Just In
- 11 hrs ago ಸಾಟಿಯಿಲ್ಲದ ಮೈಲೇಜ್: ಈ ಮಾರುತಿ ಕಾರುಗಳು ಫುಲ್ ಟ್ಯಾಂಕ್ನಲ್ಲಿ 1200 ಕಿ.ಮೀ ಚಲಿಸುತ್ತೆ
- 11 hrs ago KTM Duke 125 ಬೆಲೆಗೆ ಯಾವೆಲ್ಲಾ ಬೈಕ್ಗಳು ಸಿಗುತ್ತೆ ಗೊತ್ತಾ?: ಪಲ್ಸರ್ನಿಂದ ಹಿಡಿದು MT 15 ವರೆಗೆ
- 12 hrs ago ಅಡ್ವೆಂಚರ್ ಬೈಕ್ ಪ್ರಿಯರಿಗೆ ಸಿಹಿಸುದ್ದಿ: ಬಿಡುಗಡೆಗೆ ಸಜ್ಜಾದ ಸುಜುಕಿ V-Strom 800 DE ಬೈಕ್
- 12 hrs ago Maruti Suzuki: 2024ರ ಮಾರುತಿ ಸ್ವಿಫ್ಟ್ ವಿಶೇಷತೆಗಳು: ಸನ್ರೂಫ್, 35 ಕಿ.ಮೀ ಮೈಲೇಜ್!
Don't Miss!
- News ಉಕ್ರೇನ್ ವಿರುದ್ಧ ರಷ್ಯಾ ಗಂಭೀರ ಆರೋಪ!
- Lifestyle ಯೇಸುವನ್ನು ಶಿಲುಬೆಗೆ ಹಾಕಿದ ದಿನವನ್ನು ಗುಡ್ ಪ್ರೈಡೇ ಎಂದು ಹೇಳುವುದೇಕೆ?
- Movies "ನಾವು ದಕ್ಷಿಣ ಭಾರತದವರಾಗಿದ್ರೂ ಭಾಷೆ ಬರುತ್ತೆ, ಸುಂದರವಾಗಿಯೂ ಇದ್ದೇವೆ"; ನಟಿ ಪ್ರಿಯಾಮಣಿ
- Sports RR vs DC: ಅವೇಶ್ ಖಾನ್, ರಿಯಾನ್ ಪರಾಗ್ ಶೈನ್; ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ವಿನ್
- Finance ಷೇರು ಮಾರುಕಟ್ಟೆಯಲ್ಲಿ ಬಂಪರ್ ಲಾಟರಿ: ಹೂಡಿಕೆದಾರರಿಗೆ ಲಾಭವೋ ಲಾಭ!
- Technology Oppo: ಭಾರತದಲ್ಲಿ ಒಪ್ಪೋ F25 ಪ್ರೊ ಸ್ಮಾರ್ಟ್ಫೋನ್ ಹೊಸ ಕಲರ್ ವೇರಿಯಂಟ್ನಲ್ಲಿ! ಬೆಲೆ ಎಷ್ಟು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ರೂ. 1.11 ಕೋಟಿ ಮೊತ್ತಕ್ಕೆ ಹರಾಜುಗೊಂಡ ನ್ಯೂ ಜನರೇಷನ್ ಥಾರ್ ಮೊದಲ ಯುನಿಟ್
ಮಹೀಂದ್ರಾ ಕಂಪನಿಯು ಅಕ್ಟೋಬರ್ 2ರಂದು ತನ್ನ ಹೊಸ ತಲೆಮಾರಿನ ಥಾರ್ ಎಸ್ಯುವಿ ಮಾದರಿಯನ್ನು ಅಧಿಕೃತವಾಗಿ ಬಿಡುಗಡೆ ಮಾಡುತ್ತಿದ್ದು, ಹೊಸ ಕಾರು ಬಿಡುಗಡೆಗೂ ಮುನ್ನ ಕೋವಿಡ್ ಕೇರ್ ಪರಿಹಾರ ನಿಧಿಗಾಗಿ ಹೊಸ ಕಾರಿನ ಮೊದಲ ಯುನಿಟ್ ಅನ್ನು ಹರಾಜು ಮಾಡುವ ಮೂಲಕ ಭಾರೀ ಪ್ರಮಾಣದ ದೇಣಿಗೆ ಸಂಗ್ರಹಿಸಿದೆ.
ಹೊಸ ಥಾರ್ ಕಾರಿನ ಮೊದಲ ಯುನಿಟ್ ಮಾಲೀಕತ್ವಕ್ಕಾಗಿ ಆನ್ಲೈನ್ ಹರಾಜು ಪ್ರಕ್ರಿಯೆಯನ್ನು ಇದೇ ತಿಂಗಳು 25ರಿಂದ ಆರಂಭಿಸಿದ್ದ ಮಹೀಂದ್ರಾ ಕಂಪನಿಯು 29ಕ್ಕೆ ಕೊನೆಗೊಳಿಸಿದ್ದು, ಅಂತಿಮವಾಗಿ ದೆಹಲಿ ಮೂಲದ ಆನಂದ್ ಮಿಂದಾ ಎನ್ನುವವರು ರೂ. 1.11 ಕೋಟಿ ಬೆಲೆ ಪಾವತಿಸಿ ಹೊಸ ಥಾರ್ ಕಾರಿನ ಮಾಲೀಕತ್ವ ಪಡೆದುಕೊಂಡಿದ್ದಾರೆ. ದೇಣಿಗಾಗಿ ಸಂಗ್ರಹಿಸಲಾಗಿರುವ ಭಾರೀ ಮೊತ್ತವನ್ನು ಕೋವಿಡ್ ಕೇರ್ ಮತ್ತು ವಿವಿಧ ಸರ್ಕಾರೇತರ ಸಂಘ-ಸಂಸ್ಥೆಗಳಿಗೆ ಹಂಚಿಕೆ ಮಾಡಲಿದೆ.
ಹರಾಜಿನಲ್ಲಿ ಮಾರಾಟಗೊಂಡಿರುವ ಕಾರು ಮಾದರಿಗೆ ವಿಶೇಷವಾಗಿ ಕಸ್ಟಮೈಜ್ಡ್ ಮಾಡಲಿರುವ ಮಹೀಂದ್ರಾ ಕಂಪನಿಯು ಹಲವಾರು ಐಷಾರಾಮಿ ಫೀಚರ್ಸ್ಗಳೊಂದಿಗೆ ವಿತರಣೆ ಮಾಡಲಿದ್ದು, ದೇಣಿಗೆ ಸಂಗ್ರಹಕ್ಕಾಗಿ ಕೈಜೋಡಿಸಿದ್ದಕ್ಕಾಗಿ ಹಲವು ವಿಶೇಷ ಬ್ಯಾಡ್ಜ್ಗಳನ್ನು ಅಳವಡಿಸಲಿದೆ.
ಥಾರ್ ಕಾರಿನ ಮೊದಲ ಯುನಿಟ್ಗೆ ರೂ. 25 ಲಕ್ಷ ಆರಂಭಿಕ ದರ ನಿಗದಿ ಮಾಡಿದ್ದ ಮಹೀಂದ್ರಾ ಕಂಪನಿಯು ಅಂತಿಮವಾಗಿ ರೂ. 1,11,00,000 ಬೆಲೆ ಗಿಟ್ಟಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದು, ಕೋವಿಡ್ ಕೇರ್ ಫಂಡ್ಗಾಗಿ ಹರಾಜು ಪ್ರಕ್ರಿಯೆ ಕೈಗೊಂಡಿದ್ದರಿಂದ ಥಾರ್ ಫ್ಯಾನ್ಸ್ ಭಾರೀ ಪ್ರಮಾಣದ ಮೊತ್ತಕ್ಕೆ ಹೊಸ ಕಾರನ್ನು ಖರೀದಿ ಮಾಡಿದ್ದಾರೆ.
ಇನ್ನು ನ್ಯೂ ಜನರೇಷನ್ ಥಾರ್ ಕಾರು ಮಾದರಿಯು ಈ ಬಾರಿ ಹಲವಾರು ಹೊಸ ಬದಲಾವಣೆಗಳೊಂದಿಗೆ ಮಾರುಕಟ್ಟೆಗೆ ಪ್ರವೇಶಿಸುತ್ತಿದ್ದು, ಥಾರ್ ಕಾರು ಮಾದರಿಯಲ್ಲಿ ಮೊದಲ ಬಾರಿಗೆ ಡೀಸೆಲ್ ಎಂಜಿನ್ ಜೊತೆಗೆ ಪೆಟ್ರೋಲ್ ಕಾರಿನ ಆಯ್ಕೆಯನ್ನು ಸಹ ನೀಡಲಾಗಿದೆ. ಇದು ಆಫ್-ರೋಡ್ ಕಾರು ಮಾದರಿಯ ಮಾರಾಟದಲ್ಲಿ ಮತ್ತೊಂದು ಹಂತದ ಬದಲಾವಣೆಗೆ ಕಾರಣವಾಗಲಿದ್ದು, ಎಸ್ಯುವಿ ಕಾರುಗಳ ಮಾರಾಟದಲ್ಲಿ ಭಾರೀ ಬೇಡಿಕೆ ಪಡೆದುಕೊಳ್ಳುವ ನೀರಿಕ್ಷೆಯಲ್ಲಿದೆ.
ಹೊಸ ಥಾರ್ನಲ್ಲಿ ಮರುವಿನ್ಯಾಸಗೊಳಿಸಲಾದ ಸೆವೆನ್ ಸ್ಲಾಟ್ ಗ್ರಿಲ್, ವೃತ್ತಾಕಾರದವಾದ ಹೆಡ್ಲ್ಯಾಂಪ್, 18-ಇಂಚಿನ ಆಕರ್ಷಕ ಅಲಾಯ್ ವೀಲ್ಹ್, ಡ್ಯುಯಲ್ ಬಂಪರ್, ಸ್ಕಫ್ ಪ್ಲೇಟ್, ಬಾಕ್ಸಿ ಮಾದರಿಯಲ್ಲಿ ಟೈಲ್ ಲೈಟ್ನೊಂದಿಗೆ ಮಾರ್ಡನ್ ಶೈಲಿ ಪಡೆದುಕೊಂಡಿದೆ.
ಹೊಸ ಕಾರಿನ ಒಳಭಾಗದ ಸೌಲಭ್ಯಗಳು ಸಹ ಪ್ರಸ್ತುತ ಮಾದರಿಗಿಂತಲೂ ಹೆಚ್ಚು ಪ್ರೀಮಿಯಂ ಮತ್ತು ಮಾರ್ಡನ್ ವಿನ್ಯಾಸಗಳನ್ನು ಹೊಂದಿದ್ದು, ಆಕರ್ಷಕ ಡ್ಯಾಶ್ಬೋರ್ಡ್ನೊಂದಿಗೆ ಆ್ಯಪಲ್ ಕಾರ್ಪ್ಲೇ ಮತ್ತು ಅಂಡ್ರಾಯಿಡ್ ಆಟೋಗೆ ಸರ್ಪೋಟ್ ಮಾಡಬಲ್ಲ 7-ಇಂಚಿನ ಟಚ್ಸ್ಕ್ರೀನ್ ಇನ್ಪೋಟೈನ್ಮೆಂಟ್ ಸಿಸ್ಟಂ, ಎಲ್ಲಾ ಮಾದರಿಯ ಹವಾಗುಣವನ್ನು ತಡೆಯಬಲ್ಲ ರೂಫ್ ಮೌಂಟೆಡ್ ಆಡಿಯೋ ಸ್ಪಿಕರ್ಸ್, ಮಲ್ಟಿ ಕಲರ್ ಇನ್ಫಾಮೆಷನ್ ಡಿಸ್ಪ್ಲೇ ಮತ್ತು ಸ್ಟೀರಿಂಗ್ ಮೌಟೆಂಟ್ ಕಂಟ್ರೋಲ್ ಸೌಲಭ್ಯ ನೀಡಲಾಗಿದೆ.
MOST READ: ಭಾರತದಲ್ಲಿ ಎರಡು ಹೊಸ ಎಸ್ಯುವಿ ಕಾರು ಮಾದರಿಗಳನ್ನು ಬಿಡುಗಡೆ ಮಾಡಲಿದೆ ಹ್ಯುಂಡೈ
ಥಾರ್ ಹೊಸ ಆವೃತ್ತಿಯಲ್ಲಿ ಬಿಎಸ್-6 ಎಂಜಿನ್ ಪ್ರೇರಿತ 2.2-ಲೀಟರ್ ಡೀಸೆಲ್ ಎಂಜಿನ್ ಮತ್ತು ಹೊಸದಾಗಿ ಅಭಿವೃದ್ದಿಗೊಳಿಸಲಾದ 2.0-ಲೀಟರ್ ಎಂ-ಸ್ಟಾಲಿನ್ ಪೆಟ್ರೋಲ್ ಎಂಜಿನ್ ನೀಡಲಾಗಿದ್ದು, ಡೀಸೆಲ್ ಮಾದರಿಯು 132-ಬಿಎಚ್ಪಿ, 300-ಎನ್ಎಂ ಟಾರ್ಕ್ ಉತ್ಪಾದನೆ ಮಾಡಿದ್ದಲ್ಲಿ ಪೆಟ್ರೋಲ್ ಮಾದರಿಯು 152-ಬಿಎಚ್ಪಿ, 320-ಎನ್ಎಂ ಟಾರ್ಕ್ ಉತ್ಪಾದನೆ ಮಾಡಬಲ್ಲದು.
ಇನ್ನುಳಿದಂತೆ ಹೊಸ ಕಾರಿನಲ್ಲಿ ಸುರಕ್ಷತೆಗಾಗಿ ಹಲವಾರು ಸೆಫ್ಟಿ ಫೀಚರ್ಸ್ಗಳನ್ನು ಸ್ಟ್ಯಾಂಡರ್ಡ್ ಆಗಿ ನೀಡಲಾಗಿದ್ದು, ಎರಡು ಎಂಜಿನ್ ಆಯ್ಕೆಗಳಲ್ಲೂ 4x4 ಡ್ರೈವ್ ಸಿಸ್ಟಂ, ಕ್ರೂಸ್ ಕಂಟ್ರೋಲ್, 255/65 18-ಇಂಚಿನ ಆಲ್ ಟೆರೆನ್ ಟೈರ್ಸ್, ಡ್ಯುಯಲ್ ಏರ್ಬ್ಯಾಗ್, ಎಬಿಎಸ್ ಜೊತೆ ಇಬಿಡಿ, ಐಸೋಫಿಕ್ಸ್ ಚೈಲ್ಡ್ ಸೀಟ್ ಮೌಂಟ್, ಹಿಲ್ ಸ್ಟಾರ್ಟ್ ಅಸಿಸ್ಟ್, ರೋಲ್ ಓವರ್ ಮಿಟಿಗೆಷನ್, ತ್ರೀ ಪಾಯಿಂಟ್ ಸಿಲ್ಟ್ ಬೆಲ್ಟ್, ರಿಯರ್ ವ್ಯೂ ಕ್ಯಾಮೆರಾ ಜೋಡಿಸಲಾಗಿದೆ.
MOST READ: ಪ್ರತಿ ಚಾರ್ಜ್ಗೆ ಗರಿಷ್ಠ 509ಕಿ.ಮೀ ಮೈಲೇಜ್ ನೀಡಲಿದೆ ಸ್ಕೋಡಾ ಎನ್ಯಾಕ್ ಎಲೆಕ್ಟ್ರಿಕ್ ಎಸ್ಯುವಿ..!
ಮಾಹಿತಿಗಳ ಪ್ರಕಾರ, ಹೊಸ ಕಾರು ದೆಹಲಿ ಎಕ್ಸ್ಶೋರೂಂ ದರದಂತೆ ಆರಂಭಿಕವಾಗಿ ರೂ. 9.75 ಲಕ್ಷ ಮತ್ತು ಟಾಪ್ ಎಂಡ್ ಮಾದರಿಯು ರೂ.12.25 ಲಕ್ಷ ಬೆಲೆ ಹೊಂದುವ ಸಾಧ್ಯತೆಗಳಿದ್ದು, ಆಫ್-ರೋಡ್ ಕೌಶಲ್ಯಕ್ಕೆ ಪೂರಕವಾದ ಹಲವಾರು ತಾಂತ್ರಿಕ ಅಂಶಗಳನ್ನು ಸ್ಟ್ಯಾಂಡರ್ಡ್ ಆಗಿ ಪಡೆದುಕೊಳ್ಳಲಿದೆ.