Just In
- 11 hrs ago Honda: ಬಡವರ ಕನಸು ನನಸು.. ಕಡಿಮೆ ಬೆಲೆಗೆ ಸಿಗುತ್ತವೆ ಈ ಬೈಕ್ಗಳು
- 11 hrs ago ಬಹುಕೋಟಿ ಬೆಲೆಯ ಕಾರುಗಳಿದ್ದರೂ ಸಾಮಾನ್ಯ ಮಾರುತಿ ಕಾರಿನಲ್ಲಿ ಓಡಾಡಿದ ರೋಹಿತ್ ಶರ್ಮಾ: ಕಾರಣವೇನು?
- 12 hrs ago HSRP ನಂಬರ್ ಪ್ಲೇಟ್ನಲ್ಲಿ ನಡೆಯುತ್ತಿದೆ ಭಾರೀ ಮೋಸ: ಬುಕ್ ಮಾಡದವರು ಇದನ್ನು ಗಮನಿಸಿ!
- 13 hrs ago Nissan Magnite: ಕಾಮಧೇನುವಾದ ನಿಸ್ಸಾನ್ ಮ್ಯಾಗ್ನೈಟ್.. 6 ಲಕ್ಷ ಬೆಲೆ, 20 ಕಿ.ಮೀ ಮೈಲೇಜ್
Don't Miss!
- News Karnataka LS Election 2024 LIVE: ಇಂದು ದೇಶದಲ್ಲಿ ಎರಡನೇ ಹಂತದ, ರಾಜ್ಯದಲ್ಲಿ ಮೊದಲ ಹಂತದ ಮತದಾನ
- Movies Shobha Shetty ; ನಿಶ್ಚಿತಾರ್ಥದ ಬಗ್ಗೆ ಮಾಹಿತಿ ನೀಡಿದ ನಟಿ ಶೋಭಾ ಶೆಟ್ಟಿ
- Sports IPL 2024 :ಬಲಿಷ್ಠ ಹೈದರಾಬಾದ್ ಬಗ್ಗು ಬಡಿದ ಆರ್ಸಿಬಿ: ಕಮಿನ್ಸ್ ಪಡೆಗೆ ಹೀನಾಯ ಸೋಲು
- Lifestyle ಪುಟ್ಟ ಕಂದಮ್ಮಗಳ ಮುಖದಲ್ಲಿ ನಗು ತರಿಸಲು ಟೀಚರ್ ಮಾಡಿದ ಕೆಲಸ ನೋಡಿ, ಮಕ್ಕಳ ಪಾಲಿನ ದೇವತೆ ಇವರು
- Technology Sennheiser: ಭಾರತದಲ್ಲಿ ಸೆನ್ಹೈಸರ್ ಮೊಮೆಂಟಮ್ ಟ್ರೂ ವೈರ್ಲೆಸ್ 4 ಲಾಂಚ್! ಬೆಲೆ 20 ಸಾವಿರ
- Finance ಒಂದೆರಡಲ್ಲ ಒಂಬತ್ತು ಬಾರಿ ಉದ್ಯಮದಲ್ಲಿ ವಿಫಲತೆ, ಮಾನಸಿಕ ಖಿನ್ನತೆ ಸವಾಲುಗಳನ್ನು ಮೆಟ್ಟಿ ನಿಂತ ಉದ್ಯಮಿ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಅನಾವರಣವಾಯ್ತು ಜೀಪ್ ಕಂಪಾಸ್ ಫೇಸ್ಲಿಫ್ಟ್ ಎಸ್ಯುವಿ
ಜೀಪ್ ಕಂಪನಿಯು ತನ್ನ ತನ್ನ 2021ರ ಕಂಪಾಸ್ ಫೇಸ್ಲಿಫ್ಟ್ ಎಸ್ಯುವಿಯನ್ನು ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಅನಾವರಣಗೊಳಿಸಿದೆ. ಹೊಸ ಜೀಪ್ ಕಂಪಾಸ್ ಫೇಸ್ಲಿಫ್ಟ್ ಎಸ್ಯುವಿಯ ವಿನ್ಯಾಸ ಮತ್ತು ತಾಂತ್ರಿಕ ಅಂಶಗಳಲ್ಲಿ ಹಲವಾರು ನವೀಕರಣಗಳನ್ನು ನಡೆಸಿ ಅನಾವರಣಗೊಳಿಸಲಾಗಿದೆ.
2021ರ ಕಂಪಾಸ್ ಫೇಸ್ಲಿಫ್ಟ್ ಎಸ್ಯುವಿಯಲ್ಲಿ ಹೊಸ ಫೀಚರ್ ಗಳನ್ನು ಅಳವಡಿಸಲಾಗಿದೆ. ಹೊಸ ಕಂಪಾಸ್ ಫೇಸ್ಲಿಫ್ಟ್ ಎಸ್ಯುವಿಯ ವಿನ್ಯಾಸದ ಬಗ್ಗೆ ಹೇಳುದಾದರೆ ಕೆಲವು ಸೂಕ್ಷ್ಮ ನವೀಕರಣಗಳನ್ನು ಪಡೆದುಕೊಂಡಿದೆ. ಈ ಹೊಸ ಎಸ್ಯುವಿಯಲ್ಲಿ ಏಳು-ಸ್ಲ್ಯಾಟ್ ಗ್ರಿಲ್ ಅನ್ನು ಉಳಿಸಿಕೊಂಡು ಮುಂಭಾಗದಲ್ಲಿ ಹೊಸ ಹನಿಕಾಂಬ್ ಮೆಶ್ ಅನ್ನು ಒಳಗೊಂಡಿದೆ. ಅಲ್ಲದೇ ಹೊಸ ಕಂಪಾಸ್ ಫೇಸ್ಲಿಫ್ಟ್ ಎಸ್ಯುವಿಯು ಆಕರ್ಷಕ ಲುಕ್ ಅನ್ನು ಹೊಂದಿದೆ.
ಈ ಹೊಸ ಎಸ್ಯುವಿಯ ಇತರ ನವೀಕರಣಗಳಲ್ಲಿ ಇಂಟಿಗ್ರೇಟೆಡ್ ಎಲ್ಇಡಿ ಡಿಆರ್ಎಲ್ ಗಳೊಂದಿಗೆ ಹೆಡ್ ಲ್ಯಾಂಪ್, ಫಾಗ್ ಲ್ಯಾಂಪ್ ಗಳಿಗಾಗಿ ನವೀಕರಿಸಿದ ಫ್ರಂಟ್ ಬಂಪರ್, ಹೊಸದಾಗಿ ವಿನ್ಯಾಸಗೊಳಿಸಲಾದ ಅಲಾಯ್ ವ್ಹೀಲ್ ಮತ್ತು ಹಿಂಭಾಗದಲ್ಲಿ ಟೇಲ್ ಲೈಟ್ ಅನ್ನು ಹೊಂದಿದೆ.
MOST READ: ಅನಾವರಣವಾಯ್ತು ಬಹುನಿರೀಕ್ಷಿತ ಟೊಯೊಟಾ ಫಾರ್ಚೂನರ್ ಫೇಸ್ಲಿಫ್ಟ್ ಎಸ್ಯುವಿ
ಹೊಸ ಜೀಪ್ ಕಂಪಾಸ್ ಫೇಸ್ಲಿಫ್ಟ್ ಎಸ್ಯುವಿಯ ಒಳಭಾಗದಲ್ಲಿ ಸೂಕ್ಷ್ಮ ನವೀಕರಣಗಳು ಮತ್ತು ಬದಲಾವಣೆಗಳನ್ನು ಒಳಗೊಂಡಿದೆ. 2021 ಜೀಪ್ ಕಂಪಾಸ್ನ ಕ್ಯಾಬಿನ್ ಮೊದಲಿಗಿಂತ ಹೆಚ್ಚು ಪ್ರೀಮಿಯಂ ಆಗಿದೆ.ಎಸ್ಯುವಿಯ ಒಳಭಾಗದಲ್ಲಿ ಹಲವಾರು ಪ್ರೀಮಿಯಂ ಉಪಕರಣಗಳನ್ನು ಹೊಂದಿದೆ.
ಈ ಹೊಸ ಎಸ್ಯುವಿಯಲ್ಲಿ ಆಪಲ್ ಕಾರ್ ಪ್ಲೇ ಮತ್ತು ಆಂಡ್ರಾಯ್ಡ್ ಆಟೋ ಹೊಂದಾಣಿಕೆಯೊಂದಿಗೆ 8.4-ಇಂಚಿನ ದೊಡ್ಡ ಟಚ್ಸ್ಕ್ರೀನ್ ಇನ್ಫೋಟೈನ್ಮೆಂಟ್ ಸಿಸ್ಟಂ ಜೊತೆಗೆ ಯುಕನೆಕ್ಟ್ 5 ತಂತ್ರಜ್ಞಾನವನ್ನು ಅಳವಡಿಸಲಾಗಿದೆ.
MOST READ: ಭರ್ಜರಿಯಾಗಿ ಮಾರಾಟವಾಯ್ತು ಫೋಕ್ಸ್ವ್ಯಾಗನ್ ಟಿ-ರಾಕ್ ಎಸ್ಯುವಿ
ಈ 2021ರ ಜೀಪ್ ಕಂಪಾಸ್ನಲ್ಲಿ ಹೊಸ ಎಂಜಿನ್ ಆಯ್ಕೆಯನ್ನು ನೀಡಲಾಗಿದೆ. ಹೊಸದಾಗಿ 1.3-ಲೀಟರ್ ಟರ್ಬೊ-ಪೆಟ್ರೋಲ್ ಎಂಜಿನ್ ಅನ್ನು ಅಳವಡಿಸಲಾಗಿದೆ. ಇನ್ನು ಹಳೆಯ 1.4-ಲೀಟರ್ ಅನ್ನು ಬದಲಾಯಿಸಲಾಗುತ್ತದೆ.
ಈ ಎಸ್ಯುವಿಯಲ್ಲಿ ಹೊಸ 1.3-ಲೀಟರ್ ಎಂಜಿನ್ ಎರಡು ಸ್ಟೇಟ್-ಟ್ಯೂನ್ಗಳನ್ನು ಹೊಂದಿದೆ. ಇದು 128 ಬಿಹೆಚ್ಪಿ ಪವರ್ ಮತ್ತು 148 ಎನ್ಎಂ ಟಾರ್ಕ್ ಅನ್ನು ಉತ್ಪಾದಿಸುತ್ತದೆ. ಲೋವರ್ ಸ್ಟೇಟ್-ಟ್ಯೂನ್ಗಳಲ್ಲಿ 6-ಸ್ಪೀಡ್ ಮ್ಯಾನುವಲ್ ಗೇರ್ ಬಾಕ್ಸ್ ಅನ್ನು ಜೊಡಿಸಲಾಗಿದೆ. ಇನ್ನೊಂದು ಆಯ್ಕೆಯಲ್ಲಿ 7-ಸ್ಪೀಡ್ ಡ್ಯುಯಲ್-ಕ್ಲಚ್ ಗೇರ್ ಬಾಕ್ಸ್ ಆಯ್ಕೆಯನ್ನು ಸಹ ನೀಡಿದೆ.
MOST READ: ಮರ್ಸಿಡಿಸ್ ಬೆಂಝ್ ಜಿಎಲ್ಇ ಎಸ್ಯುವಿಯ ಎರಡು ಹೊಸ ರೂಪಾಂತರಗಳು ಬಿಡುಗಡೆ
ಅಂತರರಾಷ್ಟ್ರೀಯ ಮಾರುಕಟ್ಟೆಗಳಲ್ಲಿ 2021ರ ಜೀಪ್ ಕಂಪಾಸ್ ಫೇಸ್ಲಿಫ್ಟ್ ಎಸ್ಯುವಿಯಲ್ಲಿ 1.6-ಲೀಟರ್ ಮಲ್ಟಿಜೆಟ್ ಡೀಸೆಲ್ ಎಂಜಿನ್ ಅನ್ನು ಹೊಂದಿದೆ. ಈ ಎಂಜಿನ್ 118 ಬಿಹೆಚ್ಪಿ ಪವರ್ ಮತ್ತು 320 ಎನ್ಎಂ ಟಾರ್ಕ್ ಅನ್ನು ಉತ್ಪಾದಿಸುತ್ತದೆ. ಭಾರತದಲ್ಲಿ 2.0-ಲೀಟರ್ ಡೀಸೆಲ್ ಎಂಜಿನ್ ಅನ್ನು ಅಳವಡಿಸಬಹುದು ಎಂದು ನಿರೀಕ್ಷಿಸುತ್ತೆವೆ.
ಹೊಸ ಜೀಪ್ ಕಂಪಾಸ್ ಫೇಸ್ಲಿಫ್ಟ್ ಈ ವರ್ಷದ ಅಂತ್ಯದಲ್ಲಿ ಭಾರತದಲ್ಲಿ ಬಿಡುಗಡೆಯಾಗಬಹುದು. ಈ ಜೀಪ್ ಕಂಪಾಸ್ ಫೇಸ್ಲಿಫ್ಟ್ ಭಾರತೀಯ ಮಾರುಕಟ್ಟೆಯಲ್ಲಿ ಬಿಡುಗಡೆಯಾದ ಬಳಿಕ ಫೋಕ್ಸ್ವ್ಯಾಗನ್ ಟಿ-ರೋಕ್, ಸ್ಕೋಡಾ ಕರೋಕ್, ನಿಸ್ಸಾನ್ ಕಿಕ್ಸ್, ಹ್ಯುಂಡೈ ಕ್ರೆಟಾ ಮತ್ತು ಕಿಯಾ ಸೆಲ್ಟೋಸ್ ಎಸ್ಯುವಿಗಳಿಗೆ ಪೈಪೋಟಿ ನೀಡುತ್ತದೆ.