ಬಿಡುಗಡೆಯ ಸನಿಹದಲ್ಲಿ ಐಕಾನಿಕ್ ಆಫ್-ರೋಡರ್ ಬಿಎಸ್-6 ಮಹೀಂದ್ರಾ ಥಾರ್

ಬಹುನಿರೀಕ್ಷಿತ ಐಕಾನಿಕ್ ಆಫ್-ರೋಡರ್ 2020ರ ಥಾರ್ ಅನ್ನು ಬಿಡುಗಡೆಗೊಳಿಸುವುದಕ್ಕೆ ಮಹೀಂದ್ರಾ ಕಂಪನಿಯು ಸಜ್ಜಾಗಿದೆ. ಮಹೀಂದ್ರಾ ಕಂಪನಿಯು ಈ ಥಾರ್ ಎಸ್‍ಯುವಿಯನ್ನು ಈ ವರ್ಷದ ಅಕ್ಟೋಬರ್ ತಿಂಗಳಲ್ಲಿ ಭಾರತೀಯ ಮಾರುಕಟ್ಟೆಯಲ್ಲಿ ಬಿಡುಗಡೆಗೊಳಿಸಲಿದೆ.

ಬಿಡುಗಡೆಯ ಸನಿಹದಲ್ಲಿ ಐಕಾನಿಕ್ ಆಫ್-ರೋಡರ್ ಬಿಎಸ್-6 ಮಹೀಂದ್ರಾ ಥಾರ್

ಮಹೀಂದ್ರಾ ಕಂಪನಿಯ ವ್ಯವಸ್ಥಾಪಕ ನಿರ್ದೇಶಕ ಡಾ.ಪವನ್ ಗೋಯೆಂಕಾ ಅವರು ಇತ್ತೀಚೆಗೆ ಮಾಧ್ಯಮವೊಂದರಲ್ಲಿ ನೀಡಿದ ಸಂದರ್ಶನದಲ್ಲಿ ಮಾತನಾಡಿ, ಈ ವರ್ಷದ ಅಕ್ಟೋಬರ್ ಆರಂಭದಲ್ಲಿ ಹೊಸ ತಲೆಮಾರಿನ ಥಾರ್ ಎಸ್‍ಯುವಿಯನ್ನು ಬಿಡುಗಡೆಗೊಳಿಸಲಿದೆ. ಕಾರೋನ ಸೋಂಕಿನಿಂದಾಗಿ ಈ ಹೊಸ ಥಾರ್ ಎಸ್‍ಯುವಿಯ ಬಿಡುಗಡೆಯು ವಿಳಂಬವಾಗಿದೆ ಎಂದು ಹೇಳಿದ್ದಾರೆ. ಭಾರತೀಯ ಮಾರುಕಟ್ಟೆಯಲ್ಲಿ ಬಿಡುಗಡೆಯಾಗಲಿರುವ ಬಹುನಿರೀಕ್ಷಿತ ಎಸ್‍ಯುವಿಗಳಲ್ಲಿ ಹೊಸ ಥಾರ್ ಕೂಡ ಒಂದಾಗಿದೆ

ಬಿಡುಗಡೆಯ ಸನಿಹದಲ್ಲಿ ಐಕಾನಿಕ್ ಆಫ್-ರೋಡರ್ ಬಿಎಸ್-6 ಮಹೀಂದ್ರಾ ಥಾರ್

ಮಹೀಂದ್ರಾ ಕಂಪನಿಯು ಇತ್ತೀಚೆಗೆ ಭಾರತದಲ್ಲಿ ಹೊಸ ಮಹೀಂದ್ರಾ ಥಾರ್ ಎಸ್‍ಯುವಿಯ ಸ್ಪಾಟ್ ಟೆಸ್ಟ್ ಅನ್ನು ನಡೆಸಲಾಗಿದೆ. ಈ ಹೊಸ ಮಹೀಂದ್ರಾ ಥಾರ್ ಎಸ್‍ಯುವಿಗಾಗಿ ಅನಧಿಕೃತವಾಗಿ ಬುಕ್ಕಿಂಗ್ ಅನ್ನು ಸ್ವೀಕರಿಸಲು ಪ್ರಾರಂಭಿಸಿದ್ದಾರೆ. ಆದರೆ ಬುಕ್ಕಿಂಗ್ ಮಾಡಲು ಟೋಕನ್ ಮೊತ್ತ ಮತ್ತು ಇತರ ಮಾಹಿತಿಗಳು ಇನ್ನು ಕೂಡ ಲಭ್ಯವಾಗಿಲ್ಲ.

MOST READ: ಭರ್ಜರಿಯಾಗಿ ಮಾರಾಟವಾಯ್ತು ಫೋಕ್ಸ್‌ವ್ಯಾಗನ್ ಟಿ-ರಾಕ್ ಎಸ್‍ಯುವಿ

ಬಿಡುಗಡೆಯ ಸನಿಹದಲ್ಲಿ ಐಕಾನಿಕ್ ಆಫ್-ರೋಡರ್ ಬಿಎಸ್-6 ಮಹೀಂದ್ರಾ ಥಾರ್

ಹೊಸ ಥಾರ್ ನಲ್ಲಿ ಹಲವಾರು ಹೊಸ ಫೀಚರ್ಸ್‍‍ಗಳನ್ನು ಅಳವಡಿಸಲಾಗುತ್ತಿದೆ. ಹೊಸ ಥಾರ್‍‍ನಲ್ಲಿ ಫ್ಲೋಟಿಂಗ್ ಟಚ್‍‍ಸ್ಕ್ರೀನ್ ಇನ್ಫೋಟೇನ್‍‍ಮೆಂಟ್ ಸಿಸ್ಟಂ ಅನ್ನು ಅಳವಡಿಸಲಾಗಿದೆ. ಇದು ಆ್ಯಪಲ್ ಕಾರ್‍‍ಪ್ಲೇ ಮತ್ತು ಆಂಡ್ರಾಯ್ಡ್ ಆಟೋ ವನ್ನು ಒಳಗೊಂಡಿದೆ ಎಂದು ನಿರೀಕ್ಷಿಸಲಾಗಿದೆ.

ಬಿಡುಗಡೆಯ ಸನಿಹದಲ್ಲಿ ಐಕಾನಿಕ್ ಆಫ್-ರೋಡರ್ ಬಿಎಸ್-6 ಮಹೀಂದ್ರಾ ಥಾರ್

2020ರ ಥಾರ್‍‍‍ನಲ್ಲಿರುವ ಹೊಸ ಇನ್ಸ್ ಟ್ರೂಮೆಂಟ್ ಕ್ಲಸ್ಟರ್ ತನ್ನ ಬ್ರ್ಯಾಂಡ್‍ನ ಸರಣಿಯಲ್ಲಿರುವ ಟಿ‍ಯುವಿ 300 ಎಸ್‍‍ಯುವಿಯಲ್ಲಿರುವ ಕ್ಲಸ್ಟರ್‍ ಅನ್ನು ಹೋಲುವಂತಿದೆ. ಹೊಸ ಇನ್ಸ್ ಟ್ರೂಮೆಂಟ್ ಕ್ಲಸ್ಟರ್ ಡಿಜಿಟಲ್ ಡಿಸ್‍‍ಪ್ಲೇ ಯುನಿ‍‍ಟ್‍ನೊಂದಿಗೆ ಎರಡು ಅನಲಾಗ್ ಡಯಲ್‍ಗಳನ್ನು ಒಳಗೊಂಡಿದೆ.

MOST READ: ಮರ್ಸಿಡಿಸ್ ಬೆಂಝ್ ಜಿಎಲ್ಇ ಎಸ್‍ಯುವಿಯ ಎರಡು ಹೊಸ ರೂಪಾಂತರಗಳು ಬಿಡುಗಡೆ

ಬಿಡುಗಡೆಯ ಸನಿಹದಲ್ಲಿ ಐಕಾನಿಕ್ ಆಫ್-ರೋಡರ್ ಬಿಎಸ್-6 ಮಹೀಂದ್ರಾ ಥಾರ್

ಹೊಸ ಮಹೀಂದ್ರಾ ಥಾರ್‍‍ನ 4×4 ಲಿವರ್ ವಿಭಿನ್ನವಾಗಿದೆ. ಇದರಲ್ಲಿ 2ಡಬ್ಲ್ಯುಡಿ(ಆರ್‍‍ಡಬ್ಲ್ಯುಡಿ) ಹೈ, 4ಡಬ್ಲ್ಯುಡಿ ಹೈ ಮತ್ತು 4 ಡಬ್ಲ್ಯು ಡಿ ಲೋ ಎಂಬ ಮೂರು ಮೋಡ್‍‍ಗಳಿವೆ. 2020ರ ಮಹೀಂದ್ರಾ ಥಾರ್ ಎಸ್‍‍ಯುವಿಯನ್ನು ಸಾಫ್ಟ್ ಟಾಪ್ ಹಾಗೂ ಹಾರ್ಡ್ ಟಾಪ್ - ಎಂಬ ಎರಡು ಡೋರ್ ಬಾಡಿ ಸ್ಟೈಲ್‌ಗಳಲ್ಲಿ ನೀಡಲಾಗುವುದು.

ಬಿಡುಗಡೆಯ ಸನಿಹದಲ್ಲಿ ಐಕಾನಿಕ್ ಆಫ್-ರೋಡರ್ ಬಿಎಸ್-6 ಮಹೀಂದ್ರಾ ಥಾರ್

ಎಸ್‍‍ಯುವಿಯ ಹೊರಭಾಗವು ಜೀಪ್ ಶೈಲಿಯ ವಿನ್ಯಾಸವನ್ನು ಹೊಂದಿದ್ದರೆ, ಇಂಟಿರಿಯರ್ ಅನ್ನು ಹೆಚ್ಚು ಅಪ್‍‍ಡೇಟ್ ಮಾಡಲಾಗಿದೆ. ಮಾರುಕಟ್ಟೆಯಲ್ಲಿರುವ ಥಾರ್ 2.5 ಲೀಟರ್ ಡೀಸೆಲ್ ಬಿಎಸ್ 4 ಎಂಜಿನ್‌ ಹೊಂದಿದೆ. ಈ ಎಂಜಿನ್ 105 ಬಿ‍‍ಹೆಚ್‌ಪಿ ಪವರ್ ಹಾಗೂ 247 ಎನ್‌ಎಂ ಟಾರ್ಕ್ ಉತ್ಪಾದಿಸುತ್ತದೆ. ಈ ಎಂಜಿನ್‍‍ನಲ್ಲಿ 5 ಸ್ಪೀಡ್ ಗೇರ್‌ಬಾಕ್ಸ್‌ ಅಳವಡಿಸಲಾಗಿದೆ.

MOST READ: ಕರೋನಾ ಭೀತಿಯಿಂದ ಪಾತಾಳಕ್ಕೆ ಕುಸಿತ ಮಾರುತಿ ಸುಜುಕಿ ಕಾರುಗಳ ಮಾರಾಟ

ಬಿಡುಗಡೆಯ ಸನಿಹದಲ್ಲಿ ಐಕಾನಿಕ್ ಆಫ್-ರೋಡರ್ ಬಿಎಸ್-6 ಮಹೀಂದ್ರಾ ಥಾರ್

ಹೊಸ ಥಾರ್ 120 ಬಿ‍‍ಹೆಚ್‌ಪಿ ಪವರ್ ಉತ್ಪಾದಿಸುವ 2.0 ಲೀಟರ್ ಡೀಸೆಲ್ ಬಿಎಸ್ 6 ಎಂಜಿನ್ ಹೊಂದಿರಲಿದೆ. ಹೊಸ ಫೀಚರ್, ದೊಡ್ಡ ಗಾತ್ರದ ಬಾಡಿ, ಬಲಶಾಲಿಯಾದ ಬಿಎಸ್ 6 ಡೀಸೆಲ್ ಎಂಜಿನ್ ಹೊಂದಲಿರುವ ಹೊಸ ಥಾರ್‌ನ ಬೆಲೆಯು ಮಾರುಕಟ್ಟೆಯಲ್ಲಿರುವ ಥಾರ್‌ಗಿಂತ ಹೆಚ್ಚಾಗುವ ಸಾಧ್ಯತೆಗಳಿವೆ.

ಬಿಡುಗಡೆಯ ಸನಿಹದಲ್ಲಿ ಐಕಾನಿಕ್ ಆಫ್-ರೋಡರ್ ಬಿಎಸ್-6 ಮಹೀಂದ್ರಾ ಥಾರ್

ಹೊಸ ಥಾರ್‍‍ನಲ್ಲಿ 5 ಸ್ಪೋಕ್ ವಿನ್ಯಾಸದ ದೊಡ್ಡ ಅಲಾಯ್ ವ್ಹೀಲ್‍‍ಗಳನ್ನು ಅಳವಡಿಸಲಾಗಿದೆ. ಅಲಾಯ್ ವ್ಹೀಲ್‍‍ಗಳಲ್ಲಿ 235 ಅಥವಾ 245 ಸೆಕ್ಷನ್ ಟಯರ್‍‍ಗಳನ್ನು ನೀಡಲಾಗುವುದು. ಹೊಸ ಥಾರ್ ಮಾರುಕಟ್ಟೆಯಲ್ಲಿರುವ ಥಾರ್‍‍ಗಿಂತ ಹೆಚ್ಚು ಬೆಲೆಯನ್ನು ಹೊಂದಿರಲಿದೆ. ಹೊ‍‍ಸ ಮಹೀಂದ್ರಾ ಎಸ್‍‍ಯುವಿಯು ಶೀಘ್ರದಲ್ಲೇ ಹೊಸ ಫೀಚರ್ಸ್‍‍ಗಳೊಂದಿಗೆ ಬಿಡುಗಡೆಯಾಗಲಿದೆ.

Article Published On: Friday, June 12, 2020, 19:00 [IST]
English summary
New-Gen Mahindra Thar To Be Launched In October. Read In Kananda.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+