ಡೀಸೆಲ್ ಮಾದರಿಯಲ್ಲೂ ಆಟೋಮ್ಯಾಟಿಕ್ ವರ್ಷನ್ ಪಡೆದುಕೊಳ್ಳಲಿದೆ ಹೊಸ ಥಾರ್

ಮಹೀಂದ್ರಾ ಬಹುನೀರಿಕ್ಷಿತ ನ್ಯೂ ಜನರೇಷನ್ ಥಾರ್ ಕಾರು ಮಾದರಿಯು ಹಲವು ಹೊಸ ವಿಶೇಷತೆಗಳೊಂದಿಗೆ ಬಿಡುಗಡೆಗೆ ಸಿದ್ದವಾಗಿದ್ದು, ಕಾರಣಾಂತರಗಳಿಂದ ಹೊಸ ಕಾರಿನ ಬಿಡುಗಡೆಯು ಮುಂದೂಡಿಕೆಯಾಗುತ್ತಲೇ ಇದೆ. ಸದ್ಯ ಲಭ್ಯವಾಗಿರುವ ಮಾಹಿತಿಗಳ ಪ್ರಕಾರ ಹೊಸ ಕಾರು ಮುಂಬರುವ ಅಗಸ್ಟ್ ಅಂತ್ಯಕ್ಕೆ ಬಿಡುಗಡೆಯಾಗಲಿದ್ದು, ಹೊಸ ಕಾರಿನಲ್ಲಿ ಹಲವಾರು ಹೊಸ ಬದಲಾವಣೆಗಳನ್ನು ಪರಿಚಯಿಸಲಾಗಿದೆ.

ಆಟೋಮ್ಯಾಟಿಕ್ ವರ್ಷನ್ ಪಡೆದುಕೊಳ್ಳಲಿದೆ ಹೊಸ ಥಾರ್

ಹೊಸ ಥಾರ್ ಕಾರು ಮಾದರಿಯ ಖರೀದಿಗಾಗಿ ಈಗಾಗಲೇ ಆಯ್ದ ಕಾರು ಡೀಲರ್ಸ್‌ಗಳಲ್ಲಿ ಬುಕ್ಕಿಂಗ್ ಸಹ ಪಡೆದುಕೊಳ್ಳಲಾಗುತ್ತಿದ್ದು, ಈ ವೇಳೆ ಹೊಸ ಕಾರು ಅಗಸ್ಟ್ ಅಂತ್ಯಕ್ಕೆ ಖರೀದಿಗೆ ಲಭ್ಯವಾಗಬಹುದು ಎನ್ನುವ ಮಾಹಿತಿ ಲಭ್ಯವಾಗಿದೆ. ಹೊಸ ಥಾರ್ ಮಾದರಿಯು ಈ ಬಾರಿ ಹಲವಾರು ಹೊಸ ಬದಲಾವಣೆಗಳನ್ನು ಪಡೆದುಕೊಂಡಿದ್ದು, ಡೀಸೆಲ್ ಮತ್ತು ಪೆಟ್ರೋಲ್ ಎರಡು ಆವೃತ್ತಿಗಳಲ್ಲೂ ಖರೀದಿಗೆ ಲಭ್ಯವಿಲಿರುವ ಹೊಸ ಕಾರು ಮ್ಯಾನುವಲ್ ಮತ್ತು ಆಟೋಮ್ಯಾಟಿಕ್ ವರ್ಷನ್ ಪಡೆದುಕೊಳ್ಳಲಿವೆ.

ಆಟೋಮ್ಯಾಟಿಕ್ ವರ್ಷನ್ ಪಡೆದುಕೊಳ್ಳಲಿದೆ ಹೊಸ ಥಾರ್

ಹೊಸ ಥಾರ್ ಕಾರು ಈ ಬಾರಿ ನವೀಕರಿಸಿದ 2.2-ಡೀಸೆಲ್ ಎಂಜಿನ್ ಜೊತೆಗೆ ಹೊಸದಾಗಿ 2.0-ಲೀಟರ್ ಪೆಟ್ರೋಲ್ ಎಂಜಿನ್ ಆಯ್ಕೆಯನ್ನು ಸಹ ಹೊಂದಿಲಿದ್ದು, ಮಾಲಿನ್ಯ ಹೊರಸೂಸುವಿಕೆ ಪ್ರಮಾಣದಲ್ಲಿ ಸಾಕಷ್ಟು ಸುಧಾರಣೆ ಕಂಡಿದೆ.

ಆಟೋಮ್ಯಾಟಿಕ್ ವರ್ಷನ್ ಪಡೆದುಕೊಳ್ಳಲಿದೆ ಹೊಸ ಥಾರ್

ಭಾರತದಲ್ಲಿ ಸದ್ಯ ಬಿಎಸ್-6 ನಿಯಮವು ಏಪ್ರಿಲ್ 1ರಿಂದ ಕಡ್ಡಾಯವಾಗಿ ಜಾರಿಗೆ ಬಂದಿದ್ದು, ಕೇಂದ್ರ ಸರ್ಕಾರದ ಹೊಸ ನಿಯಮದಂತೆ ಮಹೀಂದ್ರಾ ಸೇರಿದಂತೆ ಬಹುತೇಕ ಆಟೋ ಕಂಪನಿಗಳು ಬಿಎಸ್-6 ಎಂಜಿನ್ ಪ್ರೇರಿತ ಡೀಸೆಲ್ ವಾಹನಗಳನ್ನು ಬಿಡುಗಡೆಗೊಳಿಸಿವೆ.

ಆಟೋಮ್ಯಾಟಿಕ್ ವರ್ಷನ್ ಪಡೆದುಕೊಳ್ಳಲಿದೆ ಹೊಸ ಥಾರ್

ಹೊಸ ಎಂಜಿನ್‌ನಿಂದಾಗಿ ಥಾರ್ ಕಾರು ಈ ಬಾರಿ ಆಫ್-ರೋಡ್ ಪ್ರಿಯರನ್ನು ಮತ್ತಷ್ಟು ಸೆಳೆಯಲಿದ್ದು, ಹೊಸ ಕಾರಿನ ಡೀಸೆಲ್ ಮತ್ತು ಪೆಟ್ರೋಲ್ ಎರಡು ಮಾದರಿಯಲ್ಲೂ ಆಟೋಮ್ಯಾಟಿಕ್ ಮತ್ತು ಮ್ಯಾನುವಲ್ ಗೇರ್‌ಬಾಕ್ಸ್ ಆಯ್ಕೆ ನೀಡಲಾಗಿದೆ.

MOST READ: ಲಾಕ್‌ಡೌನ್ ಸಂಕಷ್ಟ: ಸೆಕೆಂಡ್ ಹ್ಯಾಂಡ್ ಕಾರು ಮಾರಾಟ ಉದ್ಯಮ ಆರಂಭಿಸಿದ ಫೋಕ್ಸ್‌ವ್ಯಾಗನ್

ಆಟೋಮ್ಯಾಟಿಕ್ ವರ್ಷನ್ ಪಡೆದುಕೊಳ್ಳಲಿದೆ ಹೊಸ ಥಾರ್

ಜೊತೆಗೆ ಬಿಎಸ್-6 ವೈಶಿಷ್ಟ್ಯತೆಗಳಿಂದಾಗಿ ಮಹೀಂದ್ರಾ ಹೊಸ ಕಾರುಗಳಲ್ಲಿ ಈ ಬಾರಿ ಹಲವಾರು ಬದಲಾವಣೆಗಳಾಗಿದ್ದು, ಸ್ಕಾರ್ಪಿಯೋ, ಎಕ್ಸ್‌ಯುವಿ500, ಎಕ್ಸ್‌ಯುವಿ300, ಟಿಯುವಿ300 ಪ್ಲಸ್ ಮತ್ತು ನ್ಯೂ ಜನರೇಷನ್ ಥಾರ್ ಕಾರುಗಳಲ್ಲಿ ಆಲ್ ವೀಲ್ಹ್ ಡಿಸ್ಕ್ ಬ್ರೇಕ್, ಎಬಿಎಸ್ ಜೊತೆ ಇಬಿಡಿ, ಆಟೋಮ್ಯಾಟಿಕ್ ಕ್ಲೈಮೆಟ್ ಕಂಟ್ರೊಲ್ ಸಿಸ್ಟಂ, ಸ್ಪೀಡ್ ಅಲರ್ಟ್, ಸೀಟ್ ಬೆಲ್ಟ್ ರಿಮೆಂಡರ್ ಸೌಲಭ್ಯಗಳನ್ನು ಸ್ಟ್ಯಾಂಡರ್ಡ್ ಆಗಿ ನೀಡಲಾಗಿದೆ.

ಆಟೋಮ್ಯಾಟಿಕ್ ವರ್ಷನ್ ಪಡೆದುಕೊಳ್ಳಲಿದೆ ಹೊಸ ಥಾರ್

ಸುರಕ್ಷತೆಗಾಗಿ 6 ಏರ್‌ಬ್ಯಾಗ್‌ಗಳು(ಟಾಪ್ ಎಂಡ್‌ಗಳಲ್ಲಿ), ಫ್ರಂಟ್ ಪಾರ್ಕಿಂಗ್ ಸೆನ್ಸಾರ್, ರಿಯರ್ ಪಾರ್ಕಿಂಗ್ ಕ್ಯಾಮೆರಾ, ಆಯ್ದ ವೆರಿಯೆಂಟ್‌ಗಳಲ್ಲಿ ಕ್ರೂಸ್ ಕಂಟ್ರೋಲ್, ಸನ್‌ರೂಫ್, ರೂಫ್ ರೈಲ್ಸ್, ಎಲ್‌ಇಡಿ ಹೆಡ್‌ಲ್ಯಾಂಪ್, ಎಲ್‌ಇಡಿ ಫಾಗ್ ಲ್ಯಾಂಪ್, ಟರ್ನ್ ಇಂಡಿಕೇಟಕ್ ಲೈಟ್, ಸಿಲ್ವರ್ ಸ್ಕೀಡ್ ಪ್ಲೇಟ್ ಸೌಲಭ್ಯವಿದೆ.

MOST READ: ರೂ.5 ಲಕ್ಷಕ್ಕಿಂತ ಕಡಿಮೆ ಬೆಲೆಯ ಜನಪ್ರಿಯ ಕಾರುಗಳಿವು

ಇದಲ್ಲದೆ ರಿಯರ್ ಎಸಿ ವೆಂಟ್ಸ್, ಲೆದರ್ ಸೀಟುಗಳು, 6 ಹಂತದಲ್ಲಿ ಹೊಂದಾಣಿಕೆ ಮಾಡಿಕೊಳ್ಳಬಹುದಾದ ಡ್ರೈವರ್ ಸೀಟು ಮತ್ತು ಒಂದೇ ಸೂರಿನಡಿ ವಿವಿಧ ಮಾಹಿತಿಗಳನ್ನು ನೀಡಬಲ್ಲ ಟಚ್ ಸ್ಕ್ರಿನ್ ಇನ್ಪೋಟೈನ್‌ಟೆಂಟ್ ಸಿಸ್ಟಂ ಜೋಡಣೆ ಮಾಡಲಾಗಿದೆ.

ಆಟೋಮ್ಯಾಟಿಕ್ ವರ್ಷನ್ ಪಡೆದುಕೊಳ್ಳಲಿದೆ ಹೊಸ ಥಾರ್

ಕಾರು ಕಳ್ಳತನಗಳಿಗೆ ಬ್ರೇಕ್ ಹಾಕಲು ಜಿಯೋ ಫೆನ್ಸ್ ಅಲರ್ಟ್ ಸೇರಿದಂತೆ ಸೆಂಟರ್ ಲಾಕಿಂಗ್ ಸಿಸ್ಟಂ ಸೌಲಭ್ಯಗಳನ್ನು ನೀಡಲಾಗುತ್ತಿದ್ದು, ಒಟ್ಟಿನಲ್ಲಿ ಪ್ರಯಾಣಿಕರ ಸುರಕ್ಷೆತೆಗಾಗಿ ಗರಿಷ್ಠ ಮಟ್ಟದಲ್ಲಿ ಸುರಕ್ಷಾ ಸೌಲಭ್ಯ ಗಳನ್ನು ಅಳವಡಿಸಿರುವುದೇ ಹೊಸ ಕಾರುಗಳ ಪ್ರಮುಖ ಆಕರ್ಷಣೆಯಾಗಲಿದೆ.

MOST READ: ಕಾರು ಖರೀದಿ ಮಾಡುವ ಕರೋನಾ ವಾರಿಯರ್ಸ್‌ಗೆ ಭರ್ಜರಿ ಆಫರ್ ನೀಡಿದ ಟಾಟಾ

ಆಟೋಮ್ಯಾಟಿಕ್ ವರ್ಷನ್ ಪಡೆದುಕೊಳ್ಳಲಿದೆ ಹೊಸ ಥಾರ್

ಇದರೊಂದಿಗೆ ಬಿಎಸ್-4 ಕಾರುಗಳ ಬೆಲೆಗಳಿಂತಲೂ ಬಿಎಸ್-6 ಕಾರುಗಳ ಬೆಲೆಯು ತಾಂತ್ರಿಕ ಸೌಲಭ್ಯಗಳ ಅಳವಡಿಕೆಯ ಆಧಾರದ ಮೇಲೆ ಪೆಟ್ರೋಲ್ ಕಾರುಗಳು ರೂ.10 ಸಾವಿರದಿಂದ ರೂ.30 ಸಾವಿರ ತನಕ ಮತ್ತು ಡೀಸೆಲ್ ಕಾರುಗಳು ರೂ.40 ಸಾವಿರದಿಂದ ರೂ. 80 ಸಾವಿರ ತನಕ ಹೆಚ್ಚುವರಿ ಬೆಲೆ ಪಡೆದುಕೊಳ್ಳಲಿವೆ.

Article Published On: Thursday, June 18, 2020, 22:22 [IST]
English summary
New Mahindra Thar Diesel-Automatic Spied. Read in Kannada.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+