Just In
- 1 hr ago
ಟೈರ್ ಸೇವೆಗಳನ್ನು ಸರಳಗೊಳಿಸಲು ಪ್ರತ್ಯೇಕ ಸರ್ವಿಸ್ ಸೆಂಟರ್ ತೆರೆದ ಅಪೊಲೊ ಟೈರ್ಸ್
- 1 hr ago
ಹೊಸ ನವೀಕರಣಗಳೊಂದಿಗೆ ಬಿಡುಗಡೆಯಾಯ್ತು 2021ರ ಬಜಾಜ್ ಪಲ್ಸರ್ 220ಎಫ್ ಬೈಕ್
- 2 hrs ago
ಫಸ್ಟ್ ಡ್ರೈವ್ ರಿವ್ಯೂ: ಆಡಿ ಕಾರು ಮಾರಾಟದಲ್ಲಿ ಹೊಸ ಸಂಚಲನ ಸೃಷ್ಠಿಸುತ್ತಾ ನ್ಯೂ ಜನರೇಷನ್ ಎ4 ಸೆಡಾನ್?
- 3 hrs ago
ಬೇಡಿಕೆ ಹೆಚ್ಚಿದಂತೆ ನಿಸ್ಸಾನ್ ಮ್ಯಾಗ್ನೈಟ್ ಕಾರಿನ ಕಾಯುವಿಕೆ ಅವಧಿಯಲ್ಲಿ ಮತ್ತಷ್ಟು ಹೆಚ್ಚಳ
Don't Miss!
- Movies
51ನೇ ಗೋವಾ ಚಿತ್ರೋತ್ಸವಕ್ಕೆ ಚಾಲನೆ: ಕನ್ನಡದಲ್ಲಿ ಮಾತು ಆರಂಭಿಸಿದ ಸುದೀಪ್
- Lifestyle
ನಿಮ್ಮ ಮಕ್ಕಳ ಕೋಣೆಯನ್ನು ವಾಸ್ತು ಪ್ರಕಾರ ಈ ರೀತಿ ರೆಡಿ ಮಾಡಿ
- News
"ಲಸಿಕೆ ಮೇಲೆ ಅಷ್ಟು ನಂಬಿಕೆಯಿದ್ದರೆ ನೀವೆಲ್ಲಾ ಇನ್ನೂ ತೆಗೆದುಕೊಂಡಿಲ್ಲ ಏಕೆ?"
- Finance
Gold Silver Rate: ಪ್ರಮುಖ ನಗರಗಳಲ್ಲಿ ಜ.16ರ ಚಿನ್ನ, ಬೆಳ್ಳಿ ದರ
- Sports
ಭಾರತ vs ಆಸ್ಟ್ರೇಲಿಯಾ: ರೋಹಿತ್ ಶರ್ಮಾ ಹೆಸರಿಗೆ ಕೆಟ್ಟ ದಾಖಲೆ
- Education
NIA Recruitment 2021: 15 ಡೆಪ್ಯುರಿಟಿ ಸೂಪರಿಂಟೆಂಡೆಂಟ್ ಆಫ್ ಪೊಲೀಸ್ ಹುದ್ದೆಗಳಿಗೆ ಅರ್ಜಿ ಆಹ್ವಾನ
- Technology
ಒನ್ಪ್ಲಸ್ ನಾರ್ಡ್ ಜುಲೈ 15 ರಿಂದ ಅಮೆಜಾನ್ ತಾಣದಲ್ಲಿ ಪ್ರಿ-ಆರ್ಡರ್ಗೆ ಲಭ್ಯವಿದೆ; ಖರೀದಿಸುವಲ್ಲಿ ಮೊದಲಿಗರಾಗಿರಿ!
- Travel
ಭಾರತದಲ್ಲಿ ಜೂನ್ 1 ರಿಂದ ಚಲಿಸಲಿರುವ ರೈಲುಗಳ ಸಂಪೂರ್ಣ ಪಟ್ಟಿ
ಮತ್ತೊಮ್ಮೆ ಸ್ಪಾಟ್ ಟೆಸ್ಟ್ ನಡೆಸಿದ ಹೊಸ ಜೀಪ್ ಕಂಪಾಸ್ ಫೇಸ್‌ಲಿಫ್ಟ್ ಎಸ್‍ಯುವಿ
ಜೀಪ್ ಕಂಪನಿಯು ಹೊಸ ಕಂಪಾಸ್ ಫೇಸ್‌ಲಿಫ್ಟ್ ಎಸ್‍ಯುವಿಯನ್ನು ಭಾರತೀಯ ಮಾರುಕಟ್ಟೆಯಲ್ಲಿ ಬಿಡುಗಡೆಗೊಳಿಸಲು ಸಜ್ಜಾಗುತ್ತಿದೆ. ಜೀಪ್ ಕಂಪಾಸ್ ಫೇಸ್‌ಲಿಫ್ಟ್ ಭಾರತೀಯ ಮಾರುಕಟ್ಟೆಯಲ್ಲಿ ಬಿಡುಗಡೆಯಾಗಲಿರುವ ಬಹುನಿರೀಕ್ಷಿತ ಎಸ್‍ಯುವಿಗಳಲ್ಲಿ ಒಂದಾಗಿದೆ.

ಜೀಪ್ ಕಂಪನಿಯು ತನ್ನ 2021ರ ಕಂಪಾಸ್ ಫೇಸ್‌ಲಿಫ್ಟ್ ಎಸ್‍ಯುವಿಯನ್ನು ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಇತ್ತೀಚೆಗೆ ಅನಾವರಣಗೊಳಿಸಿತ್ತು. ಇನ್ನು ಹೊಸ ಜೀಪ್ ಕಂಪಾಸ್ ಫೇಸ್‌ಲಿಫ್ಟ್ ಭಾರತದಲ್ಲಿ ಮತ್ತೊಮ್ಮೆ ಸ್ಪಾಟ್ ಟೆಸ್ಟ್ ನಡೆಸಿದೆ. ಈ ಹೊಸ ಎಸ್‍ಯುವಿಯು ಭಾರತದಲ್ಲಿ ಸ್ಪಾಟ್ ಟೆಸ್ಟ್ ನಡೆಸುತ್ತಿರುವುದನ್ನು ಟೀಮ್ ಬಿಹೆಚ್‍ಪಿ ಬಹಿರಂಗಪಡಿಸಿದೆ. ಸ್ಪಾಟ್ ಟೆಸ್ಟ್ ನಡೆಸುತ್ತಿರುವ ಸ್ಪೈ ಚಿತ್ರದಲ್ಲಿ ಕಂಪಾಸ್ ಫೇಸ್‌ಲಿಫ್ಟ್ ಎಸ್‍ಯುವಿಯು ಹೊಸ ವಿನ್ಯಾಸದ ಮಲ್ಟಿ-ಸ್ಪೋಕ್ ಬ್ಲ್ಯಾಕ್ ಅಲಾಯ್ ವ್ಹೀಲ್ ಅನ್ನು ಹೊಂದಿದೆ.

2021ರ ಕಂಪಾಸ್ ಫೇಸ್‌ಲಿಫ್ಟ್ ಎಸ್‌ಯುವಿಯಲ್ಲಿ ಹೊಸ ಫೀಚರ್ ಗಳನ್ನು ಅಳವಡಿಸಲಾಗಿದೆ. ಹೊಸ ಕಂಪಾಸ್ ಫೇಸ್‌ಲಿಫ್ಟ್ ಎಸ್‍ಯುವಿಯ ವಿನ್ಯಾಸದ ಬಗ್ಗೆ ಹೇಳುದಾದರೆ ಕೆಲವು ಸೂಕ್ಷ್ಮ ನವೀಕರಣಗಳನ್ನು ಪಡೆದುಕೊಂಡಿದೆ. ಈ ಹೊಸ ಎಸ್‍ಯುವಿಯಲ್ಲಿ ಏಳು-ಸ್ಲ್ಯಾಟ್ ಗ್ರಿಲ್ ಅನ್ನು ಉಳಿಸಿಕೊಂಡು ಮುಂಭಾಗದಲ್ಲಿ ಹೊಸ ಹನಿಕಾಂಬ್ ಮೆಶ್ ಅನ್ನು ಒಳಗೊಂಡಿದೆ.
MOST READ: 2020ರ ಸಿಟಿ ಕಾರಿನ ಉತ್ಪಾದನೆಯನ್ನು ಪ್ರಾರಂಭಿಸಿದ ಹೋಂಡಾ

ಅಲ್ಲದೇ ಹೊಸ ಕಂಪಾಸ್ ಫೇಸ್‌ಲಿಫ್ಟ್ ಎಸ್‍ಯುವಿಯು ಆಕರ್ಷಕ ಲುಕ್ ಅನ್ನು ಹೊಂದಿದೆ. ಈ ಹೊಸ ಎಸ್‍ಯುವಿಯ ಇತರ ನವೀಕರಣಗಳಲ್ಲಿ ಇಂಟಿಗ್ರೇಟೆಡ್ ಎಲ್ಇಡಿ ಡಿಆರ್‌ಎಲ್ ಗಳೊಂದಿಗೆ ಹೆಡ್ ಲ್ಯಾಂಪ್, ಫಾಗ್ ಲ್ಯಾಂಪ್ ಗಳಿಗಾಗಿ ನವೀಕರಿಸಿದ ಫ್ರಂಟ್ ಬಂಪರ್ ಮತ್ತು ಹಿಂಭಾಗದಲ್ಲಿ ಟೇಲ್ ಲೈಟ್ ಅನ್ನು ಅಳವಡಿಸಲಾಗಿದೆ.

ಹೊಸ ಕಂಪಾಸ್ ಫೇಸ್‌ಲಿಫ್ಟ್ ಎಸ್‍ಯುವಿಯ ಒಳಭಾಗದಲ್ಲಿ ಸೂಕ್ಷ್ಮ ನವೀಕರಣಗಳು ಮತ್ತು ಬದಲಾವಣೆಗಳನ್ನು ಒಳಗೊಂಡಿದೆ. 2021 ಜೀಪ್ ಕಂಪಾಸ್‌ನ ಕ್ಯಾಬಿನ್ ಮೊದಲಿಗಿಂತ ಹೆಚ್ಚು ಪ್ರೀಮಿಯಂ ಆಗಿದೆ.ಎಸ್‍ಯುವಿಯ ಒಳಭಾಗದಲ್ಲಿ ಹಲವಾರು ಪ್ರೀಮಿಯಂ ಫೀಚರ್ ಗಳನ್ನು ಹೊಂದಿವೆ.
MOST READ: 2020ರ ಸಿಟಿ ಕಾರಿನ ಉತ್ಪಾದನೆಯನ್ನು ಪ್ರಾರಂಭಿಸಿದ ಹೋಂಡಾ

ಸ್ಪೈ ಚಿತ್ರದಲ್ಲಿ ಈ ಹೊಸ ಕಂಪಾಸ್ ಫೇಸ್‌ಲಿಫ್ಟ್ ಎಸ್‍ಯುವಿಯ ಒಳಭಾಗದ ಫೀಚರುಗಳ ಮಾಹಿತಿ ಬಹಿರಂಗವಾಗಿದೆ. ಈ ಹೊಸ ಎಸ್‍ಯುವಿಯಲ್ಲಿ ಆಪಲ್ ಕಾರ್ ಪ್ಲೇ ಮತ್ತು ಆಂಡ್ರಾಯ್ಡ್ ಆಟೋ ಹೊಂದಾಣಿಕೆಯೊಂದಿಗೆ 8.4-ಇಂಚಿನ ದೊಡ್ಡ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಂ ಜೊತೆಗೆ ಯುಕನೆಕ್ಟ್ 5 ತಂತ್ರಜ್ಞಾನವನ್ನು ಅಳವಡಿಸಿದೆ.

2021ರ ಜೀಪ್ ಕಂಪಾಸ್‌ನಲ್ಲಿ ಹೊಸ ಎಂಜಿನ್ ಆಯ್ಕೆಯನ್ನು ನೀಡಲಾಗಿದೆ. ಹೊಸದಾಗಿ 1.3-ಲೀಟರ್ ಟರ್ಬೊ-ಪೆಟ್ರೋಲ್ ಎಂಜಿನ್ ಅನ್ನು ಅಳವಡಿಸಲಾಗಿದೆ. ಇನ್ನು ಹಳೆಯ 1.4-ಲೀಟರ್ ಅನ್ನು ಬದಲಾಯಿಸಲಾಗುತ್ತದೆ.
MOST READ: ಸ್ಪಾಟ್ ಟೆಸ್ಟ್ನಲ್ಲಿ ಕಾಣಿಸಿಕೊಂಡ ಟೊಯೊಟಾ ಫಾರ್ಚೂನರ್ ಫೇಸ್‌ಲಿಫ್ಟ್

ಈ ಎಸ್‍ಯುವಿಯಲ್ಲಿ ಹೊಸ 1.3-ಲೀಟರ್ ಎಂಜಿನ್ ಎರಡು ಸ್ಟೇಟ್-ಟ್ಯೂನ್‌ಗಳನ್ನು ಹೊಂದಿದೆ. ಇದು 128 ಬಿಹೆಚ್‍ಪಿ ಪವರ್ ಮತ್ತು 148 ಎನ್ಎಂ ಟಾರ್ಕ್ ಅನ್ನು ಉತ್ಪಾದಿಸುತ್ತದೆ. ಲೋವರ್ ಸ್ಟೇಟ್-ಟ್ಯೂನ್‌ಗಳಲ್ಲಿ 6-ಸ್ಪೀಡ್ ಮ್ಯಾನುವಲ್ ಗೇರ್ ಬಾಕ್ಸ್ ಅನ್ನು ಜೊಡಿಸಲಾಗಿದೆ. ಇನ್ನೊಂದು ಆಯ್ಕೆಯಲ್ಲಿ 7-ಸ್ಪೀಡ್ ಡ್ಯುಯಲ್-ಕ್ಲಚ್ ಗೇರ್ ಬಾಕ್ಸ್ ಆಯ್ಕೆಯನ್ನು ಸಹ ಹೊಂದಿದೆ.

ಅಂತರರಾಷ್ಟ್ರೀಯ ಮಾರುಕಟ್ಟೆಗಳಲ್ಲಿ 2021ರ ಜೀಪ್ ಕಂಪಾಸ್ ಫೇಸ್‌ಲಿಫ್ಟ್ ಎಸ್‍ಯುವಿಯಲ್ಲಿ 1.6-ಲೀಟರ್ ಮಲ್ಟಿಜೆಟ್ ಡೀಸೆಲ್ ಎಂಜಿನ್ ಅನ್ನು ಹೊಂದಿದೆ. ಈ ಎಂಜಿನ್ 118 ಬಿಹೆಚ್‍ಪಿ ಪವರ್ ಮತ್ತು 320 ಎನ್ಎಂ ಟಾರ್ಕ್ ಅನ್ನು ಉತ್ಪಾದಿಸುತ್ತದೆ. ಭಾರತದಲ್ಲಿ 2.0-ಲೀಟರ್ ಡೀಸೆಲ್ ಎಂಜಿನ್ ಅನ್ನು ಅಳವಡಿಸಬಹುದು ಎಂದು ನಿರೀಕ್ಷಿಸುತ್ತೆವೆ.

ಜೀಪ್ ಕಂಪಾಸ್ ಫೇಸ್‌ಲಿಫ್ಟ್ ಭಾರತೀಯ ಮಾರುಕಟ್ಟೆಯಲ್ಲಿ ಬಿಡುಗಡೆಯಾದ ಬಳಿಕ ಫೋಕ್ಸ್‌ವ್ಯಾಗನ್ ಟಿ-ರೋಕ್, ಸ್ಕೋಡಾ ಕರೋಕ್, ನಿಸ್ಸಾನ್ ಕಿಕ್ಸ್, ಹ್ಯುಂಡೈ ಕ್ರೆಟಾ ಮತ್ತು ಕಿಯಾ ಸೆಲ್ಟೋಸ್ ಎಸ್‍ಯುವಿಗಳಿಗೆ ಪೈಪೋಟಿ ನೀಡುತ್ತದೆ.