ನ್ಯೂ ಜನರೇಷನ್ ಥಾರ್ ಕಾರಿನ ಟೀಸರ್ ವಿಡಿಯೋ ಬಿಡುಗಡೆ ಮಾಡಿದ ಮಹೀಂದ್ರಾ

ಮಹೀಂದ್ರಾ ಕಂಪನಿಯು ತನ್ನ ಬಹುನೀರಿಕ್ಷಿತ ನ್ಯೂ ಜನರೇಷನ್ ಥಾರ್ ಆಫ್ ರೋಡ್ ಕಾರು ಮಾದರಿಯನ್ನು ಭಾರತದಲ್ಲಿ ಬಿಡುಗಡೆಗೆ ಅಂತಿಮ ಹಂತದ ಸಿದ್ದತೆ ನಡೆಸುತ್ತಿದ್ದು, ಹೊಸ ಕಾರಿನ ಟೀಸರ್ ವಿಡಿಯೋ ಒಂದನ್ನು ಬಿಡುಗಡೆ ಮಾಡಿದೆ.

ನ್ಯೂ ಜನರೇಷನ್ ಥಾರ್ ಕಾರಿನ ಟೀಸರ್ ವಿಡಿಯೋ ಬಿಡುಗಡೆ ಮಾಡಿದ ಮಹೀಂದ್ರಾ

ಟೀಸರ್ ವಿಡಿಯೋದಲ್ಲಿನ ಮಾಹಿತಿ ಪ್ರಕಾರ ಹೊಸ ಥಾರ್ ಕಾರು ಇದೇ ತಿಂಗಳು 15ರಂದು ಅನಾವರಣಗೊಳ್ಳಲಿದ್ದು, ಮುಂಬರುವ ಕೆಲವೇ ದಿನಗಳಲ್ಲಿ ಅಧಿಕೃತವಾಗಿ ಮಾರಾಟ ಲಭ್ಯವಾಗುವ ಸುಳಿವು ನೀಡಿದೆ. ಟೀಸರ್ ವಿಡಿಯೋ ಮೂಲಕ ಆಫ್ ರೋಡ್ ಕಾರು ಮಾರಾಟದಲ್ಲಿ ಮತ್ತೊಮ್ಮೆ ಸದ್ದು ಮಾಡುವ ನೀರಿಕ್ಷೆಯಲ್ಲಿರುವ ಮಹೀಂದ್ರಾ ಕಂಪನಿಯು ಈ ಬಾರಿ ಹೊಸ ಕಾರಿನಲ್ಲಿ ಭಾರೀ ಬದಲಾವಣೆಗಳೊಂದಿಗೆ ಬಿಡುಗಡೆ ಮಾಡುತ್ತಿದೆ.

ಈ ಮೊದಲಿನ ಯೋಜನೆಯೆಂತೆ ಈ ವರ್ಷದ ಆರಂಭದಲ್ಲೇ ಥಾರ್ ಬಿಡುಗಡೆಯ ಯೋಜನೆಯಲ್ಲಿದ್ದ ಮಹೀಂದ್ರಾ ಕಂಪನಿಯು ಕರೋನಾ ವೈರಸ್ ಪರಿಣಾಮ ಮುಂಡೂಡಿಕೆ ಮಾಡಿಕೊಂಡು ಬಂದಿದ್ದು, ಇದೀಗ ಆಟೋ ಉದ್ಯಮಕ್ಕೆ ವಿನಾಯ್ತಿ ನೀಡಿರುವ ಹಿನ್ನಲೆಯಲ್ಲಿ ಹೊಸ ಕಾರು ಬಿಡುಗಡೆಗೆ ಸಿದ್ದಮಾಡಿಕೊಳ್ಳಲಾಗುತ್ತಿದೆ.

ನ್ಯೂ ಜನರೇಷನ್ ಥಾರ್ ಕಾರಿನ ಟೀಸರ್ ವಿಡಿಯೋ ಬಿಡುಗಡೆ ಮಾಡಿದ ಮಹೀಂದ್ರಾ

ಹೊಸ ಕಾರು ಬಿಡುಗಡೆಗೂ ಮುನ್ನ ಕಾರನ್ನು ಅನಾವರಣಗೊಳಿಸಲಿರುವ ಮಹೀಂದ್ರಾ ಕಂಪನಿಯು ಆಫ್-ರೋಡ್ ಪ್ರಿಯರ ಗಮನಸೆಳೆಯಲಿದ್ದು, ಹೊಸ ಕಾರಿನಲ್ಲಿ ಈ ಬಾರಿ ಪೆಟ್ರೋಲ್ ಎಂಜಿನ್ ಸೇರಿದಂತೆ ಹಲವಾರು ಬದಲಾವಣೆಗಳನ್ನು ಪರಿಚಯಿಸಲಾಗಿದೆ.

ನ್ಯೂ ಜನರೇಷನ್ ಥಾರ್ ಕಾರಿನ ಟೀಸರ್ ವಿಡಿಯೋ ಬಿಡುಗಡೆ ಮಾಡಿದ ಮಹೀಂದ್ರಾ

ಡೀಸೆಲ್ ಮತ್ತು ಪೆಟ್ರೋಲ್ ಎರಡು ಆವೃತ್ತಿಗಳಲ್ಲೂ ಖರೀದಿಗೆ ಲಭ್ಯವಿಲಿರುವ ಹೊಸ ಥಾರ್ ಕಾರು ಮ್ಯಾನುವಲ್ ಮತ್ತು ಆಟೋಮ್ಯಾಟಿಕ್ ವರ್ಷನ್ ಪಡೆದುಕೊಳ್ಳಲಿದ್ದು, ಮಾಲಿನ್ಯ ಹೊರಸೂಸುವಿಕೆ ಪ್ರಮಾಣದಲ್ಲಿ ಸಾಕಷ್ಟು ಸುಧಾರಣೆ ಕಂಡಿದೆ.

MOST READ: ಪ್ರತಿ ಚಾರ್ಜ್‌ಗೆ 480 ಕಿ.ಮೀ ಮೈಲೇಜ್ ನೀಡುವ ಎಲೆಕ್ಟ್ರಿಕ್ ಎಸ್‌ಯುವಿ ಬಿಡುಗಡೆ ಮಾಡಲಿದೆ ನಿಸ್ಸಾನ್

ನ್ಯೂ ಜನರೇಷನ್ ಥಾರ್ ಕಾರಿನ ಟೀಸರ್ ವಿಡಿಯೋ ಬಿಡುಗಡೆ ಮಾಡಿದ ಮಹೀಂದ್ರಾ

ಹೊಸ ಥಾರ್ ನಲ್ಲಿ ಈ ಬಾರಿ ನವೀಕರಿಸಿದ 2.0-ಲೀಟರ್ ಟರ್ಬೋ ಡೀಸೆಲ್ ಎಂಜಿನ್ ಜೊತೆಗೆ ಹೊಸದಾಗಿ 2.0-ಲೀಟರ್ ಟರ್ಬೋ ಪೆಟ್ರೋಲ್ ಎಂ-ಸ್ಟಾಲಿನ್ ಎಂಜಿನ್ ಆಯ್ಕೆಯನ್ನು ನೀಡಲಾಗಿದ್ದು, 6-ಸ್ಪೀಡ್ ಮ್ಯಾನುವಲ್ ಮತ್ತು 5-ಸ್ಪೀಡ್ ಟಾರ್ಕ್ ಕನ್ವರ್ಟರ್ ಆಟೋಮ್ಯಾಟಿಕ್ ಗೇರ್‌ಬಾಕ್ಸ್ ಪಡೆದುಕೊಂಡಿರಲಿದೆ.

ನ್ಯೂ ಜನರೇಷನ್ ಥಾರ್ ಕಾರಿನ ಟೀಸರ್ ವಿಡಿಯೋ ಬಿಡುಗಡೆ ಮಾಡಿದ ಮಹೀಂದ್ರಾ

ಡೀಸೆಲ್ ಮಾದರಿಯು 140-ಬಿಎಚ್‌ಪಿ ಉತ್ಪಾದನಾ ಗುಣಹೊಂದಿದ್ದಲ್ಲಿ ಪೆಟ್ರೋಲ್ ಮಾದರಿಯು 180-ಬಿಎಚ್‌ಪಿ ಉತ್ಪಾದನಾ ಗುಣಹೊಂದಿದ್ದು, ಎರಡು ಎಂಜಿನ್ ಮಾದರಿಯಲ್ಲೂ ಮ್ಯಾನುವಲ್ ಮತ್ತು ಆಟೋಮ್ಯಾಟಿಕ್ ಗೇರ್‌ಬಾಕ್ಸ್ ಆಯ್ಕೆಯಿರಲಿದೆ.

MOST READ: ವಾಹನ ಖರೀದಿಯನ್ನು ಸುಲಭವಾಗಿಸಲಿದೆ ಅಗಸ್ಟ್ 1ರಿಂದ ಜಾರಿಗೆ ಬಂದಿರುವ ಹೊಸ ವಿಮಾ ನೀತಿ..

ನ್ಯೂ ಜನರೇಷನ್ ಥಾರ್ ಕಾರಿನ ಟೀಸರ್ ವಿಡಿಯೋ ಬಿಡುಗಡೆ ಮಾಡಿದ ಮಹೀಂದ್ರಾ

ಜೊತೆಗೆ ಬಿಎಸ್-6 ವೈಶಿಷ್ಟ್ಯತೆಗಳಿಂದಾಗಿ ಮಹೀಂದ್ರಾ ಹೊಸ ಕಾರುಗಳಲ್ಲಿ ಈ ಬಾರಿ ಹಲವಾರು ಬದಲಾವಣೆಗಳಾಗಿದ್ದು, ಬ್ಯಾಕ್ಔಟ್ ಅಯಾಲ್ ವೀಲ್ಹ್, ಆಲ್ ವೀಲ್ಹ್ ಡಿಸ್ಕ್ ಬ್ರೇಕ್ ಸೇರಿದಂತೆ ಹಲವಾರು ಹೊಸ ಸುರಕ್ಷಾ ಸೌಲಭ್ಯಗಳನ್ನು ಸ್ಟ್ಯಾಂಡರ್ಡ್ ಆಗಿ ಪಡೆದುಕೊಂಡಿರಲಿದೆ.

Article Published On: Wednesday, August 5, 2020, 15:18 [IST]
English summary
2020 Mahindra Thar Teaser Video Released Ahead Of Official Unveil. Read in Kannada.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+