ಹೊಸ ನವೀಕರಣಗಳೊಂದಿಗೆ ಬಿಡುಗಡೆಯಾಗಲಿದೆ ಜಾಗ್ವಾರ್ ಎಫ್-ಪೇಸ್ ಎಸ್‌ವಿಆರ್ ಎಸ್‍ಯುವಿ

ಐಷಾರಾಮಿ ಕಾರು ತಯಾರಕ ಕಂಪನಿಯಾದ ಜಾಗ್ವಾರ್ ತನ್ನ ಎಫ್-ಪೇಸ್ ಎಸ್‌ವಿಆರ್ ಪರ್ಫಾಮೆನ್ಸ್ ಎಸ್‍ಯುವಿಯನ್ನು ಅಂತರರಾಷ್ಟ್ರೀಯ ಮಾರುಕಟ್ಟೆಗಳಲ್ಲಿ ಹೊಸ ಅಪ್ಡೇಟ್ ಗಳೊಂದಿಗೆ ಬಿಡುಗಡೆಗೊಳಿಸಲಿದೆ. ಕಂಪನಿಯ ಪ್ರಕಾರ, ಹಿಂದಿನ ಮಾದರಿಗಿಂತ ಹೊಸ ಎಫ್-ಪೇಸ್ ಎಸ್‌ವಿಆರ್ ಹೆಚ್ಚಿನ ಪರ್ಫಾಮೆನ್ಸ್ ನೀಡುತ್ತದೆ.

ಹೊಸ ನವೀಕರಣಗಳೊಂದಿಗೆ ಬಿಡುಗಡೆಯಾಗಲಿದೆ ಜಾಗ್ವಾರ್ ಎಫ್-ಪೇಸ್ ಎಸ್‌ವಿಆರ್ ಎಸ್‍ಯುವಿ

ಮೊದಲಿಗೆ 2021ರ ಜಾಗ್ವಾರ್ ಎಫ್-ಪೇಸ್ ಎಸ್‌ವಿಆರ್ ಎಸ್‍ಯುವಿಯ ವಿನ್ಯಾಸದ ಬಗ್ಗೆ ಹೇಳುವುದಾದರೆ, ಈ ಹೊಸ ಎಸ್‍ಯುವಿಯು ಇತರ ಜಾಗ್ವಾರ್ ಮಾದರಿಗಳಂತೆ ಐಷಾರಾಮಿ ಮತ್ತು ಆಕರ್ಷಕ ಲುಕ್ ಅನ್ನು ಹೊಂದಿದೆ. ಈ ಹೊಸ ಜಾಗ್ವಾರ್ ಎಫ್-ಪೇಸ್ ಎಸ್‌ವಿಆರ್ ಎಸ್‍ಯುವಿಯ ಮುಂಭಾಗ ಮುಂಭಾಗದ ಬಂಪರ್ ಅನ್ನು ಅಗ್ರೇಸಿವ್ ಲುಕ್ ನೊಂದಿಗೆ ಕಾಣುವ ರೀತಿಯ ವಿನ್ಯಾಸಗೊಳಿಸಲಾಗಿದೆ. ಇನ್ನು ಏರ್ ಇನ್ ಟೆಕ್ ಗಳು ದೊಡ್ಡದಾಗಿದೆ. ಇದು ಇದು ಬ್ರೇಕ್‌ಗಳನ್ನು ಕೂಲ್ ಆಗಿ ಇರಸಲು ಸಹಾಯ ಮಾಡುತ್ತದೆ.

ಹೊಸ ನವೀಕರಣಗಳೊಂದಿಗೆ ಬಿಡುಗಡೆಯಾಗಲಿದೆ ಜಾಗ್ವಾರ್ ಎಫ್-ಪೇಸ್ ಎಸ್‌ವಿಆರ್ ಎಸ್‍ಯುವಿ

2021ರ ಜಾಗ್ವಾರ್ ಎಫ್-ಪೇಸ್ ಎಸ್‌ವಿಆರ್ ಎಸ್‍ಯುವಿ ಹೊಸ ಎಲ್ಇಡಿ ಹೆಡ್‌ಲೈಟ್‌ಗಳೊಂದಿಗೆ ಪಿಕ್ಸೆಲ್ ಎಲ್ಇಡಿ ತಂತ್ರಜ್ಞಾನವನ್ನು ಆಯ್ಕೆಯಾಗಿ ನೀಡಲಾಗಿದೆ. ಇನ್ನು ಈ ಎಸ್‍ಯುವಿಯು ನಯವಾದ ಎಲ್ಇಡಿ ಟೈಲ್‌ಲ್ಯಾಂಪ್‌ಗಳನ್ನು ಸಹ ಒಳಗೊಂಡಿದೆ. ಹೊಸ ಜಾಗ್ವಾರ್ ಎಫ್-ಪೇಸ್ ಎಸ್‌ವಿಆರ್ ಎಸ್‍ಯುವಿಯು ಏರೋ ಪ್ಯಾಕೇಜ್ ಅನ್ನು ಸಹ ಹೊಂದಿದೆ, ಇದು ಬ್ರ್ಯಾಂಡ್‌ನ ಮೋಟಾರ್‌ಸ್ಪೋರ್ಟ್ ವಿಭಾಗದಿಂದ ಪ್ರೇರಿತವಾಗಿದೆ.

MOST READ: ಮರ್ಸಿಡಿಸ್ ಬೆಂಝ್ ಜಿಎಲ್ಇ ಎಸ್‍ಯುವಿಯ ಎರಡು ಹೊಸ ರೂಪಾಂತರಗಳು ಬಿಡುಗಡೆ

ಹೊಸ ನವೀಕರಣಗಳೊಂದಿಗೆ ಬಿಡುಗಡೆಯಾಗಲಿದೆ ಜಾಗ್ವಾರ್ ಎಫ್-ಪೇಸ್ ಎಸ್‌ವಿಆರ್ ಎಸ್‍ಯುವಿ

ಇನ್ನು ಈ ಹೊಸ ಎಸ್‍ಯುವಿ 22 ಇಂಚಿನ ಹೊಸ ಡ್ಯುಯಲ್-ಟೋನ್ ಗ್ಲೋಸ್ ನಾರ್ವಿಕ್ ಬ್ಲ್ಯಾಕ್ ವ್ಹೀಲ್ ಗಳನ್ನು ಹೊಂದಿವೆ. ಹಿಂದಿನ ಮಾದರಿಗೆ ಹೋಲಿಸಿದರೆ ಹೊಸ ಜಾಗ್ವಾರ್ ಎಫ್-ಪೇಸ್ ಎಸ್‌ವಿಆರ್ ಎಸ್‍ಯುವಿ ಹೊಸ ವ್ಜೀಲ್ ಗಳೊಂದಿಗೆ ಅಗ್ರೇಸಿವ್ ಆಗಿ ಕಾಣುವ ಫ್ರಂಟ್ ಎಂಡ್ ಅನ್ನು ಹೊಂದಿದೆ.

ಹೊಸ ನವೀಕರಣಗಳೊಂದಿಗೆ ಬಿಡುಗಡೆಯಾಗಲಿದೆ ಜಾಗ್ವಾರ್ ಎಫ್-ಪೇಸ್ ಎಸ್‌ವಿಆರ್ ಎಸ್‍ಯುವಿ

ಇನ್ನು ಕಾರಿನ ಹೃದಯ ಭಾಗ ಎಂದೇ ಕರೆಯುವ ಎಂಜಿನ್ ಬಗ್ಗೆ ಹೇಳುವುದಾದರೆ, ಈ ಹೊಸ ಜಾಗ್ವಾರ್ ಎಫ್-ಪೇಸ್ ಎಸ್‌ವಿಆರ್ ಎಸ್‍ಯುವಿಯಲ್ಲಿ ಬ್ರ್ಯಾಂಡ್‌ನ 5.0-ಲೀಟರ್ ಸೂಪರ್‌ಚಾರ್ಜ್ಡ್ ವಿ8 ಪೆಟ್ರೋಲ್ ಎಂಜಿನ್ ಅನ್ನು ಅಳವಡಿಸಲಾಗಿದೆ.

MOST READ: ಅನಾವರಣವಾಯ್ತು ಟೊಯೊಟಾ ಕೊರೊಲ್ಲಾ ಟೂರಿಂಗ್ ರಿಬ್ಯಾಡ್ಜ್ ಆವೃತ್ತಿ ಸುಜುಕಿ ಸ್ವೇಸ್

ಹೊಸ ನವೀಕರಣಗಳೊಂದಿಗೆ ಬಿಡುಗಡೆಯಾಗಲಿದೆ ಜಾಗ್ವಾರ್ ಎಫ್-ಪೇಸ್ ಎಸ್‌ವಿಆರ್ ಎಸ್‍ಯುವಿ

ಈ ಎಂಜಿನ್ 548 ಬಿಹೆಚ್‍ಪಿ ಪವರ್ ಮತ್ತು 700 ಎನ್ಎಂ ಟಾರ್ಕ್ ಅನ್ನು ನೀಡುತ್ತದೆ. ಹಿಂದಿನ ಮಾದರಿಗೆ ಹೋಲಿಸಿದರೆ ಹೊಸ ಜಾಗ್ವಾರ್ ಎಫ್-ಪೇಸ್ ಎಸ್‌ವಿಆರ್ ಎಸ್‍ಯುವಿಯು 20 ಎನ್ಎಂ ಟಾರ್ಕ್ ಅನ್ನು ಹೆಚ್ಚು ಉತ್ಪಾದಿಸುತ್ತದೆ.

ಹೊಸ ನವೀಕರಣಗಳೊಂದಿಗೆ ಬಿಡುಗಡೆಯಾಗಲಿದೆ ಜಾಗ್ವಾರ್ ಎಫ್-ಪೇಸ್ ಎಸ್‌ವಿಆರ್ ಎಸ್‍ಯುವಿ

ಇನ್ನು ಈ ಹೊಸ ಜಾಗ್ವಾರ್ ಎಫ್-ಪೇಸ್ ಎಸ್‌ವಿಆರ್ ಎಸ್‍ಯುವಿ ಕೇವಲ 0.3 ಸೆಕೆಂಡುಗಳಲ್ಲಿ 0 ರಿಂದ 100 ಕಿ.ಮೀ ವೇಗವನ್ನು ಪಡೆದುಕೊಳ್ಳುತ್ತದೆ. ಹಿಂದಿನ ಮಾದರಿಯು 100 ಕಿ.ಮೀ ವೇಗವನ್ನು ಪಡೆದುಕೊಳ್ಳಲು 0.6 ಸೆಕೆಂಡುಗಳನ್ನು ತೆಗೆದುಕೊಳ್ಳುತ್ತದೆ.

MOST READ: ಐಷಾರಾಮಿ ಬಿಎಂಡಬ್ಲ್ಯು ಎಕ್ಸ್7 ಕಾರು ಚಾಲನೆ ವೇಳೆ ಕಾಣಿಸಿಕೊಂಡ ಬಾಲಿವುಡ್ ಸ್ಟಾರ್

ಹೊಸ ನವೀಕರಣಗಳೊಂದಿಗೆ ಬಿಡುಗಡೆಯಾಗಲಿದೆ ಜಾಗ್ವಾರ್ ಎಫ್-ಪೇಸ್ ಎಸ್‌ವಿಆರ್ ಎಸ್‍ಯುವಿ

ಹೊಸ ಜಾಗ್ವಾರ್ ಎಫ್-ಪೇಸ್ ಎಸ್‌ವಿಆರ್ ಎಸ್‍ಯುವಿ 286 ಕಿ.ಮೀ ಟಾಪ್ ಸ್ಪೀಡ್ ಅನ್ನು ಹೊಂದಿದೆ. ಇನ್ನು ಈ ಎಸ್‍ಯುವಿಯಲ್ಲಿ ಎಂಜಿನ್ ನೊಂದಿಗೆ 8-ಸ್ಪೀಡ್ ಟಾರ್ಕ್ ಕನವಾರ್ಟರ್ ಅನ್ನು ನೀಡಿ‌ದೆ. ಎಸ್‌ಯುವಿ ಜಾಗ್ವಾರ್ ಎಕ್ಸ್‌ಇ ಎಸ್‌ವಿ ಪ್ರಾಜೆಕ್ಟ್ 8 ಸೂಪರ್ ಸಲೂನ್‌ನಲ್ಲಿ ಬಳಸಿದ ಅದೇ ಟಾರ್ಕ್ ಕನವಾರ್ಟರ್ ಅನ್ನು ಹೊಂದಿದೆ.

ಹೊಸ ನವೀಕರಣಗಳೊಂದಿಗೆ ಬಿಡುಗಡೆಯಾಗಲಿದೆ ಜಾಗ್ವಾರ್ ಎಫ್-ಪೇಸ್ ಎಸ್‌ವಿಆರ್ ಎಸ್‍ಯುವಿ

ಹೊಸ ಜಾಗ್ವಾರ್ ಎಫ್-ಪೇಸ್ ಎಸ್‌ವಿಆರ್ ಎಸ್‍ಯುವಿಯಲ್ಲಿ ಡೈನಾಮಿಕ್, ಇಕೋ, ರೈನ್ ಮತ್ತು ಐಸ್-ಸ್ನೊ ಎಂಬ ಡ್ರೈವ್ ಮೋಡ್ ಗಳನ್ನು ಹೊಂದಿದೆ. ಇನ್ನು ಈ ಎಸ್‍ಯುವಿಯಲ್ಲಿ ವೆಹಿಕಲ್ ಹೋಲ್ಡ್" ಸಿಸ್ಟಂ ಸಹ ಹೊಂದಿದೆ, ಇದು ಹಿಲ್-ಹೋಲ್ಡ್ ಸಿಸ್ಟಂಗಿಂತ ಸುಗಮವಾಗಿದೆ ಎಂದು ಹೇಳಲಾಗುತ್ತದೆ.

ಹೊಸ ನವೀಕರಣಗಳೊಂದಿಗೆ ಬಿಡುಗಡೆಯಾಗಲಿದೆ ಜಾಗ್ವಾರ್ ಎಫ್-ಪೇಸ್ ಎಸ್‌ವಿಆರ್ ಎಸ್‍ಯುವಿ

ಹೊಸ ಜಾಗ್ವಾರ್ ಎಫ್-ಪೇಸ್ ಎಸ್‌ವಿಆರ್ ಎಸ್‍ಯುವಿಯ ಇಂಟಿರಿಯರ್ ನಲ್ಲಿ 12.3-ಇಂಚಿನ ಡಿಜಿಟಲ್ ಇನ್ಸ್ ಟ್ರೂಮೆಂಟ್ ಮತ್ತು 11.4- ಇನ್ಫೋಟೈನ್‌ಮೆಂಟ್ ಸಿಸ್ಟಂ ಅನ್ನು ಹೊಂದಿದೆ. ಇದರೊಂದಿಗೆ ಪಿವಿ ಪ್ರೊ ಇನ್ಫೋಟೈನ್‌ಮೆಂಟ್, ಸಾಫ್ಟ್‌ವೇರ್-ಓವರ್-ಏರ್ ಸಾಮರ್ಥ್ಯ ಮತ್ತು ಡ್ರೈವಿಂಗ್ ಅಸಿಸ್ಟ್ ಫೀಚರ್ ಗಳನ್ನು ಹೊಂದಿರಲಿದೆ.

ಹೊಸ ನವೀಕರಣಗಳೊಂದಿಗೆ ಬಿಡುಗಡೆಯಾಗಲಿದೆ ಜಾಗ್ವಾರ್ ಎಫ್-ಪೇಸ್ ಎಸ್‌ವಿಆರ್ ಎಸ್‍ಯುವಿ

ಹೊಸ ಜಾಗ್ವಾರ್ ಎಫ್-ಪೇಸ್ ಎಸ್‌ವಿಆರ್ ಎಸ್‍ಯುವಿ ಸಾಕಷ್ಟು ನವೀಕರಣಗಳನ್ನು ಪಡೆದುಕೊಂಡಿದೆ. ಹೊಸ ಜಾಗ್ವಾರ್ ಎಫ್-ಪೇಸ್ ಎಸ್‌ವಿಆರ್ ಎಸ್‍ಯುವಿ ಬಿಡುಗಡೆಯಾದ ಬಳಿಕ ಬಿಎಂಡಬ್ಲ್ಯು ಎಕ್ಸ್3 ಎಂ ಮತ್ತು ಮರ್ಸಿಡಿಸ್-ಎಎಂಜಿ ಜಿಎಲ್‌ಸಿ 43 ಕಾರುಗಳಿಗೆ ಪೈಪೋಟಿ ನೀಡುತ್ತದೆ.

Most Read Articles

Kannada
English summary
2021 Jaguar F-Pace SVR Receive Cosmetic & Mechanical Upgrades. Read In Kannada.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X