ಬಿಎಸ್-6 ಮಹೀಂದ್ರಾ ಅಲ್ಟುರಾಸ್ ಜಿ4 ಎಸ್‍ಯುವಿಯ ಟೀಸರ್ ಬಿಡುಗಡೆ

ಮಹೀಂದ್ರಾ ಕಂಪನಿಯು ತನ್ನ ಬಿಎಸ್-6 ಅಲ್ಟುರಾಸ್ ಜಿ4 ಎಸ್‍ಯುವಿಯ ಟೀಸರ್ ಅನ್ನು ಬಿಡುಗಡೆಗೊಳಿಸಿದೆ. ಹೊಸ ಮಹೀಂದ್ರಾ ಅಲ್ಟುರಾಸ್ ಜಿ4 ಎಸ್‍ಯುವಿಯು ಮುಂದಿನ ವಾರಗಳಲ್ಲಿ ಭಾರತೀಯ ಮಾರುಕಟ್ಟೆಯಲ್ಲಿ ಬಿಡುಗಡೆಗೊಳಿಸಲಿದೆ.

ಬಿಎಸ್-6 ಮಹೀಂದ್ರಾ ಅಲ್ಟುರಾಸ್ ಜಿ4 ಎಸ್‍ಯುವಿಯ ಟೀಸರ್ ಬಿಡುಗಡೆ

ಬಿಎಸ್-6 ಮಹೀಂದ್ರಾ ಅಲ್ಟುರಾಸ್ ಜಿ4 ಎಸ್‍ಯುವಿಯನ್ನು ಭಾರತದಲ್ಲಿ ಅನೇಕ ಸಂದರ್ಭಗಳಲ್ಲಿ ಸ್ಪಾಟ್ ಟೆಸ್ಟ್ ನಡೆಸಲಾಗಿದೆ. ಬಿಎಸ್-6 ಮಹೀಂದ್ರಾ ಅಲ್ಟುರಾಸ್ ಜಿ4 ಎಸ್‍ಯುವಿಯ ಟೀಸರ್ ಅನ್ನು ಮಹೀಂದ್ರಾ ಕಂಪನಿಯ ವೆಬ್‌ಸೈಟ್‌ನಲ್ಲಿ ಬಿಡುಗಡೆಗೊಳಿಸಿದೆ. ಹೊಸ ಮಹೀಂದ್ರಾ ಅಲ್ಟುರಾಸ್ ಜಿ4 ಎಸ್‍ಯುವಿಯನ್ನು ಶೀಘ್ರದಲ್ಲೇ ಭಾರತದಲ್ಲಿ ಬಿಡುಗಡೆಗೊಳಿಸಬಹುದು ಎಂದು ನಿರೀಕ್ಷಿಸುತ್ತೇವೆ. ಮಹೀಂದ್ರಾ ಅಲ್ಟುರಾಸ್ ಜಿ4 ಎಸ್‍ಯುವಿಯನ್ನು ಬಿಎಸ್-6 ಮಾಲಿನ್ಯ ನಿಯಮಕ್ಕೆ ಹೊರತುಪಡಿಸಿ ಇತರ ಯಾವುದೇ ಬದಲಾವಣೆಯನ್ನು ಮಾಡಲಾಗಿಲ್ಲ ಎಂದು ನಿರೀಕ್ಷಿಸುತ್ತೇವೆ.

ಬಿಎಸ್-6 ಮಹೀಂದ್ರಾ ಅಲ್ಟುರಾಸ್ ಜಿ4 ಎಸ್‍ಯುವಿಯ ಟೀಸರ್ ಬಿಡುಗಡೆ

ಪ್ರಸ್ತುತ ಮಾರುಕಟ್ಟೆಯಲ್ಲಿರುವ ಮಹೀಂದ್ರಾ ಅಲ್ಟುರಾಸ್ ಜಿ4 ಎಸ್‍ಯುವಿಯಲ್ಲಿ 2.2 ಲೀಟರ್ 4 ಸಿಲಿಂಡರ್ ಡೀಸೆಲ್ ಎಂಜಿನ್ ಅನ್ನು ಹೊಂದಿದೆ. ಈ ಎಂಜಿನ್ 180-ಬಿಹೆಚ್‍ಪಿ ಪವರ್ ಮತ್ತು 420-ಎನ್ಎಂ ಟಾರ್ಕ್ ಉತ್ಪಾದಿಸುತ್ತದೆ. ಈ ಎಂಜಿನ್ ನೊಂದಿಗೆ ಮರ್ಸಿಡೀಸ್ ಬೆಂಝ್‍ನಿಂದ ಎರವಲು ಪಡೆದ 7-ಸ್ಪೀಡ್ ಆಟೋಮ್ಯಾಟಿಕ್ ಗೇರ್‍‍ಬಾಕ್ಸ್ ಅನ್ನು ಜೋಡಿಸಲಾಗಿದೆ.

MOST READ: ಅನಾವರಣವಾಯ್ತು ಸ್ಕೋಡಾ ಕೊಡಿಯಾಕ್ ಆರ್‍ಎಸ್ ಚಾಲೆಂಜ್ ಎಸ್‍ಯುವಿ

ಬಿಎಸ್-6 ಮಹೀಂದ್ರಾ ಅಲ್ಟುರಾಸ್ ಜಿ4 ಎಸ್‍ಯುವಿಯ ಟೀಸರ್ ಬಿಡುಗಡೆ

ಇದೇ ಎಂಜಿನ್ ಅನ್ನು ಬಿಎಸ್-6 ಮಾಲಿನ್ಯ ನಿಯಮಕ್ಕೆ ಅನುಗುಣವಾಗಿ ನವೀಕರಿಸಲಾಗುತ್ತದೆ. ಈ ಎಂಜಿನ್ ನ ಪವರ್ ಅನ್ನು 185 ಬಿಹೆಚ್‍ಪಿ ವರೆಗೆ ಪವರ್ ಅನ್ನು ಉತ್ಪಾದಿಸಬಹುದು.

ಬಿಎಸ್-6 ಮಹೀಂದ್ರಾ ಅಲ್ಟುರಾಸ್ ಜಿ4 ಎಸ್‍ಯುವಿಯ ಟೀಸರ್ ಬಿಡುಗಡೆ

ಬಿಎಸ್-6 ಮಹೀಂದ್ರಾ ಅಲ್ಟುರಾಸ್ ಜಿ4 ಎಸ್‍ಯುವಿಯಲ್ಲಿ ಎಂಜಿನ್ ನವೀಕರಣ ಹೊರತುಪಡಿಸಿ ಹೊಸ ಅಲಾಯ್ ವ್ಹೀಲ್ ಗಳನ್ನು ಒಳಗೊಂಡಿರಬಹುದು. ಅನೇಕ ಬಾರಿ ಈ ಎಸ್‍ಯುವಿಯು ಭಾರತದಲ್ಲಿ ಸ್ಪಾಟ್ ಟೆಸ್ಟ್ ನಡೆಸುತ್ತಿರುವ ವೇಳೆಯಲ್ಲಿ ಈ ಅಲಾಯ್ ವ್ಹೀಲ್ ಅನ್ನು ಅಳವಡಿಸಿದರು.

MOST READ: ಆಕರ್ಷಕ ವಿನ್ಯಾಸದಲ್ಲಿ ಅನಾವರಣವಾಯ್ತು ಟೊಯೊಟಾ ಯಾರೀಸ್ ಕ್ರಾಸ್

ಬಿಎಸ್-6 ಮಹೀಂದ್ರಾ ಅಲ್ಟುರಾಸ್ ಜಿ4 ಎಸ್‍ಯುವಿಯ ಟೀಸರ್ ಬಿಡುಗಡೆ

ಹೊಸ ಮಹೀಂದ್ರಾ ಅಲ್ಟುರಾಸ್ ಜಿ4 ಎಸ್‍ಯುವಿಯಲ್ಲಿ ಹಿಂದಿನ ಮಾದರಿಯ ರೀತಿಯ ಫೀಚರ್ ಗಳನ್ನು ಹೊಂದಿರುತ್ತದೆ. ಇಂಡಿಯಾನ್ ಬ್ರ್ಯಾಂಡ್ ನ ಈ ಪೂರ್ಣ ಪ್ರಮಾಣದ ಎಸ್‍ಯುವಿಯು ಹಲವಾರು ಪ್ರೀಮಿಯಂ ಮತ್ತು ಐಷಾರಾಮಿ ಫೀಚರ್ ಗಳನ್ನು ಹೊಂದಿರುತ್ತದೆ.

ಬಿಎಸ್-6 ಮಹೀಂದ್ರಾ ಅಲ್ಟುರಾಸ್ ಜಿ4 ಎಸ್‍ಯುವಿಯ ಟೀಸರ್ ಬಿಡುಗಡೆ

ಬಿಎಸ್-6 ಮಹೀಂದ್ರಾ ಅಲ್ಟುರಾಸ್ ಜಿ4 ಎಸ್‍ಯುವಿಯ ಇಂಟಿರಿಯರ್ ನಲ್ಲಿ ಆಪಲ್ ಕಾರ್ ಪ್ಲೇ ಮತ್ತು ಆಂಡ್ರಾಯ್ಡ್ ಆಟೋ ಹೊಂದಿರುವ ಟಚ್‌ಸ್ಕ್ರೀನ್ ಇನ್ಪೋಟೇನ್‍ಮೆಂಟ್ ಸಿಸ್ಟಂ ಅನ್ನು ಹೊಂದಿರಲಿದೆ. ಇದರೊಂದಿಗೆ ಎಲೆಕ್ಟ್ರಾನಿಕಲ್ ಆಗಿ ಹೊಂದಾಣಿಕೆ ಮಾಡಬಹುದಾದ ಮುಂಭಾಗದ ಸೀಟುಗಳು, ಟೇಲ್ ಗೇಡ್, ಡ್ಯುಯಲ್-ಜೋನ್ ಕ್ಲೈಮೇಟ್ ಕಂಟ್ರೋಲ್, ವೈರ್‌ಲೆಸ್ ಚಾರ್ಜಿಂಗ್ಮತ್ತು ಮಲ್ಟಿ-ಫಂಕ್ಷನ್ ಸ್ಟೀರಿಂಗ್ ವ್ಹೀಲ್ ಅನ್ನು ಹೊಂದಿರಲಿದೆ.

MOST READ: ದಾಖಲೆ ಪ್ರಮಾಣದಲ್ಲಿ ಮಾರಾಟವಾಗುತ್ತಿವೆ ಮಾರುತಿ ಸುಜುಕಿ ಎಕ್ಸ್‌ಎಲ್6

ಬಿಎಸ್-6 ಮಹೀಂದ್ರಾ ಅಲ್ಟುರಾಸ್ ಜಿ4 ಎಸ್‍ಯುವಿಯ ಟೀಸರ್ ಬಿಡುಗಡೆ

ಬಿಎಸ್-6 ಮಹೀಂದ್ರಾ ಅಲ್ಟುರಾಸ್ ಜಿ4 ಎಸ್‍ಯುವಿಯಲ್ಲಿ ಸುರಕ್ಷತೆಗಾಗಿ ಹೆಚ್ಚಿನ ಪ್ರಾಮುಖ್ಯತೆಯನ್ನು ನೀಡಿದೆ. ಸುರಕ್ಷತೆಗಾಗಿ ಒಂಬತ್ತು ಏರ್‌ಬ್ಯಾಗ್, ಫ್ರಂಟ್ ಮತ್ತು ರೇರ್ ಪಾರ್ಕಿಂಗ್ ಸೆನ್ಸರ್‌ಗಳು, 360 ಡಿಗ್ರಿ ಕ್ಯಾಮೆರಾ, ಎಲೆಕ್ಟ್ರಾನಿಕ್ ಸ್ಟೆಬಿಲಿಟಿ ಪ್ರೋಗ್ರಾಂ, ಹಿಲ್ ಸ್ಟಾರ್ಟ್ ಅಸಿಸ್ಟ್, ಹಿಲ್ ಡಿಸೆಂಟ್ ಕಂಟ್ರೋಲ್, ಎಬಿಎಸ್ ಜೊತೆ ಇಬಿಡಿ, ಕ್ರೂಸ್ ಕಂಟ್ರೋಲ್, ಹೈಸ್ಪೀಡ್ ಅಲರ್ಟ್ ಮತ್ತು ಸೀಟ್‌ಬೆಲ್ಟ್ ರಿಮೈಂಡರ್ ಅನ್ನು ಹೊಂದಿರಲಿದೆ.

ಬಿಎಸ್-6 ಮಹೀಂದ್ರಾ ಅಲ್ಟುರಾಸ್ ಜಿ4 ಎಸ್‍ಯುವಿಯ ಟೀಸರ್ ಬಿಡುಗಡೆ

ಬಿಎಸ್-6 ಮಹೀಂದ್ರಾ ಅಲ್ಟುರಾಸ್ ಜಿ4 ಎಸ್‍ಯುವಿಯು ಭಾರತೀಯ ಮಾರುಕಟ್ಟೆಯಲ್ಲಿ ಬಿಡುಗಡೆಯಾದ ಬಳಿಕ ಟೊಯೊಟಾ ಫಾರ್ಚೂನರ್, ಫೋರ್ಡ್ ಎಂಡೀವರ್, ಸ್ಕೋಡಾ ಕೊಡಿಯಾಕ್ ಮತ್ತು ಫೋಕ್ಸ್‌ವ್ಯಾಗನ್ ಟಿಗುವಾನ್ ಆಲ್‌ಸ್ಪೇಸ್ ಎಸ್‍ಯುವಿಗಳಿಗೆ ಪೈಪೋಟಿ ನೀಡುತ್ತದೆ.

Most Read Articles

Kannada
English summary
Mahindra Alturas G4 BS6 Teaser Released Ahead Of India Launch. Read in Kannada.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X