ಬಿಡುಗಡೆಗಾಗಿ ಅಂತಿಮ ಹಂತದ ರೋಡ್ ಟೆಸ್ಟಿಂಗ್ ನಡೆಸಿದ ನ್ಯೂ ಜನರೇಷನ್ ಥಾರ್

ಅಗಸ್ಟ್ 15ರಂದು ಹೊಸ ತಲೆಮಾರಿನ ಥಾರ್ ಆಫ್ ರೋಡ್ ಎಸ್‌ಯುವಿ ಮಾದರಿಯನ್ನು ಅನಾವರಣಗೊಳಿಸಿದ್ದ ಮಹೀಂದ್ರಾ ಕಂಪನಿಯು ಅಕ್ಟೋಬರ್ 2ರಂದು ಬಿಡುಗಡೆ ಮಾಡುವುದಾಗಿ ಹೇಳಿಕೊಂಡಿದ್ದು, ಹೊಸ ಕಾರು ಬಿಡುಗಡೆ ಕೆಲವೇ ದಿನಗಳ ಬಾಕಿಯಿರುವಾಗಲು ರೋಡ್ ಟೆಸ್ಟಿಂಗ್ ಪ್ರಕ್ರಿಯೆಗಳಲ್ಲಿ ಸಾಫ್ಟ್ ಟಾಪ್ ಎಎಕ್ಸ್ ಮಾದರಿಯು ಭಾಗಿಯಾಗಿರುವುದು ಕಂಡುಬಂದಿದೆ.

ಬಿಡುಗಡೆಗಾಗಿ ಅಂತಿಮ ಹಂತದ ರೋಡ್ ಟೆಸ್ಟಿಂಗ್ ನಡೆಸಿದ ಹೊಸ ಥಾರ್

ನ್ಯೂ ಜನರೇಷನ್ ಕಾರು ಮಾದರಿಯಲ್ಲಿ ಈ ಬಾರಿ ಪ್ರಮುಖ ಬದಲಾವಣೆ ಅಂದರೆ ಅದು ಎಂಜಿನ್ ಆಯ್ಕೆ. ಥಾರ್ ಕಾರು ಮಾದರಿಯಲ್ಲಿ ಮೊದಲ ಬಾರಿಗೆ ಡೀಸೆಲ್ ಎಂಜಿನ್ ಜೊತೆಗೆ ಪೆಟ್ರೋಲ್ ಕಾರಿನ ಆಯ್ಕೆಯನ್ನು ಸಹ ನೀಡಿರುವುದು ಆಫ್-ರೋಡ್ ಕಾರು ಮಾದರಿಯ ಮಾರಾಟದಲ್ಲಿ ಮತ್ತೊಂದು ಹಂತದ ಬದಲಾವಣೆಗೆ ಕಾರಣವಾಗಲಿದೆ ಎನ್ನಬಹುದು. ಹೊಸ ಕಾರು ಖರೀದಿದಾಗಾಗಿ ಈಗಾಗಲೇ ಬುಕ್ಕಿಂಗ್ ಪ್ರಕ್ರಿಯೆಯನ್ನು ಸಹ ಆರಂಭಿಸಲಾಗಿದ್ದು, ಪೆಟ್ರೋಲ್ ಮತ್ತು ಡೀಸೆಲ್ ಎರಡು ಎಂಜಿನ್ ಆಯ್ಕೆಯೊಂದಿಗೆ ಖರೀದಿಗೆ ಲಭ್ಯವಾಗಲಿರುವ ಹೊಸ ಕಾರು ಆಕರ್ಷಕ ಬೆಲೆಯೊಂದಿಗೆ ಮಾರುಕಟ್ಟೆ ಪ್ರವೇಶಿಸಲಿದೆ.

ಬಿಡುಗಡೆಗಾಗಿ ಅಂತಿಮ ಹಂತದ ರೋಡ್ ಟೆಸ್ಟಿಂಗ್ ನಡೆಸಿದ ಹೊಸ ಥಾರ್

ಇದರ ಹೊರತಾಗಿ ಹೊಸ ಕಾರಿನ ಹೊರಭಾಗದ ವಿನ್ಯಾಸದಲ್ಲೂ ಸಾಕಷ್ಟು ಬದಲಾವಣೆಗಳನ್ನು ಪರಿಚಯಿಸಲಾಗಿದ್ದು, ಮರುವಿನ್ಯಾಸಗೊಳಿಸಲಾದ ಸೆವೆನ್ ಸ್ಲಾಟ್ ಗ್ರಿಲ್, ವೃತ್ತಾಕಾರದವಾದ ಹೆಡ್‌ಲ್ಯಾಂಪ್, 18-ಇಂಚಿನ ಆಕರ್ಷಕ ಅಲಾಯ್ ವೀಲ್ಹ್, ಡ್ಯುಯಲ್ ಬಂಪರ್, ಸ್ಕಫ್ ಪ್ಲೇಟ್, ಬಾಕ್ಸಿ ಮಾದರಿಯಲ್ಲಿ ಟೈಲ್ ಲೈಟ್‌ನೊಂದಿಗೆ ಮಾರ್ಡನ್ ಶೈಲಿ ಪಡೆದುಕೊಂಡಿದೆ.

ಬಿಡುಗಡೆಗಾಗಿ ಅಂತಿಮ ಹಂತದ ರೋಡ್ ಟೆಸ್ಟಿಂಗ್ ನಡೆಸಿದ ಹೊಸ ಥಾರ್

ದೂರದಿಂದ ನೋಡಿದಾಗ ಹೊಸ ಥಾರ್ ಕಾರಿನ ವಿನ್ಯಾಸಗಳು ಜೀಪ್ ರ‍್ಲ್ಯಾಂಗ್ಲರ್ ಮಾದರಿಯ ಹೋಲಿಕೆ ಪಡೆದುಕೊಳ್ಳುತ್ತಾದರೂ ಹಲವು ತಾಂತ್ರಿಕ ಸೌಲಭ್ಯಗಳು ಮಹೀಂದ್ರಾ ವೈಶಿಷ್ಟ್ಯತೆಗಳು ಗ್ರಾಹಕರನ್ನು ಸೆಳೆಯಲಿದ್ದು, ಲ್ಯಾಡರ್-ಫ್ರೇಮ್ ಚಾರ್ಸಿ ಜೊತೆಗೆ ಹೊಸ ಸಸ್ಪೆಂಷನ್‌ ಸೌಲಭ್ಯವು ಹೊಸ ಥಾರ್ ಕಾರಿನ ಗುಣಮಟ್ಟ ಮತ್ತು ಕಾರ್ಯಕ್ಷಮತೆ ಹೆಚ್ಚಿಸಿವೆ.

ಬಿಡುಗಡೆಗಾಗಿ ಅಂತಿಮ ಹಂತದ ರೋಡ್ ಟೆಸ್ಟಿಂಗ್ ನಡೆಸಿದ ಹೊಸ ಥಾರ್

ಇನ್ನು ಕಾರಿನ ಒಳಭಾಗದ ಸೌಲಭ್ಯಗಳು ಪ್ರಸ್ತುತ ಮಾದರಿಗಿಂತಲೂ ಹೆಚ್ಚು ಪ್ರೀಮಿಯಂ ಮತ್ತು ಮಾರ್ಡನ್ ವಿನ್ಯಾಸಗಳನ್ನು ಹೊಂದಿದ್ದು, ಆಕರ್ಷಕ ಡ್ಯಾಶ್‌ಬೋರ್ಡ್‌ನೊಂದಿಗೆ ಆ್ಯಪಲ್ ಕಾರ್‌ಪ್ಲೇ ಮತ್ತು ಅಂಡ್ರಾಯಿಡ್ ಆಟೋಗೆ ಸರ್ಪೋಟ್ ಮಾಡಬಲ್ಲ 7-ಇಂಚಿನ ಟಚ್‌ಸ್ಕ್ರೀನ್ ಇನ್ಪೋಟೈನ್‌ಮೆಂಟ್ ಸಿಸ್ಟಂ, ಎಲ್ಲಾ ಮಾದರಿಯ ಹವಾಗುಣವನ್ನು ತಡೆಯಬಲ್ಲ ರೂಫ್ ಮೌಂಟೆಡ್ ಆಡಿಯೋ ಸ್ಪಿಕರ್ಸ್, ಮಲ್ಟಿ ಕಲರ್ ಇನ್ಫಾಮೆಷನ್ ಡಿಸ್‌ಪ್ಲೇ ಮತ್ತು ಸ್ಟೀರಿಂಗ್ ಮೌಟೆಂಟ್ ಕಂಟ್ರೋಲ್ ಸೌಲಭ್ಯ ನೀಡಲಾಗಿದೆ.

MOST READ: ಪ್ರತಿ ಚಾರ್ಜ್‌ಗೆ ಗರಿಷ್ಠ 509ಕಿ.ಮೀ ಮೈಲೇಜ್ ನೀಡಲಿದೆ ಸ್ಕೋಡಾ ಎನ್ಯಾಕ್ ಎಲೆಕ್ಟ್ರಿಕ್ ಎಸ್‌ಯುವಿ..!

ಬಿಡುಗಡೆಗಾಗಿ ಅಂತಿಮ ಹಂತದ ರೋಡ್ ಟೆಸ್ಟಿಂಗ್ ನಡೆಸಿದ ಹೊಸ ಥಾರ್

ಜೊತೆಗೆ 50:50 ಅನುಪಾತದ ರಿಯರ್ ಸೀಟುಗಳಲ್ಲೂ ಮಡಿಕೆ ಮಾಡಬಹುದಾದ ಸೌಲಭ್ಯ ನೀಡಲಾಗಿದ್ದು, ವೆರಿಯೆಂಟ್‌ಗಳಿಗೆ ಅನುಗುಣವಾಗಿ ಹಾರ್ಡ್ ಟಾಪ್ ಮತ್ತು ಸಾಫ್ಟ್ ಟಾಪ್ ಮಾದರಿಗಳನ್ನು ಆಯ್ಕೆ ಮಾಡಿಕೊಳ್ಳಬಹುದು.

ಬಿಡುಗಡೆಗಾಗಿ ಅಂತಿಮ ಹಂತದ ರೋಡ್ ಟೆಸ್ಟಿಂಗ್ ನಡೆಸಿದ ಹೊಸ ಥಾರ್

ಹೊಸ ಥಾರ್‌ನಲ್ಲಿ ಬಿಎಸ್-6 ಎಂಜಿನ್ ಪ್ರೇರಿತ 2.2-ಲೀಟರ್ ಡೀಸೆಲ್ ಎಂಜಿನ್ ಮತ್ತು ಹೊಸದಾಗಿ ಅಭಿವೃದ್ದಿಗೊಳಿಸಲಾದ 2.0-ಲೀಟರ್ ಎಂ-ಸ್ಟಾಲಿನ್ ಪೆಟ್ರೋಲ್ ಎಂಜಿನ್ ನೀಡಲಾಗಿದ್ದು, ಡೀಸೆಲ್ ಮಾದರಿಯು 132-ಬಿಎಚ್‌ಪಿ, 300-ಎನ್ಎಂ ಟಾರ್ಕ್ ಉತ್ಪಾದನೆ ಮಾಡಿದ್ದಲ್ಲಿ ಪೆಟ್ರೋಲ್ ಮಾದರಿಯು 152-ಬಿಎಚ್‌ಪಿ, 320-ಎನ್ಎಂ ಟಾರ್ಕ್ ಉತ್ಪಾದನೆ ಮಾಡಬಲ್ಲದು.

MOST READ: ಸೆಪ್ಟೆಂಬರ್‌ನಲ್ಲಿ ಬಿಡುಗಡೆಯಾಗಲಿರುವ ಟಾಪ್ 5 ಕಾರುಗಳಿವು..!

ಬಿಡುಗಡೆಗಾಗಿ ಅಂತಿಮ ಹಂತದ ರೋಡ್ ಟೆಸ್ಟಿಂಗ್ ನಡೆಸಿದ ಹೊಸ ಥಾರ್

ಇನ್ನುಳಿದಂತೆ ಹೊಸ ಕಾರಿನಲ್ಲಿ ಸುರಕ್ಷತೆಗಾಗಿ ಹಲವಾರು ಸೆಫ್ಟಿ ಫೀಚರ್ಸ್‌ಗಳನ್ನು ಸ್ಟ್ಯಾಂಡರ್ಡ್ ಆಗಿ ನೀಡಲಾಗಿದ್ದು, ಎರಡು ಎಂಜಿನ್ ಆಯ್ಕೆಗಳಲ್ಲೂ 4x4 ಡ್ರೈವ್ ಸಿಸ್ಟಂ, ಕ್ರೂಸ್ ಕಂಟ್ರೋಲ್, 255/65 18-ಇಂಚಿನ ಆಲ್ ಟೆರೆನ್ ಟೈರ್ಸ್, ಡ್ಯುಯಲ್ ಏರ್‌ಬ್ಯಾಗ್, ಎಬಿಎಸ್ ಜೊತೆ ಇಬಿಡಿ, ಐಸೋಫಿಕ್ಸ್ ಚೈಲ್ಡ್ ಸೀಟ್ ಮೌಂಟ್, ಹಿಲ್ ಸ್ಟಾರ್ಟ್ ಅಸಿಸ್ಟ್, ರೋಲ್ ಓವರ್ ಮಿಟಿಗೆಷನ್, ತ್ರೀ ಪಾಯಿಂಟ್ ಸಿಲ್ಟ್ ಬೆಲ್ಟ್, ರಿಯರ್ ವ್ಯೂ ಕ್ಯಾಮೆರಾ ಜೋಡಿಸಲಾಗಿದೆ.

Article Published On: Saturday, September 12, 2020, 8:45 [IST]
English summary
2020 Mahindra Thar AX Soft Top Petrol Spied.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+