Just In
Don't Miss!
- Sports
ಯುಎಇ ಆಟಗಾರರಿಂದ ಮ್ಯಾಚ್ ಫಿಕ್ಸಿಂಗ್; ಅಮಾನತು ಮಾಡಿದ ಐಸಿಸಿ
- Movies
'ಬೆಲ್ ಬಾಟಂ-2' ಟೈಟಲ್ ಪೋಸ್ಟರ್ ಅನಾವರಣ: ಡಿಟೆಕ್ಟಿವ್ ದಿವಾಕರ್ ಈಸ್ ಬ್ಯಾಕ್
- Lifestyle
ಗರ್ಭಾವಸ್ಥೆಯಲ್ಲಿ ಥೈರಾಯ್ಡ್ ಸಮಸ್ಯೆ: ಇದರ ಅಪಾಯಗಳೇನು, ತಡೆಗಟ್ಟುವುದು ಹೇಗೆ?
- News
ಶಶಿಕಲಾ ಈಗ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಸಾಮಾನ್ಯ ರೋಗಿ
- Finance
ಹೊಸ ಸಾರ್ವಕಾಲಿಕ ದಾಖಲೆ ಬರೆದ ಪೆಟ್ರೋಲ್- ಡೀಸೆಲ್ ದರ; ಯಾವ ನಗರದಲ್ಲಿ ಎಷ್ಟು?
- Education
ECIL Recruitment 2021: 3 ಟೆಕ್ನಿಕಲ್ ಅಧಿಕಾರಿ ಹುದ್ದೆಗಳಿಗೆ ನೇರ ಸಂದರ್ಶನ
- Technology
ಒನ್ಪ್ಲಸ್ ನಾರ್ಡ್ ಜುಲೈ 15 ರಿಂದ ಅಮೆಜಾನ್ ತಾಣದಲ್ಲಿ ಪ್ರಿ-ಆರ್ಡರ್ಗೆ ಲಭ್ಯವಿದೆ; ಖರೀದಿಸುವಲ್ಲಿ ಮೊದಲಿಗರಾಗಿರಿ!
- Travel
ಭಾರತದಲ್ಲಿ ಜೂನ್ 1 ರಿಂದ ಚಲಿಸಲಿರುವ ರೈಲುಗಳ ಸಂಪೂರ್ಣ ಪಟ್ಟಿ
ಕ್ರ್ಯಾಶ್ ಟೆಸ್ಟಿಂಗ್‌ನಲ್ಲಿ ಗರಿಷ್ಠ ಸೇಫ್ಟಿ ರೇಟಿಂಗ್ಸ್ ಪಡೆದುಕೊಂಡ ಮಹೀಂದ್ರಾ ನ್ಯೂ ಜನರೇಷನ್ ಥಾರ್
ಸುರಕ್ಷಿತ ಕಾರು ಮಾದರಿಗಳ ನಿರ್ಮಾಣದಲ್ಲಿ ಮುಂಚೂಣಿ ಸಾಧಿಸುತ್ತಿರುವ ಮಹೀಂದ್ರಾ ಕಂಪನಿಯು ಎಕ್ಸ್‌ಯುವಿ300 ನಂತರ ನ್ಯೂ ಜನರೇಷನ್ ಥಾರ್ ಕಾರು ಮಾದರಿಯ ಸುರಕ್ಷತೆಯಲ್ಲೂ ಗಮನಸೆಳೆದಿದ್ದು, ಹೊಸ ಕಾರು ಮಾದರಿಯು ಕ್ರ್ಯಾಶ್ ಟೆಸ್ಟಿಂಗ್‌ನಲ್ಲಿ ಗರಿಷ್ಠ ಸೇಫ್ಟಿ ರೇಟಿಂಗ್ಸ್ ಪಡೆದುಕೊಂಡಿದೆ.

ಕಳೆದ ಅಕ್ಟೋಬರ್ 2ರಂದು ಬಿಡುಗಡೆಗೊಂಡಿದ್ದ ಥಾರ್ ಕಾರು ಮಾದರಿಯು ಹಳೆಯ ಆವೃತ್ತಿಗಿಂತಲೂ ಭಾರೀ ಬದಲಾವಣೆಗಳೊಂದಿಗೆ ಬಿಡುಗಡೆಗೊಂಡಿದ್ದು, ಹೊಸ ಕಾರಿನಲ್ಲಿ ಹೊಸ ಎಂಜಿನ್ ಆಯ್ಕೆಗಳ ಜೊತೆಗೆ ಪ್ರಯಾಣಿಕರ ಸುರಕ್ಷತೆಗೂ ಗರಿಷ್ಠ ಆದ್ಯತೆ ನೀಡಲಾಗಿದೆ. ಪ್ರಯಾಣಿಕರ ಸುರಕ್ಷತೆಗಾಗಿ ವಿವಿಧ ಕಾರು ಮಾದರಿಗಳಲ್ಲಿ ಹಲವಾರು ಬದಲಾವಣೆಗಳನ್ನು ಪರಿಚಯಿಸಿರುವ ಮಹೀಂದ್ರಾ ಕಂಪನಿಯು ನ್ಯೂ ಜನರೇಷನ್ ಥಾರ್ ಮೂಲಕ ಹೊಸ ಸಂಚಲನಕ್ಕೆ ಕಾರಣವಾಗಿದೆ.

ಪ್ರಯಾಣಿಕ ಸುರಕ್ಷತೆ ವಿಚಾರವಾಗಿ ಎಕ್ಸ್‌ಯುವಿ300 ಮಾದರಿಗಾಗಿ 5 ಸ್ಟಾರ್ ಸೇಫ್ಟಿ ರೇಟಿಂಗ್ಸ್ ಪಡೆದುಕೊಂಡಿದ್ದ ಮಹೀಂದ್ರಾ ಕಂಪನಿಯು ಇದೀಗ ಥಾರ್ ಹೊಸ ಕಾರು ಮಾದರಿಯಲ್ಲೂ ಗರಿಷ್ಠ ಸೇಫ್ಟಿ ಫೀಚರ್ಸ್ ಜೋಡಿಸುವ ಮೂಲಕ ಗ್ಲೊಬಲ್ ಎನ್‌ಸಿಎಪಿ ಕ್ರ್ಯಾಶ್ ಟೆಸ್ಟಿಂಗ್ 4 ಸ್ಟಾರ್ ಸೇಫ್ಟಿ ರೇಟಿಂಗ್ಸ್ ಪಡೆದುಕೊಂಡಿದೆ.

ನ್ಯೂ ಜನರೇಷನ್ ಥಾರ್ ಎಸ್‌ಯುವಿ ಕಾರು ಮಾದರಿಯು ವಯಸ್ಕ ಪ್ರಯಾಣಿಕರ ಸುರಕ್ಷತೆಯಲ್ಲಿ 4 ಸ್ಟಾರ್ ರೇಟಿಂಗ್ಸ್ ಮತ್ತು ಮಕ್ಕಳ ಸುರಕ್ಷತೆಗಾಗಿ 4 ಸ್ಟಾರ್ ಸೇಫ್ಟಿ ರೇಟಿಂಗ್ಸ್ ಮೂಲಕ ಒಟ್ಟಾರೆ 4 ಸ್ಟಾರ್ ಸೇಫ್ಟಿ ರೇಟಿಂಗ್ಸ್ ಪಡೆದುಕೊಂಡಿದೆ.

ಪ್ರಯಾಣಿಕ ಸುರಕ್ಷತೆ ವಿಚಾರವಾಗಿ ವಯಸ್ಕ ಪ್ರಯಾಣಿಕರಿಗೆ 5 ಸ್ಟಾರ್ ಸೇಫ್ಟಿ ರೇಟಿಂಗ್ ಮತ್ತು ಮಕ್ಕಳ ಸುರಕ್ಷತೆಗಾಗಿ 4 ಸ್ಟಾರ್ ರೇಟಿಂಗ್ಸ್ ಪಡೆದುಕೊಂಡಿದ್ದ ಎಕ್ಸ್‌ಯುವಿ300 ಮಾದರಿಗಿಂತಲೂ ಹೊಸ ಥಾರ್ ಕಾರು ಮಾದರಿಯು ವಯಸ್ಕ ಪ್ರಯಾಣಿಕರ ಸುರಕ್ಷತೆಯಲ್ಲಿ ತುಸು ಹಿನ್ನಡೆ ಅನುಭವಿಸಿದ್ದರೂ ಪ್ರತಿಸ್ಪರ್ಧಿ ಕಾರು ಮಾದರಿಗಳಿಂತಲೂ ಉತ್ತಮ ಸೇಫ್ಟಿ ಫೀಚರ್ಸ್ ಪಡೆದುಕೊಂಡಿದೆ.
ಆಕರ್ಷಕ ಬೆಲೆಯೊಂದಿಗೆ ಹಲವಾರು ಹೊಸ ಬದಲಾವಣೆಗಳನ್ನು ಪಡೆದುಕೊಂಡಿರುವ ನ್ಯೂ ಜನರೇಷನ್ ಥಾರ್ ಕಾರು ಮಾದರಿಯು ಇದುವರೆಗೆ ಸುಮಾರು 22 ಸಾವಿರಕ್ಕಿಂತಲೂ ಹೆಚ್ಚು ಬುಕ್ಕಿಂಗ್ ಗಿಟ್ಟಿಸಿಕೊಂಡಿದ್ದು, ಹೊಸ ಕಾರು ಗ್ರಾಹಕರ ಬೇಡಿಕೆಯೆಂತೆ ಎಎಕ್ಸ್ ಮತ್ತು ಎಲ್ಎಕ್ಸ್ ಎನ್ನುವ ಎರಡು ಮಾದರಿಗಳಲ್ಲಿ ಖರೀದಿಗೆ ಲಭ್ಯವಿದೆ.

ಥಾರ್ ಕಾರು ಆರಂಭಿಕ ಆವೃತ್ತಿಯು ಪ್ಯಾನ್ ಇಂಡಿಯಾ ಎಕ್ಸ್‌ಶೋರೂಂ ಪ್ರಕಾರ ಆರಂಭಿಕವಾಗಿ ರೂ. 11.90 ಲಕ್ಷದಿಂದ ಟಾಪ್ ಮಾದರಿಯು ರೂ. 12.95 ಲಕ್ಷ ಬೆಲೆ ಪಡೆದುಕೊಂಡಿದ್ದು, ಅತ್ಯುತ್ತಮ ಫೀಚರ್ಸ್‌ಗಳನ್ನು ಸ್ಟ್ಯಾಂಡರ್ಡ್ ಆಗಿ ಪಡೆದುಕೊಂಡಿದೆ.

ಥಾರ್ ಕಾರು ಮಾದರಿಯಲ್ಲಿ ಮೊದಲ ಬಾರಿಗೆ ಡೀಸೆಲ್ ಎಂಜಿನ್ ಜೊತೆಗೆ ಪೆಟ್ರೋಲ್ ಕಾರಿನ ಆಯ್ಕೆಯನ್ನು ಸಹ ನೀಡಿರುವುದು ಆಫ್-ರೋಡ್ ಕಾರು ಮಾದರಿಯ ಮಾರಾಟದಲ್ಲಿ ಮತ್ತೊಂದು ಹಂತದ ಬದಲಾವಣೆಗೆ ಕಾರಣವಾಗಿದ್ದು, ಲ್ಯಾಡರ್-ಫ್ರೇಮ್ ಚಾರ್ಸಿ ಜೊತೆಗೆ ಹೊಸ ಸಸ್ಪೆಂಷನ್ ಸೌಲಭ್ಯವು ಹೊಸ ಥಾರ್ ಕಾರಿನ ಗುಣಮಟ್ಟ ಮತ್ತು ಕಾರ್ಯಕ್ಷಮತೆ ಹೆಚ್ಚಿಸಿದೆ.
MOST READ: ಪ್ರತಿ ಚಾರ್ಜ್‌ಗೆ ಗರಿಷ್ಠ 509ಕಿ.ಮೀ ಮೈಲೇಜ್ ನೀಡಲಿದೆ ಸ್ಕೋಡಾ ಎನ್ಯಾಕ್ ಎಲೆಕ್ಟ್ರಿಕ್ ಎಸ್‌ಯುವಿ..!

ಹೊಸ ಕಾರಿನ ಒಳಭಾಗದ ಸೌಲಭ್ಯಗಳು ಪ್ರಸ್ತುತ ಮಾದರಿಗಿಂತಲೂ ಹೆಚ್ಚು ಪ್ರೀಮಿಯಂ ಮತ್ತು ಮಾರ್ಡನ್ ವಿನ್ಯಾಸಗಳನ್ನು ಹೊಂದಿದ್ದು, ಆಕರ್ಷಕ ಡ್ಯಾಶ್‌ಬೋರ್ಡ್‌ನೊಂದಿಗೆ ಆ್ಯಪಲ್ ಕಾರ್‌ಪ್ಲೇ ಮತ್ತು ಅಂಡ್ರಾಯಿಡ್ ಆಟೋಗೆ ಸರ್ಪೋಟ್ ಮಾಡಬಲ್ಲ 7-ಇಂಚಿನ ಟಚ್‌ಸ್ಕ್ರೀನ್ ಇನ್ಪೋಟೈನ್‌ಮೆಂಟ್ ಸಿಸ್ಟಂ, ಎಲ್ಲಾ ಮಾದರಿಯ ಹವಾಗುಣವನ್ನು ತಡೆಯಬಲ್ಲ ರೂಫ್ ಮೌಂಟೆಡ್ ಆಡಿಯೋ ಸ್ಪಿಕರ್ಸ್, ಮಲ್ಟಿ ಕಲರ್ ಇನ್ಫಾಮೆಷನ್ ಡಿಸ್‌ಪ್ಲೇ ಮತ್ತು ಸ್ಟೀರಿಂಗ್ ಮೌಟೆಂಟ್ ಕಂಟ್ರೋಲ್ ಸೌಲಭ್ಯ ನೀಡಲಾಗಿದೆ.

ಹೊಸ ಕಾರಿನಲ್ಲಿ ಸುರಕ್ಷತೆಗಾಗಿ ಹಲವಾರು ಸೆಫ್ಟಿ ಫೀಚರ್ಸ್‌ಗಳನ್ನು ಸ್ಟ್ಯಾಂಡರ್ಡ್ ಆಗಿ ನೀಡಲಾಗಿದ್ದು, ಎರಡು ಎಂಜಿನ್ ಆಯ್ಕೆಗಳಲ್ಲೂ 4x4 ಡ್ರೈವ್ ಸಿಸ್ಟಂ, ಕ್ರೂಸ್ ಕಂಟ್ರೋಲ್, 255/65 18-ಇಂಚಿನ ಆಲ್ ಟೆರೆನ್ ಟೈರ್ಸ್, ಡ್ಯುಯಲ್ ಏರ್‌ಬ್ಯಾಗ್, ಎಬಿಎಸ್ ಜೊತೆ ಇಬಿಡಿ, ಐಸೋಫಿಕ್ಸ್ ಚೈಲ್ಡ್ ಸೀಟ್ ಮೌಂಟ್, ಹಿಲ್ ಸ್ಟಾರ್ಟ್ ಅಸಿಸ್ಟ್, ರೋಲ್ ಓವರ್ ಮಿಟಿಗೆಷನ್, ತ್ರೀ ಪಾಯಿಂಟ್ ಸಿಲ್ಟ್ ಬೆಲ್ಟ್, ರಿಯರ್ ವ್ಯೂ ಕ್ಯಾಮೆರಾ ಜೋಡಿಸಲಾಗಿದೆ.
MOST READ: ಭಾರತದಲ್ಲಿ ಎರಡು ಹೊಸ ಎಸ್‌ಯುವಿ ಕಾರು ಮಾದರಿಗಳನ್ನು ಬಿಡುಗಡೆ ಮಾಡಲಿದೆ ಹ್ಯುಂಡೈ

ಹಾಗೆಯೇ ಎಲ್ಇಡಿ ಡಿಆರ್‌ಎಲ್ ಫಾಗ್ ಲ್ಯಾಂಪ್ಸ್, ಎಂಟು ಹಂತಗಳಲ್ಲಿ ಹೊಂದಾಣಿಕೆ ಮಾಡಿಕೊಳ್ಳಬಹುದಾದ ಡ್ರೈವರ್ ಸೀಟ್, ಟೈರ್ ಪ್ರೆಷರ್ ಮಾನಿಟರಿಂಗ್ ಸಿಸ್ಟಂ, ಆಟೋ ಎಸಿ, ಇಎಸ್‌ಪಿ ಮತ್ತು 226-ಎಂಎಂ ಗ್ರೌಂಡ್ ಕ್ಲಿಯೆರೆನ್ಸ್‌ನೊಂದಿಗೆ ಆಫ್ ರೋಡ್‌ನಲ್ಲಿ ಮತ್ತಷ್ಟು ಗಮನಸೆಳೆಯಲಿದೆ.