ಅನಾವರಣವಾಗಲಿದೆ 2021ರ ಜೀಪ್ ಕಂಪಾಸ್ ಫೇಸ್‌ಲಿಫ್ಟ್ ಎಸ್‍ಯುವಿ

ಅಮೆರಿಕಾದ ಮೂಲದ ವಾಹನ ತಯಾರಕ ಕಂಪನಿಯಾದ ಜೀಪ್ ತನ್ನ ಹೊಸ ಕಂಪಾಸ್ ಫೇಸ್‌ಲಿಫ್ಟ್ ಎಸ್‍ಯುವಿಯನ್ನು ಭಾರತೀಯ ಮಾರುಕಟ್ಟೆಯಲ್ಲಿ ಬಿಡುಗಡೆಗೊಳಿಸಲು ಸಜ್ಜಾಗುತ್ತಿದೆ. ಜೀಪ್ ಕಂಪಾಸ್ ಫೇಸ್‌ಲಿಫ್ಟ್ ಭಾರತೀಯ ಮಾರುಕಟ್ಟೆಯಲ್ಲಿ ಬಿಡುಗಡೆಯಾಗಲಿರುವ ಬಹುನಿರೀಕ್ಷಿತ ಎಸ್‍ಯುವಿಗಳಲ್ಲಿ ಒಂದಾಗಿದೆ.

ಅನಾವರಣವಾಗಲಿದೆ 2021ರ ಜೀಪ್ ಕಂಪಾಸ್ ಫೇಸ್‌ಲಿಫ್ಟ್ ಎಸ್‍ಯುವಿ

ಜೀಪ್ ಕಂಪನಿಯು ತನ್ನ 2021ರ ಕಂಪಾಸ್ ಫೇಸ್‌ಲಿಫ್ಟ್ ಎಸ್‍ಯುವಿಯನ್ನು ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಇತ್ತೀಚೆಗೆ ಅನಾವರಣಗೊಳಿಸಿತ್ತು. ಇನ್ನು ಈ 2021ರ ಜೀಪ್ ಕಂಪಾಸ್ ಫೇಸ್‌ಲಿಫ್ಟ್ ಎಸ್‍ಯುವಿಯು ಮುಂದಿನ ತಿಂಗಳ 22 ರಂದು ಚೀನಾದಲ್ಲಿ ಅನಾವರಣವಾಗಲಿದೆ. ಹೊಸ ಜೀಪ್ ಕಂಪಾಸ್ ಫೇಸ್‌ಲಿಫ್ಟ್ ಭಾರತದಲ್ಲಿ ಹಲವು ಬಾರಿ ಸ್ಪಾಟ್ ಟೆಸ್ಟ್ ನಡೆಸಿದೆ.ಹೊಸ ಜೀಪ್ ಕಂಪಾಸ್ ಫೇಸ್‌ಲಿಫ್ಟ್ ಎಸ್‍ಯುವಿಯು ಹೊಸ ವಿನ್ಯಾಸದ ಮಲ್ಟಿ-ಸ್ಪೋಕ್ ಬ್ಲ್ಯಾಕ್ ಅಲಾಯ್ ವ್ಹೀಲ್ ಅನ್ನು ಹೊಂದಿದೆ.

ಅನಾವರಣವಾಗಲಿದೆ 2021ರ ಜೀಪ್ ಕಂಪಾಸ್ ಫೇಸ್‌ಲಿಫ್ಟ್ ಎಸ್‍ಯುವಿ

2021ರ ಕಂಪಾಸ್ ಫೇಸ್‌ಲಿಫ್ಟ್ ಎಸ್‌ಯುವಿಯಲ್ಲಿ ಹೊಸ ಫೀಚರ್ ಗಳನ್ನು ಅಳವಡಿಸಲಾಗಿದೆ. ಹೊಸ ಕಂಪಾಸ್ ಫೇಸ್‌ಲಿಫ್ಟ್ ಎಸ್‍ಯುವಿಯ ವಿನ್ಯಾಸದ ಬಗ್ಗೆ ಹೇಳುದಾದರೆ ಕೆಲವು ಸೂಕ್ಷ್ಮ ನವೀಕರಣಗಳನ್ನು ಪಡೆದುಕೊಂಡಿದೆ. ಈ ಹೊಸ ಎಸ್‍ಯುವಿಯಲ್ಲಿ ಏಳು-ಸ್ಲ್ಯಾಟ್ ಗ್ರಿಲ್ ಅನ್ನು ಉಳಿಸಿಕೊಂಡು ಮುಂಭಾಗದಲ್ಲಿ ಹೊಸ ಹನಿಕಾಂಬ್ ಮೆಶ್ ಅನ್ನು ಒಳಗೊಂಡಿದೆ.

MOST READ: ಸ್ಪಾಟ್ ಟೆಸ್ಟ್​ನಲ್ಲಿ ಕಾಣಿಸಿಕೊಂಡ ಟೊಯೊಟಾ ಫಾರ್ಚೂನರ್ ಫೇಸ್‌ಲಿಫ್ಟ್‌

ಅನಾವರಣವಾಗಲಿದೆ 2021ರ ಜೀಪ್ ಕಂಪಾಸ್ ಫೇಸ್‌ಲಿಫ್ಟ್ ಎಸ್‍ಯುವಿ

ಅಲ್ಲದೇ ಹೊಸ ಕಂಪಾಸ್ ಫೇಸ್‌ಲಿಫ್ಟ್ ಎಸ್‍ಯುವಿಯು ಆಕರ್ಷಕ ಲುಕ್ ಅನ್ನು ಹೊಂದಿದೆ. ಈ ಹೊಸ ಎಸ್‍ಯುವಿಯ ಇತರ ನವೀಕರಣಗಳಲ್ಲಿ ಇಂಟಿಗ್ರೇಟೆಡ್ ಎಲ್ಇಡಿ ಡಿಆರ್‌ಎಲ್‌ ಗಳೊಂದಿಗೆ ಹೆಡ್ ಲ್ಯಾಂಪ್, ಫಾಗ್ ಲ್ಯಾಂಪ್ ಗಳಿಗಾಗಿ ನವೀಕರಿಸಿದ ಫ್ರಂಟ್ ಬಂಪರ್ ಮತ್ತು ಹಿಂಭಾಗದಲ್ಲಿ ಟೇಲ್ ಲೈಟ್ ಅನ್ನು ಅಳವಡಿಸಲಾಗಿದೆ.

ಅನಾವರಣವಾಗಲಿದೆ 2021ರ ಜೀಪ್ ಕಂಪಾಸ್ ಫೇಸ್‌ಲಿಫ್ಟ್ ಎಸ್‍ಯುವಿ

ಹೊಸ ಕಂಪಾಸ್ ಫೇಸ್‌ಲಿಫ್ಟ್ ಎಸ್‍ಯುವಿಯ ಒಳಭಾಗದಲ್ಲಿ ಸೂಕ್ಷ್ಮ ನವೀಕರಣಗಳು ಮತ್ತು ಬದಲಾವಣೆಗಳನ್ನು ಒಳಗೊಂಡಿದೆ. 2021 ಜೀಪ್ ಕಂಪಾಸ್‌ನ ಕ್ಯಾಬಿನ್ ಮೊದಲಿಗಿಂತ ಹೆಚ್ಚು ಪ್ರೀಮಿಯಂ ಆಗಿದೆ.ಎಸ್‍ಯುವಿಯ ಒಳಭಾಗದಲ್ಲಿ ಹಲವಾರು ಪ್ರೀಮಿಯಂ ಫೀಚರ್ ಗಳನ್ನು ಹೊಂದಿವೆ.

MOST READ: ಬಿಡುಗಡೆಯ ಸನಿಹದಲ್ಲಿ ಹೊಸ ಮಾರುತಿ ಸುಜುಕಿ ಸೆಲೆರಿಯೊ

ಅನಾವರಣವಾಗಲಿದೆ 2021ರ ಜೀಪ್ ಕಂಪಾಸ್ ಫೇಸ್‌ಲಿಫ್ಟ್ ಎಸ್‍ಯುವಿ

ಹೊಸ ಕಂಪಾಸ್ ಫೇಸ್‌ಲಿಫ್ಟ್ ಎಸ್‍ಯುವಿಯ ಒಳಭಾಗದ ಫೀಚರುಗಳ ಮಾಹಿತಿ ಬಹಿರಂಗವಾಗಿದೆ. ಈ ಹೊಸ ಎಸ್‍ಯುವಿಯಲ್ಲಿ ಆಪಲ್ ಕಾರ್ ಪ್ಲೇ ಮತ್ತು ಆಂಡ್ರಾಯ್ಡ್ ಆಟೋ ಹೊಂದಾಣಿಕೆಯೊಂದಿಗೆ 8.4-ಇಂಚಿನ ದೊಡ್ಡ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಂ ಜೊತೆಗೆ ಯುಕನೆಕ್ಟ್ 5 ತಂತ್ರಜ್ಞಾನವನ್ನು ಅಳವಡಿಸಿದೆ.

ಅನಾವರಣವಾಗಲಿದೆ 2021ರ ಜೀಪ್ ಕಂಪಾಸ್ ಫೇಸ್‌ಲಿಫ್ಟ್ ಎಸ್‍ಯುವಿ

2021ರ ಜೀಪ್ ಕಂಪಾಸ್‌ನಲ್ಲಿ ಹೊಸ ಎಂಜಿನ್ ಆಯ್ಕೆಯನ್ನು ನೀಡಲಾಗಿದೆ. ಹೊಸದಾಗಿ 1.3-ಲೀಟರ್ ಟರ್ಬೊ-ಪೆಟ್ರೋಲ್ ಎಂಜಿನ್‌ ಅನ್ನು ಅಳವಡಿಸಲಾಗಿದೆ. ಇನ್ನು ಹಳೆಯ 1.4-ಲೀಟರ್ ಅನ್ನು ಬದಲಾಯಿಸಲಾಗುತ್ತದೆ.

MOST READ: ಮರ್ಸಿಡಿಸ್ ಬೆಂಝ್ ಜಿಎಲ್ಇ ಎಸ್‍ಯುವಿಯ ಎರಡು ಹೊಸ ರೂಪಾಂತರಗಳು ಬಿಡುಗಡೆ

ಅನಾವರಣವಾಗಲಿದೆ 2021ರ ಜೀಪ್ ಕಂಪಾಸ್ ಫೇಸ್‌ಲಿಫ್ಟ್ ಎಸ್‍ಯುವಿ

ಈ ಎಸ್‍ಯುವಿಯಲ್ಲಿ ಹೊಸ 1.3-ಲೀಟರ್ ಎಂಜಿನ್ ಎರಡು ಸ್ಟೇಟ್-ಟ್ಯೂನ್‌ಗಳನ್ನು ಹೊಂದಿದೆ. ಇದು 128 ಬಿಹೆಚ್‍ಪಿ ಪವರ್ ಮತ್ತು 148 ಎನ್ಎಂ ಟಾರ್ಕ್ ಅನ್ನು ಉತ್ಪಾದಿಸುತ್ತದೆ. ಲೋವರ್ ಸ್ಟೇಟ್-ಟ್ಯೂನ್‌ಗಳಲ್ಲಿ 6-ಸ್ಪೀಡ್ ಮ್ಯಾನುವಲ್ ಗೇರ್ ಬಾಕ್ಸ್ ಅನ್ನು ಜೊಡಿಸಲಾಗಿದೆ. ಇನ್ನೊಂದು ಆಯ್ಕೆಯಲ್ಲಿ 7-ಸ್ಪೀಡ್ ಡ್ಯುಯಲ್-ಕ್ಲಚ್ ಗೇರ್ ಬಾಕ್ಸ್ ಆಯ್ಕೆಯನ್ನು ಸಹ ಹೊಂದಿದೆ.

ಅನಾವರಣವಾಗಲಿದೆ 2021ರ ಜೀಪ್ ಕಂಪಾಸ್ ಫೇಸ್‌ಲಿಫ್ಟ್ ಎಸ್‍ಯುವಿ

ಅಂತರರಾಷ್ಟ್ರೀಯ ಮಾರುಕಟ್ಟೆಗಳಲ್ಲಿ 2021ರ ಜೀಪ್ ಕಂಪಾಸ್ ಫೇಸ್‌ಲಿಫ್ಟ್ ಎಸ್‍ಯುವಿಯಲ್ಲಿ 1.6-ಲೀಟರ್ ಮಲ್ಟಿಜೆಟ್ ಡೀಸೆಲ್ ಎಂಜಿನ್ ಅನ್ನು ಹೊಂದಿದೆ. ಈ ಎಂಜಿನ್ 118 ಬಿಹೆಚ್‍ಪಿ ಪವರ್ ಮತ್ತು 320 ಎನ್ಎಂ ಟಾರ್ಕ್ ಅನ್ನು ಉತ್ಪಾದಿಸುತ್ತದೆ. ಭಾರತದಲ್ಲಿ 2.0-ಲೀಟರ್ ಡೀಸೆಲ್ ಎಂಜಿನ್ ಅನ್ನು ಅಳವಡಿಸಬಹುದು ಎಂದು ನಿರೀಕ್ಷಿಸುತ್ತೆವೆ.

ಅನಾವರಣವಾಗಲಿದೆ 2021ರ ಜೀಪ್ ಕಂಪಾಸ್ ಫೇಸ್‌ಲಿಫ್ಟ್ ಎಸ್‍ಯುವಿ

ಜೀಪ್ ಕಂಪಾಸ್ ಫೇಸ್‌ಲಿಫ್ಟ್ ದೇಶಿಯ ಮಾರುಕಟ್ಟೆಯಲ್ಲಿ ಬಿಡುಗಡೆಯಾದ ಬಳಿಕ ಫೋಕ್ಸ್‌ವ್ಯಾಗನ್ ಟಿ-ರೋಕ್, ಸ್ಕೋಡಾ ಕರೋಕ್, ನಿಸ್ಸಾನ್ ಕಿಕ್ಸ್, ಹ್ಯುಂಡೈ ಕ್ರೆಟಾ ಮತ್ತು ಕಿಯಾ ಸೆಲ್ಟೋಸ್ ಎಸ್‍ಯುವಿಗಳಿಗೆ ಪೈಪೋಟಿ ನೀಡುತ್ತದೆ.

More from DriveSpark

Article Published On: Tuesday, October 27, 2020, 13:18 [IST]
English summary
2021 Jeep Compass Facelift To Be Unveiled In November. Read In Kannada.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+