ಅನಾವರಣವಾಯ್ತು ಲ್ಯಾಂಡ್ ರೋವರ್ ಡಿಫೆಂಡರ್ ಪಿಹೆಚ್‌ಇವಿ ಎಸ್‍ಯುವಿ

ಲ್ಯಾಂಡ್ ರೋವರ್ ಕಂಪನಿಯು ಶಾರ್ಟ್ ವ್ಹೀಲ್ ಬೇಸ್ ಡಿಫೆಂಡರ್ 90 ಎಸ್‍ಯುವಿಯ ಮಾದರಿಯನ್ನು ಕೊನೆಗೂ ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಅನಾವರಣಗೊಳಿಸಿದೆ. ಲ್ಯಾಂಡ್ ರೋವರ್ ಡಿಫೆಂಡರ್ 90 ಎಸ್‍ಯುವಿಯನ್ನು ಪ್ಲಗ್-ಇನ್ ಹೈಬ್ರಿಡ್(ಪಿಹೆಚ್‌ಇವಿ) ಮಾದರಿಯಲ್ಲಿ ಪರಿಚಯಿಸಿದೆ.

ಅನಾವರಣವಾಯ್ತು ಲ್ಯಾಂಡ್ ರೋವರ್ ಡಿಫೆಂಡರ್ ಪಿಹೆಚ್‌ಇವಿ ಎಸ್‍ಯುವಿ

ಹೊಸ ಡಿಫೆಂಡರ್ 90 ಎಸ್‍ಯುವಿಯ ಪಿ400ಇ ರೂಪಾಂತರವನ್ನು ಡಿಫೆಂಡರ್ 90 ಶಾರ್ಟ್-ವ್ಹೀಲ್ ಬೇಸ್ ಮತ್ತು ಡಿಫೆಂಡರ್ 110 ಲಾಂಗ್-ವ್ಹೀಲ್ ಬೇಸ್ ಮಾದರಿಯಲ್ಲಿಯು ಬಿಡುಗಡೆಗೊಳಿಸಲಿದೆ. ಈ ಹೂಸ ಡಿಫೆಂಡರ್ 90 ಎಸ್‍ಯುವಿಯಲ್ಲಿ 2.0-ಲೀಟರ್, ನಾಲ್ಕು ಸಿಲಿಂಡರ್, ಟರ್ಬೊ-ಪೆಟ್ರೋಲ್ ಎಂಜಿನ್ ಅನ್ನು ಅಳವಡಿಸಿದೆ. ಇನ್ನು ಈ ಎಸ್‍ಯುವಿಯು ಎಲೆಕ್ಟ್ರಿಕ್ ಮೋಟಾರ್ ಅನ್ನು ಕೂಡ ಒಳಗೊಂಡಿದೆ.

ಅನಾವರಣವಾಯ್ತು ಲ್ಯಾಂಡ್ ರೋವರ್ ಡಿಫೆಂಡರ್ ಪಿಹೆಚ್‌ಇವಿ ಎಸ್‍ಯುವಿ

ಹೊಸ ಡಿಫೆಂಡರ್ 90 ಎಸ್‍ಯುವಿಯ 2.0-ಲೀಟರ್, ನಾಲ್ಕು ಸಿಲಿಂಡರ್, ಟರ್ಬೊ-ಪೆಟ್ರೋಲ್ ಎಂಜಿನ್ ಅನ್ನು 296 ಬಿಹೆಚ್‌ಪಿ ಪವರ್ ಉತ್ಪಾದಿಸುವಂತೆ ಟ್ಯೂನ್ ಮಾಡಲಾಗಿದೆ. ಇನ್ನು ಎಲೆಕ್ಟ್ರಿಕ್ ಮೋಟಾರ್ 138 ಬಿಹೆಚ್‌ಪಿ ಪವರ್ ಉತ್ಪಾದಿಸುತ್ತದೆ.

MOST READ: ಮರ್ಸಿಡಿಸ್ ಬೆಂಝ್ ಜಿಎಲ್ಇ ಎಸ್‍ಯುವಿಯ ಎರಡು ಹೊಸ ರೂಪಾಂತರಗಳು ಬಿಡುಗಡೆ

ಅನಾವರಣವಾಯ್ತು ಲ್ಯಾಂಡ್ ರೋವರ್ ಡಿಫೆಂಡರ್ ಪಿಹೆಚ್‌ಇವಿ ಎಸ್‍ಯುವಿ

ಎರಡು ಸಂಯೋತವಾಗಿ 398 ಬಿಹೆಚ್‌ಪಿ ಪವರ್ ಅನ್ನು ಉತ್ಪಾದಿಸುತ್ತದೆ. ಆಯ್ದ ಮಾರುಕಟ್ಟೆಗಳಲ್ಲಿ 3.0-ಲೀಟರ್, ಇನ್ಲೈನ್ ಸಿಕ್ಸ್-ಸಿಲಿಂಡರ್, ಡೀಸೆಲ್ ಎಂಜಿನ್ ಡಿಫೆಂಡರ್ 90 ನಲ್ಲಿ ಸಹ ನೀಡಲಾಗುತ್ತದೆ.

ಅನಾವರಣವಾಯ್ತು ಲ್ಯಾಂಡ್ ರೋವರ್ ಡಿಫೆಂಡರ್ ಪಿಹೆಚ್‌ಇವಿ ಎಸ್‍ಯುವಿ

ಈ ಡೀಸೆಲ್ ಎಂಜಿನ್ 296 ಬಿಹೆಚ್‌ಪಿ ಪವರ್ ಮತ್ತು 650 ಎನ್‌ಎಂ ಪೀಕ್ ಟಾರ್ಕ್ ಅನ್ನು ಉತ್ಪಾದಿಸುತ್ತದೆ. ಈ ಎಸ್‍ಯುವಿಯು ಕೇವಲ 6.7 ಸೆಕೆಂಡುಗಳಲ್ಲಿ 0-100 ಕಿಲೋಮೀಟರ್ ವೇಗವನ್ನು ಕ್ರಮಿಸುತ್ತದೆ. ಈ ಎಂಜಿನ್ ನಲ್ಲಿಯು ಮೈಕ್ರೋ-ಹೈಬ್ರಿಡ್ ತಂತ್ರಜ್ಞಾನದೊಂದಿಗೆ ನೀಡಲಾಗುತ್ತದೆ ಮತ್ತು ಎಂಜಿನ್ ಸ್ಟಾರ್ಟ್-ಸ್ಟಾಪ್ ಸಿಸ್ಟಂ ಅನ್ನು ಒಳಗೊಂಡಿದೆ.

MOST READ: ಸ್ಪಾಟ್ ಟೆಸ್ಟ್​ನಲ್ಲಿ ಕಾಣಿಸಿಕೊಂಡ ಟೊಯೊಟಾ ಫಾರ್ಚೂನರ್ ಫೇಸ್‌ಲಿಫ್ಟ್‌

ಅನಾವರಣವಾಯ್ತು ಲ್ಯಾಂಡ್ ರೋವರ್ ಡಿಫೆಂಡರ್ ಪಿಹೆಚ್‌ಇವಿ ಎಸ್‍ಯುವಿ

ಲ್ಯಾಂಡ್ ರೋವರ್‍‍ನ ಈ ಎಸ್‍ಯುವಿಯಲ್ಲಿ ಅಲ್ಯುಮಿನಿಯಂ ಮೊನೊಕಾಕ್ ಚಾಸೀಸ್ ಅಳವಡಿಸಲಾಗಿದೆ. ಈ ಚಾಸೀಸ್ ಹಳೆಯ ಮಾದರಿಯ ಚಾಸೀಸ್‍‍ಗಿಂತ ಹೆಚ್ಚಿನ ಪ್ರಮಾಣದ ಸ್ಥಿರತೆ ಹಾಗೂ ಸುರಕ್ಷತೆಯನ್ನು ಹೊಂದಿರುತ್ತದೆ.

ಅನಾವರಣವಾಯ್ತು ಲ್ಯಾಂಡ್ ರೋವರ್ ಡಿಫೆಂಡರ್ ಪಿಹೆಚ್‌ಇವಿ ಎಸ್‍ಯುವಿ

ಹೊಸ ಲ್ಯಾಂಡ್ ರೋವರ್ ಡಿಫೆಂಡರ್ ಎಸ್‍‍ಯುವಿ ಉತ್ತಮವಾದ ಆಫ್ ರೋಡ್ ಮಾದರಿಯಾಗಿರಲಿದೆ. ಈ ಹೊಸ ತಲೆಮಾರಿನ ಎಸ್‍‍ಯುವಿ ಹಲವಾರು ಹೊಸ ಫೀಚರ್‍‍ಗಳನ್ನು ಹೊಂದಿರಲಿದೆ. ಈ ಎಸ್‍‍ಯುವಿಯು 3,720 ಕೆ.ಜಿಯಷ್ಟು ತೂಕವನ್ನು ಎಳೆಯುವ ಸಾಮರ್ಥ್ಯವನ್ನು ಹೊಂದಿದೆ.

MOST READ: ಗ್ಲೋಬಲ್ ಎನ್‌ಸಿಎಪಿಯ ಸುರಕ್ಷತಾ ಟೆಸ್ಟ್​ನಲ್ಲಿ ಅಗ್ರಸ್ಥಾನಗಳಿಸಿದ ಮಹೀಂದ್ರಾ ಕಾರು

ಅನಾವರಣವಾಯ್ತು ಲ್ಯಾಂಡ್ ರೋವರ್ ಡಿಫೆಂಡರ್ ಪಿಹೆಚ್‌ಇವಿ ಎಸ್‍ಯುವಿ

ಈ ಎಸ್‍‍ಯುವಿಯ ರೂಫ್‍‍ನ ತೂಕವು 300 ಕೆಜಿಯಷ್ಟಿದೆ. ಡಿಫೆಂಡರ್ 291 ಎಂಎಂನಷ್ಟು ಗ್ರೌಂಡ್ ಕ್ಲಿಯರೆನ್ಸ್ ಹೊಂದಿದೆ. ಯಾವುದೇ ರಸ್ತೆಯನ್ನೇ ಆಗಲಿ ಸರಾಗವಾಗಿ ದಾಟುವಂತಹ ಸಾಮರ್ಥ್ಯವನ್ನು ಹೊಂದಿದೆ.

ಅನಾವರಣವಾಯ್ತು ಲ್ಯಾಂಡ್ ರೋವರ್ ಡಿಫೆಂಡರ್ ಪಿಹೆಚ್‌ಇವಿ ಎಸ್‍ಯುವಿ

ಆಫ್ ರೋಡ್ ಸಾಮರ್ಥ್ಯದ ಈ ಎಸ್‍‍ಯುವಿಯಲ್ಲಿ ಆಲ್ ವ್ಹೀಲ್ ಡ್ರೈವ್ ಸಿಸ್ಟಂ ಅಳವಡಿಸಲಾಗಿದೆ. ಇದರಲ್ಲಿರುವ ರೇರ್ ಲಾಕಿಂಗ್ ಡಿಫರೆನ್ಶಿಯಲ್ ಈ ಎಸ್‍‍ಯುವಿಯನ್ನು ಪೂರ್ಣ ಪ್ರಮಾಣದ ಆಫ್ ರೋಡ್ ವಾಹನವನ್ನಾಗಿಸಿದೆ. ಈ ಎಸ್‍‍ಯುವಿಯಲ್ಲಿ ಟೆರೇನ್ 2 ರೆಸ್ಪಾನ್ಸ್ ಸಿಸ್ಟಂ ಎಂಬ ಆಫ್ ರೋಡ್ ಟೆಕ್ನಾಲಜಿಯನ್ನು ಸಹ ಒಳಗೊಂಡಿದೆ.

Most Read Articles

Kannada
English summary
Land Rover Defender PHEV Unveiled. Read In Kannada.
Story first published: Saturday, September 12, 2020, 18:51 [IST]
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X