ನೇಪಾಳದಲ್ಲಿ ಬಿಡುಗಡೆಯಾಯ್ತು ಕಿಯಾ ಸೊನೆಟ್ ಕಾಂಪ್ಯಾಕ್ಟ್ ಎಸ್‍ಯುವಿ
ಭಾರತೀಯ ಮಾರುಕಟ್ಟೆಯಲ್ಲಿ ಕಿಯಾ ಮೋಟಾರ್ಸ್ ಸಂಸ್ಥೆಯು ಬಿಡುಗಡೆಗೊಳಿಸಿದ ಮೊದಲ ಎಸ್‍ಯುವಿಯಾದ ಸೆಲ್ಟೋಸ್ ಮಾರಾಟದಲ್ಲಿ ಹೊಸ ಸಂಚಲನವನ್ನು ಮೂಡಿಸಿತು. ಇದಾದ ಬಳಿಕ ಇತ್ತೀಚೆಗೆ ಮೂರನೇ ಮಾದರಿಯಾಗಿ ಸೊನೆಟ್ ಕಾಂಪ್ಯಾಕ್ಟ್ ಎಸ್‍ಯುವಿಯನ್ನು ಬಿಡುಗಡೆಗೊಳಿಸಿತ್ತು.

ಕಿಯಾ ಮೋಟಾರ್ಸ್ ಕಂಪನಿಯು ಭಾರತೀಯ ಮಾರುಕಟ್ಟೆಯಲ್ಲಿ ಅತಿ ಹೆಚ್ಚು ಪೈಪೋಟಿಯನ್ನು ಹೊಂದಿರುವ ಕಾಂಪ್ಯಾಕ್ಟ್ ಎಸ್‍ಯುವಿ ವಿಭಾಗದಲ್ಲಿ ಸೊನೆಟ್ ಅನ್ನು ಬಿಡುಗಡೆಗೊಳಿಸಿತ್ತು. ಕೊರಿಯಾದ ಕಾರು ತಯಾರಕ ಕಂಪನಿಯಾದ ಕಿಯಾ ತನ್ನ ಸೊನೆಟ್ ಕಾಂಪ್ಯಾಕ್ಟ್ ಎಸ್‍ಯುವಿಯನ್ನು ಸುಮಾರು 70 ವಿವಿಧ ದೇಶಗಳಿಗೆ ರಫ್ತು ಮಾಡಲು ಯೋಜಿಸಿದೆ. ಇದೀಗ ಕಿಯಾ ಮೋಟಾರ್ಸ್ ನಮ್ಮ ನೆರೆಯ ರಾಷ್ಟ್ರ ನೇಪಾಳದಲ್ಲಿಯು ಸೊನೆಟ್ ಕಾಂಪ್ಯಾಕ್ಟ್ ಎಸ್‍ಯುವಿಯನ್ನು ಬಿಡುಗಡೆಗೊಳಿಸಿದೆ.

ಆಂಧ್ರಪ್ರದೇಶದ ಘಟಕದಲ್ಲಿ ಪ್ರತ್ಯೇಕವಾಗಿ ಉತ್ಪಾದಿಸಿದ ಯುನಿಟ್ ಗಳನ್ನು ನೇಪಾಳಕ್ಕೆ ರಫ್ತು ಮಾಡಲಾಗುತ್ತದೆ. ಸೊನೆಟ್ ಕಾಂಪ್ಯಾಕ್ಟ್ ಎಸ್‍ಯುವಿಯನ್ನು ಭಾರತದಲ್ಲಿ 15 ವಿಭಿನ್ನ ರೂಪಾಂತರಗಳೊಂದಿಗೆ ಬಿಡುಗಡೆಗೊಳಿಸಿದ್ದರೆ, ನೇಪಾಳದ ಮಾರುಕಟ್ಟೆಯು ಕೇವಲ 4 ರೂಪಾಂತರಗಳ ಆಯ್ಕೆಯಲ್ಲಿ ಬಿಡುಗಡೆಗೊಳಿಸಿದೆ.
MOST READ: ಮರ್ಸಿಡಿಸ್ ಬೆಂಝ್ ಜಿಎಲ್ಇ ಎಸ್‍ಯುವಿಯ ಎರಡು ಹೊಸ ರೂಪಾಂತರಗಳು ಬಿಡುಗಡೆ

ಕಿಯಾ ಸೊನೆಟ್ ಕಾಂಪ್ಯಾಕ್ಟ್ ಎಸ್‍ಯುವಿಯ ಸುಮಾರು 1.5 ಲಕ್ಷ ಯುನಿಟ್‌ಗಳನ್ನು ಮೊದಲ ವರ್ಷದೊಳಗೆ ಸ್ಥಳೀಯವಾಗಿ ಮತ್ತು ರಫ್ತಿನ ಮೂಲಕ ಮಾರಾಟ ಮಾಡುವ ಗುರಿ ಹೊಂದಿದೆ. ಕಿಯಾ ಮೋಟಾರ್ಸ್ ಭಾರತದಿಂದ 70 ಕ್ಕೂ ಹೆಚ್ಚು ದೇಶಗಳಿಗೆ ಸೋನೆಟ್ ರಫ್ತು ಮಾಡಲಿದ್ದು, ಬಿಡುಗಡೆಯಾದ ಮೊದಲ ವರ್ಷದೊಳಗೆ 50,000 ಯುನಿಟ್‌ಗಳನ್ನು ರಫ್ತು ಮಾಡಲಿದೆ.

ಸೊನೆಟ್ ಕಾಂಪ್ಯಾಕ್ಟ್ ಎಸ್‍ಯುವಿ ಪೆಟ್ರೋಲ್ ಮತ್ತು ಎರಡು ಡೀಸೆಲ್ ಎಂಜಿನ್ ಆಯ್ಕೆಗಳಲ್ಲಿ ಲಭ್ಯವಿದೆ. ಇದರಲ್ಲಿ 1.2-ಲೀಟರ್ ಯುನಿಟ್ ಮತ್ತು 1.0-ಲೀಟರ್ ಟರ್ಬೊ-ಚಾರ್ಜ್ಡ್ ಪೆಟ್ರೋಲ್ ಅನ್ನು ಹೊಂದಿದೆ.
MOST READ: 2020ರ ಸಿಟಿ ಕಾರಿನ ಉತ್ಪಾದನೆಯನ್ನು ಪ್ರಾರಂಭಿಸಿದ ಹೋಂಡಾ

ಕಿಯಾ ಸೊನೆಟ್ ಕಾಂಪ್ಯಾಕ್ಟ್ ಎಸ್‍ಯುವಿಯ 1.2-ಲೀಟರ್ ಯುನಿಟ್ 84 ಬಿಹೆಚ್‌ಪಿ ಪವರ್ ಮತ್ತು 115 ಎನ್ಎಂ ಟಾರ್ಕ್ ಅನ್ನು ಉತ್ಪಾದಿಸುತ್ತದೆ. ಈ ಎಂಜಿನ್ ನೊಂದಿಗೆ 5-ಸ್ಪೀಡ್ ಮ್ಯಾನುವಲ್ ಗೇರ್ ಬಾಕ್ಸ್ ಅನ್ನು ಅಳವಡಿಸಲಾಗಿದೆ.

ಇನ್ನು ಟಾಪ್ ಸ್ಪೆಕ್ 1.0-ಲೀಟರ್ ಯುನಿಟ್ 119 ಬಿಹೆಚ್‌ಪಿ ಪವರ್ ಮತ್ತು 172 ಎನ್ಎಂ ಟಾರ್ಕ್ ಅನ್ನು ಉತ್ಪಾದಿಸುತ್ತದೆ. ಈ ಎಂಜಿನ್ ನೊಂದಿಗೆ 7 ಅಥವಾ 6-ಸ್ಪೀಡ್ ಐಎಂಟಿ ಅನ್ನು ಜೋಡಿಸಲಾಗಿದೆ.
MOST READ: ಬಿಡುಗಡೆಯ ಸನಿಹದಲ್ಲಿ ಹೊಸ ಮಾರುತಿ ಸುಜುಕಿ ಸೆಲೆರಿಯೊ

ಇನ್ನು ಈ ಕಾಂಪ್ಯಾಕ್ಟ್ ಎಸ್‍ಯುವಿಯ ಡೀಸೆಲ್ ಎಂಜಿನ್ ಬಗ್ಗೆ ಹೇಳುವುದಾದರೆ, 1.5-ಲೀಟರ್ ಡೀಸೆಲ್ ಡಬ್ಲ್ಯುಜಿಟಿ ಎಂಜಿನ್ 99 ಬಿಹೆಚ್‌ಪಿ ಪವರ್ ಮತ್ತು 240 ಎನ್ಎಂ ಟಾರ್ಕ್ ಅನ್ನು ಉತ್ಪಾದಿಸುತ್ತದೆ, ವಿಜಿಟಿ ಎಂಜಿನ್ 114 ಬಿಹೆಚ್‌ಪಿ ಮತ್ತು 250 ಎನ್ಎಂ ಟಾರ್ಕ್ ಅನ್ನು ಉತ್ಪಾದಿಸುತ್ತದೆ.

ಗ್ರಾಹಕರು ಕಿಯಾ ಕಾರುಗಳ ಆಕರ್ಷಕ ಲುಕ್ ಮತ್ತು ಅತ್ಯಾಧುನಿಕ ಫೀಚರ್ಸ್‌ಗಳಿಗೆ ಫಿಧಾ ಆಗುತ್ತಾರೆ. ಕಿಯಾ ಮೋಟಾರ್ಸ್ ಹಲವು ಮಾರುಕಟ್ಟೆಯಲ್ಲಿ ಕಡಿಮೆ ಅವಧಿಯಲ್ಲಿ ಗ್ರಾಹಕರನ್ನು ಸೆಳೆಯುವಲ್ಲಿ ಯಶ್ವಸಿಯಾಗಿದೆ. ಅದು ಕಿಯಾ ಸೊನೆಟ್ ಸ್ಪೆಷಾಲಿಟಿ ಎಂದು ಹೇಳಬಹುದು.

ಭಾರತೀಯ ಮಾರುಕಟ್ಟೆಯಲ್ಲಿ ಕಿಯಾ ಸೊನೆಟ್ ಬಿಡುಗಡೆಯಾದ ಆರಂಭದಲ್ಲೇ ಅತಿ ಹೆಚ್ಚು ಪೈಪೋಟಿ ಹೊಂದಿರುವ ಕಾಂಪ್ಯಾಕ್ಟ್ ಎಸ್‍ಯುವಿ ವಿಭಾಗದಲ್ಲಿ ಹೊಸ ಸಂಚಲನ ಮೂಡಿಸಿದೆ. ಅದೇ ರೀತಿ ನೇಪಾಳ ಮಾರುಕಟ್ಟೆಯಲ್ಲಿಯು ಕೊರಿಯಾ ಕಂಪನಿಯು ತನ್ನ ಪ್ರಾಬಲ್ಯವನ್ನು ಸಾಧಿಸಬಹುದು ಎಂದು ನಿರೀಕ್ಷಿಸುತ್ತೇವೆ.


Click it and Unblock the Notifications








