಚ್ಚು ಮೈಲೇಜ್ ಅನ್ನು ನೀಡುತ್ತದೆ.
MOST READ: ಅನಾವರಣವಾಯ್ತು ಟೊಯೊಟಾ ಕೊರೊಲ್ಲಾ ಟೂರಿಂಗ್ ರಿಬ್ಯಾಡ್ಜ್ ಆವೃತ್ತಿ ಸುಜುಕಿ ಸ್ವೇಸ್

ಹೈಬ್ರಿಡ್ ಸಿಸ್ಟಂ ಜೊತೆಗೆ ಶಿಫ್ಟ್-ಬೈ-ವೈರ್ ಸಿಕ್ಸ್-ಸ್ಪೀಡ್ ಆಟೋಮ್ಯಾಟಿಕ್ ಗೇರ್ ಬಾಕ್ಸ್ ಎಲ್ಲಾ ನಾಲ್ಕು ಚಕ್ರಗಳಿಗೆ ಎಚ್‌ಟಿಆರ್ಎಸಿ 4 ಡಬ್ಲ್ಯೂಡಿ ಸಿಸ್ಟಂ ಮೂಲಕ ಪವರ್ ಕಳುಹಿಸಲಾಗುತ್ತದೆ. ಇನ್ನು ಹೊಸ ಟ್ಯೂಸಾನ್ ಪ್ಲಗ್-ಇನ್ ಹೈಬ್ರಿಡ್ ಆವೃತ್ತಿಯಲ್ಲಿ 7.2 ಕಿಲೋವ್ಯಾಟ್ ಆನ್‌ಬೋರ್ಡ್ ಚಾರ್ಜರ್ ಸಹ ಒದಗಿಸಲಾಗುವುದು.

ಹೊಸ ಟ್ಯೂಸಾನ್ ಪ್ಲಗ್-ಇನ್ ಹೈಬ್ರಿಡ್ ಆವೃತ್ತಿ ಹೈ ವೋಲ್ಟೇಜ್ ಬ್ಯಾಟರಿ ಪ್ಯಾಕ್ ಅನ್ನು ಪ್ಯಾಕ್ ಮಾಡಲಾಗಿದ್ದು, ಇನ್ನು ಹಿಂಭಾಗದಲ್ಲಿ ಸಾಕಷ್ಟು ಬೂಟ್‌ಸ್ಪೇಸ್ ಹೊಂದಿರುತ್ತದೆ. ಹೊಸ ಟ್ಯೂಸಾನ್ ಪ್ಲಗ್-ಇನ್ ಹೈಬ್ರಿಡ್ ಆವೃತ್ತಿಯಲ್ಲಿ 558 ಲೀಟರ್ ಬೂಟ್‌ಸ್ಪೇಸ್ ಅನ್ನು ಹೊಂದಿದೆ. ಆದರೆ ಎರಡನೇ ಸಾಲಿನ ಸೀಟುಗಳನ್ನು ಮಡಿಚಿದಾಗ 1737 ಲೀಟರ್ ಬೂಟ್ ಸ್ಪೇಸ್ ಲಭ್ಯವಿರುತ್ತದೆ.
MOST READ: ನವೆಂಬರ್ ತಿಂಗಳಿನಲ್ಲಿ ಅತಿ ಹೆಚ್ಚು ಮಾರಾಟವಾದ ಟಾಪ್-10 ಕಾರುಗಳಿವು

2021ರ ಹೊಸ ಹ್ಯುಂಡೈ ಟ್ಯೂಸಾನ್ ಪ್ಲಗ್-ಇನ್ ಹೈಬ್ರಿಡ್ ಆವೃತ್ತಿಯ ಮುಂಭಾಗ ಆಕರ್ಷಕ ಲುಕ್ ಅನ್ನು ಹೊಂದಿದ, ಈ ಹೊಸ ಎಸ್‍ಯುವಿಯು ಸ್ಪೋರ್ಟಿ ಲುಕ್ ನಲ್ಲಿ ಕಾಣುವಂತೆ ಅಗ್ರೇಸಿವ್ ವಿನ್ಯಾಸವನ್ನು ಹೊಂದಿದೆ. ಈ ಹೂಸ ಟ್ಯೂಸಾನ ಹೆಡ್‌ಲ್ಯಾಂಪ್ ಯುನಿಟ್ ಆಕರ್ಷಕವಾಗಿದೆ. ಹೊಸ ಹ್ಯುಂಡೈ ಟ್ಯೂಸಾನ್ ಎಸ್‍ಯುವಿಯಲ್ಲಿ ಕ್ರೋಮ್ ಸ್ಟ್ರಿಪ್ ಹೊಂದಿದೆ.

ಈ ಎಸ್‍ಯುವಿಯ ಕೊನೆಯಲ್ಲಿ ವಿಶಿಷ್ಟವಾದ ಸಿ-ಪಿಲ್ಲರ್ ಆಕಾರವನ್ನು ರೂಪಿಸಿದೆ. ಈ ಹೊಸ ಎಸ್‍ಯುವಿಯ ಹಿಂದಿನ ಪ್ರೊಫೈಲ್‌ನಲ್ಲಿ ಉದ್ದವಾದ ಬೆಲ್ಟ್‌ಲೈನ್ಗಳಿವೆ. 19 ಇಂಚಿನ ವ್ಹೀಲ್ಸ್ ಅನ್ನು ಅಳವಡಿಸಿದೆ. ಈ ವ್ಹೀಲ್ ಗಳು ವಿಭಿನ್ನವಾದ ವಿನ್ಯಾಸದಿಂದ ಕೂಡಿದೆ. ಹೊಸ ಹ್ಯುಂಡೈ ಟ್ಯೂಸಾನ್ ಶಾರ್ಕ್ ಫಿನ್ ಆಂಟೆನಾ, ಬಾಡಿ ಕಲರ್‌ನಲ್ಲಿ ರೂಫ್-ರೈಲ್ ಮತ್ತು ಫ್ಲೋಟಿಂಗ್ ರೂಫ್‌ಲೈನ್ ಹೊಂದಿದೆ.
MOST READ: 2020ರ ಸಿಟಿ ಕಾರಿನ ಉತ್ಪಾದನೆಯನ್ನು ಪ್ರಾರಂಭಿಸಿದ ಹೋಂಡಾ

ಹಿಂಭಾಗದಲ್ಲಿ ಅಗಲವಾಗಿ ಉದ್ದಕೂ ರೆಡ್ ಎಲ್ಇಡಿ ಲೈಟ್ ಅನ್ನು ಅಳವಡಿಸಿದೆ. ಇದು ಟೈಲ್-ಲ್ಯಾಂಪ್‌ಗಳನ್ನು ಕನೆಕ್ಟ್ ಆಗಿದೆ. ಈ ಮಾದರಿಯ ಕೆಳಗಿನ ಬಂಪರ್ ಸಿಲ್ವರ್ ಸ್ಕಿಡ್ ಪ್ಲೇಟ್, ಸ್ಟಾಪ್ ಲ್ಯಾಂಪ್‌ಗಳು ಮತ್ತು ಏರ್ ವೆಂಟ್ಸ್ ಗಳನ್ನು ಹೊಂದಿರುತ್ತದೆ. ಇದು ಇಂಟಿಗ್ರೇಟೆಡ್ ಬ್ರೇಕ್ ಲೈಟ್ ಗಳೊಂದಿಗೆ ರೂಫ್ ಸ್ಪಾಯ್ಲರ್ ಅನ್ನು ಹೊಂದಿದೆ.

ಇನ್ನು ಟ್ಯೂಸಾನ್ ಪೇಸ್ ಲಿಫ್ಟ್ ಅನ್ನು ಕೆಲವೇ ತಿಂಗಳುಗಳ ಹಿಂದೆ ಬಿಡುಗಡೆಗೊಳಿಸಿರುವುದರಿಂದ ಈ ಹೊಸ ತಲೆಮಾರಿನ ಹ್ಯುಂಡೈ ಟ್ಯೂಸಾನ್ ಪ್ಲಗ್-ಇನ್ ಹೈಬ್ರಿಡ್ ಆವೃತ್ತಿ 2022ರಲ್ಲಿ ಭಾರತೀಯ ಮಾರುಕಟ್ಟೆಯಲ್ಲಿ ಬಿಡುಗಡೆಗೊಳಿಸಬಹುದು ಎಂದು ನಿರೀಕ್ಷಿಸುತ್ತೇವೆ.