Just In
- 57 min ago
ಭಾರತದಲ್ಲಿ ಸೆಲ್ಟೊಸ್ ಫೇಸ್ಲಿಫ್ಟ್ ಆವೃತ್ತಿಯ ಬಿಡುಗಡೆಗಾಗಿ ಸಿದ್ದವಾದ ಕಿಯಾ ಮೋಟಾರ್ಸ್
- 10 hrs ago
ಕೋವಿಡ್ ವ್ಯಾಕ್ಸಿನ್ ಸಾಗಾಣಿಕೆಗಾಗಿ ಹೊಸ ಮಾದರಿಯ ಟ್ರಕ್ ಸಿದ್ದಪಡಿಸಿದ ಭಾರತ್ ಬೆಂಝ್
- 11 hrs ago
ಮೊದಲ ವರ್ಷದ ಸಂಭ್ರಮ- ಟಾಟಾ ನೆಕ್ಸಾನ್ ಇವಿ ಖರೀದಿ ಮೇಲೆ ಹೊಸ ಆಫರ್
- 12 hrs ago
ಸ್ಥಗಿತವಾಯ್ತು ಹಾರ್ಲೆ ಡೇವಿಡ್ಸನ್ ಸ್ಟ್ರೀಟ್ 750 ಮತ್ತು ಸ್ಟ್ರೀಟ್ ರಾಡ್ ಬೈಕುಗಳು
Don't Miss!
- News
ಹುಣಸೋಡು ಸ್ಪೋಟದ ಸುತ್ತ ಒಂದು ನೋಟ: ಇಂದು ಸಿಎಂ ಯಡಿಯೂರಪ್ಪ ಭೇಟಿ
- Sports
'ಭಾರತೀಯರಿಗೆ ಹೋಲಿಸಿದರೆ ಯುವ ಆಸೀಸ್ ಇನ್ನೂ ಪ್ರೈಮರಿ ಶಾಲೆಯಲ್ಲಿದೆ'
- Lifestyle
ಕೊಲೆಸ್ಟ್ರಾಲ್ ಹೆಚ್ಚಾಗಿದೆಯೇ? ಈ ಆಹಾರ ಸೇವಿಸಿ
- Education
RITES Limited Recruitment 2021: ವಿವಿಧ 9 ಹುದ್ದೆಗಳಿಗೆ ಅರ್ಜಿ ಆಹ್ವಾನ
- Movies
ದುಬಾರಿ ವಿವಾಹ; ವರುಣ್ ಧವನ್ ಮದುವೆ ನಡೆಯುತ್ತಿರುವ ಐಷಾರಾಮಿ ಹೋಟೆಲ್ ಗೆ ಇಷ್ಟೊಂದು ಖರ್ಚು ಮಾಡುತ್ತಿದ್ದಾರಾ?
- Finance
ಬಜೆಟ್ 2021: ಜ. 23ರಂದು ಹಲ್ವಾ ಕಾರ್ಯಕ್ರಮ- ಇದೇನು, ಎತ್ತ?
- Technology
ಒನ್ಪ್ಲಸ್ ನಾರ್ಡ್ ಜುಲೈ 15 ರಿಂದ ಅಮೆಜಾನ್ ತಾಣದಲ್ಲಿ ಪ್ರಿ-ಆರ್ಡರ್ಗೆ ಲಭ್ಯವಿದೆ; ಖರೀದಿಸುವಲ್ಲಿ ಮೊದಲಿಗರಾಗಿರಿ!
- Travel
ಭಾರತದಲ್ಲಿ ಜೂನ್ 1 ರಿಂದ ಚಲಿಸಲಿರುವ ರೈಲುಗಳ ಸಂಪೂರ್ಣ ಪಟ್ಟಿ
ಬಿಡುಗಡೆಯಾಗಲಿದೆ ಅಧಿಕ ಮೈಲೇಜ್ ನೀಡುವ 2021ರ ಕಿಯಾ ಸೊರೆಂಟೊ ಪ್ಲಗ್-ಇನ್ ಹೈಬ್ರಿಡ್ ಆವೃತ್ತಿ
ದಕ್ಷಿಣ ಕೊರಿಯಾದ ಜನಪ್ರಿಯ ಕಾರು ಉತ್ಪಾದನಾ ಕಂಪನಿಯಾದ ಕಿಯಾ ಮೋಟಾರ್ಸ್ ತನ್ನ 2021ರ ಸೊರೆಂಟೊ ಪ್ಲಗ್-ಇನ್ ಹೈಬ್ರಿಡ್ ಬ್ರಿಟನ್‌ನಲ್ಲಿ ಪರಿಚಯಿಸುವುದಕ್ಕೆ ಸಜ್ಜಾಗುತ್ತಿದೆ. ಕಿಯಾ ಕಾರುಗಳ ಸರಣಿಯಲ್ಲಿ ಸೊರೆಂಟೊ ಜನಪ್ರಿಯ ಮಾದರಿಯಾಗಿದೆ.

ಈ ಹೊಸ ಕಿಯಾ ಸೊರೆಂಟೊ ಪ್ಲಗ್-ಇನ್ ಹೈಬ್ರಿಡ್ ಆವೃತ್ತಿಯಲ್ಲಿ 1.6-ಲೀಟರ್ ಟರ್ಬೋಚಾರ್ಜ್ಡ್ ಜಿಡಿಐ ನಾಲ್ಕು ಸಿಲಿಂಡರ್ ಪೆಟ್ರೋಲ್ ಎಂಜಿನ್ ಅನ್ನು ಅಳವಡಿಸಲಾಗಿದೆ. ಈ ಎಂಜಿನ್ 177 ಬಿಹೆಚ್‍ಪಿ ಪವರ್ ಅನ್ನು ಉತ್ಪಾದಿಸುವ ಸಮರ್ಥ್ಯವನ್ನು ಹೊಂದಿದೆ. ಇನ್ನು ಇದರೊಂದಿಗೆ ಎಲೆಕ್ಟ್ರಿಕ್ ಮೋಟಾರ್ ಅನ್ನು ಜೊಡಿಸಲಾಗಿದೆ. ಈ ಎಲೆಕ್ಟ್ರಿಕ್ ಮೋಟಾರ್ 90ಬಿಹೆಚ್‍ಪಿ ಪವರ್ ಅನ್ನು ಉತ್ಪಾದಿಸುವ ಸಾಮರ್ಥ್ಯವನ್ನು ಹೊಂದಿದೆ.

ಇನ್ನು ಈ ಹೊಸ ಕಿಯಾ ಸೊರೆಂಟೊ ಪ್ಲಗ್-ಇನ್ ಹೈಬ್ರಿಡ್ ಆವೃತ್ತಿಯಲ್ಲಿ 13.8 ಕಿಲೋವ್ಯಾಟ್ ಬ್ಯಾಟರಿ ಪ್ಯಾಕ್ ಅನ್ನು ಅಳವಡಿಸಲಾಗಿದೆ. ಒಟ್ಟಾರೆಯಾಗಿ ಕಿಯಾ ಸೊರೆಂಟೊ ಪ್ಲಗ್-ಇನ್ ಹೈಬ್ರಿಡ್ ಆವೃತ್ತಿಯು 261 ಬಿಹೆಚ್‍ಪಿ ಪವರ್ ಮತ್ತು 350 ಎನ್‌ಎಂ ಟಾರ್ಕ್ ಅನ್ನು ಉತ್ಪಾದಿಸುತ್ತದೆ.
MOST READ: ನವೆಂಬರ್ ತಿಂಗಳಿನಲ್ಲಿ ಅತಿ ಹೆಚ್ಚು ಮಾರಾಟವಾದ ಟಾಪ್-10 ಕಾರುಗಳಿವು

ಈ ಹೈಬ್ರಿಡ್ ಸಿಸ್ಟಂನೊಂದಿಗೆ 6-ಸ್ಪೀಡ್ ಟಾರ್ಕ್ ಕರ್ನವಾಟರ್ ಅನ್ನು ಜೋಡಿಸಲಾಗಿದೆ. ಇದು ನಾಲ್ಕು ಚಕ್ರಗಳಿಗೆ ಪವರ್ ಅನ್ನು ಕಳುಹಿಸಲಾಗುತ್ತದೆ. ಇದು ಕಡಿಮೆ ಕಾರ್ಬೋ ಡೈಕ್ಸೆಸ್ಡ್ ಉತ್ಪಾದಿಸುತ್ತದೆ ಮತ್ತು ಈ ರೂಪಾಂತರವು ಸೊರೆಂಟೊ ಮಾದರಿಗಳಲ್ಲಿ ಅತ್ಯಂತ ಶಕ್ತಿಶಾಲಿ ಎಂದು ಹೇಳಲಾಗುತ್ತದೆ.

ಹೊಸ ಕಿಯಾ ಸೊರೆಂಟೊ ಪ್ಲಗ್-ಇನ್ ಹೈಬ್ರಿಡ್ ಆವೃತ್ತಿಯು ಎಲೆಕ್ಟ್ರಿಕ್ ಮೋಡ್ ನಲ್ಲಿ 57 ಕಿ.ಮೀ ಮೈಲೇಜ್ ನೀಡುತ್ತದೆ. ದಕ್ಷಿಣ ಕೊರಿಯಾದ ಆಟೋ ಮೇಜರ್ ಕಿಯಾ ಮೋಟಾರ್ಸ್ ಜಾಗತಿಕ ಬ್ರ್ಯಾಂಡ್ ಆಗಿ ಮಾರ್ಪಟ್ಟಿದೆ.
MOST READ: ಅನಾವರಣವಾಯ್ತು ಟೊಯೊಟಾ ಕೊರೊಲ್ಲಾ ಟೂರಿಂಗ್ ರಿಬ್ಯಾಡ್ಜ್ ಆವೃತ್ತಿ ಸುಜುಕಿ ಸ್ವೇಸ್

ಕಿಯಾ ಮೋಟಾರ್ಸ್ ಸರಣಿಯಲ್ಲಿರುವ ಕಾರುಗಳ ಮಾರಟವು ಆದರ ಪೋಷಕ ಕಂಪನಿಯಾದ ಹ್ಯುಂಡೈಗೆ ಪ್ರತಿಸ್ಪರ್ಧಿಯಾಗಿರುವ ರೀತಿ ಉತ್ತಮವಾಗಿದೆ. ಸೊರೆಂಟೊ ಪ್ಲಗ್-ಇನ್ ಹೈಬ್ರಿಡ್ ಆವೃತ್ತಿಯು ನಗರಗಳಲ್ಲಿ ಮಾತ್ರ ಬ್ಯಾಟರಿ ಶಕ್ತಿಯ ಮೇಲೆ 70 ಕಿ.ಮೀ.ವರೆಗೆ ಚಲಿಸುತ್ತದೆ ಎಂದು ಕಂಪನಿ ಹೇಳಿದೆ.

ಹೊಸ ಕಿಯಾ ಸೊರೆಂಟೊ ಪ್ಲಗ್-ಇನ್ ಹೈಬ್ರಿಡ್ ಆವೃತ್ತಿಯಲ್ಲಿ ಕ್ರೋಮ್‌ನಲ್ಲಿ ಅಲಂಕರಿಸಲ್ಪಟ್ಟ ಟೈಗರ್ ನೋಸ್ ಫ್ರಂಟ್ ಗ್ರಿಲ್, ಸ್ಲೀಕರ್ ಎಲ್ಇಡಿ ಹೆಡ್‌ಲ್ಯಾಂಪ್‌ಗಳು ಮತ್ತು ಆಕರ್ಷಕವಾದ ಎಲ್‌ಇಡಿ ಡೇಟೈಮ್ ರನ್ನಿಂಗ್ ಲೈಟ್ಸ್ ಅನ್ನು ಹೊಂದಿದೆ.
MOST READ: 2020ರ ಸಿಟಿ ಕಾರಿನ ಉತ್ಪಾದನೆಯನ್ನು ಪ್ರಾರಂಭಿಸಿದ ಹೋಂಡಾ

ಇದರೊಂದಿಗೆ ಈ ಆವೃತ್ತಿಯಲ್ಲಿ ಫಾಗ್ ಲ್ಯಾಂಪ್‌ಗಳೊಂದಿಗೆ ಸ್ಪೋರ್ಟಿಯರ್ ಫ್ರಂಟ್ ಬಂಪರ್, ಶಾರ್ಟರ್ ಓವರ್‌ಹ್ಯಾಂಗ್ಸ್, ವಿಶಾಲ ಏರ್ ಇನ್ಲೆಟ್, ಲಂಬವಾಗಿರುವ ಎಲ್ಇಡಿ ಟೈಲ್ ಲ್ಯಾಂಪ್‌ಗಳು ಮತ್ತು ಇತರ ಬದಲಾವಣೆಗಳ ನಡುವೆ ಹಿಂಭಾಗದ ಬಂಪರ್ ಅನ್ನು ಮರುವಿನ್ಯಾಸಗೊಳಿಸಲಾಗಿದೆ.

ಇನ್ನು ಹೊಸ ಕಿಯಾ ಸೊರೆಂಟೊ ಪ್ಲಗ್-ಇನ್ ಹೈಬ್ರಿಡ್ ಆವೃತ್ತಿಯ ಕ್ಯಾಬಿನ್ ನಲ್ಲಿ ದೊಡ್ಡ 10.12-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಂ, ಅಪ್‌ಮಾರ್ಕೆಟ್ ಫಿನಿಶ್‌ಗಳೊಂದಿಗೆ ಲೇಯರ್ಡ್ ಡ್ಯಾಶ್‌ಬೋರ್ಡ್, ಎಸಿ ವೆಂಟ್ಸ್ ಗಳೊಂದಿಗೆ ಸೆಂಟ್ರಲ್ ಕನ್ಸೋಲ್ ಮತ್ತು 12.3-ಇಂಚಿನ ಇನ್ಸ್ ಟ್ರೂಮೆಂಟ್ ಕ್ಲಸ್ಟರ್ ಅನ್ನು ಹೊಂದಿದೆ.
MOST READ: ಮಾರಾಟದಲ್ಲಿ ಹೊಸ ಮೈಲಿಗಲ್ಲು ಸಾಧಿಸಿದ ಹೋಂಡಾ ಆಮೇಜ್ ಕಾರು

ಕಿಯಾ ಮೋಟಾರ್ಸ್ ಕಂಪನಿಯು ಭಾರತೀಯ ಮಾರುಕಟ್ಟೆಯಲ್ಲಿ ಹೊಸ ಸೊರೆಂಟೊ ಪ್ಲಗ್-ಇನ್ ಹೈಬ್ರಿಡ್ ಆವೃತ್ತಿಯನ್ನು ಬಿಡುಗಡೆಗೊಳಿಬಹುದು ಎಂದು ನಿರೀಕ್ಷಿಸುತ್ತೇವೆ. ಈ ಕಿಯಾ ಸೊರೆಂಟೊ ಎಸ್‍ಯುವಿಯನ್ನು 2020ರ ಮಾರ್ಚ್ ತಿಂಗಳಲ್ಲಿ ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಪರಿಚಯಿಸಿದ್ದರು.

ಕಿಯಾ ಮೋಟಾರ್ಸ್ ಕಂಪನಿಯು ಭಾರತದಲ್ಲಿ ಆರು ತಿಂಗಳಿಗೊಮ್ಮೆ ಒಂದು ಹೊಸ ಮಾದರಿಯನ್ನು ಬಿಡುಗಡೆ ಮಾಡುವಂತೆ ಕಾಣುತ್ತದೆ. ಮುಂದಿನ ಒಂದು ವರ್ಷದೊಳಗೆ ಸೊರೆಂಟೊವನ್ನು ಪರಿಚಯಿಸಬಹುದು ಎಂದು ನಿರೀಕ್ಷಿಸುತ್ತೇವೆ.

ಭಾರತೀಯ ಮಾರುಕಟ್ಟೆಯಲ್ಲಿ ಕಿಯಾ ಕಾರುಗಳು ಭರ್ಜರಿಯಾಗಿ ಮಾರಾಟವಾಗುತ್ತಿದೆ. ಕಿಯಾ ಸೆಲ್ಟೋಸ್ ಬಳಿಕ ಕಿಯಾ ಸೊನೆಟ್ ಎಸ್‍ಯುವಿಯು ಕೂಡ ಭಾರತದಲ್ಲಿ ಉತ್ತಮ ಬೇಡಿಕೆಯನ್ನು ಪಡೆದುಕೊಂಡಿದೆ. ಭಾರತದಲ್ಲಿ ಕಿಯಾ ಮತ್ತು ಹ್ಯುಂಡೈ ಸಹೋದರ ಸಂಸ್ಥೆಗಳ ಕಾರುಗಳು ಪರಸ್ಪರ ಪ್ರಬಲ ಪೈಪೋಟಿಯನ್ನು ನೀಡುತ್ತಿದೆ.