ಬಿಡುಗಡೆಯಾಗಲಿದೆ ಲ್ಯಾಂಡ್ ರೋವರ್ ಡಿಫೆಂಡರ್ 90 ಎಸ್‍ಯುವಿ

ಲ್ಯಾಂಡ್ ರೋವರ್ ಈ ವರ್ಷದ ಆರಂಭದಲ್ಲಿ ಅಮೇರಿಕಾದಲ್ಲಿ ಡಿಫೆಂಡರ್ 90 ಎಸ್‍‍ಯುವಿಯನ್ನು ಅನಾವರಣಗೊಳಿಸಿತ್ತು. ಈ ಐಕಾನಿಕ್ ಡಿಫೆಂಡರ್ ಎಸ್‍‍ಯುವಿಯು ಜಾಗತಿಕವಾಗಿ ಅನಾವರಣಗೊಂಡ ಬಳಿಕ 2020ರ ಲ್ಯಾಂಡ್ ರೋವರ್ ಡಿಫೆಂಡರ್ 90 ಹೊಸ ಸಂಚಲವನ್ನು ಸೃಷ್ಟಿಸಿದೆ. ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಈ ಎಸ್‍‍ಯುವಿಗೆ ಸಾಕಷ್ಟು ಬೇಡಿಕೆಯನ್ನು ಗಳಿಸಿದೆ.

ಬಿಡುಗಡೆಯಾಗಲಿದೆ ಲ್ಯಾಂಡ್ ರೋವರ್ ಡಿಫೆಂಡರ್ 90 ಎಸ್‍ಯುವಿ

ಆದರೆ ಕಿಲ್ಲರ್ ಕರೋನಾ ಸೋಂಕಿನ ಭೀತಿಯಿಂದಾಗಿ ಲ್ಯಾಂಡ್ ರೋವರ್ ಉತ್ಪಾದನೆಯನ್ನು ಸ್ಥಗಿತಗೊಳಿಸಲಾಗಿತ್ತು. ಸ್ಲೊವಾಕಿಯಾದ ನೈಟ್ರಾದಲ್ಲಿನ ಡಿಫೆಂಡರ್‌ನ ಪ್ಲಾಂಟ್‌ನಲ್ಲಿ ಉತ್ಪಾದನೆಯನ್ನು ಕಳೆದ ಮೇ ತಿಂಗಳ ಅಂತ್ಯದವರೆಗೆ ಸುಮಾರು ಎಂಟು ವಾರಗಳ ಕಾಲ ಸ್ಥಗಿತಗೊಳಿಸಲಾಗಿತ್ತು. ಇದೀಗ ಕಂಪನಿಯು ಡಿಫೆಂಡರ್ 90 ಎಸ್‍ಯುವಿಯನ್ನು ಶೀಘ್ರದಲ್ಲೇ ಬಿಡುಗಡೆಗೊಳಿಸುವುದಾಗಿ ಕಂಪನಿಯು ಸ್ಪಷ್ಟಪಡಿಸಿದೆ. ಈಗಾಗಲೇ ಲ್ಯಾಂಡ್ ರೋವರ್ ಡಿಫೆಂಡರ್ ಎಸ್‍ಯುವಿಗಾಗಿ 22,000 ಹೆಚ್ಚು ಬುಕ್ಕಿಂಗ್ ಅನ್ನು ಪಡೆದಿದ್ದಾರೆ. ಅಲ್ಲದೇ ಈ ಎಸ್‍ಯುವಿಯ ಉತ್ಪಾದನೆಯನ್ನು ಪ್ರಾರಂಭಿಸಿದೆ.

ಬಿಡುಗಡೆಯಾಗಲಿದೆ ಲ್ಯಾಂಡ್ ರೋವರ್ ಡಿಫೆಂಡರ್ 90 ಎಸ್‍ಯುವಿ

ಹೊಸ ಡಿಫೆಂಡರ್ ಎಸ್‍ಯುವಿ ಲ್ಯಾಂಡ್ ರೋವರ್‍‍ನ ಹೊಸ ಟಿ7 ಎಕ್ಸ್ ಆರ್ಕಿಟೆಕ್ಚರ್ ಪ್ಲಾಟ್ ಫಾರ್ಮ್ ಆನ್ನು ಆಧರಿಸಿದೆ. ಈ ಹೊಸ ಎಸ್‍ಯುವಿಯಲ್ಲಿ ಅಲ್ಯುಮಿನಿಯಂ ಮೊನೊಕಾಕ್ ಚಾಸೀಸ್ ಅಳವಡಿಸಲಾಗಿದೆ. ಈ ಚಾಸೀಸ್ ಹಳೆಯ ಮಾದರಿಯ ಎಸ್‍‍ಯುವಿನಲ್ಲಿರುವ ಚಾಸೀಸ್‍‍ಗಿಂತ ಹೆಚ್ಚಿನ ಪ್ರಮಾಣದ ಸ್ಥಿರತೆ ಹಾಗೂ ಕಡಿಮೆ ತೂಕವನ್ನು ಹೊಂದಿದೆ.

MOST READ: ಭರ್ಜರಿಯಾಗಿ ಮಾರಾಟವಾಯ್ತು ಫೋಕ್ಸ್‌ವ್ಯಾಗನ್ ಟಿ-ರಾಕ್ ಎಸ್‍ಯುವಿ

ಬಿಡುಗಡೆಯಾಗಲಿದೆ ಲ್ಯಾಂಡ್ ರೋವರ್ ಡಿಫೆಂಡರ್ 90 ಎಸ್‍ಯುವಿ

ಈ ಎಸ್‍ಯುವಿಯ ಮೂರನೇ ಸಾಲಿನಲ್ಲಿರುವ ಸೀಟುಗಳನ್ನು ಮಡಿಚಿದರೆ, 1,075 ಲೀಟರ್‍‍ನಷ್ಟು ಬೂಟ್ ಸ್ಪೇಸ್ ದೊರೆತರೆ, ಎರಡನೇ ಸಾಲಿನ ಸೀಟುಗಳನ್ನು ಮಡುಚುವುದರಿಂದ 2,380 ಲೀಟರ್‍‍ನಷ್ಟು ಬೂಟ್‍ ಸ್ಪೇಸ್ ಜಾಗ ಸಿಗಲಿದೆ.

ಬಿಡುಗಡೆಯಾಗಲಿದೆ ಲ್ಯಾಂಡ್ ರೋವರ್ ಡಿಫೆಂಡರ್ 90 ಎಸ್‍ಯುವಿ

ಹೊಸ ಲ್ಯಾಂಡ್ ರೋವರ್ ಡಿಫೆಂಡರ್ ಎಸ್‍‍ಯುವಿ ಉತ್ತಮವಾದ ಆಫ್ ರೋಡ್ ಮಾದರಿಯಾಗಿರಲಿದೆ. ಈ ಹೊಸ ತಲೆಮಾರಿನ ಎಸ್‍‍ಯುವಿ ಹಲವಾರು ಹೊಸ ಫೀಚರ್‍‍ಗಳನ್ನು ಹೊಂದಿರಲಿದೆ. ಈ ಎಸ್‍‍ಯುವಿಯು 3,720 ಕೆ.ಜಿಯಷ್ಟು ತೂಕವನ್ನು ಎಳೆಯುವ ಸಾಮರ್ಥ್ಯವನ್ನು ಹೊಂದಿದೆ.

MOST READ: ಮರ್ಸಿಡಿಸ್ ಬೆಂಝ್ ಜಿಎಲ್ಇ ಎಸ್‍ಯುವಿಯ ಎರಡು ಹೊಸ ರೂಪಾಂತರಗಳು ಬಿಡುಗಡೆ

ಬಿಡುಗಡೆಯಾಗಲಿದೆ ಲ್ಯಾಂಡ್ ರೋವರ್ ಡಿಫೆಂಡರ್ 90 ಎಸ್‍ಯುವಿ

ಡಿಫೆಂಡರ್ 291 ಎಂಎಂನಷ್ಟು ಗ್ರೌಂಡ್ ಕ್ಲಿಯರೆನ್ಸ್ ಹೊಂದಿದೆ. ಯಾವುದೇ ರಸ್ತೆಯನ್ನೇ ಆಗಲಿ ಸರಾಗವಾಗಿ ದಾಟುವಂತಹ ಸಾಮರ್ಥ್ಯವನ್ನು ಹೊಂದಿದೆ.

ಬಿಡುಗಡೆಯಾಗಲಿದೆ ಲ್ಯಾಂಡ್ ರೋವರ್ ಡಿಫೆಂಡರ್ 90 ಎಸ್‍ಯುವಿ

ಈ ಎಸ್‍ಯುವಿಯಲ್ಲಿ 2.0 ಲೀಟರ್ ನಾಲ್ಕು ಸಿಲಿಂಡರ್ ಬಿಎಸ್-6 ಪ್ರೇರಿತ ಎಂಜಿನ್ ಅನ್ನು ಹೊಂದಿದೆ. ಈ ಎಂಜಿನ್ 292 ಬಿ‍‍ಹೆಚ್‍‍ಪಿ ಪವರ್ ಮತ್ತು 400 ಎನ್‍ಎಂ ಟಾರ್ಕ್ ಅನ್ನು ಉತ್ಪಾದಿಸುತ್ತದೆ. ಈ ಎಂಜಿನ್‍‍ನೊಂದಿಗೆ ಸ್ಟ್ಯಾಂಡರ್ಡ್ ಆಗಿ ಆಟೋಮ್ಯಾಟಿಕ್ ಗೇರ್‍‍ಬಾಕ್ಸ್ ಅನ್ನು ಅಳವಡಿಸಲಾಗಿದೆ.

MOST READ: ಇತಿಹಾಸದ ಪುಟ ಸೇರಿದ ಫೋಕ್ಸ್‌ವ್ಯಾಗನ್ ಎಮಿಯೊ ಕಾರು

ಬಿಡುಗಡೆಯಾಗಲಿದೆ ಲ್ಯಾಂಡ್ ರೋವರ್ ಡಿಫೆಂಡರ್ 90 ಎಸ್‍ಯುವಿ

ಆಫ್ ರೋಡ್ ಸಾಮರ್ಥ್ಯದ ಈ ಎಸ್‍‍ಯುವಿಯಲ್ಲಿ ಆಲ್ ವ್ಹೀಲ್ ಡ್ರೈವ್ ಸಿಸ್ಟಂ ಅಳವಡಿಸಲಾಗಿದೆ. ಇದರಲ್ಲಿರುವ ರೇರ್ ಲಾಕಿಂಗ್ ಡಿಫರೆನ್ಶಿಯಲ್ ಈ ಎಸ್‍‍ಯುವಿಯನ್ನು ಪೂರ್ಣ ಪ್ರಮಾಣದ ಆಫ್ ರೋಡ್ ವಾಹನವನ್ನಾಗಿಸಿದೆ. ಈ ಎಸ್‍‍ಯುವಿಯಲ್ಲಿ ಟೆರೇನ್ 2 ರೆಸ್ಪಾನ್ಸ್ ಸಿಸ್ಟಂ ಎಂಬ ಆಫ್ ರೋಡ್ ಟೆಕ್ನಾಲಜಿಯನ್ನು ಸಹ ಅಳವಡಿಸಲಾಗಿದೆ.

ಬಿಡುಗಡೆಯಾಗಲಿದೆ ಲ್ಯಾಂಡ್ ರೋವರ್ ಡಿಫೆಂಡರ್ 90 ಎಸ್‍ಯುವಿ

ಭಾರತದಲ್ಲಿ ಲ್ಯಾಂಡ್ ರೋವರ್ ಡಿಫೆಂಡರ್ ಎಸ್‍‍ಯುವಿಯನ್ನು 90 ಹಾಗೂ 110 ಎಂಬ ಎರಡು ಮಾದರಿಗಳಲ್ಲಿ ಮಾರಾಟ ಮಾಡಲಾಗುವುದು. ಈ ಎರಡು ಮಾದರಿಗಳ ಪೈಕಿ 90 ಮಾದರಿಯು 3 ಡೋರ್ ಹೊಂದಿದ್ದರೆ, 110 ಮಾದರಿಯು 5 ಡೋರ್ ಅನ್ನು ಹೊಂದಿದೆ.

Most Read Articles

Kannada
English summary
Land Rover To Contain All Orders For The Defender 90 For The Time Being. Read In Kannada.
Story first published: Thursday, June 25, 2020, 19:14 [IST]
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X