ಬಹುನೀರಿಕ್ಷಿತ ಹ್ಯುಂಡೈ ವೆರ್ನಾ ಫೇಸ್‌ಲಿಫ್ಟ್ ಕಾರಿನ ಟೀಸರ್ ಬಿಡುಗಡೆ

ಬಿಎಸ್-6 ಎಮಿಷನ್ ನಿಯಮದ ಪ್ರಕಾರ ಬಹುತೇಕ ಕಾರು ಮಾದರಿಗಳನ್ನು ಉನ್ನತೀಕರಿಸಿರುವ ಹ್ಯುಂಡೈ ಸಂಸ್ಥೆಯು ಶೀಘ್ರದಲ್ಲೇ ವೆರ್ನಾ ಫೇಸ್‌ಲಿಫ್ಟ್ ಆವೃತ್ತಿಯನ್ನು ಇದೇ ತಿಂಗಳು 26ರಂದು ಬಿಡುಗಡೆಗೊಳಿಸುತ್ತಿದ್ದು, ಹೊಸ ಕಾರಿನ ಟೀಸರ್ ಒಂದನ್ನು ಬಿಡುಗಡೆಗೊಳಿಸಿದೆ.

ಬಹುನೀರಿಕ್ಷಿತ ಹ್ಯುಂಡೈ ವೆರ್ನಾ ಫೇಸ್‌ಲಿಫ್ಟ್ ಕಾರಿನ ಟೀಸರ್ ಬಿಡುಗಡೆ

ಏಪ್ರಿಲ್ 1ರಿಂದ ಬಿಎಸ್-6 ಎಮಿಷನ್ ನಿಯಮವು ಕಡ್ಡಾಯವಾಗುತ್ತಿದ್ದು, ಹ್ಯುಂಡೈ ವೆರ್ನಾ ಸೆಡಾನ್ ಫೇಸ್‌ಲಿಫ್ಟ್ ಆವೃತ್ತಿಯು ಬಿಎಸ್-6 ಎಂಜಿನ್ ಪ್ರೇರಿತ ಹೊಸ ಎಂಜಿನ್ ಆಯ್ಕೆಯನ್ನು ಪಡೆದುಕೊಳ್ಳುವುದರ ಜೊತೆಗೆ ಕಾರಿನ ಹೊರ ಭಾಗದ ವಿನ್ಯಾಸದಲ್ಲೂ ಕೂಡಾ ಸಾಕಷ್ಟು ಬದಲಾವಣೆ ಪಡೆದುಕೊಂಡಿದೆ. ಸಿ ಸೆಗ್ಮೆಂಟ್ ಸೆಡಾನ್ ಆವೃತ್ತಿಗಳಲ್ಲೇ ವಿಶೇಷ ಎನ್ನಿಸಲಿರುವ ಹೊಸ ಫೇಸ್‌ಲಿಫ್ಟ್ ಕಾರು ನ್ಯೂ ಜನರೇಷನ್ ಹೋಂಡಾ ಸಿಟಿ ಮತ್ತು ಮಾರುತಿ ಸುಜುಕಿ ಸಿಯಾಜ್ ಕಾರುಗಳಿಗೆ ಭರ್ಜರಿ ಪೈಪೋಟಿ ನೀಡಲಿದೆ.

ಬಹುನೀರಿಕ್ಷಿತ ಹ್ಯುಂಡೈ ವೆರ್ನಾ ಫೇಸ್‌ಲಿಫ್ಟ್ ಕಾರಿನ ಟೀಸರ್ ಬಿಡುಗಡೆ

ಬಿಡುಗಡೆಗೂ ಮುನ್ನ ಹೊಸ ಕಾರಿನ ಎಂಜಿನ್ ಕಾರ್ಯಕ್ಷಮತೆ ಕುರಿತಂತೆ ವಿವಿಧ ಹಂತದ ರೋಡ್ ಟೆಸ್ಟಿಂಗ್ ನಡೆಸಿರುವ ಹ್ಯುಂಡೈ ಸಂಸ್ಥೆಯು, ಪ್ರಸ್ತುತ ಮಾರುಕಟ್ಟೆಯಲ್ಲಿರುವ ಆವೃತ್ತಿಗಿಂತಲೂ ವಿಭಿನ್ನ ವಿನ್ಯಾಸವನ್ನು ನೀಡಿರುವುದು ಟೀಸರ್‌ನಲ್ಲಿ ಬಹಿರಂಗವಾಗಿದೆ.

ಬಹುನೀರಿಕ್ಷಿತ ಹ್ಯುಂಡೈ ವೆರ್ನಾ ಫೇಸ್‌ಲಿಫ್ಟ್ ಕಾರಿನ ಟೀಸರ್ ಬಿಡುಗಡೆ

ಟೀಸರ್ ಚಿತ್ರದಲ್ಲಿನ ಮಾಹಿತಿ ಪ್ರಕಾರ ವೆರ್ನಾ ಫೇಸ್‌ಲಿಫ್ಟ್ ಕಾರಿನ ಮುಂಭಾಗದ ಗ್ರಿಲ್ ಸ್ಲಾಟ್ ಸಾಕಷ್ಟು ಬದಲಾವಣೆ ಹೊಂದಿದ್ದು, ವಿದೇಶಿ ಮಾರುಕಟ್ಟೆಗಳಲ್ಲಿ ಸದ್ಯ ಮಾರಾಟದಲ್ಲಿರುವ ಸೊನಾಟಾ ಸೆಡಾನ್ ಮಾದರಿಯ ಹೋಲಿಕೆಯನ್ನು ಪಡೆದುಕೊಂಡಿರುವುದು ಪ್ರಮುಖ ಆಕರ್ಷಣೆಯಾಗಲಿದೆ.

ಬಹುನೀರಿಕ್ಷಿತ ಹ್ಯುಂಡೈ ವೆರ್ನಾ ಫೇಸ್‌ಲಿಫ್ಟ್ ಕಾರಿನ ಟೀಸರ್ ಬಿಡುಗಡೆ

ಹಾಗೆಯೇ ಹೊಸ ಕಾರು ಮಾದರಿಯ ಹೆಡ್‌ಲ್ಯಾಂಪ್ ಸೌಲಭ್ಯವು ಸಹ ಕಾರಿನ ನೋಟಕ್ಕೆ ಮತ್ತಷ್ಟು ಬಲಿಷ್ಠತೆಯನ್ನು ತುಂಬಲಿದ್ದು, ಮೂರು ಲೈಟ್‌ಗಳೂ ಪ್ರತ್ಯೇಕ ಹೋಸ್ ವಿನ್ಯಾಸವನ್ನು ಪಡೆದುಕೊಂಡಿರುವುದು ಪ್ರೀಮಿಯಂ ಹೆಚ್ಚಿಸಿದೆ. ಜೊತೆಗೆ ಎಲ್ಇಡಿ ಹೆಡ್‌ಲ್ಯಾಂಪ್ ಭೀಮ್, ಪ್ರೋಜೆಕ್ಟರ್ ಹೆಡ್‌ಲ್ಯಾಂಪ್ ಮತ್ತು ಸನ್‌ರೂಫ್ ಇದರಲ್ಲಿದ್ದು,ಕಾರಿನ ಹಿಂಭಾಗದ ತಾಂತ್ರಿಕ ವಿನ್ಯಾಸದಲ್ಲೂ ಮಹತ್ವದ ಬದಲಾವಣೆಗಳನ್ನು ತರಲಾಗಿದೆ.

ಬಹುನೀರಿಕ್ಷಿತ ಹ್ಯುಂಡೈ ವೆರ್ನಾ ಫೇಸ್‌ಲಿಫ್ಟ್ ಕಾರಿನ ಟೀಸರ್ ಬಿಡುಗಡೆ

ಇನ್ನು ಟೈಲ್ ಲ್ಯಾಂಪ್, ಬೂಟ್ ಲಿಡ್ ಮತ್ತು ಸ್ಪೋರ್ಟಿ ಮಾದರಿಯ ಕ್ರೊಮ್ ನೀಡಿರುವುದು ಕೂಡಾ ಮಹತ್ವದ ಬದಲಾವಣೆ ಕಾರಣವಾಗಿದ್ದು, ಕಾರಿನ ಹೊರವಿನ್ಯಾಸದ ಹೊರತಾಗಿ ಇಂಟಿರಿಯರ್ ಮಾಹಿತಿ ಲಭ್ಯವಾಗಿಲ್ಲವಾದರೂ ಪ್ರಸ್ತುತ ಮಾದರಿಗಿಂತಲೂ ಅತ್ಯುತ್ತಮ ಫೀರ್ಚಸ್ ಹೊಂದಿರಲಿದೆ.

ಬಹುನೀರಿಕ್ಷಿತ ಹ್ಯುಂಡೈ ವೆರ್ನಾ ಫೇಸ್‌ಲಿಫ್ಟ್ ಕಾರಿನ ಟೀಸರ್ ಬಿಡುಗಡೆ

ಸದ್ಯ ಮಾರುಕಟ್ಟೆಯಲ್ಲಿ ಹ್ಯುಂಡೈ ವೆರ್ನಾ ಮಾದರಿಯು 1.6-ಲೀಟರ್ ಡೀಸೆಲ್ ಮತ್ತು 1.6-ಲೀಟರ್ ಪೆಟ್ರೋಲ್ ಜೊತೆಗೆ 1.4-ಲೀಟರ್ ಡೀಸೆಲ್ ಎಂಜಿನ್ ಆಯ್ಕೆಯನ್ನು ಹೊಂದಿದ್ದು, ಫೇಸ್‌ಲಿಫ್ಟ್ ಆವೃತ್ತಿಯಲ್ಲಿ ಬಿಎಸ್-6 ನಿಯಮಾವಳಿಗೆ ಅನುಗುಣವಾಗಿ ಕೆಲವು ಮಹತ್ವದ ಬದಲಾವಣೆಗಳನ್ನು ತರಲಾಗಿದೆ.

ಬಹುನೀರಿಕ್ಷಿತ ಹ್ಯುಂಡೈ ವೆರ್ನಾ ಫೇಸ್‌ಲಿಫ್ಟ್ ಕಾರಿನ ಟೀಸರ್ ಬಿಡುಗಡೆ

ಹೊಸ ಎಮಿಷನ್‌ ನಿಯಮದಿಂದಾಗಿ ಹಳೆಯ ಎಂಜಿನ್ ಆಯ್ಕೆಗಳಿಗೆ ಗುಡ್‌ಬೈ ಹೇಳಿರುವ ಹ್ಯುಂಡೈ ಸಂಸ್ಥೆಯು ಹೊಸದಾಗಿ 1.5-ಲೀಟರ್ ಪೆಟ್ರೋಲ್ ಮತ್ತು 1.5-ಲೀಟರ್ ಡೀಸೆಲ್ ಆವೃತ್ತಿಗಳನ್ನು ಪರಿಚಯಿಸುತ್ತಿದ್ದು, ಇದೇ ಎಂಜಿನ್ ಮಾದರಿಯು ವೆರ್ನಾದಲ್ಲಿ ಮಾತ್ರವಲ್ಲ ಕ್ರೆಟಾ ಮತ್ತು ವೆನ್ಯೂನಲ್ಲೂ ಬಳಕೆ ಮಾಡಲಾಗಿದೆ.

ಬಹುನೀರಿಕ್ಷಿತ ಹ್ಯುಂಡೈ ವೆರ್ನಾ ಫೇಸ್‌ಲಿಫ್ಟ್ ಕಾರಿನ ಟೀಸರ್ ಬಿಡುಗಡೆ

ವೆನ್ಯೂ ಕಾರಿನಲ್ಲಿ ಡೀಸೆಲ್ ಮಾದರಿಯು ಮಾತ್ರವೇ 1.5-ಲೀಟರ್ ಎಂಜಿನ್ ಹೊಂದಿದ್ದು, ಇನ್ನುಳಿದಂತೆ 1.2-ಲೀಟರ್ ಕಪ್ಪಾ ಪೆಟ್ರೋಲ್ ಮತ್ತು 1.0-ಲೀಟರ್ ಟರ್ಬೋ ಪೆಟ್ರೋಲ್ ಬಳಕೆ ಮಾಡಲಾಗಿದೆ. ಈ ಎಂಜಿನ್ ಹೊರತುಪಡಿಸಿ ಕ್ರೆಟಾ ಮತ್ತು ವೆರ್ನಾ ಕಾರುಗಳಲ್ಲಿ ಸ್ಟ್ಯಾಂಡರ್ಡ್ ಆಗಿ 1.5-ಲೀಟರ್ ಡೀಸೆಲ್ ಮತ್ತು 1.5-ಲೀಟರ್ ಪೆಟ್ರೋಲ್ ಎಂಜಿನ್ ಆಯ್ಕೆ ದೊರೆಯಲಿದೆ.

ಬಹುನೀರಿಕ್ಷಿತ ಹ್ಯುಂಡೈ ವೆರ್ನಾ ಫೇಸ್‌ಲಿಫ್ಟ್ ಕಾರಿನ ಟೀಸರ್ ಬಿಡುಗಡೆ

ಹೊಸ ಕಾರಿನಲ್ಲಿ ನೀಡಲಾಗುತ್ತಿರುವ 1.5-ಲೀಟರ್ ಎಂಜಿನ್ ಮಾದರಿಯು ಈಗಾಗಲೇ ಕಿಯಾ ಸೆಲ್ಟೊಸ್‌ನಲ್ಲಿ ಬಳಕೆ ಮಾಡಲಾಗಿದ್ದು, ಹ್ಯುಂಡೈ ಸಹೋದರ ಸಂಸ್ಥೆಯಾಗಿರುವ ಕಿಯಾ ಇದೀಗ ಹೊಸ ಎಂಜಿನ್ ಅನ್ನು ಹ್ಯುಂಡೈ ಕಾರುಗಳ ಜೊತೆ ಹಂಚಿಕೊಳ್ಳುತ್ತಿರುವುದು ಮಹತ್ವದ ಬದಲಾವಣೆಗೆ ಕಾರಣವಾಗಿದೆ.

ಬಹುನೀರಿಕ್ಷಿತ ಹ್ಯುಂಡೈ ವೆರ್ನಾ ಫೇಸ್‌ಲಿಫ್ಟ್ ಕಾರಿನ ಟೀಸರ್ ಬಿಡುಗಡೆ

ಬಿಎಸ್-6 ಎಂಜಿನ್‌ನಿಂದಾಗಿ ಹ್ಯುಂಡೈ ಕಾರುಗಳ ಮಾಲಿನ್ಯ ಪ್ರಮಾಣವು ಗಣನೀಯವಾಗಿ ಇಳಿಕೆಯಾಗಿದ್ದು, ಹೊಸ ತಂತ್ರಜ್ಞಾನ ಪ್ರೇರಿತ ಎಂಜಿನ್‌ನಿಂದಾಗಿ ಹೊಸ ಬೆಲೆಯಲ್ಲೂ ಕೂಡಾ ಸಾಕಷ್ಟು ಏರಿಕೆಯಾಗಲಿದೆ.

Article Published On: Monday, March 9, 2020, 17:02 [IST]
English summary
Hyundai has released the first official teaser images of the upcoming Verna facelift model ahead of its launch. Read in Kannada.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+