ನ್ಯೂ ಜನರೇಷನ್ ಥಾರ್ ಕಾರಿನ ಆಫ್ ರೋಡ್ ಪರ್ಫಾಮೆನ್ಸ್ ಟೀಸರ್ ಬಿಡುಗಡೆ

ಮಹೀಂದ್ರಾ ಕಂಪನಿಯು ತನ್ನ ಬಹುನೀರಿಕ್ಷಿತ ನ್ಯೂ ಜನರೇಷನ್ ಥಾರ್ ಎಸ್‌ಯುವಿ ಕಾರು ಮಾದರಿಯನ್ನು ಅಕ್ಟೋಬರ್ 2ರಂದು ಅಧಿಕೃತವಾಗಿ ಬಿಡುಗಡೆ ಮಾಡುತ್ತಿದ್ದು, ಹೊಸ ಕಾರು ಬಿಡುಗಡೆಗೂ ಮುನ್ನ ಹೊಸ ಕಾರಿನ ಆಫ್ ರೋಡ್ ಪರ್ಫಾಮೆನ್ಸ್ ಕುರಿತಾದ ಹೊಸ ಟೀಸರ್ ವಿಡಿಯೋ ಬಿಡುಗಡೆ ಮಾಡಿದೆ.

ನ್ಯೂ ಜನರೇಷನ್ ಥಾರ್ ಕಾರಿನ ಆಫ್ ರೋಡ್ ಪರ್ಫಾಮೆನ್ಸ್ ಟೀಸರ್ ಬಿಡುಗಡೆ

ನ್ಯೂ ಜನರೇಷನ್ ಥಾರ್ ಕಾರು ಮಾದರಿಯು ಈ ಬಾರಿ ಹಲವಾರು ಹೊಸ ಬದಲಾವಣೆಗಳೊಂದಿಗೆ ಮಾರುಕಟ್ಟೆಗೆ ಪ್ರವೇಶಿಸುತ್ತಿದ್ದು, ಥಾರ್ ಕಾರು ಮಾದರಿಯಲ್ಲಿ ಮೊದಲ ಬಾರಿಗೆ ಡೀಸೆಲ್ ಎಂಜಿನ್ ಜೊತೆಗೆ ಪೆಟ್ರೋಲ್ ಕಾರಿನ ಆಯ್ಕೆಯನ್ನು ಸಹ ನೀಡಲಾಗಿದೆ. ಇದು ಆಫ್-ರೋಡ್ ಕಾರು ಮಾದರಿಯ ಮಾರಾಟದಲ್ಲಿ ಮತ್ತೊಂದು ಹಂತದ ಬದಲಾವಣೆಗೆ ಕಾರಣವಾಗಲಿದ್ದು, ಎಸ್‌ಯುವಿ ಕಾರುಗಳ ಮಾರಾಟದಲ್ಲಿ ಭಾರೀ ಬೇಡಿಕೆ ಪಡೆದುಕೊಳ್ಳುವ ನೀರಿಕ್ಷೆಯಲ್ಲಿದೆ.

ನ್ಯೂ ಜನರೇಷನ್ ಥಾರ್ ಕಾರಿನ ಆಫ್ ರೋಡ್ ಪರ್ಫಾಮೆನ್ಸ್ ಟೀಸರ್ ಬಿಡುಗಡೆ

ಹೊಸ ಥಾರ್‌ನಲ್ಲಿ ಮರುವಿನ್ಯಾಸಗೊಳಿಸಲಾದ ಸೆವೆನ್ ಸ್ಲಾಟ್ ಗ್ರಿಲ್, ವೃತ್ತಾಕಾರದವಾದ ಹೆಡ್‌ಲ್ಯಾಂಪ್, 18-ಇಂಚಿನ ಆಕರ್ಷಕ ಅಲಾಯ್ ವೀಲ್ಹ್, ಡ್ಯುಯಲ್ ಬಂಪರ್, ಸ್ಕಫ್ ಪ್ಲೇಟ್, ಬಾಕ್ಸಿ ಮಾದರಿಯಲ್ಲಿ ಟೈಲ್ ಲೈಟ್‌ನೊಂದಿಗೆ ಮಾರ್ಡನ್ ಶೈಲಿ ಪಡೆದುಕೊಂಡಿದೆ.

ದೂರದಿಂದ ನೋಡಿದಾಗ ಹೊಸ ಥಾರ್ ಕಾರಿನ ವಿನ್ಯಾಸಗಳು ಜೀಪ್ ರ‍್ಲ್ಯಾಂಗ್ಲರ್ ಮಾದರಿಯ ಹೋಲಿಕೆ ಪಡೆದುಕೊಳ್ಳುತ್ತಾದರೂ ಹಲವು ತಾಂತ್ರಿಕ ಸೌಲಭ್ಯಗಳು ಮಹೀಂದ್ರಾ ವೈಶಿಷ್ಟ್ಯತೆಗಳು ಗ್ರಾಹಕರನ್ನು ಸೆಳೆಯಲಿದ್ದು, ಲ್ಯಾಡರ್-ಫ್ರೇಮ್ ಚಾರ್ಸಿ ಜೊತೆಗೆ ಹೊಸ ಸಸ್ಪೆಂಷನ್‌ ಸೌಲಭ್ಯವು ಹೊಸ ಥಾರ್ ಕಾರಿನ ಗುಣಮಟ್ಟ ಮತ್ತು ಕಾರ್ಯಕ್ಷಮತೆಯನ್ನು ಹೆಚ್ಚಿಸಿವೆ.

ನ್ಯೂ ಜನರೇಷನ್ ಥಾರ್ ಕಾರಿನ ಆಫ್ ರೋಡ್ ಪರ್ಫಾಮೆನ್ಸ್ ಟೀಸರ್ ಬಿಡುಗಡೆ

ಇನ್ನು ಕಾರಿನ ಒಳಭಾಗದ ಸೌಲಭ್ಯಗಳು ಪ್ರಸ್ತುತ ಮಾದರಿಗಿಂತಲೂ ಹೆಚ್ಚು ಪ್ರೀಮಿಯಂ ಮತ್ತು ಮಾರ್ಡನ್ ವಿನ್ಯಾಸಗಳನ್ನು ಹೊಂದಿದ್ದು, ಆಕರ್ಷಕ ಡ್ಯಾಶ್‌ಬೋರ್ಡ್‌ನೊಂದಿಗೆ ಆ್ಯಪಲ್ ಕಾರ್‌ಪ್ಲೇ ಮತ್ತು ಅಂಡ್ರಾಯಿಡ್ ಆಟೋಗೆ ಸರ್ಪೋಟ್ ಮಾಡಬಲ್ಲ 7-ಇಂಚಿನ ಟಚ್‌ಸ್ಕ್ರೀನ್ ಇನ್ಪೋಟೈನ್‌ಮೆಂಟ್ ಸಿಸ್ಟಂ, ಎಲ್ಲಾ ಮಾದರಿಯ ಹವಾಗುಣವನ್ನು ತಡೆಯಬಲ್ಲ ರೂಫ್ ಮೌಂಟೆಡ್ ಆಡಿಯೋ ಸ್ಪಿಕರ್ಸ್, ಮಲ್ಟಿ ಕಲರ್ ಇನ್ಫಾಮೆಷನ್ ಡಿಸ್‌ಪ್ಲೇ ಮತ್ತು ಸ್ಟೀರಿಂಗ್ ಮೌಟೆಂಟ್ ಕಂಟ್ರೋಲ್ ಸೌಲಭ್ಯ ನೀಡಲಾಗಿದೆ.

ನ್ಯೂ ಜನರೇಷನ್ ಥಾರ್ ಕಾರಿನ ಆಫ್ ರೋಡ್ ಪರ್ಫಾಮೆನ್ಸ್ ಟೀಸರ್ ಬಿಡುಗಡೆ

ಜೊತೆಗೆ 50:50 ಅನುಪಾತದ ರಿಯರ್ ಸೀಟುಗಳಲ್ಲೂ ಮಡಿಕೆ ಮಾಡಬಹುದಾದ ಸೌಲಭ್ಯ ನೀಡಲಾಗಿದ್ದು, ವೆರಿಯೆಂಟ್‌ಗಳಿಗೆ ಅನುಗುಣವಾಗಿ ಹಾರ್ಡ್ ಟಾಪ್ ಮತ್ತು ಸಾಫ್ಟ್ ಟಾಪ್ ಮಾದರಿಗಳನ್ನು ಆಯ್ಕೆ ಮಾಡಿಕೊಳ್ಳಬಹುದು.

ನ್ಯೂ ಜನರೇಷನ್ ಥಾರ್ ಕಾರಿನ ಆಫ್ ರೋಡ್ ಪರ್ಫಾಮೆನ್ಸ್ ಟೀಸರ್ ಬಿಡುಗಡೆ

ಹೊಸ ಥಾರ್‌ನಲ್ಲಿ ಬಿಎಸ್-6 ಎಂಜಿನ್ ಪ್ರೇರಿತ 2.2-ಲೀಟರ್ ಡೀಸೆಲ್ ಎಂಜಿನ್ ಮತ್ತು ಹೊಸದಾಗಿ ಅಭಿವೃದ್ದಿಗೊಳಿಸಲಾದ 2.0-ಲೀಟರ್ ಎಂ-ಸ್ಟಾಲಿನ್ ಪೆಟ್ರೋಲ್ ಎಂಜಿನ್ ನೀಡಲಾಗಿದ್ದು, ಡೀಸೆಲ್ ಮಾದರಿಯು 132-ಬಿಎಚ್‌ಪಿ, 300-ಎನ್ಎಂ ಟಾರ್ಕ್ ಉತ್ಪಾದನೆ ಮಾಡಿದ್ದಲ್ಲಿ ಪೆಟ್ರೋಲ್ ಮಾದರಿಯು 152-ಬಿಎಚ್‌ಪಿ, 320-ಎನ್ಎಂ ಟಾರ್ಕ್ ಉತ್ಪಾದನೆ ಮಾಡಬಲ್ಲದು.

MOST READ: ಭಾರತದಲ್ಲಿ ಎರಡು ಹೊಸ ಎಸ್‌ಯುವಿ ಕಾರು ಮಾದರಿಗಳನ್ನು ಬಿಡುಗಡೆ ಮಾಡಲಿದೆ ಹ್ಯುಂಡೈ

ನ್ಯೂ ಜನರೇಷನ್ ಥಾರ್ ಕಾರಿನ ಆಫ್ ರೋಡ್ ಪರ್ಫಾಮೆನ್ಸ್ ಟೀಸರ್ ಬಿಡುಗಡೆ

ಇನ್ನುಳಿದಂತೆ ಹೊಸ ಕಾರಿನಲ್ಲಿ ಸುರಕ್ಷತೆಗಾಗಿ ಹಲವಾರು ಸೆಫ್ಟಿ ಫೀಚರ್ಸ್‌ಗಳನ್ನು ಸ್ಟ್ಯಾಂಡರ್ಡ್ ಆಗಿ ನೀಡಲಾಗಿದ್ದು, ಎರಡು ಎಂಜಿನ್ ಆಯ್ಕೆಗಳಲ್ಲೂ 4x4 ಡ್ರೈವ್ ಸಿಸ್ಟಂ, ಕ್ರೂಸ್ ಕಂಟ್ರೋಲ್, 255/65 18-ಇಂಚಿನ ಆಲ್ ಟೆರೆನ್ ಟೈರ್ಸ್, ಡ್ಯುಯಲ್ ಏರ್‌ಬ್ಯಾಗ್, ಎಬಿಎಸ್ ಜೊತೆ ಇಬಿಡಿ, ಐಸೋಫಿಕ್ಸ್ ಚೈಲ್ಡ್ ಸೀಟ್ ಮೌಂಟ್, ಹಿಲ್ ಸ್ಟಾರ್ಟ್ ಅಸಿಸ್ಟ್, ರೋಲ್ ಓವರ್ ಮಿಟಿಗೆಷನ್, ತ್ರೀ ಪಾಯಿಂಟ್ ಸಿಲ್ಟ್ ಬೆಲ್ಟ್, ರಿಯರ್ ವ್ಯೂ ಕ್ಯಾಮೆರಾ ಜೋಡಿಸಲಾಗಿದೆ.

ನ್ಯೂ ಜನರೇಷನ್ ಥಾರ್ ಕಾರಿನ ಆಫ್ ರೋಡ್ ಪರ್ಫಾಮೆನ್ಸ್ ಟೀಸರ್ ಬಿಡುಗಡೆ

ಹೊಸ ಕಾರು ಖರೀದಿದಾಗಾಗಿ ಈಗಾಗಲೇ ಬುಕ್ಕಿಂಗ್ ಪ್ರಕ್ರಿಯೆಯನ್ನು ಸಹ ಆರಂಭಿಸಲಾಗಿದ್ದು, ಹೊಸ ಕಾರಿನ ಬೆಲೆ ಮಾಹಿತಿ ಕುರಿತು ಈಗಾಗಲೇ ಭಾರೀ ಚರ್ಚೆಗಳು ನಡೆಯುತ್ತಿವೆ.

MOST READ: ಪ್ರತಿ ಚಾರ್ಜ್‌ಗೆ ಗರಿಷ್ಠ 509ಕಿ.ಮೀ ಮೈಲೇಜ್ ನೀಡಲಿದೆ ಸ್ಕೋಡಾ ಎನ್ಯಾಕ್ ಎಲೆಕ್ಟ್ರಿಕ್ ಎಸ್‌ಯುವಿ..!

ನ್ಯೂ ಜನರೇಷನ್ ಥಾರ್ ಕಾರಿನ ಆಫ್ ರೋಡ್ ಪರ್ಫಾಮೆನ್ಸ್ ಟೀಸರ್ ಬಿಡುಗಡೆ

ಮಾಹಿತಿಯೊಂದರ ಪ್ರಕಾರ, ಹೊಸ ಕಾರು ದೆಹಲಿ ಎಕ್ಸ್‌ಶೋರೂಂ ದರದಂತೆ ಆರಂಭಿಕವಾಗಿ ರೂ. 9.75 ಲಕ್ಷ ಮತ್ತು ಟಾಪ್ ಎಂಡ್ ಮಾದರಿಯು ರೂ.12.25 ಲಕ್ಷ ಬೆಲೆ ಹೊಂದುವ ಸಾಧ್ಯತೆಗಳಿದ್ದು, ಆಫ್-ರೋಡ್ ಕೌಶಲ್ಯಕ್ಕೆ ಪೂರಕವಾದ ಹಲವಾರು ತಾಂತ್ರಿಕ ಅಂಶಗಳನ್ನು ಸ್ಟ್ಯಾಂಡರ್ಡ್ ಆಗಿ ಪಡೆದುಕೊಳ್ಳಲಿದೆ.

Article Published On: Saturday, September 19, 2020, 10:52 [IST]
English summary
New Mahindra Thar Show Off Its Off-Road Capabilities. Read in Kannada.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+