ಸೊನೆಟ್ ಕಂಪ್ಯಾಕ್ಟ್ ಎಸ್‌ಯುವಿ ಕಾರಿನ ಟೆಸ್ಟ್ ಡ್ರೈವ್ ಪ್ರಕ್ರಿಯೆಗೆ ಚಾಲನೆ
ಕಿಯಾ ಮೋಟಾರ್ಸ್ ಕಂಪನಿಯು ಸೊನೆಟ್ ಸಬ್ ಫೋರ್ ಮೀಟರ್ ಕಂಪ್ಯಾಕ್ಟ್ ಎಸ್‌ಯುವಿ ಬಿಡುಗಡೆಗೆ ಅಂತಿಮ ಹಂತದ ಸಿದ್ದತೆ ನಡೆಸಿದ್ದು, ಇದೇ 18ರಂದು ಬಿಡುಗಡೆಯಾಗಲಿರುವ ಹೊಸ ಕಾರಿನ ಟೆಸ್ಟ್ ಡ್ರೈವ್ ಪ್ರಕ್ರಿಯೆಗೆ ದೇಶಾದ್ಯಂತ ಕಾರ್ಯಚಾರಣೆ ಹೊಂದಿರುವ ಪ್ರಮುಖ ಡೀಲರ್ಸ್‌ಗಳಲ್ಲಿ ಚಾಲನೆ ನೀಡಲಾಗಿದೆ.

ಸೊನೆಟ್ ಕಾರು ಅನಾವರಣಗೊಳಿಸಿದ ನಂತರ ಡೀಲರ್ಸ್ ಯಾರ್ಡ್‌ಗಳಲ್ಲಿ ಹೊಸ ಕಾರು ಮಾದರಿಯನ್ನು ಸ್ಟಾಕ್ ಮಾಡುತ್ತಿರುವ ಕಿಯಾ ಮೋಟಾರ್ಸ್ ಕಂಪನಿಯು ಇದೀಗ ಆಸಕ್ತ ಗ್ರಾಹಕರಿಗೆ ಟೆಸ್ಟ್ ಡ್ರೈವ್ ಕಲ್ಪಿಸುತ್ತಿದ್ದು, ಬಿಡುಗಡೆಯಾದ ದಿನದಿಂದಲೇ ಕಾರು ವಿತರಣೆಗೆ ಅಧಿಕೃತವಾಗಿ ಚಾಲನೆ ನೀಡಲಿದೆ. ಮೂರು ಎಂಜಿನ್ ಆಯ್ಕೆಯೊಂದಿಗೆ ಒಟ್ಟು 17 ವೆರಿಯೆಂಟ್‌ಗಳನ್ನು ಹೊಂದಿರುವ ಹೊಸ ಕಾರು ಆಕರ್ಷಕ ಬೆಲೆಯೊಂದಿಗೆ ಮಾರುಕಟ್ಟೆ ಪ್ರವೇಶಿಸಲಿದೆ.

ಸಬ್ ಫೋರ್ ಮೀಟರ್ ಕಾರು ಮಾದರಿಯಲ್ಲೇ ವಿಶೇಷ ತಾಂತ್ರಿಕ ಸೌಲಭ್ಯಗಳನ್ನು ಹೊಂದಿರುವ ಕಿಯಾ ಸೊನೆಟ್ ಆವೃತ್ತಿಯ ಪ್ರತಿಸ್ಪರ್ಧಿ ಕಾರು ಮಾದರಿಗಳಾದ ಮಾರುತಿ ಸುಜುಕಿ ಬ್ರೆಝಾ, ಹ್ಯುಂಡೈ ವೆನ್ಯೂ, ಟಾಟಾ ನೆಕ್ಸಾನ್, ಮಹೀಂದ್ರಾ ಎಕ್ಸ್‌ಯುವಿ300 ಮತ್ತು ಫೋರ್ಡ್ ಇಕೋಸ್ಪೋರ್ಟ್ ಕಾರುಗಳಿಗೆ ಭರ್ಜರಿ ನೀಡುವ ತವಕದಲ್ಲಿದೆ.

ಶಾರ್ಪ್ ಸ್ಟೈಲಿಷ್ ಲುಕ್ ಹೊಂದಿರುವ ಹೊಸ ಕಿಯಾ ಸೊನೆಟ್ ಕಾರಿನಲ್ಲಿ ಕ್ರೌನ್ ಜ್ಯುವೆಲ್ ಎಲ್ಇಡಿ ಹೆಡ್‌ಲ್ಯಾಂಪ್, ಎಲ್ಇಡಿ ಡಿಆರ್‌ಎಸ್ ಮತ್ತು ಟರ್ನ್ ಇಂಡಿಕೇಟರ್, ಎಲ್ಇಡಿ ಪ್ರೋಜೆಕ್ಟರ್ ಫಾಗ್ ಲ್ಯಾಂಪ್, ಹಾರ್ಟ್‌ಬೀಟ್ ವಿನ್ಯಾಸದ ಎಲ್ಇಡಿ ಟೈಲ್ ಲ್ಯಾಂಪ್ ಮತ್ತು ಟೈಲ್ ಲೈಟ್‌ಗೆ ಹೊಂದಿಕೊಂಡಿರುವ ರಿಪ್ಲೆಕ್ಟರ್ ಸ್ಟ್ಪೀಪ್ ಆಕರ್ಷಕವಾಗಿದೆ.

ಹಾಗೆಯೇ ಕಾರಿನ ಇಂಟಿರಿಯರ್ ಕೂಡಾ ಆಕರ್ಷಕವಾಗಿದ್ದು, ಆರಾಮದಾಯಕ ಆಸನ ಸೌಲಭ್ಯದೊಂದಿಗೆ ರಿಯರ್ ಎಸಿ ವೆಂಟ್ಸ್, ಎಲೆಕ್ಟ್ರಿಕ್ ಸನ್‌ರೂಫ್, ಏರ್ ಪ್ಲೂರಿಫ್ಲೈರ್, ವೆಂಟಿಲೆಟೆಡ್ ಫ್ರಂಟ್ ಸೀಟ್ ಮತ್ತು ವಿವಿಧ ಫೀಚರ್ಸ್ ಒಂದೇ ಸೂರಿನಡಿ ನಿಯಂತ್ರಣ ಮಾಡಬಲ್ಲ ಯುವಿಒ ಕನೆಟೆಡ್ ಟೆಕ್ನಾಲಜಿ ಸಹ ಈ ಕಾರಿನಲ್ಲಿದೆ.

ಕಾರಿನ ಒಳಭಾಗದ ವಿನ್ಯಾಸಕ್ಕೆ ಮತ್ತಷ್ಟು ಮೆರಗು ನೀಡುವ ಉದ್ದೇಶದಿಂದ ಅಲ್ಲಲ್ಲಿ ಸಿಲ್ವರ್ ಆಕ್ಸೆಂಟ್ ಜೋಡಿಸಿದ್ದು, ಗೇರ್ ಲೀವರ್, ಸ್ಟೀರಿಂಗ್ ವೀಲ್ಹ್, ಎಸಿ ವೆಂಟ್ಸ್ ಸುತ್ತ ಸಿಲ್ವರ್ ಆಕ್ಸೆಂಟ್ ನೀಡಲಾಗಿದೆ. ಇದು ಕಾರಿನ ಒಳಭಾಗದ ಖದರ್ ಹೆಚ್ಚಿಸಿರುವುದಲ್ಲದೆ ಲೆದರ್ ವ್ಯಾರ್ಪ್ ಆಸನಗಳು, ವೈರ್ ಲೆಸ್ ಚಾರ್ಜರ್ ಪ್ರಮುಖವಾಗಿರಲಿವೆ.

ಹೊಸ ಸೊನೆಟ್ ಕಾರು ಸೆಲ್ಟೊಸ್ ಕಾರು ಮಾದರಿಯಲ್ಲೇ ಟೆಕ್ ಲೈನ್ ಮತ್ತು ಜಿಟಿ ಲೈನ್ ವೆರಿಯೆಂಟ್‌ಗಳನ್ನು ಹೊಂದಿರುವುದು ಪ್ರಮುಖ ಆಕರ್ಷಣೆಯಾಗಿದ್ದು, ಹೊಸ ಕಾರಿಗೆ ಮತ್ತಷ್ಟು ಖದರ್ ನೀಡಲು ಆಸಕ್ತ ಗ್ರಾಹಕರು ಹೆಚ್ಚುವರಿ ಆಕ್ಸೆಸರಿಸ್‌ಗಳನ್ನು ಆಯ್ಕೆ ಮಾಡುವ ಅವಕಾಶವಿದೆ.
MOST READ: ಪ್ರತಿ ಚಾರ್ಜ್‌ಗೆ ಗರಿಷ್ಠ 509ಕಿ.ಮೀ ಮೈಲೇಜ್ ನೀಡಲಿದೆ ಸ್ಕೋಡಾ ಎನ್ಯಾಕ್ ಎಲೆಕ್ಟ್ರಿಕ್ ಎಸ್‌ಯುವಿ..!

ಸೊನೆಟ್ ಕಂಪ್ಯಾಕ್ಟ್ ಎಸ್‌ಯುವಿ ಮಾದರಿಯು ವೆನ್ಯೂ ಕಾರಿನಿಂದ ಎರವಲು ಪಡೆದುಕೊಂಡಿರುವ ಬಿಎಸ್-6 ವೈಶಿಷ್ಟ್ಯತೆಯ 1.2-ಲೀಟರ್ ಪೆಟ್ರೋಲ್ ಮತ್ತು 1.5-ಲೀಟರ್ ಡೀಸೆಲ್ ಎಂಜಿನ್ ಆಯ್ಕೆ ಹೊಂದಿದ್ದು, ಪರ್ಫಾಮೆನ್ಸ್ ಪ್ರಿಯರಿಗಾಗಿ 1.-0-ಲೀಟರ್ ಟರ್ಬೋ ಪೆಟ್ರೋಲ್ ಮಾದರಿಯ ಆಯ್ಕೆ ನೀಡಲಾಗಿದೆ.

1.2-ಲೀಟರ್ ಪೆಟ್ರೋಲ್ ಮಾದರಿಯು 5-ಸ್ಪೀಡ್ ಮ್ಯಾನುವಲ್ ಜೊತೆಗೆ 5-ಸ್ಪೀಡ್ ಆಟೋಮ್ಯಾಟಿಕ್ ಗೇರ್‌ಬಾಕ್ಸ್ ಆಯ್ಕೆ ಹೊಂದಿದ್ದರೆ, 1.5-ಲೀಟರ್ ಡೀಸೆಲ್ ಮಾದರಿಯು 6-ಸ್ಪೀಡ್ ಇಂಟೆಲಿಜೆಂಟ್ ಮ್ಯಾನುವಲ್ ಗೇರ್‌ಬಾಕ್ಸ್ ಜೊತೆಗೆ ಆಟೋಮ್ಯಾಟಿಕ್ ಗೇರ್‌ಬಾಕ್ಸ್ ಪಡೆದುಕೊಂಡಿದೆ. ಟರ್ಬೋ ಪೆಟ್ರೋಲ್ ಮಾದರಿಯು ಸ್ಟ್ಯಾಂಡರ್ಡ್ ಆಗಿ 7-ಸ್ಪೀಡ್ ಡ್ಯುಯಲ್ ಕ್ಲಚ್ ಆಟೋಮ್ಯಾಟಿಕ್ ಗೇರ್‌ಬಾಕ್ಸ್ ಹೊಂದಿದ್ದು, ಜಿಟಿ ಲೈನ್ ಮಾದರಿಯಾಗಿರುವ ಟರ್ಬೋ ಮಾದರಿಯೇ ಸೊನೆಟ್ ಕಾರಿನ ಹೈಎಂಡ್ ಮಾದರಿಯಾಗಿ ಮಾರಾಟಗೊಳ್ಳಲಿದೆ.
MOST READ: ಭಾರತದಲ್ಲಿ ಎರಡು ಹೊಸ ಎಸ್‌ಯುವಿ ಕಾರು ಮಾದರಿಗಳನ್ನು ಬಿಡುಗಡೆ ಮಾಡಲಿದೆ ಹ್ಯುಂಡೈ

ಹೊಸ ಕಾರು ವಿವಿಧ ವೆರಿಯೆಂಟ್ ಮತ್ತು ಎಂಜಿನ್ ಆಯ್ಕೆಗಳಿಗೆ ಅನುಗುಣವಾಗಿ ದೆಹಲಿ ಪ್ರಕಾರ ಆರಂಭಿಕವಾಗ ರೂ.6.80 ಲಕ್ಷದಿಂದ ಟಾಪ್ ಎಂಡ್ ಮಾದರಿಯು ರೂ.12.50 ಲಕ್ಷ ಬೆಲೆಯಲ್ಲಿ ಬಿಡುಗಡೆಯಾಗುವ ಸಾಧ್ಯತೆಗಳಿದ್ದು, ಹೊಸ ಕಾರು ಅಧಿಕೃತವಾಗಿ ಬಿಡುಗಡೆಯಾಗುವ ಮುನ್ನವೇ ಈಗಾಗಲೇ 15 ಸಾವಿರಕ್ಕೂ ಹೆಚ್ಚು ಗ್ರಾಹಕರು ರೂ.25 ಸಾವಿರ ಮುಂಗಡ ಪಾತಿಸಿದ್ದಾರೆ.


Click it and Unblock the Notifications