ಬಿಡುಗಡೆಯಾಯ್ತು ಹೊಸ ಜೀಪ್ ಕಂಪಾಸ್ ನೈಟ್ ಈಗಲ್ ಎಸ್‍ಯುವಿ

ಅಮೆರಿಕ ಮೂಲದ ವಾಹನಾ ತಯಾರಕ ಕಂಪನಿಯಾದ ಜೀಪ್ ತನ್ನ ಕಂಪಾಸ್ ನೈಟ್ ಈಗಲ್ ಮಾದರಿಯನ್ನು ಭಾರತೀಯ ಮಾರುಕಟ್ಟೆಯಲ್ಲಿ ಬಿಡುಗಡೆಗೊಳಿಸಿದೆ. ಈ ಹೊಸ ಜೀಪ್ ಕಂಪಾಸ್ ನೈಟ್ ಈಗಲ್ ಮಾದರಿಯ ಬೆಲೆಯು ಭಾರತದ ಎಕ್ಸ್ ಶೋರೂಂ ಪ್ರಕಾರ ರೂ.20.14 ಲಕ್ಷಗಳಾಗಿದೆ.

ಬಿಡುಗಡೆಯಾಯ್ತು ಹೊಸ ಜೀಪ್ ಕಂಪಾಸ್ ನೈಟ್ ಈಗಲ್ ಎಸ್‍ಯುವಿ

ಜೀಪ್ ಕಂಪಾಸ್ ನೈಟ್ ಈಗಲ್ ಆವೃತ್ತಿಯು ಲಾಂಗಿಟ್ಯೂಡ್ ಪ್ಲಸ್ ರೂಪಾಂತರವನ್ನು ಆಧರಿಸಿದೆ. ಜೀಪ್ ಕಂಪನಿಯು ಈ ಕಂಪಾಸ್ ನೈಟ್ ಈಗಲ್ ಮಾದರಿಯು ಪೆಟ್ರೋಲ್ ಮತ್ತು ಡೀಸೆಲ್ ಎಂಜಿನ್ ಆಯ್ಕೆಗಳೊಂದಿಗೆ ಲಭ್ಯವಿದೆ. ಈ ಎಸ್‍ಯುವಿಯಲ್ಲಿ 1.4-ಲೀಟರ್ ಪೆಟ್ರೋಲ್ ಎಂಜಿನ್ ಅನ್ನು ಹೊಂದಿದೆ. ಈ ಎಂಜಿನ್ 160 ಬಿಹೆಚ್‌ಪಿ ಮತ್ತು 250 ಎನ್ಎಂ ಟಾರ್ಕ್ ಅನ್ನು ಉತ್ಪಾದಿಸುತ್ತದೆ. ಈ ಎಂಜಿನ್ ನೊಂದಿಗೆ 7-ಸ್ಪೀಡ್ ಡಿಸಿಟಿ ಗೇರ್ ಬಾಕ್ಸ್ ಅನ್ನು ಅಳವಡಿಸಲಾಗಿದೆ.

ಬಿಡುಗಡೆಯಾಯ್ತು ಹೊಸ ಜೀಪ್ ಕಂಪಾಸ್ ನೈಟ್ ಈಗಲ್ ಎಸ್‍ಯುವಿ

ಇನ್ನು ಈ ಎಸ್‍ಯುವಿಯಲ್ಲಿ 2.0 ಲೀಟರ್ ಡೀಸೆಲ್ ಎಂಜಿನ್ ಅನ್ನು ಅಳವಡಿಸಲಾಗಿದೆ. ಈ ಎಂಜಿನ್ 170 ಬಿಹೆಚ್‌ಪಿ ಮತ್ತು 350 ಎನ್ಎಂ ಟಾರ್ಕ್ ಉತ್ಪಾದಿಸುತ್ತದೆ. ಈ ಎಂಜಿನ್ ನೊಂದಿಗೆ 6 ಸ್ಪೀಡ್ ಮ್ಯಾನ್ಯುವಲ್ ಗೇರ್ ಬಾಕ್ಸ್ ಮತ್ತು 9-ಸ್ಪೀಡ್ ಆಟೋಮ್ಯಾಟಿಕ್ ಗೇರ್ ಬಾಕ್ಸ್ ಅನ್ನು ಜೋಡಿಸಲಾಗಿದೆ.

MOST READ: ಭಾರತಕ್ಕೆ ಲಗ್ಗೆ ಇಡಲಿದೆ ಹೊಸ ಹೋಂಡಾ ಹೆಚ್‌ಆರ್-ವಿ ಎಸ್‍ಯುವಿ

ಬಿಡುಗಡೆಯಾಯ್ತು ಹೊಸ ಜೀಪ್ ಕಂಪಾಸ್ ನೈಟ್ ಈಗಲ್ ಎಸ್‍ಯುವಿ

ಜೀಪ್ ಕಂಪಾಸ್ ನೈಟ್ ಈಗಲ್ ಎಸ್‍ಯುವಿಗೆ ಬ್ಲ್ಯಾಕ್ ಫಿನಿಶಿಂಗ್ ಹೆಚ್ಚು ಆಕರ್ಷಕ ಲುಕ್ ಅನ್ನು ನೀಡುತ್ತದೆ. ಈ ಎಸ್‍ಯುವಿಯ ಬ್ರ್ಯಾಂಡ್ ಲೋಗೋ, ಕ್ರೋಮ್ ಗ್ರಿಲ್ ಸರೌಂಡ್, ಮತ್ತು 18 ಇಂಚಿನ ದೊಡ್ಡ ಅಲಾಯ್ ವ್ಹೀಲ್ ಗಳು ಬ್ಲ್ಯಾಕ್ ಫಿನಿಶಿಂಗ್ ಅನ್ನು ಹೊಂದಿದೆ.

ಬಿಡುಗಡೆಯಾಯ್ತು ಹೊಸ ಜೀಪ್ ಕಂಪಾಸ್ ನೈಟ್ ಈಗಲ್ ಎಸ್‍ಯುವಿ

ಈ ಜೀಪ್ ಕಂಪಾಸ್ ನೈಟ್ ಈಗಲ್ ಕ್ಯಾಬಿನ್‌ನಲ್ಲಿ ಕೆಲವು ಬದಲಾವಣೆಗಳನ್ನು ಹೊಂದಿದೆ. ಏರ್ ಕಾನ್ ವೆಂಟ್ಸ್ ಮತ್ತು ಸೆಂಟರ್ ಕನ್ಸೋಲ್ ಗಳು ಬ್ಲ್ಯಾಕ್ ಥೀಮ್ ಅನ್ನು ಹೊಂದಿದೆ.

MOST READ: ಅನಾವರಣವಾಯ್ತು ಬಿಎಂಡಬ್ಲ್ಯು ಎಕ್ಸ್7 ಡಾರ್ಕ್ ಶ್ಯಾಡೋ ಎಸ್‍ಯುವಿ

ಬಿಡುಗಡೆಯಾಯ್ತು ಹೊಸ ಜೀಪ್ ಕಂಪಾಸ್ ನೈಟ್ ಈಗಲ್ ಎಸ್‍ಯುವಿ

ಈ ಎಸ್‍ಯುವಿಯಲ್ಲಿ ಏಳು ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಂ ಅನ್ನು ಹೊಂದಿದ್ದು, ಇದರಲ್ಲಿ ಆಪಲ್ ಕಾರ್ ಪ್ಲೇ ಮತ್ತು ಆಂಡ್ರಾಯ್ಡ್ ಆಟೋ ಒಳಗೊಂಡಿದೆ, ಇನ್ನು ಕ್ಲೈಮೇಟ್ ಕಂಟ್ರೋಲ್, ಕ್ರೋಸ್ ಕಂಟ್ರೋಲ್ ಮತ್ತು ಮಲ್ಟಿ-ಫಂಕ್ಷನಲ್ ಸ್ಟೀಯರಿಂಗ್ ವ್ಹೀಲ್ ಅನ್ನು ಹೊಂದಿದೆ.

ಬಿಡುಗಡೆಯಾಯ್ತು ಹೊಸ ಜೀಪ್ ಕಂಪಾಸ್ ನೈಟ್ ಈಗಲ್ ಎಸ್‍ಯುವಿ

ಈ ಎಸ್‍ಯುವಿಯಲ್ಲಿ ಸುರಕ್ಷತೆಗಾಗಿ ನಾಲ್ಕು ಏರ್‌ಬ್ಯಾಗ್‌ಗಳು, ಎಬಿಎಸ್ ವಿಥ್ ಇಬಿಡಿ, ರಿಯರ್ ಪಾರ್ಕಿಂಗ್ ಸೆನ್ಸರ್‌ಗಳು, ರಿಯರ್ ವ್ಯೂ ಕ್ಯಾಮೆರಾ, ಟ್ರ್ಯಾಕ್ಷನ್ ಕಂಟ್ರೀಲ್, ಎಂಜಿನ್ ಇಮೊಬೈಲೈಸರ್, ಎಲೆಕ್ಟ್ರಾನಿಕ್ ರೋಲ್ ಇಟೆಗೆಷನ್, ಹಿಲ್ ಸ್ಟಾರ್ಟ್ ಅಸಿಸ್ಟ್, ಡಬಲ್ ಕ್ರ್ಯಾಂಕ್ ಪ್ರಿವೆಂಕ್ಷನ್ ಸಿಸ್ಟಂ ಅನ್ನು ಹೊಂದಿದೆ.

MOST READ: ಮರ್ಸಿಡಿಸ್ ಬೆಂಝ್ ಜಿಎಲ್ಇ ಎಸ್‍ಯುವಿಯ ಎರಡು ಹೊಸ ರೂಪಾಂತರಗಳು ಬಿಡುಗಡೆ

ಬಿಡುಗಡೆಯಾಯ್ತು ಹೊಸ ಜೀಪ್ ಕಂಪಾಸ್ ನೈಟ್ ಈಗಲ್ ಎಸ್‍ಯುವಿ

ಈ ಹೊಸ ಜೀಪ್ ಕಂಪಾಸ್ ನೈಟ್ ಈಗಲ್ ಎಸ್‍ಯುವಿಯು ಬ್ರಿಲಿಯಂಟ್ ಬ್ಲ್ಯಾಕ್, ಎಕ್ಸೆಕೋಟಿಕ್ ರೆಡ್, ಮ್ಯಾಗ್ನೇಶಿಯೊ ಗ್ರೇ ಮತ್ತು ಎಕ್ಸೊಸಿಟಾ ರೆಡ್ ಎಂಬ ನಾಲ್ಕು ಬಣ್ಣಗಳ ಆಯ್ಕೆಯಲ್ಲಿ ಲಭ್ಯವಿದೆ.

ಬಿಡುಗಡೆಯಾಯ್ತು ಹೊಸ ಜೀಪ್ ಕಂಪಾಸ್ ನೈಟ್ ಈಗಲ್ ಎಸ್‍ಯುವಿ

ಈ ಜೀಪ್ ಕಂಪಾಸ್ ನೈಟ್ ಈಗಲ್ ಕೇವಲ 250 ಯುನಿಟ್‌ಗಳಿಗೆ ಸೀಮಿತವಾಗಿರುವ ಲಿಮಿಟೆಡ್ ಎಡಿಷನ್ ಎಸ್‍ಯುವಿಯಾಗಿದೆ. ಈ ಮಾದರಿಯು ಭಾರತೀಯ ಮಾರುಕಟ್ಟೆಯಲ್ಲಿ ಟಾಟಾ ಹ್ಯಾರಿಯರ್ ಡಾರ್ಕ್ ಎಡಿಷನ್ ಎಸ್‍ಯುವಿಗೆ ನೇರ್ ಪೈಪೋಟಿ ನೀಡುತ್ತದೆ.

Article Published On: Thursday, July 30, 2020, 18:11 [IST]
English summary
Jeep Compass Night Eagle Edition Launched In India. Read In Kannada.
Read more on ಜೀಪ್ jeep
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+