ಪವರ್‌ಫುಲ್ 1.2-ಲೀಟರ್ ಎಂಸ್ಟಾಲಿನ್ ಪೆಟ್ರೋಲ್ ಎಂಜಿನ್ ಅನಾವರಣಗೊಳಿಸಿದ ಮಹೀಂದ್ರಾ

ಮಹೀಂದ್ರಾ ಸಂಸ್ತೆಯು ತನ್ನ ಪ್ರಮುಖ ಕಾರುಗಳ ಎಂಜಿನ್ ಬದಲಾವಣೆಯಲ್ಲಿ ಸಾಕಷ್ಟು ಆಸಕ್ತಿ ವಹಿಸಿದ್ದು, ಪರ್ಫಾಮೆನ್ಸ್ ಪ್ರಿಯರಿಗಾಗಿ 1.2-ಲೀಟರ್ ಪೆಟ್ರೋಲ್ ಎಂಜಿನ್‌ನಲ್ಲೇ ಅತಿ ಹೆಚ್ಚು ಬಿಎಚ್‌ಪಿ ಉತ್ಪಾದನಾ ವೈಶಿಷ್ಟ್ಯತೆಯೊಂದಿಗೆ ಬಿಡುಗಡೆ ಮಾಡುತ್ತಿದೆ.

ಪವರ್‌ಫುಲ್ 1.2-ಲೀಟರ್ ಎಂಸ್ಟಾಲಿನ್ ಪೆಟ್ರೋಲ್ ಎಂಜಿನ್ ಅನಾವರಣಗೊಳಿಸಿದ ಮಹೀಂದ್ರಾ

ಹೊಸದಾಗಿ ಅಭಿವೃದ್ದಿಗೊಳಿಸಲಾಗಿರುವ 1.2-ಲೀಟರ್ ಪೆಟ್ರೋಲ್ ಎಂಜಿನ್ ಅನ್ನು ಎಂಸ್ಟಾಲಿನ್ ಎಂದು ಕರೆದಿರುವ ಮಹೀಂದ್ರಾ ಸಂಸ್ಥೆಯು ಸದ್ಯ ಮಾರುಕಟ್ಟೆಯಲ್ಲಿರುವ ಸಾಮಾನ್ಯ ಮಾದರಿಯ 1.2-ಲೀಟರ್ ಪೆಟ್ರೋಲ್ ಎಂಜಿನ್‌ಗಿಂತಲೂ ಹೆಚ್ಚು ಸುಧಾರಿತ ತಂತ್ರಜ್ಞಾನದೊಂದಿಗೆ ಅಭಿವೃದ್ದಿಗೊಳಿಸಿದೆ. 6-ಸ್ಪೀಡ್ ಮ್ಯಾನುವಲ್ ಗೇರ್‌ಬಾಕ್ಸ್ ಆಯ್ಕೆ ಹೊಂದಿರುವ ಹೊಸ ಪೆಟ್ರೋಲ್ ಎಂಜಿನ್ ಮಾದರಿಯು ಶೀಘ್ರದಲ್ಲೇ ಬಿಡುಗಡೆಯಾಗಲಿರುವ ಎಕ್ಸ್‌ಯುವಿ300 ಸ್ಪೋರ್ಟ್ಜ್ ವರ್ಷನ್‌ನಲ್ಲಿ ಜೋಡಣೆ ಮಾಡಲಾಗುತ್ತಿದೆ.

ಪವರ್‌ಫುಲ್ 1.2-ಲೀಟರ್ ಎಂಸ್ಟಾಲಿನ್ ಪೆಟ್ರೋಲ್ ಎಂಜಿನ್ ಅನಾವರಣಗೊಳಿಸಿದ ಮಹೀಂದ್ರಾ

ಹೊಸ ಎಂಸ್ಟಾಲಿನ್ ಎಂಜಿನ್ ಮಾದರಿಯು 128-ಬಿಎಚ್‌ಪಿ ಮತ್ತು 230-ಎನ್ಎಂ ಟಾರ್ಕ್ ಉತ್ಪಾದನಾ ಸಾಮಾರ್ಥ್ಯ ಹೊಂದಿದ್ದು, ಇದು ಸಾಮಾನ್ಯ ಮಾದರಿಯ 1.5-ಲೀಟರ್ ಪೆಟ್ರೋಲ್ ಎಂಜಿನ್‌ಗಿಂತಲೂ ಹೆಚ್ಚು ಬಿಎಚ್‌ಪಿ ಉತ್ಪಾದನೆ ಮಾಡಲಿದೆ.

ಪವರ್‌ಫುಲ್ 1.2-ಲೀಟರ್ ಎಂಸ್ಟಾಲಿನ್ ಪೆಟ್ರೋಲ್ ಎಂಜಿನ್ ಅನಾವರಣಗೊಳಿಸಿದ ಮಹೀಂದ್ರಾ

ಹೊಸ ಎಂಜಿನ್ ಮಾದರಿಯು ಎಕ್ಸ್‌ಯುವಿ300 ಸ್ಪೋರ್ಟ್ಜ್ ವರ್ಷನ್‌ನಲ್ಲಿ ಮಾತ್ರವಲ್ಲದೇ ಮುಂಬರುವ ಫೋರ್ಡ್ ಹೊಸ ಇಕೋಸ್ಪೋರ್ಟ್ಸ್ ಆವೃತ್ತಿಯಲ್ಲೂ ಇದೇ ಎಂಜಿನ್ ಬಳಕೆಯಾಗಲಿದ್ದು, ಸಹಭಾಗಿತ್ವ ಯೋಜನೆಯಲ್ಲಿ ಕಾರು ಉತ್ಪಾದನೆ ಮಾಡುತ್ತಿರುವ ಫೋರ್ಡ್ ಮತ್ತು ಮಹೀಂದ್ರಾ ಸಂಸ್ಥೆಯು ಹೊಸ ಎಂಜಿನ್ ಅನ್ನು ವಿವಿಧ ಕಾರು ಮಾದರಿಗಳಲ್ಲಿ ಬಳಕೆ ಮಾಡಿಕೊಳ್ಳಲಿವೆ.

ಪವರ್‌ಫುಲ್ 1.2-ಲೀಟರ್ ಎಂಸ್ಟಾಲಿನ್ ಪೆಟ್ರೋಲ್ ಎಂಜಿನ್ ಅನಾವರಣಗೊಳಿಸಿದ ಮಹೀಂದ್ರಾ

ಇನ್ನು ಮಹೀಂದ್ರಾ ಸಂಸ್ಥೆಯು ಎಕ್ಸ್‌ಯುವಿ300 ಸ್ಪೋರ್ಟ್ಜ್ ಆವೃತ್ತಿಯನ್ನು ಪೆಟ್ರೋಲ್ ಮಾದರಿಯಲ್ಲಿ ಮಾತ್ರವೇ ಬಿಡುಗಡೆ ಮಾಡಲಿದ್ದು, ಸಬ್ ಫೋರ್ ಮೀಟರ್ ಕಂಪ್ಯಾಕ್ಟ್ ಎಸ್‌ಯುವಿ ಮಾದರಿಗಳಲ್ಲೇ ಇದು ಅತಿ ಹೆಚ್ಚು ಬಿಎಚ್‌ಪಿ ಉತ್ಪಾದನಾ ಆವೃತ್ತಿಯಾಗಿರಲಿದೆ. ಹಾಗೆಯೇ ಹೊಸ ಕಾರನ್ನು ಸ್ಪೋರ್ಟ್ಜ್ ಮಾದರಿಯಾಗಿ ಗುರುತಿಸಿಕೊಳ್ಳಲು ಕೆಲವು ಪ್ರಮುಖ ಬದಲಾವಣೆಗಳನ್ನು ಮಾಡಲಾಗಿದ್ದು, ಸ್ಪೋರ್ಟಿ ಗ್ರಾಫಿಕ್ಸ್ ಮತ್ತು ಕಾರಿನ ಒಳಭಾಗದಲ್ಲಿ ರೆಡ್ ಲೈನ್‌ಗಳನ್ನು ಬಳಕೆ ಮಾಡಿರುವುದು ಆಕರ್ಷಣಿವಾಗಿದೆ.

ಪವರ್‌ಫುಲ್ 1.2-ಲೀಟರ್ ಎಂಸ್ಟಾಲಿನ್ ಪೆಟ್ರೋಲ್ ಎಂಜಿನ್ ಅನಾವರಣಗೊಳಿಸಿದ ಮಹೀಂದ್ರಾ

ಇನ್ನುಳಿದಂತೆ ಹೊಸ ಕಾರು ಸಾಮಾನ್ಯ ಕಾರಿನ ಮಾದರಿಯಲ್ಲೇ ತಾಂತ್ರಿಕ ಅಂಶಗಳನ್ನು ಹೊಂದಿದ್ದು, ಸಾಮಾನ್ಯ ಪೆಟ್ರೋಲ್ ಆವೃತ್ತಿಗಿಂತಲೂ ಹೊಸ ಕಾರು ಹೆಚ್ಚುವರಿಯಾಗಿ ರೂ. 50 ಸಾವಿರದಿಂದ ರೂ.80 ಸಾವಿರ ಹೆಚ್ಚುವರಿ ಬೆಲೆ ಪಡೆಯಲಿದೆ.

ಪವರ್‌ಫುಲ್ 1.2-ಲೀಟರ್ ಎಂಸ್ಟಾಲಿನ್ ಪೆಟ್ರೋಲ್ ಎಂಜಿನ್ ಅನಾವರಣಗೊಳಿಸಿದ ಮಹೀಂದ್ರಾ

ಸಾಮಾನ್ಯ ಆವೃತ್ತಿಯಲ್ಲಿ ಪೆಟ್ರೋಲ್ ಮಾದರಿಯ 1.2-ಲೀಟರ್ ಎಂಜಿನ್‍‌ನೊಂದಿಗೆ 110-ಬಿಎಚ್‌ಪಿ ಸಾಮರ್ಥ್ಯವನ್ನು ಹೊಂದಿದ್ದು, ಹೊಸ ಸ್ಪೋರ್ಟ್ಜ್ ಆವೃತ್ತಿಯು ಹೆಚ್ಚುವರಿಯಾಗಿ 18-ಬಿಎಚ್‌ಪಿ ಉತ್ಪಾದನಾ ಗುಣಹೊಂದಿದೆ.

ಪವರ್‌ಫುಲ್ 1.2-ಲೀಟರ್ ಎಂಸ್ಟಾಲಿನ್ ಪೆಟ್ರೋಲ್ ಎಂಜಿನ್ ಅನಾವರಣಗೊಳಿಸಿದ ಮಹೀಂದ್ರಾ

ಇದು ಪರ್ಫಾಮೆನ್ಸ್ ಪ್ರಿಯರನ್ನು ಸೆಳೆಯಲಿದ್ದು, ಪ್ರತಿ ಸ್ಪರ್ಧಿ ಮಾದರಿಗಳಾದ ವಿಟಾರಾ ಬ್ರೆಝಾ ಪೆಟ್ರೋಲ್ ಮತ್ತು ವೆನ್ಯೂ ಪೆಟ್ರೋಲ್ ಟರ್ಬೋ ಆವೃತ್ತಿಗೆ ಪೈಪೋಟಿ ನೀಡುವುದಲ್ಲದೇ ಸಣ್ಣ ಗಾತ್ರದ ಎಂಜಿನ್ ಮೂಲಕ ಉತ್ತಮ ಪರ್ಫಾಮೆನ್ಸ್ ಪ್ರಿಯರ ಖರೀದಿಗೆ ಉತ್ತಮವಾಗಿದೆ.

ಪವರ್‌ಫುಲ್ 1.2-ಲೀಟರ್ ಎಂಸ್ಟಾಲಿನ್ ಪೆಟ್ರೋಲ್ ಎಂಜಿನ್ ಅನಾವರಣಗೊಳಿಸಿದ ಮಹೀಂದ್ರಾ

ಇನ್ನು ಕೇಂದ್ರ ಸರ್ಕಾರವು ಮಾಲಿನ್ಯವನ್ನು ನಿಯಂತ್ರಿಸಲು ಇದೇ ವರ್ಷ ಏಪ್ರಿಲ್ 1ರಿಂದ ಬಿಎಸ್-6 ಎಮಿಷನ್ ನಿಯಮವನ್ನು ಜಾರಿಗೊಳಿಸುತ್ತಿದ್ದು, ಇದರಿಂದ ಮಹೀಂದ್ರಾ ಕಂಪನಿಯು ತನ್ನ ಸರಣಿಯಲ್ಲಿರುವ ಪ್ರಮುಖ ಎಸ್‍‍ಯುವಿ ಮಾದರಿಗಳನ್ನು ಹೊಸ ಬಿಎಸ್-6 ಮಾಲಿನ್ಯ ನಿಯಮಕ್ಕೆ ಅನುಸಾರವಾಗಿ ನವೀಕರಿಸುತ್ತಿದೆ.

ಪವರ್‌ಫುಲ್ 1.2-ಲೀಟರ್ ಎಂಸ್ಟಾಲಿನ್ ಪೆಟ್ರೋಲ್ ಎಂಜಿನ್ ಅನಾವರಣಗೊಳಿಸಿದ ಮಹೀಂದ್ರಾ

ಇದರ ಭಾಗವಾಗಿ ಮಹೀಂದ್ರಾ ಕಂಪನಿಯು ತನ್ನ ಮೊದಲ ಬಿಎಸ್-6 ಎಸ್‍‍ಯುವಿಯಾಗಿ ಕಳೆದ ತಿಂಗಳು ಎಕ್ಸ್‌ಯುವಿ 300 ಪೆಟ್ರೋಲ್ ಮಾದರಿಯನ್ನು ಬಿಡುಗಡೆಗೊಳಿಸಿದ್ದು, ಇದೀಗ ಹೊಸದಾಗಿ ಅಭಿವೃದ್ದಿಗೊಳಿಸಲಾದ 1.2 ಲೀಟರ್ ಎಂಸ್ಟಾಲಿನ್ ಪೆಟ್ರೋಲ್ ಎಂಜಿನ್ ಅನ್ನು ಬಿಡುಗಡೆ ಮಾಡುತ್ತಿದೆ.

Most Read Articles

Kannada
English summary
Mahindra has revealed new range or mStallion petrol engines. Read in Kannada.
Story first published: Friday, February 14, 2020, 18:26 [IST]
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X