Just In
Don't Miss!
- Lifestyle
'ಮಂಗಳವಾರದ ರಾಶಿಫಲ: ಮೇಷ-ಮೀನದವರೆಗಿನ ದಿನ ಭವಿಷ್ಯ '
- News
ಕೋವಿಡ್ ಲಸಿಕೆ ಪಡೆದುಕೊಂಡಿದ್ದ ಆರೋಗ್ಯ ಇಲಾಖೆ ಉದ್ಯೋಗಿ ಹೃದಯಾಘಾತದಿಂದ ಸಾವು
- Sports
ಐಎಸ್ಎಲ್: ಅಂಕ ಹಂಚಿಕೊಂಡ ಈಸ್ಟ್ ಬೆಂಗಾಲ್ ಮತ್ತು ಚೆನ್ನೈಯಿನ್
- Finance
ಪ್ರಮುಖ ಮಾರುಕಟ್ಟೆಯಲ್ಲಿ ಅಡಿಕೆ, ಮೆಣಸು, ಕಾಫೀ ಜ. 18ರ ದರ
- Movies
ಶಿವಲಿಂಗಕ್ಕೆ ಅಪಮಾನ: ನಟಿಯ ವಿರುದ್ಧ ಮಾಜಿ ರಾಜ್ಯಪಾಲ ದೂರು
- Education
IIMB Recruitment 2021: ಪ್ರಾಜೆಕ್ಟ್ ಎಕ್ಸಿಕ್ಯುಟಿವ್- ಡೆವಲಪ್ಮೆಂಟ್ ಹುದ್ದೆಗಳಿಗೆ ಅರ್ಜಿ ಆಹ್ವಾನ
- Technology
ಒನ್ಪ್ಲಸ್ ನಾರ್ಡ್ ಜುಲೈ 15 ರಿಂದ ಅಮೆಜಾನ್ ತಾಣದಲ್ಲಿ ಪ್ರಿ-ಆರ್ಡರ್ಗೆ ಲಭ್ಯವಿದೆ; ಖರೀದಿಸುವಲ್ಲಿ ಮೊದಲಿಗರಾಗಿರಿ!
- Travel
ಭಾರತದಲ್ಲಿ ಜೂನ್ 1 ರಿಂದ ಚಲಿಸಲಿರುವ ರೈಲುಗಳ ಸಂಪೂರ್ಣ ಪಟ್ಟಿ
ಸ್ಪಾಟ್ ಟೆಸ್ಟ್‌ನಲ್ಲಿ ಕಾಣಿಸಿಕೊಂಡ ಹೊಸ ಮಹೀಂದ್ರಾ ಟಿಯುವಿ 300 ಎಸ್‍ಯುವಿ
ಜನಪ್ರಿಯ ವಾಹನ ಉತ್ಪಾದನಾ ಕಂಪನಿಯಾದ ಮಹೀಂದ್ರಾ ತನ್ನ ಅಧಿಕೃತ ವೆಬ್‌ಸೈಟ್‌ನಿಂದ ಟಿಯುವಿ300 ಕಾಂಪಾಕ್ಟ್ ಎಸ್‍ಯುವಿಯ ಹೆಸರನ್ನು ಇತ್ತೀಚೆಗೆ ತೆಗೆದುಹಾಕಲಾಗಿತ್ತು. ಈ ಮಹೀಂದ್ರಾ ಟಿಯುವಿ 300 ಕಾಂಪ್ಯಾಕ್ಟ್ ಎಸ್‍ಯುವಿಯನ್ನು ಶಾಶ್ವತವಾಗಿ ಭಾರತೀಯ ಮಾರುಕಟ್ಟೆಯಲ್ಲಿ ಸ್ಥಗಿತಗೊಳಿಸುವ ಸಾಧ್ಯತೆಗಳಿದೆ ಎಂದು ವರದಿಗಳು ಪ್ರಕಟವಾಗಿತ್ತು.

ಆದರೆ ಮಹೀಂದ್ರಾ ಟಿಯುವಿ 300 ಎಸ್‍ಯುವಿ ಬಿಎಸ್ 6 ಮಾಲಿನ್ಯ ನಿಯಮಕ್ಕೆ ಅನುಗುಣವಾಗಿ ನವೀಕರರಿಸುವಲ್ಲಿ ನಿರತವಾಗಿದೆ. ಮಹೀಂದ್ರಾ ಕಂಪನಿಯು ತನ್ನ ಹೊಸ ಟಿಯುವಿ300 ಎಸ್‍ಯುವಿಯನ್ನು ಭಾರತೀಯ ರಸ್ತೆಗಳಲ್ಲಿ ಸ್ಪಾಟ್ ಟೆಸ್ಟ್ ನಡೆಸಿದೆ. ಇದರಿಂದ ತಿಳಿಯುತ್ತದೆ ಟಿಯುವಿ 300 ಕಾಂಪ್ಯಾಕ್ಟ್ ಎಸ್‍ಯುವಿಯುವಿಯನ್ನು ಭಾರತೀಯ ಮಾರುಕಟ್ಟೆಯಲ್ಲಿ ಸ್ಥಗಿತಗೊಳಿಸಲಾಗಿಲ್ಲ, ಶೀಘ್ರದಲ್ಲೇ ಬಿಡುಗಡೆಗೊಳಿಸಲು ಸಜ್ಜಾಗುತ್ತಿದೆ. ಈ ಮಹೀಂದ್ರಾ ಟಿಯುವಿ 300 ಕಾಂಪ್ಯಾಕ್ಟ್ ಎಸ್‍ಯುವಿಯುವಿಯು ಸ್ಪಾಟ್ ಟೆಸ್ಟ್ ನಡೆಸುತ್ತಿರುವುದನ್ನು ಮೋಟಾರ್‌ಬೀಮ್ ಬಹಿರಂಗಪಡಿಸಿದೆ.

ಮಹೀಂದ್ರಾ ಟಿಯುವಿ 300 ಅನ್ನು 2015ರಲ್ಲಿ ಮೊದಲ ಬಾರಿಗೆ ಭಾರತೀಯ ಮಾರುಕಟ್ಟೆಯಲ್ಲಿ ಬಿಡುಗಡೆ ಮಾಡಲಾಗಿತ್ತು. ಭಾರತೀಯ ಮಾರುಕಟ್ಟೆಯಲ್ಲಿ ಈ ಕಾಂಪ್ಯಾಕ್ಟ್ ಎಸ್‍ಯುವಿಯನ್ನು 2019ರಲ್ಲಿ ನವೀಕರಿಸಿತು. ಈ ಕಾಂಪ್ಯಾಕ್ಟ್ ಎಸ್‍ಯುವಿಯನ್ನು ಕಲವು ಕಾಸ್ಮೆಟಿಕ್ ಬದಲಾವಣೆಗಳ ನವೀಕರಣಗಳನ್ನು ಮಾಡಿದ್ದರು. ಜೊತೆಗೆ ಕೆಲವು ಹೊಸ ಫೀಚರ್ ಗಳನ್ನು ಅಳವಡಿಸಿದ್ದರು.
MOST READ: ಸ್ಪಾಟ್ ಟೆಸ್ಟ್‌ನಲ್ಲಿ ಕಾಣಿಸಿಕೊಂಡ ಟೊಯೊಟಾ ಫಾರ್ಚೂನರ್ ಫೇಸ್‌ಲಿಫ್ಟ್

ಇನ್ನು ಸ್ಪಾಟ್ ಟೆಸ್ಟ್ ನಲ್ಲಿ ಕಾಣಿಸಿಕೊಂಡ ಕಾಂಪ್ಯಾಕ್ಟ್ ಎಸ್‍ಯುವಿಯ ಹೊರಭಾಗದಲ್ಲಿ ಸಣ್ಣ ಮಟ್ಟದ ಕಾಸ್ಮೆಟಿಕ್ ನವೀಕರಣಗಳನ್ನು ನಡೆಸಿ ಬಿಡುಗಡೆಗೊಳಿಸಬಹುದು. ಹೊಸ ಟಿಯುವಿ300 ಎಸ್‍ಯುವಿಯ ಮುಂಭಾಗ ಹೊಸ ಗ್ರಿಲ್ ಸ್ಲಿಮ್ಮರ್ ಸ್ಲ್ಯಾಟ್‌ಗಳು, ನವೀಕರಿಸಿದ ಬಂಪರ್ ವಿನ್ಯಾಸ, ಸ್ಪೋರ್ಟಿಯರ್ ಏರ್ ಡ್ಯಾಮ್, ಹೊಸ ಹೆಡ್‌ಲ್ಯಾಂಪ್‌ಗಳು ಮತ್ತು ಹಿಂಭಾಗ ಟೈಲ್ ಲ್ಯಾಂಪ್‌ಗಳು ಹೊಂದಿರಲಿವೆ.

ಹೊಸ ಟಿಯುವಿ300 ಎಸ್‍ಯುವಿಗಳ ಇಂಟಿರಿಯರ್ ನಲ್ಲಿ ಆಪಲ್ ಕಾರ್‌ಪ್ಲೇ ಮತ್ತು ಆಂಡ್ರಾಯ್ಡ್ ಆಟೋ ಕನೆಕ್ಟಿವಿಟಿ ಹೊಂದಿರುವ ಇನ್ಪೋಟೇನೆಮೆಂಟ್ ಸಿಸ್ಟಂ ಅನ್ನು ಹೊಂದಿರಲಿದೆ. ಇದರೊಂದಿಗೆ ಈ ಎಸ್‍ಯುವಿಗಳು ನೂತನ ಪೀಚರ್ ಗಳನ್ನು ಒಳಗೊಂಡಿರುತ್ತದೆ ಎಂದು ನಿರೀಕ್ಷಿಸುತ್ತೇವೆ.
MOST READ: ಮಾರಾಟದಲ್ಲಿ ಹೊಸ ಮೈಲಿಗಲ್ಲು ಸಾಧಿಸಿದ ಹೋಂಡಾ ಆಮೇಜ್ ಕಾರು

ಮಹೀಂದ್ರಾ ಟಿಯುವಿ 300 ಕ್ಯಾಂಪಕ್ಟ್ ಎಸ್‍ಯುವಿಯಲ್ಲಿ 1.5-ಲೀಟರ್ ಡೀಸೆಲ್ ಎಂಜಿನ್ ಅನ್ನು ಹೊಂದಿದೆ. ಈ ಎಂಜಿನ್ 3,750 ಆರ್‌ಪಿಎಂನಲ್ಲಿ 100 ಬಿಹೆಚ್‌ಪಿ ಪವರ್ ಮತ್ತು 1,600 ಆರ್‌ಪಿಎಂನಲ್ಲಿ 240 ಎನ್ಎಂ ಟಾರ್ಕ್ ಅನ್ನು ಉತ್ಪಾದಿಸುತ್ತದೆ.

ಈ ಎಂಜಿನ್ ನೊಂದಿಗೆ 5-ಸ್ಪೀಡ್ ಮ್ಯಾನುವಲ್ ಮತ್ತು ಆಟೋಮ್ಯಾಟಿಕ್ ಗೇರ್ ಬಾಕ್ಸ್ ಆಯ್ಕೆಯನ್ನು ಹೊಂದಿದೆ. ಮಹೀಂದ್ರಾ ಟಿಯುವಿ 300 ಕ್ಯಾಂಪಕ್ಟ್ ಎಸ್‍ಯುವಿ ಬಾಕ್ಸೀ ವಿನ್ಯಾಸವನ್ನು ಹೊಂದಿದೆ.
MOST READ: ಬಿಡುಗಡೆಯ ಸನಿಹದಲ್ಲಿ ಹೊಸ ಮಾರುತಿ ಸುಜುಕಿ ಸೆಲೆರಿಯೊ

ಇನ್ನು ಮಹೀಂದ್ರಾ ಕಂಪನಿಯು ಹೊಸ ತಲೆಮಾರಿನ ಎಕ್ಸ್‌ಯುವಿ 500 ಮತ್ತು ಸ್ಕಾರ್ಪಿಯೋ ಎಸ್‍ಯುವಿಗಳ ಬಿಡುಗಡೆಯನ್ನು ಮುಂದೂಡಲಾಗಿದೆ. ಹೊಸ ತಲೆಮಾರಿನ ಎಕ್ಸ್‌ಯುವಿ 500 ಮತ್ತು ಸ್ಕಾರ್ಪಿಯೋ ಎಸ್‍ಯುವಿಗಳ ಬಿಡುಗಡೆಯನ್ನು ಮುಂದಿನ ಹಣಕಾಸು ವರ್ಷಕ್ಕೆ ಮುಂದೂಡಲಾಗಿದೆ.

ಮಹೀಂದ್ರಾ ಕಂಪನಿಯು ಟಿಯುವಿ 300 ಎಸ್‍ಯುವಿಯನ್ನು 2015ರಲ್ಲಿ ಮೊದಲ ಬಾರಿಗೆ ಭಾರತೀಯ ಮಾರುಕಟ್ಟೆಯಲ್ಲಿ ಬಿಡುಗಡೆ ಮಾಡಲಾಗಿತ್ತು. ಈ ಎಸ್‍ಯುವಿಯ ಬಾಕ್ಸೀ ವಿನ್ಯಾಸವು ಜನಸಾಮಾನ್ಯರನ್ನು ಸೆಳೆಯುವಲ್ಲಿ ಸಣ್ಣ ಮಟ್ಟದ ವೈಫಲ್ಯವನ್ನು ಕಂಡಿದೆ. ಇನ್ನು ಈ ಬಾರಿ ಹಲವಾರು ಹೊಸತನದಿಂದ ಈ ಕ್ಯಾಂಪಕ್ಟ್ ಎಸ್‍ಯುವಿಯನ್ನು ಬಿಡುಗಡೆಗೊಳಿಸಬಹುದು ಎಂದು ನಿರೀಕ್ಷಿಸುತ್ತೇವೆ.