ಹೊಸ ಜೀಪ್ ಕಂಪಾಸ್ ಫೇಸ್‌ಲಿಫ್ಟ್ ಎಸ್‍ಯುವಿ ಬಿಡುಗಡೆ ಮಾಹಿತಿ ಬಹಿರಂಗ
ಜೀಪ್ ಕಂಪನಿಯು ಹೊಸ ಕಂಪಾಸ್ ಫೇಸ್‌ಲಿಫ್ಟ್ ಎಸ್‍ಯುವಿಯನ್ನು ಭಾರತೀಯ ಮಾರುಕಟ್ಟೆಯಲ್ಲಿ ಬಿಡುಗಡೆಗೊಳಿಸಲು ಸಜ್ಜಾಗುತ್ತಿದೆ. ಈ ಹೊಸ ಜೀಪ್ ಕಂಪಾಸ್ ಫೇಸ್‌ಲಿಫ್ಟ್ ಎಸ್‍ಯುವಿಯು ಭಾರತದಲ್ಲಿ ಹಲವಾರು ಬಾರಿ ಸ್ಪಾಟ್ ಟೆಸ್ಟ್ ಅನ್ನು ನಡಿಸಿದೆ.

ಹೊಸ ಜೀಪ್ ಕಂಪಾಸ್ ಫೇಸ್‌ಲಿಫ್ಟ್ ಎಸ್‍ಯುವಿಯು ಹಲವಾರು ಹೊಸ ಅಪ್ದೇಟ್ ಗಳೊಂದಿಗೆ ಭಾರತದಲ್ಲಿ ಬಿಡುಗಡೆಯಾಗಲಿದೆ. ವರದಿಗಳ ಪ್ರಕಾರ ಹೊಸ ಜೀಪ್ ಕಂಪಾಸ್ ಫೇಸ್‌ಲಿಫ್ಟ್ ಎಸ್‍ಯುವಿಯು ಮುಂದಿನ ಜನವರಿ ತಿಂಗಳ 23ರಂದು ಬಿಡುಗಡೆಯಾಗಲಿದೆ. ಇನ್ನು ಜೀಪ್ ಕಂಪನಿಯ ಡೀಲರುಗಳು ಈ ಹೊಸ ಜೀಪ್ ಕಂಪಾಸ್ ಫೇಸ್‌ಲಿಫ್ಟ್ ಎಸ್‍ಯುವಿಗಾಗಿ ಬುಕ್ಕಿಂಗ್ ಸ್ವೀಕರಿಸಲು ಪ್ರಾರಂಭಿಸಿದ್ದಾರೆ ಎಂದು ವರದಿಯಾಗಿದೆ.

ಜೀಪ್ ಕಂಪನಿಯು ತನ್ನ 2021ರ ಕಂಪಾಸ್ ಫೇಸ್‌ಲಿಫ್ಟ್ ಎಸ್‍ಯುವಿಯನ್ನು ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಇತ್ತೀಚೆಗೆ ಅನಾವರಣಗೊಳಿಸಿತ್ತು. ಭಾರತದಲ್ಲಿ ಸ್ಪಾಟ್ ಟೆಸ್ಟ್ ನಡೆಸುತ್ತಿರುವ ಸ್ಪೈ ಚಿತ್ರದಲ್ಲಿ ಕಂಪಾಸ್ ಫೇಸ್‌ಲಿಫ್ಟ್ ಎಸ್‍ಯುವಿಯು ಹೊಸ ವಿನ್ಯಾಸದ ಮಲ್ಟಿ-ಸ್ಪೋಕ್ ಬ್ಲ್ಯಾಕ್ ಅಲಾಯ್ ವ್ಹೀಲ್ ಅನ್ನು ಹೊಂದಿತ್ತು.
MOST READ: ಅನಾವರಣವಾಯ್ತು ಟೊಯೊಟಾ ಕೊರೊಲ್ಲಾ ಟೂರಿಂಗ್ ರಿಬ್ಯಾಡ್ಜ್ ಆವೃತ್ತಿ ಸುಜುಕಿ ಸ್ವೇಸ್

2021ರ ಕಂಪಾಸ್ ಫೇಸ್‌ಲಿಫ್ಟ್ ಎಸ್‌ಯುವಿಯಲ್ಲಿ ಹೊಸ ಫೀಚರ್ ಗಳನ್ನು ಅಳವಡಿಸಲಾಗಿದೆ. ಹೊಸ ಕಂಪಾಸ್ ಫೇಸ್‌ಲಿಫ್ಟ್ ಎಸ್‍ಯುವಿಯ ವಿನ್ಯಾಸದ ಬಗ್ಗೆ ಹೇಳುದಾದರೆ ಕೆಲವು ಸೂಕ್ಷ್ಮ ನವೀಕರಣಗಳನ್ನು ಪಡೆದುಕೊಂಡಿದೆ. ಈ ಹೊಸ ಎಸ್‍ಯುವಿಯಲ್ಲಿ ಏಳು-ಸ್ಲ್ಯಾಟ್ ಗ್ರಿಲ್ ಅನ್ನು ಉಳಿಸಿಕೊಂಡು ಮುಂಭಾಗದಲ್ಲಿ ಹೊಸ ಹನಿಕಾಂಬ್ ಮೆಶ್ ಅನ್ನು ಒಳಗೊಂಡಿದೆ.

ಅಲ್ಲದೇ ಹೊಸ ಕಂಪಾಸ್ ಫೇಸ್‌ಲಿಫ್ಟ್ ಎಸ್‍ಯುವಿಯು ಆಕರ್ಷಕ ಲುಕ್ ಅನ್ನು ಹೊಂದಿದೆ. ಈ ಹೊಸ ಎಸ್‍ಯುವಿಯ ಇತರ ನವೀಕರಣಗಳಲ್ಲಿ ಇಂಟಿಗ್ರೇಟೆಡ್ ಎಲ್ಇಡಿ ಡಿಆರ್‌ಎಲ್ ಗಳೊಂದಿಗೆ ಹೆಡ್ ಲ್ಯಾಂಪ್, ಫಾಗ್ ಲ್ಯಾಂಪ್ ಗಳಿಗಾಗಿ ನವೀಕರಿಸಿದ ಫ್ರಂಟ್ ಬಂಪರ್ ಮತ್ತು ಹಿಂಭಾಗದಲ್ಲಿ ಟೇಲ್ ಲೈಟ್ ಅನ್ನು ಅಳವಡಿಸಲಾಗಿದೆ.
MOST READ: 2020ರ ಸಿಟಿ ಕಾರಿನ ಉತ್ಪಾದನೆಯನ್ನು ಪ್ರಾರಂಭಿಸಿದ ಹೋಂಡಾ

ಹೊಸ ಕಂಪಾಸ್ ಫೇಸ್‌ಲಿಫ್ಟ್ ಎಸ್‍ಯುವಿಯ ಒಳಭಾಗದಲ್ಲಿ ಸೂಕ್ಷ್ಮ ನವೀಕರಣಗಳು ಮತ್ತು ಬದಲಾವಣೆಗಳನ್ನು ಒಳಗೊಂಡಿದೆ. 2021 ಜೀಪ್ ಕಂಪಾಸ್‌ನ ಕ್ಯಾಬಿನ್ ಮೊದಲಿಗಿಂತ ಹೆಚ್ಚು ಪ್ರೀಮಿಯಂ ಆಗಿದೆ.ಎಸ್‍ಯುವಿಯ ಒಳಭಾಗದಲ್ಲಿ ಹಲವಾರು ಪ್ರೀಮಿಯಂ ಫೀಚರ್ ಗಳನ್ನು ಹೊಂದಿವೆ.

ಹೊಸ ಕಂಪಾಸ್ ಫೇಸ್‌ಲಿಫ್ಟ್ ಎಸ್‍ಯುವಿಯ ಒಳಭಾಗದ ಫೀಚರುಗಳ ಮಾಹಿತಿ ಬಹಿರಂಗವಾಗಿದೆ. ಈ ಹೊಸ ಎಸ್‍ಯುವಿಯಲ್ಲಿ ಆಪಲ್ ಕಾರ್ ಪ್ಲೇ ಮತ್ತು ಆಂಡ್ರಾಯ್ಡ್ ಆಟೋ ಹೊಂದಾಣಿಕೆಯೊಂದಿಗೆ 10.1-ಇಂಚಿನ ದೊಡ್ಡ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಂ ಜೊತೆಗೆ ಯುಕನೆಕ್ಟ್ 5 ತಂತ್ರಜ್ಞಾನವನ್ನು ಅಳವಡಿಸಿದೆ.
MOST READ: ಬಿಡುಗಡೆಯ ಸನಿಹದಲ್ಲಿ ಹೊಸ ಮಾರುತಿ ಸುಜುಕಿ ಸೆಲೆರಿಯೊ

2021ರ ಜೀಪ್ ಕಂಪಾಸ್‌ನಲ್ಲಿ ಹೊಸ ಎಂಜಿನ್ ಆಯ್ಕೆಯನ್ನು ನೀಡಲಾಗಿದೆ. ಹೊಸದಾಗಿ 1.4 ಲೀಟರ್ ಟರ್ಬೊ-ಪೆಟ್ರೋಲ್ ಎಂಜಿನ್ ಅನ್ನು ಅಳವಡಿಸಲಾಗಿದೆ. ಇದರೊಂದಿಗೆ 2.0 ಲೀಟರ್ ಡೀಸೆಲ್ ಎಂಜಿನ್ ಅನ್ನು ಕೂಡ ಅಳವಡಿಸಲಾಗಿದೆ.

ಇದರಲ್ಲಿ 1.4 ಲೀಟರ್ ಟರ್ಬೊ-ಪೆಟ್ರೋಲ್ 160 ಬಿಹೆಚ್‌ಪಿ ಮತ್ತು 250 ಎನ್ಎಂ ಟಾರ್ಕ್ ಅನ್ನು ಉತ್ಪಾದಿಸಿದರೆ, 2.0 ಲೀಟರ್ ಡೀಸೆಲ್ ಎಂಜಿನ್ 173 ಬಿಹೆಚ್‌ಪಿ ಮತ್ತು 350 ಎನ್ಎಂ ಟಾರ್ಕ್ ಅನ್ನು ಉತ್ಪಾದಿಸುತ್ತದೆ.
MOST READ: ಸ್ಪಾಟ್ ಟೆಸ್ಟ್ನಲ್ಲಿ ಕಾಣಿಸಿಕೊಂಡ ಟೊಯೊಟಾ ಫಾರ್ಚೂನರ್ ಫೇಸ್‌ಲಿಫ್ಟ್

ಇನ್ನು ಜೀಪ್ ಇಂಡಿಯಾ ಕಂಪನಿಯು ವರ್ಷಾಂತ್ಯದಲ್ಲಿ ತನ್ನ ಬಿಎಸ್-6 ಕಂಪಾಸ್ ಎಸ್‍ಯುವಿಯ ಮೇಲೆ ಭರ್ಜರಿ ರಿಯಾಯಿತಿಯನ್ನು ಘೋಷಿಸಿದೆ. ಜೀಪ್ ಕಂಪನಿಯು ಮಾರಾಟವನ್ನು ಹೆಚ್ಚಿಸಲು ತನ್ನ ಕಂಪಾಸ್ ಎಸ್‍ಯುವಿಯ ಮೇಲೆ ರೂ.3 ಲಕ್ಷ ಗಳವರೆಗೆ ರಿಯಾಯಿತಿಯನ್ನು ನೀಡಿದೆ.

ಜೀಪ್ ಕಂಪಾಸ್ ಎಸ್‍ಯುವಿಯ ಮೇಲೆ ಒಟ್ಟು ರೂ.3 ಲಕ್ಷ ಗಳವರೆಗೆ ರಿಯಾಯಿತಿಯನ್ನು ನೀಡಲಾಗುತ್ತಿದೆ. ಇದರಲ್ಲಿ ರೂ.1.80 ಲಕ್ಷಗಳವರೆಗೆ ನಗದು ರಿಯಾಯಿತಿ, ರೂ.50,000 ಗಳವರೆಗಿನ ಎಕ್ಸ್‌ಚೆಂಜ್ ಬೋನಸ್, ರೂ.50,000 ಗಳವರೆಗಿನ ಮೌಲ್ಯದ ಅಕ್ಸೆಸರೀಸ್ ಮತ್ತು ರೂ.20,000 ಗಳವರೆಗಿನ ಲಾಯಲ್ಟಿ ಬೋನಸ್ ಅನ್ನು ಒಳಗೊಂಡಿದೆ.

ಇನ್ನು ಈ ಹೊಸ ಜೀಪ್ ಕಂಪಾಸ್ ಫೇಸ್‌ಲಿಫ್ಟ್ ಹೊಸ ವಿನ್ಯಾಸದೊಂದಿಗೆ ಆಕರ್ಷಕ ಲುಕ್ ಅನ್ನು ಹೊಂದಿದೆ. ಜೀಪ್ ಕಂಪಾಸ್ ಫೇಸ್‌ಲಿಫ್ಟ್ ಭಾರತೀಯ ಮಾರುಕಟ್ಟೆಯಲ್ಲಿ ಬಿಡುಗಡೆಯಾದ ಬಳಿಕ ಫೋಕ್ಸ್‌ವ್ಯಾಗನ್ ಟಿ-ರೋಕ್, ಸ್ಕೋಡಾ ಕರೋಕ್, ನಿಸ್ಸಾನ್ ಕಿಕ್ಸ್, ಹ್ಯುಂಡೈ ಕ್ರೆಟಾ ಮತ್ತು ಕಿಯಾ ಸೆಲ್ಟೋಸ್ ಎಸ್‍ಯುವಿಗಳಿಗೆ ಪೈಪೋಟಿ ನೀಡುತ್ತದೆ.


Click it and Unblock the Notifications