2021ಕ್ಕೆ ಬಿಡುಗಡೆಯಾಗಲಿದೆಯೆಂತೆ ಜೀಪ್ ಹೊಚ್ಚ ಹೊಸ 7 ಸೀಟರ್ ಎಸ್‌ಯುವಿ

ಪ್ರೀಮಿಯಂ ಎಸ್‌ಯುವಿ ಕಾರುಗಳ ಮಾರಾಟದಲ್ಲಿ ಮುಂಚೂಣಿಯಲ್ಲಿರುವ ಜೀಪ್ ಇಂಡಿಯಾ ಸಂಸ್ಥೆಯು ಕಂಪಾಸ್ ಎಸ್‌ಯುವಿ ಯಶಸ್ವಿ ನಂತರ ಶೀಘ್ರದಲ್ಲೇ ಮತ್ತೆರಡು ಹೊಸ ಕಾರುಗಳನ್ನು ಬಿಡುಗಡೆ ಮಾಡುವ ಸುಳಿವು ನೀಡಿದ್ದು, ಭಾರತೀಯ ಗ್ರಾಹಕರ ಬೇಡಿಕೆಯೆಂತೆ ಸಣ್ಣ ಗಾತ್ರದ ಎಸ್‌ಯುವಿ ಜೊತೆಗೆ ಡಿ ಸೆಗ್ಮೆಂಟ್‌ನಲ್ಲೂ ಹೊಸ ಮಾದರಿಯ ಎಸ್‌ಯುವಿಯೊಂದನ್ನು ಬಿಡುಗಡೆ ಮಾಡುತ್ತಿದೆ.

2021ಕ್ಕೆ ಬಿಡುಗಡೆಯಾಗಲಿದೆಯೆಂತೆ ಜೀಪ್ ಹೊಚ್ಚ ಹೊಸ 7 ಸೀಟರ್ ಎಸ್‌ಯುವಿ

ಸದ್ಯ ದೇಶಿಯ ಮಾರುಕಟ್ಟೆಯಲ್ಲಿ ಎಸ್‌ಯುವಿ ಮತ್ತು ಕಂಪ್ಯಾಕ್ಟ್ ಎಸ್‌ಯುವಿ ಕಾರುಗಳಿಗೆ ಉತ್ತಮ ಬೇಡಿಕೆ ಕಂಡುಬರುತ್ತಿದ್ದು, ಇದೇ ನಿಟ್ಟಿನಲ್ಲಿ ಹೊಸ ಯೋಜನೆ ರೂಪಿಸುತ್ತಿರುವ ಜೀಪ್ ಸಂಸ್ಥೆಯು ರೂ.10 ಲಕ್ಷದೊಳಗೆ ಒಂದು ಕಂಪ್ಯಾಕ್ಟ್ ಎಸ್‌ಯುವಿ ಮಾದರಿಯನ್ನು ಮತ್ತು 7 ಸೀಟರ್ ಎಸ್‌ಯುವಿ ಕಾರುಗಳಲ್ಲಿ ಜನಪ್ರಿಯವಾಗಿರುವ ಟೊಯೊಟಾ ಫಾರ್ಚೂನರ್, ಫೋರ್ಡ್ ಎಂಡೀವರ್ ಕಾರುಗಳಿಗೆ ಪ್ರತಿಸ್ಪರ್ಧಿಯಾಗಿ ಹೊಸ ಮಾದರಿಯ ಎಸ್‌ಯುವಿ ಕಾರು ಮಾದರಿಯೊಂದನ್ನು ಅಭಿವೃದ್ದಿಪಡಿಸುತ್ತಿದೆ.

2021ಕ್ಕೆ ಬಿಡುಗಡೆಯಾಗಲಿದೆಯೆಂತೆ ಜೀಪ್ ಹೊಚ್ಚ ಹೊಸ 7 ಸೀಟರ್ ಎಸ್‌ಯುವಿ

ಹೊಸ ಕಾರುಗಳ ಬಿಡುಗಡೆ ಕುರಿತಂತೆ ಮಾತನಾಡಿರುವ ಜೀಪ್ ಇಂಡಿಯಾ ಸಿಇಒ ಕೇವಿನ್ ಫ್ಲೈಯನ್ ಅವರು, ಅಭಿವೃದ್ಧಿ ಪಥದಲ್ಲಿರುವ ಭಾರತದಲ್ಲಿ ಪ್ರೀಮಿಯಂ ಕಾರುಗಳ ಮಾರಾಟವು ತ್ವರಿತಗತಿಯಲ್ಲಿ ಬೆಳವಣಿಗೆ ಕಾಣುತ್ತಿದ್ದು, ಗ್ರಾಹಕರ ಬೇಡಿಕೆಯೆಂತೆ ಕೆಲವು ಹೊಸ ಉತ್ಪನ್ನಗಳನ್ನು ಬಿಡುಗಡೆಗೊಳಿಸಲು ಇದು ಸೂಕ್ತ ಸಮಯ ಎಂದಿದ್ದಾರೆ.

2021ಕ್ಕೆ ಬಿಡುಗಡೆಯಾಗಲಿದೆಯೆಂತೆ ಜೀಪ್ ಹೊಚ್ಚ ಹೊಸ 7 ಸೀಟರ್ ಎಸ್‌ಯುವಿ

ಕೇವಿನ್ ಫ್ಲೆಯನ್ ಅವರು ಪ್ರಕಾರ, ರೂ.10 ಲಕ್ಷ ಬೆಲೆಯೊಳಗಿನ ಕಾರುಗಳು ಸಾಕಷ್ಟು ಲಾಭದಾಯಕವಾಗಲಿದ್ದರೆ, ಪ್ರೀಮಿಯಂ ಕಾರುಗಳು ಬ್ರಾಂಡ್ ಮೌಲ್ಯವನ್ನು ಹೆಚ್ಚಿಸಲಿವೆ. ಹೀಗಾಗಿ ಎರಡು ಮಾದರಿಯಲ್ಲೂ ಕಾರುಗಳನ್ನು ಹೊರತರಲಾಗುತ್ತಿದ್ದು, ಮುಂಬರುವ ಕೆಲವೇ ದಿನಗಳಲ್ಲಿ ಹೊಸ ಕಾರುಗಳು ಭಾರತೀಯ ರಸ್ತೆಗಿಳಿಯಲಿವೆ ಎಂದಿದ್ದಾರೆ.

2021ಕ್ಕೆ ಬಿಡುಗಡೆಯಾಗಲಿದೆಯೆಂತೆ ಜೀಪ್ ಹೊಚ್ಚ ಹೊಸ 7 ಸೀಟರ್ ಎಸ್‌ಯುವಿ

ಹೀಗಾಗಿ ಜೀಪ್ ಸಂಸ್ಥೆಯು ಭಾರತದಲ್ಲಿ ರೂ.10 ಲಕ್ಷ ಬೆಲೆಯ ಅಂತರದಲ್ಲಿ ರೆನೆಗೆಡ್ ಕಂಪ್ಯಾಕ್ಟ್ ಎಸ್‌ಯುವಿ ಕಾರುನ್ನು ಬಿಡುಗಡೆ ಮಾಡಲಿದ್ದರೆ, ಟೊಯೊಟಾ ಫಾರ್ಚೂನರ್ ಕಾರಿಗೆ ಪ್ರತಿಸ್ಪರ್ಧಿಯಾಗಿ ಗ್ರ್ಯಾಂಡ್ ಕಮಾಂಡರ್ ಅಥವಾ ಗ್ರ್ಯಾಂಡ್ ಕಮಾಂಡರ್ ಹೋಲಿಕೆ ಇರುವ ಮತ್ತೊಂದು ಹೊಸ ಕಾರು ಉತ್ಪನ್ನವನ್ನು ಬಿಡುಗಡೆಗೊಳಿಸುವ ಬಗೆಗೆ ಸುಳಿವು ನೀಡಿದೆ.

2021ಕ್ಕೆ ಬಿಡುಗಡೆಯಾಗಲಿದೆಯೆಂತೆ ಜೀಪ್ ಹೊಚ್ಚ ಹೊಸ 7 ಸೀಟರ್ ಎಸ್‌ಯುವಿ

ಒಟ್ಟಿನಲ್ಲಿ ಭಾರತದಲ್ಲಿ ಜೀಪ್ ಸಂಸ್ಥೆಯು ಹೊಸದಾಗಿ ಎರಡು ಕಾರುಗಳು ಬಿಡುಗಡೆಯಾಗುವುದು ಖಚಿತವಾಗಿದ್ದು, ಹೊಸ ಯೋಜನೆಯ ಭಾಗವಾಗಿ ಕಾರುಗಳ ಉತ್ಪಾದನಾ ಸಾಮಾರ್ಥ್ಯವನ್ನು ಸಹ ಹೆಚ್ಚಿಸುವತ್ತ ಜೀಪ್ ಸಂಸ್ಥೆಯು ಭಾರೀ ಪ್ರಮಾಣದಲ್ಲಿ ಬಂಡವಾಳ ಹೂಡಿಕೆ ಮಾಡಿದೆ.

2021ಕ್ಕೆ ಬಿಡುಗಡೆಯಾಗಲಿದೆಯೆಂತೆ ಜೀಪ್ ಹೊಚ್ಚ ಹೊಸ 7 ಸೀಟರ್ ಎಸ್‌ಯುವಿ

2020 ಕೊನೆಯಲ್ಲಿ ಅಥವಾ 2021ರ ಆರಂಭದಲ್ಲಿ ಹೊಸ ಕಾರುನ್ನು ಬಿಡುಗಡೆಗೊಳಿಸುವ ಯೋಜನೆ ರೂಪಿಸಿರುವ ಜೀಪ್ ಸಂಸ್ಥೆಯು ಫಾರ್ಚೂನರ್ ಪ್ರತಿಸ್ಪರ್ಧಿ ಕಾರಿನಲ್ಲಿ 2.7-ಲೀಟರ್ ಡೀಸೆಲ್ ಎಂಜಿನ್ ಮತ್ತು 2.5-ಲೀಟರ್ ಪೆಟ್ರೋಲ್ ಎಂಜಿನ್ ಒದಗಿಸಲಿದ್ದರೆ, ಕಂಪ್ಯಾಕ್ಟ್ ಎಸ್‌ಯುವಿ ಮಾದರಿಯಾದ ರೆನೆಗೆಡ್‌ನಲ್ಲಿ 1.2-ಲೀಟರ್ ಪೆಟ್ರೋಲ್ ಎಂಜಿನ್ ಅನ್ನು ಮತ್ತು 1.5-ಲೀಟರ್ ಡೀಸೆಲ್ ಎಂಜಿನ್ ಅಳವಡಿಸುವ ಸಾಧ್ಯತೆಗಳಿವೆ.

2021ಕ್ಕೆ ಬಿಡುಗಡೆಯಾಗಲಿದೆಯೆಂತೆ ಜೀಪ್ ಹೊಚ್ಚ ಹೊಸ 7 ಸೀಟರ್ ಎಸ್‌ಯುವಿ

ಅದಕ್ಕೂ ಮುನ್ನ ಜೀಪ್ ಸಂಸ್ಥೆಯು ರ‍್ಯಾಂಗ್ಲರ್ ರೂಬಿಕಾನ್ ಆವೃತ್ತಿಯನ್ನು ಬಿಡುಗಡೆ ಮಾಡುವ ಯೋಜನೆಯಲ್ಲಿದ್ದು, ತದನಂತರ ಗ್ರ್ಯಾಂಡ್ ಚರೋಕಿ ಫೇಸ್‌ಲಿಫ್ಟ್ ಮತ್ತು ಜೀಪ್ ಕಂಪಾಸ್ ಫೇಸ್‌ಲಿಫ್ಟ್ ಆವೃತ್ತಿಗಳನ್ನು ಬಿಡುಗಡೆಗೊಳಿಸಲು ಯೋಜನೆ ರೂಪಿಸಿದೆ.

Article Published On: Wednesday, February 26, 2020, 17:21 [IST]
English summary
Jeep New D-SUV and Compass facelift expected next year. Read in Kannada.
Read more on ಜೀಪ್ jeep
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+