Just In
Don't Miss!
- News
ರೈತರು 2024ರವರೆಗೂ ಪ್ರತಿಭಟನೆ ನಡೆಸಲು ಸಿದ್ಧರಿದ್ದಾರೆ:ಭಾರತೀಯ ಕಿಸಾನ್ ಯೂನಿಯನ್
- Finance
Gold, Silver Rate: ಪ್ರಮುಖ ನಗರಗಳಲ್ಲಿ ಜ. 17ರ ಚಿನ್ನ, ಬೆಳ್ಳಿ ದರ
- Sports
ಐಎಸ್ಎಲ್: ಜೆಮ್ಷೆಡ್ಪುರಕ್ಕೆ ಆಘಾತ ನೀಡಿದ ನಾರ್ಥ್ಈಸ್ಟ್
- Movies
ಹರ ಜಾತ್ರೆಯಲ್ಲಿ ಪುನೀತ್ ರಾಜ್ ಕುಮಾರ್; ಅಪ್ಪು ಹಾಡು ಕೇಳಿ ಸಂಭ್ರಮಿಸಿದ ಅಭಿಮಾನಿಗಳು
- Lifestyle
ಸಂಜೆ ಸ್ನ್ಯಾಕ್ಸ್ ಗೆ ಹೇಳಿಮಾಡಿಸಿದ್ದು ಈ ತಡ್ಕಾ ಮಸಾಲೆ ಮ್ಯಾಗಿ
- Education
BEL Recruitment 2021: 205 ಟೆಕ್ನೀಶಿಯನ್ ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಆಹ್ವಾನ
- Technology
ಒನ್ಪ್ಲಸ್ ನಾರ್ಡ್ ಜುಲೈ 15 ರಿಂದ ಅಮೆಜಾನ್ ತಾಣದಲ್ಲಿ ಪ್ರಿ-ಆರ್ಡರ್ಗೆ ಲಭ್ಯವಿದೆ; ಖರೀದಿಸುವಲ್ಲಿ ಮೊದಲಿಗರಾಗಿರಿ!
- Travel
ಭಾರತದಲ್ಲಿ ಜೂನ್ 1 ರಿಂದ ಚಲಿಸಲಿರುವ ರೈಲುಗಳ ಸಂಪೂರ್ಣ ಪಟ್ಟಿ
ಡೀಲರ್ಸ್ ಯಾರ್ಡ್ ತಲುಪಿದ ಕಿಯಾ ಸೊನೆಟ್ ಟೆಸ್ಟ್ ಡ್ರೈವ್ ಮಾದರಿಗಳು
ಕಿಯಾ ಮೋಟಾರ್ಸ್ ಕಂಪನಿಯು ಇದೇ ತಿಂಗಳು 18ಕ್ಕೆ ಹೊಸ ಸೊನೆಟ್ ಕಾರು ಬಿಡುಗಡೆಗೆ ಭರ್ಜರಿ ಸಿದ್ದತೆ ನಡೆಸಿದ್ದು, ಹೊಸ ಕಾರು ಬಿಡುಗಡೆಗೂ ಮುನ್ನ ಅಧಿಕೃತ ಡೀಲರ್ಸ್‌ಗಳಲ್ಲಿ ಆಸಕ್ತ ಗ್ರಾಹಕರಿಗೆ ಹೊಸ ಕಾರಿನ ಟೆಸ್ಟ್ ಡ್ರೈವ್ ಮಾದರಿಗಳನ್ನು ಪ್ರದರ್ಶನ ಮಾಡಲಾಗುತ್ತಿದೆ.

ಸಬ್ ಫೋರ್ ಮೀಟರ್ ಕಾರು ಮಾದರಿಯಲ್ಲೇ ವಿಶೇಷ ತಾಂತ್ರಿಕ ಸೌಲಭ್ಯಗಳನ್ನು ಹೊಂದಿರುವ ಕಿಯಾ ಸೊನೆಟ್ ಆವೃತ್ತಿಯ ಪ್ರತಿಸ್ಪರ್ಧಿ ಕಾರು ಮಾದರಿಗಳಾದ ಮಾರುತಿ ಸುಜುಕಿ ಬ್ರೆಝಾ, ಹ್ಯುಂಡೈ ವೆನ್ಯೂ, ಟಾಟಾ ನೆಕ್ಸಾನ್, ಮಹೀಂದ್ರಾ ಎಕ್ಸ್‌ಯುವಿ300 ಮತ್ತು ಫೋರ್ಡ್ ಇಕೋಸ್ಪೋರ್ಟ್ ಕಾರುಗಳಿಗೆ ಭರ್ಜರಿ ನೀಡುವ ತವಕದಲ್ಲಿದೆ. ಮೂರು ಎಂಜಿನ್ ಆಯ್ಕೆಯೊಂದಿಗೆ ಒಟ್ಟು 17 ವೆರಿಯೆಂಟ್‌ಗಳನ್ನು ಹೊಂದಿರುವ ಹೊಸ ಕಾರು ಆಕರ್ಷಕ ಬೆಲೆಯೊಂದಿಗೆ ಮಾರುಕಟ್ಟೆ ಪ್ರವೇಶಿಸಲಿದೆ.

ಸೊನೆಟ್ ಕಂಪ್ಯಾಕ್ಟ್ ಎಸ್‌ಯುವಿ ಮಾದರಿಯು ವೆನ್ಯೂ ಕಾರಿನಿಂದ ಎರವಲು ಪಡೆದುಕೊಂಡಿರುವ ಬಿಎಸ್-6 ವೈಶಿಷ್ಟ್ಯತೆಯ 1.2-ಲೀಟರ್ ಪೆಟ್ರೋಲ್ ಮತ್ತು 1.5-ಲೀಟರ್ ಡೀಸೆಲ್ ಎಂಜಿನ್ ಆಯ್ಕೆ ಹೊಂದಿದ್ದು, ಪರ್ಫಾಮೆನ್ಸ್ ಪ್ರಿಯರಿಗಾಗಿ 1.-0-ಲೀಟರ್ ಟರ್ಬೋ ಪೆಟ್ರೋಲ್ ಮಾದರಿಯ ಆಯ್ಕೆ ನೀಡಲಾಗಿದೆ.

1.2-ಲೀಟರ್ ಪೆಟ್ರೋಲ್ ಮಾದರಿಯು 5-ಸ್ಪೀಡ್ ಮ್ಯಾನುವಲ್ ಜೊತೆಗೆ 5-ಸ್ಪೀಡ್ ಆಟೋಮ್ಯಾಟಿಕ್ ಗೇರ್‌ಬಾಕ್ಸ್ ಆಯ್ಕೆ ಹೊಂದಿದ್ದರೆ, 1.5-ಲೀಟರ್ ಡೀಸೆಲ್ ಮಾದರಿಯು 6-ಸ್ಪೀಡ್ ಇಂಟೆಲಿಜೆಂಟ್ ಮ್ಯಾನುವಲ್ ಗೇರ್‌ಬಾಕ್ಸ್ ಜೊತೆಗೆ ಆಟೋಮ್ಯಾಟಿಕ್ ಗೇರ್‌ಬಾಕ್ಸ್ ಪಡೆದುಕೊಂಡಿದೆ. ಟರ್ಬೋ ಪೆಟ್ರೋಲ್ ಮಾದರಿಯು ಸ್ಟ್ಯಾಂಡರ್ಡ್ ಆಗಿ 7-ಸ್ಪೀಡ್ ಡ್ಯುಯಲ್ ಕ್ಲಚ್ ಆಟೋಮ್ಯಾಟಿಕ್ ಗೇರ್‌ಬಾಕ್ಸ್ ಹೊಂದಿದ್ದು, ಜಿಟಿ ಲೈನ್ ಮಾದರಿಯಾಗಿರುವ ಟರ್ಬೋ ಮಾದರಿಯೇ ಸೊನೆಟ್ ಕಾರಿನ ಹೈಎಂಡ್ ಮಾದರಿಯಾಗಿ ಮಾರಾಟಗೊಳ್ಳಲಿದೆ.

ಹೊಸ ಕಾರು ಬಿಡುಗಡೆಗೂ ಮುನ್ನವೇ ಈಗಾಗಲೇ ಸುಮಾರು 12 ಸಾವಿರಕ್ಕೂ ಹೆಚ್ಚು ಬುಕ್ಕಿಂಗ್ ಸಲ್ಲಿಕೆಯಾಗಿದ್ದು, ಸಬ್ ಫೋರ್ ಮೀಟರ್ ಕಂಪ್ಯಾಕ್ಟ್ ಎಸ್‌ಯುವಿ ಮಾದರಿಯಲ್ಲೇ ವಿನೂತನ ಫೀಚರ್ಸ್ ಮತ್ತು ಎಂಜಿನ್ ಆಯ್ಕೆ ಹೊಂದಿರುವುದು ಗ್ರಾಹಕರ ಪ್ರಮುಖ ಆಕರ್ಷಣೆಯಾಗಿದೆ.

ಶಾರ್ಪ್ ಸ್ಟೈಲಿಷ್ ಲುಕ್ ಹೊಂದಿರುವ ಹೊಸ ಕಿಯಾ ಸೊನೆಟ್ ಕಾರಿನಲ್ಲಿ ಕ್ರೌನ್ ಜ್ಯುವೆಲ್ ಎಲ್ಇಡಿ ಹೆಡ್‌ಲ್ಯಾಂಪ್, ಎಲ್ಇಡಿ ಡಿಆರ್‌ಎಸ್ ಮತ್ತು ಟರ್ನ್ ಇಂಡಿಕೇಟರ್, ಎಲ್ಇಡಿ ಪ್ರೋಜೆಕ್ಟರ್ ಫಾಗ್ ಲ್ಯಾಂಪ್, ಹಾರ್ಟ್‌ಬೀಟ್ ವಿನ್ಯಾಸದ ಎಲ್ಇಡಿ ಟೈಲ್ ಲ್ಯಾಂಪ್ ಮತ್ತು ಟೈಲ್ ಲೈಟ್‌ಗೆ ಹೊಂದಿಕೊಂಡಿರುವ ರಿಪ್ಲೆಕ್ಟರ್ ಸ್ಟ್ಪೀಪ್ ಆಕರ್ಷಕವಾಗಿದೆ.
MOST READ: ಭಾರತದಲ್ಲಿ ಎರಡು ಹೊಸ ಎಸ್‌ಯುವಿ ಕಾರು ಮಾದರಿಗಳನ್ನು ಬಿಡುಗಡೆ ಮಾಡಲಿದೆ ಹ್ಯುಂಡೈ

ಹಾಗೆಯೇ ಕಾರಿನ ಇಂಟಿರಿಯರ್ ಕೂಡಾ ಆಕರ್ಷಕವಾಗಿದ್ದು, ಆರಾಮದಾಯಕ ಆಸನ ಸೌಲಭ್ಯದೊಂದಿಗೆ ರಿಯರ್ ಎಸಿ ವೆಂಟ್ಸ್, ಎಲೆಕ್ಟ್ರಿಕ್ ಸನ್‌ರೂಫ್, ಏರ್ ಪ್ಲೂರಿಫ್ಲೈರ್, ವೆಂಟಿಲೆಟೆಡ್ ಫ್ರಂಟ್ ಸೀಟ್ ಮತ್ತು ವಿವಿಧ ಫೀಚರ್ಸ್ ಒಂದೇ ಸೂರಿನಡಿ ನಿಯಂತ್ರಣ ಮಾಡಬಲ್ಲ ಯುವಿಒ ಕನೆಟೆಡ್ ಟೆಕ್ನಾಲಜಿ ಸಹ ಈ ಕಾರಿನಲ್ಲಿದೆ.

ಕಾರಿನ ಒಳಭಾಗದ ವಿನ್ಯಾಸಕ್ಕೆ ಮತ್ತಷ್ಟು ಮೆರಗು ನೀಡುವ ಉದ್ದೇಶದಿಂದ ಅಲ್ಲಲ್ಲಿ ಸಿಲ್ವರ್ ಆಕ್ಸೆಂಟ್ ಸಹ ನೀಡಲಾಗಿದ್ದು, ಗೇರ್ ಲೀವರ್, ಸ್ಟೀರಿಂಗ್ ವೀಲ್ಹ್, ಎಸಿ ವೆಂಟ್ಸ್ ಸುತ್ತ ನೀಡಲಾಗಿದ್ದು, ಇದು ಕಾರಿನ ಒಳಭಾಗದ ಖದರ್ ಹೆಚ್ಚಿಸಿರುವುದಲ್ಲದೆ ಲೆದರ್ ವ್ಯಾರ್ಪ್ ಆಸನಗಳು, ವೈರ್ ಲೆಸ್ ಚಾರ್ಜರ್ ಪ್ರಮುಖವಾಗಿರಲಿವೆ.
MOST READ: ಬಿಡುಗಡೆಗೆ ಸಿದ್ದವಾದ ಹೋಂಡಾದ ಮೊದಲ ಎಲೆಕ್ಟ್ರಿಕ್ ಕಾರು

ಹೊಸ ಸೊನೆಟ್ ಕಾರು ಸೆಲ್ಟೊಸ್ ಮಾದರಿಯಲ್ಲಿ ಟೆಕ್ ಲೈನ್ ಮತ್ತು ಜಿಟಿ ಲೈನ್ ವೆರಿಯೆಂಟ್ ಹೊಂದಿರುವುದು ಪ್ರಮುಖ ಆಕರ್ಷಣೆಯಾಗಲಿದ್ದು, ಹೊಸ ಕಾರು ಸಾಮಾನ್ಯ ಮಾದರಿಯು ಎಂಜಿನ್ ಮತ್ತು ಫೀಚರ್ಸ್‌ಗಳಿಗೆ ಅನುಗುಣವಾಗಿ ದೆಹಲಿ ಪ್ರಕಾರ ರೂ.6.80 ಲಕ್ಷದಿಂದ ಟಾಪ್ ಎಂಡ್ ಮಾದರಿಯು ರೂ.12.60 ಲಕ್ಷ ಬೆಲೆಯಲ್ಲಿ ಬಿಡುಗಡೆಯಾಗುವ ಸಾಧ್ಯತೆಗಳಿವೆ.
Image Courtesy: Thomas Naiju