ಆಫ್ ರೋಡ್ ಎಸ್‌ಯುವಿ ಕಾರಿಗೆ ಭರ್ಜರಿ ಬೇಡಿಕೆ- ಹೊಸ ಥಾರ್ ಖರೀದಿಗೆ ಕನಿಷ್ಠ 2 ತಿಂಗಳು ಕಾಯಲೇಬೇಕಂತೆ...!

ಮಹೀಂದ್ರಾ ಕಂಪನಿಯು ಈ ತಿಂಗಳ ಮೊದಲ ವಾರದಲ್ಲಿ ತನ್ನ ಬಹುನೀರಿಕ್ಷಿತ ಥಾರ್ ಕಾರು ಮಾದರಿಯನ್ನು ಹೊಸ ತಲೆಮಾರಿನ ವೈಶಿಷ್ಟ್ಯತೆಗಳೊಂದಿಗೆ ಬಿಡುಗಡೆ ಮಾಡಿತ್ತು. ಹೊಸ ಕಾರು ಇದುವರೆಗೆ ಬರೋಬ್ಬರಿ 15 ಸಾವಿರಕ್ಕೂ ಹೆಚ್ಚು ಬುಕ್ಕಿಂಗ್ ಪಡೆದುಕೊಂಡಿದ್ದು, ಬುಕ್ಕಿಂಗ್ ನಂತರ ಗ್ರಾಹಕರ ಕಾಯುವಿಕೆ ಅವಧಿಯಲ್ಲಿ ಮತ್ತಷ್ಟು ಹೆಚ್ಚಳವಾಗಿದೆ.

ಹೊಸ ಥಾರ್ ಖರೀದಿಗೆ ಕನಿಷ್ಠ 2 ತಿಂಗಳು ಕಾಯಲೇಬೇಕಂತೆ...!

ದಸರಾ ಮತ್ತು ದೀಪಾವಳಿ ಸಂಭ್ರಮಕ್ಕಾಗಿಯೇ ಹೊಸ ಕಾರು ಖರೀದಿ ಯೋಜನೆಯಲ್ಲಿದ್ದ ಗ್ರಾಹಕರಿಗೆ ಬುಕ್ಕಿಂಗ್ ಪ್ರಮಾಣವು ಹೆಚ್ಚಿರುವುದರಿಂದ ನಿಗದಿತ ಅವಧಿಯಲ್ಲೇ ಕಾರು ವಿತರಣೆ ಕಷ್ಟಸಾಧ್ಯ ಎನ್ನಲಾಗಿದ್ದು, ಮಾಹಿತಿಗಳ ಪ್ರಕಾರ ಥಾರ್ ಹೊಸ ಕಾರು ಖರೀದಿಗೆ ಬುಕ್ಕಿಂಗ್ ನಂತರ ಕನಿಷ್ಠ 6 ವಾರಗಳಿಂದ ಗರಿಷ್ಠ 22 ವಾರಗಳ ಕಾಲ ಕಾಯಲೇಬೇಕಿದೆ. ಕಾಯುವಿಕೆ ಅವಧಿಯು ವೆರಿಯೆಂಟ್‌ಗಳಿಗೆ ಅನುಗುಣವಾಗಿ ನಿರ್ಧಾರವಾಗಲಿದ್ದು, ಸಾಫ್ಟ್ ಟಾಪ್ ಮಾದರಿಯು ಕಡಿಮೆ ಅವಧಿಯಲ್ಲಿ ವಿತರಣೆಯಾಗಲಿದ್ದರೆ ಹಾರ್ಡ್ ಟಾಪ್ ಮಾದರಿಗೆ ಹೆಚ್ಚು ಕಾಯುವಿಕೆಯ ಅಗತ್ಯವಿದೆ.

ಹೊಸ ಥಾರ್ ಖರೀದಿಗೆ ಕನಿಷ್ಠ 2 ತಿಂಗಳು ಕಾಯಲೇಬೇಕಂತೆ...!

ಮಹೀಂದ್ರಾ ಡೀಲರ್ಸ್‌ಗಳ ಮಾಹಿತಿಯೆಂತೆ ಸಾಫ್ಟ್ ಟಾಪ್ ಹೊಂದಿರುವ ಥಾರ್ ಕಾರಿಗೆ ಬುಕ್ಕಿಂಗ್ ನಂತರ ಕನಿಷ್ಠ 6 ರಿಂದ 8 ವಾರಗಳ ಕಾಲ ಕಾಯಬೇಕಿದ್ದು, ಕನ್ವರ್ಟಬಲ್ ಮಾದರಿಗೆ 8 ರಿಂದ 11 ವಾರ ಮತ್ತು ಹಾರ್ಡ್ ಟಾಪ್ ಮಾದರಿಗೆ ಕನಿಷ್ಠ 20ರಿಂದ 22 ವಾರಗಳ ಕಾಲ ಕಾಯಲೇಬೇಕಿದೆ.

ಹೊಸ ಥಾರ್ ಖರೀದಿಗೆ ಕನಿಷ್ಠ 2 ತಿಂಗಳು ಕಾಯಲೇಬೇಕಂತೆ...!

ಆಫ್ ರೋಡಿಂಗ್ ವೈಶಿಷ್ಟ್ಯತೆಯೊಂದಿಗೆ ತನ್ನದೆ ಆದ ಜನಪ್ರಿಯೆತೆ ಹೊಂದಿರುವ ಥಾರ್ ಕಾರು ಮಾದರಿಯು ಸಾಮಾನ್ಯ ಕಾರು ಮಾದರಿಗಳಂತೆ ಬೇಡಿಕೆ ಮುಂಚೂಣಿ ಸಾಧಿಸುತ್ತಿದ್ದು, 2020ರ ಥಾರ್ ಖರೀದಿ ಮಾಡಿರುವ ಗ್ರಾಹಕರಲ್ಲಿ ಬಹುತೇಕರು ಹೊಸದಾಗಿ ಆಫ್ ಕೌಶಲ್ಯದ ಆಸಕ್ತಿಯೊಂದಿಗೆ ಥಾರ್ ಮಾಲೀಕತ್ವ ಪಡೆದುಕೊಂಡವರಾಗಿದ್ದಾರೆ.

ಹೊಸ ಥಾರ್ ಖರೀದಿಗೆ ಕನಿಷ್ಠ 2 ತಿಂಗಳು ಕಾಯಲೇಬೇಕಂತೆ...!

ಶೇ.57ರಷ್ಟು ಗ್ರಾಹಕರು ಹೊಸದಾಗಿ ಆಫ್ ರೋಡಿಂಗ್ ಕಾರು ಖರೀದಿ ಮಾಡುತ್ತಿರುವ ಗ್ರಾಹಕರಾಗಿದ್ದು, ಮ್ಯಾನುವಲ್‌ಗಿಂತಲೂ ಹೆಚ್ಚು ಆಟೋಮ್ಯಾಟಿಕ್ ಮಾದರಿಗಳಿಗೆ ಹೆಚ್ಚು ಬೇಡಿಕೆ ಹರಿದುಬಂದಿದೆ. ಹೊಸ ಥಾರ್ ಕಾರು ಮಾದರಿಯು ಈ ಬಾರಿ ಹಲವಾರು ಬದಲಾವಣೆಗಳೊಂದಿಗೆ ಮಾರುಕಟ್ಟೆ ಪ್ರವೇಶಿಸಿದ್ದು, ನ್ಯೂ ಜನರೇಷನ್ ಥಾರ್ ಕಾರು ಮಾದರಿಯು ಗ್ರಾಹಕರ ಬೇಡಿಕೆಯೆಂತೆ ಎಎಕ್ಸ್ ಮತ್ತು ಎಲ್ಎಕ್ಸ್ ಎನ್ನುವ ಎರಡು ಮಾದರಿಗಳಲ್ಲಿ ಖರೀದಿಗೆ ಲಭ್ಯವಿದೆ.

ಹೊಸ ಥಾರ್ ಖರೀದಿಗೆ ಕನಿಷ್ಠ 2 ತಿಂಗಳು ಕಾಯಲೇಬೇಕಂತೆ...!

ಥಾರ್ ಕಾರು ಆರಂಭಿಕ ಆವೃತ್ತಿಯು ಪ್ಯಾನ್ ಇಂಡಿಯಾ ಎಕ್ಸ್‌ಶೋರೂಂ ಪ್ರಕಾರ ರೂ. 9.80 ಲಕ್ಷದಿಂದ ಟಾಪ್ ಮಾದರಿಯು ರೂ. 12.95 ಲಕ್ಷ ಬೆಲೆ ಪಡೆದುಕೊಂಡಿದ್ದು, ಅತ್ಯುತ್ತಮ ಫೀಚರ್ಸ್‌ಗಳನ್ನು ಸ್ಟ್ಯಾಂಡರ್ಡ್ ಆಗಿ ಪಡೆದುಕೊಂಡಿದೆ.

ಹೊಸ ಥಾರ್ ಖರೀದಿಗೆ ಕನಿಷ್ಠ 2 ತಿಂಗಳು ಕಾಯಲೇಬೇಕಂತೆ...!

ಥಾರ್ ಕಾರು ಮಾದರಿಯಲ್ಲಿ ಮೊದಲ ಬಾರಿಗೆ ಡೀಸೆಲ್ ಎಂಜಿನ್ ಜೊತೆಗೆ ಪೆಟ್ರೋಲ್ ಕಾರಿನ ಆಯ್ಕೆಯನ್ನು ಸಹ ನೀಡಿರುವುದು ಆಫ್-ರೋಡ್ ಕಾರು ಮಾದರಿಯ ಮಾರಾಟದಲ್ಲಿ ಮತ್ತೊಂದು ಹಂತದ ಬದಲಾವಣೆಗೆ ಕಾರಣವಾಗಿದ್ದು, ಹೊಸ ಕಾರಿನ ಹೊರಭಾಗದ ವಿನ್ಯಾಸದಲ್ಲೂ ಸಾಕಷ್ಟು ಬದಲಾವಣೆಗಳನ್ನು ಪರಿಚಯಿಸಲಾಗಿದೆ. ಮರುವಿನ್ಯಾಸಗೊಳಿಸಲಾದ ಸೆವೆನ್ ಸ್ಲಾಟ್ ಗ್ರಿಲ್, ವೃತ್ತಾಕಾರವಾದ ಹೆಡ್‌ಲ್ಯಾಂಪ್, 18-ಇಂಚಿನ ಆಕರ್ಷಕ ಅಲಾಯ್ ವೀಲ್ಹ್, ಡ್ಯುಯಲ್ ಟೋನ್ ಬಂಪರ್, ಸ್ಕಫ್ ಪ್ಲೇಟ್, ಬಾಕ್ಸಿ ಮಾದರಿಯಲ್ಲಿರುವ ಟೈಲ್ ಲೈಟ್‌ನೊಂದಿಗೆ ಮಾರ್ಡನ್ ಶೈಲಿ ಪಡೆದುಕೊಂಡಿದೆ.

MOST READ: ಪ್ರತಿ ಚಾರ್ಜ್‌ಗೆ ಗರಿಷ್ಠ 509ಕಿ.ಮೀ ಮೈಲೇಜ್ ನೀಡಲಿದೆ ಸ್ಕೋಡಾ ಎನ್ಯಾಕ್ ಎಲೆಕ್ಟ್ರಿಕ್ ಎಸ್‌ಯುವಿ..!

ಹೊಸ ಥಾರ್ ಖರೀದಿಗೆ ಕನಿಷ್ಠ 2 ತಿಂಗಳು ಕಾಯಲೇಬೇಕಂತೆ...!

ಲ್ಯಾಡರ್-ಫ್ರೇಮ್ ಚಾರ್ಸಿ ಜೊತೆಗೆ ಹೊಸ ಸಸ್ಪೆಂಷನ್‌ ಸೌಲಭ್ಯವು ಹೊಸ ಥಾರ್ ಕಾರಿನ ಗುಣಮಟ್ಟ ಮತ್ತು ಕಾರ್ಯಕ್ಷಮತೆ ಹೆಚ್ಚಿಸಿದ್ದು, ಗ್ರಾಹಕರು ತಮ್ಮ ಬೇಡಿಕೆ ಅನುಗುಣವಾಗಿ ಎಎಕ್ಸ್ ಮ್ಯಾನುವಲ್ ಸಾಫ್ಟ್ ಟಾಪ್ ಮತ್ತು ಎಲ್ಎಕ್ಸ್ ಮಾದರಿಯಲ್ಲಿ ಕನ್ವರ್ಟಿಬಲ್ ಹಾಗೂ ಹಾರ್ಡ್ ಟಾಪ್ ಆಯ್ಕೆ ಮಾಡಬಹುದಾಗಿದೆ.

ಹೊಸ ಥಾರ್ ಖರೀದಿಗೆ ಕನಿಷ್ಠ 2 ತಿಂಗಳು ಕಾಯಲೇಬೇಕಂತೆ...!

ಹೊಸ ಥಾರ್ ಕಾರು ಮಾದರಿಯಲ್ಲಿ ಬಿಎಸ್-6 ಎಂಜಿನ್ ಪ್ರೇರಿತ 2.2-ಲೀಟರ್ ಡೀಸೆಲ್ ಎಂಜಿನ್ ಮತ್ತು ಹೊಸದಾಗಿ ಅಭಿವೃದ್ದಿಗೊಳಿಸಲಾದ 2.-ಲೀಟರ್ ಎಂ-ಸ್ಟಾಲಿನ್ ಪೆಟ್ರೋಲ್ ಎಂಜಿನ್ ನೀಡಲಾಗಿದ್ದು, ಎರಡು ಎಂಜಿನ್ ಮಾದರಿಗಳಲ್ಲೂ 6-ಸ್ಪೀಡ್ ಮ್ಯಾನುವಲ್ ಮತ್ತು 6-ಸ್ಪೀಡ್ ಟಾರ್ಕ್ ಕನ್ವರ್ಟರ್ ಆಟೋಮ್ಯಾಟಿಕ್ ಗೇರ್‌ಬಾಕ್ಸ್ ಆಯ್ಕೆ ನೀಡಲಾಗಿದೆ.

MOST READ: ಬಿಡುಗಡೆಗೆ ಸಿದ್ದವಾದ ಹೋಂಡಾದ ಮೊದಲ ಎಲೆಕ್ಟ್ರಿಕ್ ಕಾರು

ಹೊಸ ಥಾರ್ ಖರೀದಿಗೆ ಕನಿಷ್ಠ 2 ತಿಂಗಳು ಕಾಯಲೇಬೇಕಂತೆ...!

ಥಾರ್ ಡೀಸೆಲ್ ಮಾದರಿಯು 132-ಬಿಎಚ್‌ಪಿ, 300-ಎನ್ಎಂ ಟಾರ್ಕ್ ಉತ್ಪಾದನೆ ಮಾಡಿದ್ದಲ್ಲಿ ಪೆಟ್ರೋಲ್ ಮಾದರಿಯು 152-ಬಿಎಚ್‌ಪಿ, 320-ಎನ್ಎಂ ಟಾರ್ಕ್ ಉತ್ಪಾದನೆ ಮಾಡಬಲ್ಲದು. ಈ ಮೂಲಕ ಪ್ರಯಾಣಿಕರ ಸುರಕ್ಷತೆಯಲ್ಲೂ ಗಮನಸೆಳೆಯಲಿದೆ.

More from DriveSpark

Article Published On: Thursday, October 22, 2020, 13:12 [IST]
English summary
Waiting period for the Mahindra Thar is up to 5 months depending on the variants. Read in Kannada.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+