ಸಿಲ್ವರ್ ಬಣ್ಣದೊಂದಿಗೆ ರೋಡ್ ಟೆಸ್ಟಿಂಗ್ ನಡೆಸಿದ ನ್ಯೂ ಜನರೇಷನ್ ಥಾರ್
ಮಹೀಂದ್ರಾ ಕಂಪನಿಯು ಕಳೆದ ಅಕ್ಟೋಬರ್ 2ರಂದು ಹೊಸ ತಲೆಮಾರಿನ ಥಾರ್ ಎಸ್‌ಯುವಿ ಬಿಡುಗಡೆಯ ಮೂಲಕ ಆಫ್ ರೋಡ್ ಎಸ್‌ಯುವಿ ಕಾರು ಮಾರಾಟದಲ್ಲಿ ಹೊಸ ಸಂಚಲನಕ್ಕೆ ಕಾರಣವಾಗಿದ್ದು, ಇದೀಗ ಹೊಸ ಕಾರಿನಲ್ಲಿ ಮತ್ತೊಂದು ಹೊಸ ವೆರಿಯೆಂಟ್ ಬಿಡುಗಡೆ ಮಾಡುವ ಸುಳಿವು ನೀಡಿದೆ.

ಹೊಸ ತಲೆಮಾರಿನ ಥಾರ್ ಮೂಲಕ ಭಾರೀ ಬೇಡಿಕೆ ಪಡೆದುಕೊಳ್ಳುತ್ತಿರುವ ಮಹೀಂದ್ರಾ ಕಂಪನಿಯು ಶೀಘ್ರದಲ್ಲೇ ಥಾರ್ ಕಾರಿನ ಮತ್ತೊಂದು ಹೊಸ ವೆರಿಯೆಂಟ್ ಬಿಡುಗಡೆ ಮಾಡುವ ಸಿದ್ದತೆಯಲ್ಲಿದ್ದು, ಹೊಸ ವೆರಿಯೆಂಟ್ ಅನ್ನು ಸಿಲ್ವರ್ ಬಣ್ಣದೊಂದಿಗೆ ರೋಡ್ ಟೆಸ್ಟಿಂಗ್ ನಡೆಸುತ್ತಿರುವುದು ಕಂಡುಬಂದಿದೆ. ಆದರೆ ಹೊಸ ಮಾದರಿಯು ಕೇವಲ ಹೊಸ ಬಣ್ಣದ ಆಯ್ಕೆಯೊಂದಿಗೆ ಬಿಡುಗಡೆಯಾಗಲಿದೆಯಾ ಅಥವಾ ಹೊಸ ವೆರಿಯೆಂಟ್ ಪಡೆದುಕೊಳ್ಳುತ್ತಾ ಎನ್ನುವ ಸ್ಪಷ್ಟ ಮಾಹಿತಿಗಳಿಲ್ಲ.

ಶೀಘ್ರದಲ್ಲೇ ಹೊಸ ಥಾರ್ ಮಾದರಿಯು ಅಧಿಕೃತವಾಗಿ ಖರೀದಿ ಲಭ್ಯವಾಗಲಿದ್ದು, ಥಾರ್ ಆರಂಭಿಕ ಆವೃತ್ತಿಯ ಸ್ಥಗಿತದ ನಂತರ ಹೊಸ ಎಂಟ್ರಿ ಲೆವಲ್ ಮಾದರಿಯನ್ನು ಪರಿಚಯಿಸುತ್ತಿರಬಹುದು ಎನ್ನಲಾಗಿದೆ.

ಇನ್ನು ಗ್ರಾಹಕರ ಬೇಡಿಕೆಯೆಂತೆ ಥಾರ್ ಆರಂಭಿಕ ಆವೃತ್ತಿಗಳಾದ ಎಎಕ್ಸ್ ಪೆಟ್ರೋಲ್ ಸ್ಟ್ಯಾಂಡರ್ಡ್ ಸಿಕ್ಸ್ ಸೀಟರ್, ಎಎಕ್ಸ್ ಸಿಕ್ಸ್ ಸೀಟರ್ ಸಾಫ್ಟ್ ಟಾಪ್ ಮತ್ತು ಎಎಕ್ಸ್ ಸಿಕ್ಸ್ ಸೀಟರ್ ಡೀಸೆಲ್ ಸಾಫ್ಟ್ ಟಾಪ್ ಮಾದರಿಗಳನ್ನು ಸ್ಥಗಿತಗೊಳಿಸಿರುವ ಕಂಪನಿಯು ಹೈ ಎಂಡ್ ಮಾದರಿಗಳ ಮಾರಾಟದ ಮೇಲೆ ಹೆಚ್ಚು ಗಮನಹರಿಸಿದೆ.

ವೆರಿಯೆಂಟ್ ಬದಲಾವಣೆ ನಂತರ ಥಾರ್ ಕಾರು ಆರಂಭಿಕ ಆವೃತ್ತಿಯು ಪ್ಯಾನ್ ಇಂಡಿಯಾ ಎಕ್ಸ್‌ಶೋರೂಂ ಪ್ರಕಾರ ಆರಂಭಿಕವಾಗಿ ರೂ. 11.90 ಲಕ್ಷದಿಂದ ಟಾಪ್ ಮಾದರಿಯು ರೂ. 12.95 ಲಕ್ಷ ಬೆಲೆ ಪಡೆದುಕೊಂಡಿದ್ದು, ಬೆಲೆ ಬದಲಾವಣೆಯ ನಂತರ ಆರಂಭಿಕ ಕಾರು ಮಾದರಿಯು ಮತ್ತಷ್ಟು ದುಬಾರಿಯಾಗಲಿದೆ. ಥಾರ್ ಕಾರು ಮಾದರಿಯಲ್ಲಿ ಮೊದಲ ಬಾರಿಗೆ ಡೀಸೆಲ್ ಎಂಜಿನ್ ಜೊತೆಗೆ ಪೆಟ್ರೋಲ್ ಕಾರಿನ ಆಯ್ಕೆಯನ್ನು ಸಹ ನೀಡಿರುವುದು ಆಫ್-ರೋಡ್ ಕಾರು ಮಾದರಿಯ ಮಾರಾಟದಲ್ಲಿ ಮತ್ತೊಂದು ಹಂತದ ಬದಲಾವಣೆಗೆ ಕಾರಣವಾಗಿದೆ ಎನ್ನಬಹುದು.

ಲ್ಯಾಡರ್-ಫ್ರೇಮ್ ಚಾರ್ಸಿ ಜೊತೆಗೆ ಹೊಸ ಸಸ್ಪೆಂಷನ್ ಸೌಲಭ್ಯವು ಹೊಸ ಥಾರ್ ಕಾರಿನ ಗುಣಮಟ್ಟ ಮತ್ತು ಕಾರ್ಯಕ್ಷಮತೆ ಹೆಚ್ಚಿಸಿದ್ದು, ಇದು ಆಫ್ ರೋಡ್ ಪ್ರೇಮಿಗಳ ಪ್ರಮುಖ ಆಕರ್ಷಣೆಯಾಗಿದೆ.
MOST READ: ಭಾರತದಲ್ಲಿ ಎರಡು ಹೊಸ ಎಸ್‌ಯುವಿ ಕಾರು ಮಾದರಿಗಳನ್ನು ಬಿಡುಗಡೆ ಮಾಡಲಿದೆ ಹ್ಯುಂಡೈ

ಹೊಸ ಕಾರಿನ ಒಳಭಾಗದ ಸೌಲಭ್ಯಗಳು ಪ್ರಸ್ತುತ ಮಾದರಿಗಿಂತಲೂ ಹೆಚ್ಚು ಪ್ರೀಮಿಯಂ ಮತ್ತು ಮಾರ್ಡನ್ ವಿನ್ಯಾಸಗಳನ್ನು ಹೊಂದಿದ್ದು, ಆಕರ್ಷಕ ಡ್ಯಾಶ್‌ಬೋರ್ಡ್‌ನೊಂದಿಗೆ ಆ್ಯಪಲ್ ಕಾರ್‌ಪ್ಲೇ ಮತ್ತು ಅಂಡ್ರಾಯಿಡ್ ಆಟೋಗೆ ಸರ್ಪೋಟ್ ಮಾಡಬಲ್ಲ 7-ಇಂಚಿನ ಟಚ್‌ಸ್ಕ್ರೀನ್ ಇನ್ಪೋಟೈನ್‌ಮೆಂಟ್ ಸಿಸ್ಟಂ, ಎಲ್ಲಾ ಮಾದರಿಯ ಹವಾಗುಣವನ್ನು ತಡೆಯಬಲ್ಲ ರೂಫ್ ಮೌಂಟೆಡ್ ಆಡಿಯೋ ಸ್ಪಿಕರ್ಸ್, ಮಲ್ಟಿ ಕಲರ್ ಇನ್ಫಾಮೆಷನ್ ಡಿಸ್‌ಪ್ಲೇ ಮತ್ತು ಸ್ಟೀರಿಂಗ್ ಮೌಟೆಂಟ್ ಕಂಟ್ರೋಲ್ ಸೌಲಭ್ಯ ನೀಡಲಾಗಿದೆ.

ಹೊಸ ಕಾರಿನಲ್ಲಿ ಸುರಕ್ಷತೆಗಾಗಿ ಹಲವಾರು ಸೆಫ್ಟಿ ಫೀಚರ್ಸ್‌ಗಳನ್ನು ಸ್ಟ್ಯಾಂಡರ್ಡ್ ಆಗಿ ನೀಡಲಾಗಿದ್ದು, ಎರಡು ಎಂಜಿನ್ ಆಯ್ಕೆಗಳಲ್ಲೂ 4x4 ಡ್ರೈವ್ ಸಿಸ್ಟಂ, ಕ್ರೂಸ್ ಕಂಟ್ರೋಲ್, 255/65 18-ಇಂಚಿನ ಆಲ್ ಟೆರೆನ್ ಟೈರ್ಸ್, ಡ್ಯುಯಲ್ ಏರ್‌ಬ್ಯಾಗ್, ಎಬಿಎಸ್ ಜೊತೆ ಇಬಿಡಿ, ಐಸೋಫಿಕ್ಸ್ ಚೈಲ್ಡ್ ಸೀಟ್ ಮೌಂಟ್, ಹಿಲ್ ಸ್ಟಾರ್ಟ್ ಅಸಿಸ್ಟ್, ರೋಲ್ ಓವರ್ ಮಿಟಿಗೆಷನ್, ತ್ರೀ ಪಾಯಿಂಟ್ ಸಿಲ್ಟ್ ಬೆಲ್ಟ್, ರಿಯರ್ ವ್ಯೂ ಕ್ಯಾಮೆರಾ ಜೋಡಿಸಲಾಗಿದೆ.
MOST READ: 2020ರ ಅವಧಿಯಲ್ಲಿ ಬಿಡುಗಡೆಯಾದ ಪ್ರಮುಖ ಹತ್ತು ಕಾರುಗಳಿವು..!

ಹೊಸ ಥಾರ್ ಕಾರು ಮಾದರಿಯು ಬಿಎಸ್-6 ಎಂಜಿನ್ ಪ್ರೇರಿತ 2.2-ಲೀಟರ್ ಡೀಸೆಲ್ ಎಂಜಿನ್ ಮತ್ತು ಹೊಸದಾಗಿ ಅಭಿವೃದ್ದಿಗೊಳಿಸಲಾದ 2.0-ಲೀಟರ್ ಎಂ-ಸ್ಟಾಲಿನ್ ಪೆಟ್ರೋಲ್ ಎಂಜಿನ್ ಆಯ್ಕೆ ಹೊಂದಿದ್ದು, ಎರಡು ಎಂಜಿನ್ ಮಾದರಿಗಳಲ್ಲೂ 6-ಸ್ಪೀಡ್ ಮ್ಯಾನುವಲ್ ಮತ್ತು 6-ಸ್ಪೀಡ್ ಟಾರ್ಕ್ ಕನ್ವರ್ಟರ್ ಆಟೋಮ್ಯಾಟಿಕ್ ಗೇರ್‌ಬಾಕ್ಸ್ ಆಯ್ಕೆ ನೀಡಲಾಗಿದೆ.
Image Courtesy: Sarath Santham


Click it and Unblock the Notifications