ಬಿಡುಗಡೆಯಾಗಲಿದೆ ಮಹೀಂದ್ರಾ ಎಕ್ಸ್‌ಯುವಿ300 ಎಲೆಕ್ಟ್ರಿಕ್ ಎಸ್‍‍ಯುವಿ

ಮಹೀಂದ್ರಾ ಕಂಪನಿಯು ತನ್ನ ಹೊಸ ಎಕ್ಸ್‌ಯುವಿ300 ಎಲೆಕ್ಟ್ರಿಕ್ ಎಸ್‍ಯುವಿಯನ್ನು ಭಾರತದಲ್ಲಿ ಬಿಡುಗಡೆಗೊಳಿಸಲಿದೆ. ಈ ಹೊಸ ಎಕ್ಸ್‌ಯುವಿ300 ಎಲೆಕ್ಟ್ರಿಕ್ ಎಸ್‍ಯುವಿಯನ್ನು 2020ರ ಆಟೋ ಎಕ್ಸ್ ಪೋದಲ್ಲಿ ಮಹೀಂದ್ರಾ ಕಂಪನಿಯು ಪ್ರದರ್ಶಿಸಲಾಗಿತ್ತು.

ಬಿಡುಗಡೆಯಾಗಲಿದೆ ಮಹೀಂದ್ರಾ ಎಕ್ಸ್‌ಯುವಿ300 ಎಲೆಕ್ಟ್ರಿಕ್ ಎಸ್‍‍ಯುವಿ

ಮಹೀಂದ್ರಾ ಕಂಪನಿಯು ಈ ಹೊಸ ಎಕ್ಸ್‌ಯುವಿ300 ಎಲೆಕ್ಟ್ರಿಕ್ ಎಸ್‍ಯುವಿಯನ್ನು ಭಾರತದಲ್ಲಿ ಮುಂದಿನ ವರ್ಷದಲ್ಲಿ ಬಿಡುಗಡೆಗೊಳಿಸಬಹುದು. ಮುಂದಿನ ವರ್ಷದ ಏಪ್ರಿಲ್ ತಿಂಗಳ ಬಳಿಕ ಈ ಎಕ್ಸ್‌ಯುವಿ300 ಎಲೆಕ್ಟ್ರಿಕ್ ಎಸ್‍ಯುವಿಯನ್ನು ಭಾರತದಲ್ಲಿ ಬಿಡುಗಡೆಗೊಳಿಸಬಹುದು ಎಂದು ನಿರೀಕ್ಷಿಸುತ್ತೇವೆ. ಸಾಮಾನ್ಯ ಮಹೀಂದ್ರಾ ಎಕ್ಸ್‌ಯುವಿ300ಗೆ ಹೋಲಿಸದರೆ ವಿನ್ಯಾಸದಲ್ಲಿ ಗಮನಾರ್ಹ ಬದಲಾವಣೆಗಳನ್ನು ಹೊಂದಿದೆ. ಮಹೀಂದ್ರಾ ಇಎಕ್ಸ್‌ಯುವಿ 300 ಬಿಡುಗಡೆಯಾದ ಬಳಿಕೆ ಟಾಟಾ ನೆಕ್ಸಾನ್‍‍ಗೆ ನೇರ ಪೈಪೋಟಿಯನ್ನು ನೀಡುತ್ತದೆ.

ಬಿಡುಗಡೆಯಾಗಲಿದೆ ಮಹೀಂದ್ರಾ ಎಕ್ಸ್‌ಯುವಿ300 ಎಲೆಕ್ಟ್ರಿಕ್ ಎಸ್‍‍ಯುವಿ

ಟಾಟಾ ನೆಕ್ಸಾನ್ ಕಾಂಪ್ಯಾಕ್ಟ್ ಎಸ್‍ಯುವಿಯು 30.2 ಕಿ.ವ್ಯಾಟ್ ಬ್ಯಾಟರಿ ಪ್ಯಾಕ್‍ನೊಂದಿಗೆ ಬ್ರ್ಯಾಂಡ್‍‍ನ ಜಿಪ್ಟ್ರಾನ್ ಎಲೆಕ್ಟ್ರಿಕ್ ಮೋಟಾರ್ ಅನ್ನು ಹೊಂದಿದೆ. ಈ ಎಲೆಕ್ಟ್ರಿಕ್ ಕಾಂಪ್ಯಾಕ್ಟ್ ಎಸ್‍‍ಯುವಿಯು 127 ಬಿ‍‍ಹೆಚ್‍ಪಿ ಪವರ್ ಮತ್ತು 245 ಎನ್‍‍ಎಂ ಟಾರ್ಕ್ ಅನ್ನು ಉತ್ಪಾದಿಸುತ್ತದೆ. ಈ ಕಾಂಪ್ಯಾಕ್ಟ್ ಎಸ್‍ಯುವಿಯು 10 ಸೆಕೆಂಡುಗಳಲ್ಲಿ 100 ಕಿ.ಮೀ ವೇಗವನ್ನು ಕ್ರಮಿಸುತ್ತದೆ.

MOST READ: ಗ್ಲೋಬಲ್ ಎನ್‌ಸಿಎಪಿಯ ಸುರಕ್ಷತಾ ಟೆಸ್ಟ್​ನಲ್ಲಿ ಅಗ್ರಸ್ಥಾನಗಳಿಸಿದ ಮಹೀಂದ್ರಾ ಕಾರು

ಬಿಡುಗಡೆಯಾಗಲಿದೆ ಮಹೀಂದ್ರಾ ಎಕ್ಸ್‌ಯುವಿ300 ಎಲೆಕ್ಟ್ರಿಕ್ ಎಸ್‍‍ಯುವಿ

ಮಹೀಂದ್ರಾ ಇಎಕ್ಸ್‌ಯುವಿ300 ತನ್ನ ಪ್ರತಿಸ್ಪರ್ಧಿಗಳಿಗಿಂತ ಹೆಚ್ಚು ವ್ಯಾಪ್ತಿಯನ್ನು ಚಲಿಸುತ್ತದೆ. ಮಹೀಂದ್ರಾ ಇಎಕ್ಸ್‌ಯುವಿ 300 ಎಸ್‍ಯುವಿಯಲ್ಲಿ ಎರಡು ರೀತಿಯ ಬ್ಯಾಟರಿಯನ್ನು ಸಂರಚನೆ ಮಾಡಲಾಗಿದೆ.

ಬಿಡುಗಡೆಯಾಗಲಿದೆ ಮಹೀಂದ್ರಾ ಎಕ್ಸ್‌ಯುವಿ300 ಎಲೆಕ್ಟ್ರಿಕ್ ಎಸ್‍‍ಯುವಿ

ಮಹೀಂದ್ರಾ ಎಕ್ಸ್‌ಯುವಿ300 ಎಲೆಕ್ಟ್ರಿಕ್ ಎಸ್‍‍ಯುವಿಯ ಟಾಪ್ ವೆರಿಯೆಂಟ್ ಒಂದು ಬಾರಿ ಪೂರ್ಣ ಪ್ರಮಾಣದ ಜಾರ್ಜ್ ಮಾಡಿದರೆ 370 ಕಿ.ಮೀ ಚಲಿಸುತ್ತದೆ. ಇನ್ನೊಂದು ಲೋ ವೆರಿಯೆಂಟ್ ಬ್ಯಾಟರಿ ಪ್ಯಾಕ್ ನಲ್ಲಿ ಒಂದೇ ಚಾರ್ಜ್‌ನಲ್ಲಿ ಸುಮಾರು 250 ಕಿ.ಮೀ.ನಷ್ಟು ಮೈಲೇಜ್ ಅನ್ನು ಹೊಂದಿದೆ.

MOST READ: ಬಿಡುಗಡೆಯ ಸನಿಹದಲ್ಲಿ ಹೊಸ ಮಾರುತಿ ಸುಜುಕಿ ಸೆಲೆರಿಯೊ

ಬಿಡುಗಡೆಯಾಗಲಿದೆ ಮಹೀಂದ್ರಾ ಎಕ್ಸ್‌ಯುವಿ300 ಎಲೆಕ್ಟ್ರಿಕ್ ಎಸ್‍‍ಯುವಿ

ಮಹೀಂದ್ರಾ ಎಕ್ಸ್‌ಯುವಿ300 ಮಾರುಕಟ್ಟೆಯಲ್ಲಿ ಲಭ್ಯವಿರುವ ಅತ್ಯುತ್ತಮ ಕಾಂಪ್ಯಾಕ್ಟ್ ಎಸ್‍ಯುವಿಗಳಲ್ಲಿ ಒಂದಾಗಿದೆ. ಇದೀಗ ಭಾರತೀಯ ಮಾರುಕಟ್ಟೆಯಲ್ಲಿ ಜನಪ್ರಿಯ ಕಂಪನಿಗಳು ಎಲೆಕ್ಟ್ರಿಕ್ ಕಾರುಗಳನ್ನು ಬಿಡುಗಡೆಗೊಳಿಸುತ್ತಿದೆ.

ಬಿಡುಗಡೆಯಾಗಲಿದೆ ಮಹೀಂದ್ರಾ ಎಕ್ಸ್‌ಯುವಿ300 ಎಲೆಕ್ಟ್ರಿಕ್ ಎಸ್‍‍ಯುವಿ

ಅದರಂತೆ ಮಹೀಂದ್ರಾ ಕಂಪನಿಯು ತನ್ನ ಜನಪ್ರಿಯ ಎಕ್ಸ್‌ಯುವಿ300 ಮಾದರಿಯನ್ನು ಎಲೆಕ್ಟ್ರಿಕ್ ರೂಪಾಂತರದಲ್ಲಿ ಬಿಡುಗಡೆಗೊಳಿಸಲು ಸಜ್ಜಾಗಿದೆ. ಕಳೆದ ವರ್ಷ ಮಹೀಂದ್ರಾ ಕಂಪನಿಯು ಎಕ್ಸ್‌ಯುವಿ300 ಅನ್ನು ಎಲೆಕ್ಟ್ರಿಕ್ ರೂಪಾಂತರದಲ್ಲಿ ಬಿಡುಗಡೆಗೊಳಿಸಲಿದೆ ಎಂದು ವರದಿಯಾಗಿತ್ತು.

MOST READ: ಸ್ಪಾಟ್ ಟೆಸ್ಟ್​ನಲ್ಲಿ ಕಾಣಿಸಿಕೊಂಡ ಟೊಯೊಟಾ ಫಾರ್ಚೂನರ್ ಫೇಸ್‌ಲಿಫ್ಟ್‌

ಬಿಡುಗಡೆಯಾಗಲಿದೆ ಮಹೀಂದ್ರಾ ಎಕ್ಸ್‌ಯುವಿ300 ಎಲೆಕ್ಟ್ರಿಕ್ ಎಸ್‍‍ಯುವಿ

ಇಎಕ್ಸ್‌ಯುವಿ300 ಕಾಂಪ್ಯಾಕ್ಟ್ ಎಸ್‍ಯುವಿಯು ಟಿವೊಲಿ ಪ್ಲಾಟ್‍‍ಫಾರ್ಮ್ ಅನ್ನು ಆಧರಿಸಿದೆ. ಹೊಸ ಇಎಕ್ಸ್‌ಯುವಿ300 ಬಳಿ ಬಣ್ಣದದಿಂದ ಕೊಡಿದೆ. ಈ ಇಎಕ್ಸ್‌ಯುವಿ300 ವಿಶಿಷ್ಟವಾದ ಹೆಡ್‍‍ಲ್ಯಾಂಪ್‍ ಮತ್ತು ಮುಂಭಾಗದಲ್ಲಿ ಗ್ರಿಲ್ ಅನ್ನು ಅಳವಡಿಸಲಾಗಿದೆ.

ಬಿಡುಗಡೆಯಾಗಲಿದೆ ಮಹೀಂದ್ರಾ ಎಕ್ಸ್‌ಯುವಿ300 ಎಲೆಕ್ಟ್ರಿಕ್ ಎಸ್‍‍ಯುವಿ

ಮುಂಭಾಗದ ಹೆಡ್‍‍ಲ್ಯಾಂಪ್‍ಗಳ ಮೇಲೆ ನೀಲಿ ಎಕ್ಸೆಟ್ ಗಳು ಸುತ್ತುವರೆದಿದೆ. ಮುಂಭಾಗದಲ್ಲಿ ಲಿಪ್ ಸ್ಪಾಯ್ಲರ್‍‍ಗಳನ್ನು ಅಳವಡಿಸಲಾಗಿದೆ. ಹಿಂಭಾಗವು ಸಮಾನ್ಯ ಎಸ್‍ಯುವಿ ಮಾದರಿಯಂತಿದೆ. ಆದರೆ ಎಲ್ಇಡಿ ಟೇಲ್ ಲ್ಯಾಂಪ್ ಮಾತ್ರ ವಿಭಿನ್ನವಾಗಿದೆ.

ಬಿಡುಗಡೆಯಾಗಲಿದೆ ಮಹೀಂದ್ರಾ ಎಕ್ಸ್‌ಯುವಿ300 ಎಲೆಕ್ಟ್ರಿಕ್ ಎಸ್‍‍ಯುವಿ

ಇಕೆ‍‍ಯುವಿ 100ನಂತೆ ಈ ಎಸ್‍ಯುವಿಯು ನೀಲಿ ಎಕ್ಸೆಟ್ ಗಳನ್ನು ಹೊಂದಿದೆ. ಇನ್ನು ಹೈ-ಮೌಂಟೆಡ್ ಸ್ಟಾಪ್ ಲ್ಯಾಂಪ್, ಲಿಪ್ ಸ್ಪಾಯ್ಲರ್ ಮತ್ತು ಟೇಲ್ ಲ್ಯಾಂಪ್‍ಗೆ ಬ್ಲ್ಯಾಕ್ ಬಣ್ಣದ ಅಂಶಗಳು ಆಕರ್ಷಕವಾಗಿದೆ. ಇನ್ನೂ ಡ್ಯಾಶ್‍ ಬೋರ್ಡ್‍‍ನಲ್ಲಿ ಟಚ್‍‍ಸ್ಕ್ರೀನ್ ಇನ್ಫೋಟೇನ್‍‍ಮೆಂಟ್ ಸಿಸ್ಟಂ ಮತ್ತು ಎಸಿ ವೆಂಟ್ಸ್ ಗಳಿವೆ.

Most Read Articles

Kannada
English summary
Mahindra XUV300 EV To Likely Debut In Second Half Of 2021. Read In Kannada.
Story first published: Monday, October 12, 2020, 14:16 [IST]
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X