ಬಿಡುಗಡೆಯ ಸನಿಹದಲ್ಲಿ ಬಿಎಸ್-6 ಮಹೀಂದ್ರಾ ಟಿಯುವಿ 300 ಪ್ಲಸ್

ದೇಶದ ಪ್ರಮುಖ ಪ್ರಮುಖ ಕಾರು ಕಂಪನಿಗಳಲ್ಲಿ ಒಂದಾಗಿರುವ ಮಹೀಂದ್ರಾ ತನ್ನ ಪ್ರಮುಖ ಕಾರು ಮಾದರಿಗಳ ಬಿಎಸ್-6 ಆವೃತ್ತಿಗಳ ಬಿಡುಗಡೆಗೆ ಭರ್ಜರಿ ಸಿದ್ದತೆ ನಡೆಸಿದ್ದು, ಕಾರುಗಳ ಎಂಜಿನ್ ಕಾರ್ಯಕ್ಷಮತೆ ಕುರಿತಂತೆ ಅಂತಿಮ ಹಂತದ ಟೆಸ್ಟಿಂಗ್ ಪ್ರಕ್ರಿಯೆಗಳನ್ನು ಕೈಗೊಂಡಿದೆ.

ಬಿಡುಗಡೆಯ ಸನಿಹದಲ್ಲಿ ಬಿಎಸ್-6 ಮಹೀಂದ್ರಾ ಟಿಯುವಿ 300 ಪ್ಲಸ್

ದೇಶಾದ್ಯಂತ ಈಗಾಗಲೇ ಬಿಎಸ್-6 ನಿಯಮವು ಜಾರಿಗೆ ಬಂದಿದ್ದು, ಬಹುತೇಕ ಕಾರು ಕಂಪನಿಗಳು ತಮ್ಮ ಪ್ರಮುಖ ವಾಹನ ಮಾದರಿಗಳನ್ನು ಹೊಸ ಎಂಜಿನ್‌ನೊಂದಿಗೆ ಉನ್ನತೀಕರಿಸಿವೆ. ಆದರೆ ಮಹೀಂದ್ರಾ ಮಾತ್ರ ಇನ್ನು ಹಲವು ಎಸ್‌ಯುವಿ ಕಾರು ಮಾದರಿಗಳನ್ನು ಹೊಸ ಎಂಜಿನ್‌ನೊಂದಿಗೆ ಬಿಡುಗಡೆ ಮಾಡುವ ಯೋಜನೆಯಲ್ಲಿದ್ದು, ಕರೋನಾ ವೈರಸ್‌ನಿಂದಾಗಿ ಹಲವು ಹೊಸ ಕಾರು ಮಾದರಿಗಳ ಬಿಡುಗಡೆಯು ಮತ್ತಷ್ಟು ವಿಳಂಬವಾಗುವ ಸಾಧ್ಯತೆಗಳಿವೆ.

ಬಿಡುಗಡೆಯ ಸನಿಹದಲ್ಲಿ ಬಿಎಸ್-6 ಮಹೀಂದ್ರಾ ಟಿಯುವಿ 300 ಪ್ಲಸ್

ಆದರೆ ಹೊಸ ಎಂಜಿನ್ ಹೊಂದಿರುವ ಮಹೀಂದ್ರಾ ಬಿಎಸ್-6 ಕಾರುಗಳ ಈ ಬಾರಿ ಗ್ರಾಹಕರ ಸೆಳೆಯುವ ನಿಟ್ಟಿನಲ್ಲಿ ಹಲವು ಹೊಸ ಬದಲಾವಣೆಗಳೊಂದಿಗೆ ಮಾರುಕಟ್ಟೆ ಪ್ರವೇಶಿಸುತ್ತಿದ್ದು, ಎಕ್ಸ್‌ಯುವಿ300, ಟಿಯುವಿ300, ಟಿಯುವಿ300 ಪ್ಲಸ್ ಮಾದರಿಗಳು ಪ್ರಸ್ತುತ ಮಾದರಿಗಿಂತಲೂ ಹೊಸ ಆವೃತ್ತಿಯಲ್ಲಿ ಸಾಕಷ್ಟು ವಿಭಿನ್ನತೆ ಹೊಂದಿವೆ.

ಬಿಡುಗಡೆಯ ಸನಿಹದಲ್ಲಿ ಬಿಎಸ್-6 ಮಹೀಂದ್ರಾ ಟಿಯುವಿ 300 ಪ್ಲಸ್

ಹೊಸ ಎಂಜಿನ್ ಮಾದರಿಯನ್ನು ಜೋಡಿಸಲಾಗಿರುವ ಟಿಯುವಿ300 ಪ್ಲಸ್ ಮಾದರಿಯನ್ನು ರೋಡ್ ಟೆಸ್ಟಿಂಗ್ ನಡೆಸಲಾಗುತ್ತಿದ್ದು, ಚೆನ್ನೈ ಹೊರವಲಯದಲ್ಲಿ ಹೊಸ ಕಾರಿನ ತಾಂತ್ರಿಕ ಅಂಶಗಳ ಕುರಿತಾದ ಅಂತಿಮ ಹಂತದ ಟೆಸ್ಟಿಂಗ್ ಪೂರ್ಣಗೊಳಿಸಲಾಗುತ್ತಿದೆ.

ಬಿಡುಗಡೆಯ ಸನಿಹದಲ್ಲಿ ಬಿಎಸ್-6 ಮಹೀಂದ್ರಾ ಟಿಯುವಿ 300 ಪ್ಲಸ್

ಮಹೀಂದ್ರಾ ನಿರ್ಮಾಣದ ಸ್ಕಾರ್ಪಿಯೋ, ಎಕ್ಸ್‌ಯುವಿ 300 ಕಾರುಗಳು ಈಗಾಗಲೇ ಬಿಎಸ್-6 ಎಂಜಿನ್‌ನೊಂದಿಗೆ ಬಿಡುಗಡೆಗೊಂಡಿದ್ದು, ಇನ್ನುಳಿದ ಟಿಯುವಿ 300, ಟಿಯುವಿ300 ಪ್ಲಸ್, ಎಕ್ಸ್‌ಯುವಿ500 ಮತ್ತು ನೆಕ್ಸ್ಟ್ ಜನರೇಷನ್ ಥಾರ್ ಕಾರುಗಳು ಹೊಸ ಮಾದರಿಯ ಬಿಎಸ್-6 ಎಂಜಿನ್ ಸೌಲಭ್ಯದೊಂದಿಗೆ ಸ್ಪಾಟ್ ಟೆಸ್ಟಿಂಗ್ ನಡೆಸುತ್ತಿವೆ. ಮಾಹಿತಿಗಳ ಪ್ರಕಾರ ಮಹೀಂದ್ರಾ ಹೊಸ ಕಾರುಗಳು ಮುಂದಿನ ಮೇ ತಿಂಗಳ ಆರಂಭದಲ್ಲಿ ಮಾರುಕಟ್ಟೆಗೆ ಲಗ್ಗೆಯಿಡಲಿವೆ.

ಬಿಡುಗಡೆಯ ಸನಿಹದಲ್ಲಿ ಬಿಎಸ್-6 ಮಹೀಂದ್ರಾ ಟಿಯುವಿ 300 ಪ್ಲಸ್

ಬಿಎಸ್-6 ವೈಶಿಷ್ಟ್ಯತೆಗಳಿಂದಾಗಿ ಹೊಸ ಕಾರುಗಳಲ್ಲಿ ಹಲವಾರು ಹೊಸ ಸುರಕ್ಷಾ ಸೌಲಭ್ಯಗಳನ್ನು ನೀಡಲಾಗಿದ್ದು, ಎಕ್ಸ್‌ಯುವಿ500, ಎಕ್ಸ್‌ಯುವಿ300, ಟಿಯುವಿ300 ಪ್ಲಸ್ ಮತ್ತು ಥಾರ್ ಕಾರುಗಳಲ್ಲಿ ಆಲ್ ವೀಲ್ಹ್ ಡಿಸ್ಕ್ ಬ್ರೇಕ್, ಎಬಿಎಸ್ ಜೊತೆ ಇಬಿಡಿ, ಆಟೋಮ್ಯಾಟಿಕ್ ಕ್ಲೈಮೆಟ್ ಕಂಟ್ರೊಲ್ ಸಿಸ್ಟಂ, ಸ್ಪೀಡ್ ಅಲರ್ಟ್, ಸೀಟ್ ಬೆಲ್ಟ್ ರಿಮೆಂಡರ್ ಸೌಲಭ್ಯಗಳಿವೆ.

ಬಿಡುಗಡೆಯ ಸನಿಹದಲ್ಲಿ ಬಿಎಸ್-6 ಮಹೀಂದ್ರಾ ಟಿಯುವಿ 300 ಪ್ಲಸ್

ಹಾಗೆಯೇ 6 ಏರ್‌ಬ್ಯಾಗ್‌ಗಳು(ಟಾಪ್ ಎಂಡ್‌ಗಳಲ್ಲಿ), ಫ್ರಂಟ್ ಪಾರ್ಕಿಂಗ್ ಸೆನ್ಸಾರ್, ರಿಯರ್ ಪಾರ್ಕಿಂಗ್ ಕ್ಯಾಮೆರಾ, ಆಯ್ದ ವೆರಿಯೆಂಟ್‌ಗಳಲ್ಲಿ ಸನ್‌ರೂಫ್, ರೂಫ್ ರೈಲ್ಸ್, ಎಲ್‌ಇಡಿ ಹೆಡ್‌ಲ್ಯಾಂಪ್, ಎಲ್‌ಇಡಿ ಫಾಗ್ ಲ್ಯಾಂಪ್, ಟರ್ನ್ ಇಂಡಿಕೇಟಕ್ ಲೈಟ್, ಸಿಲ್ವರ್ ಸ್ಕೀಡ್ ಪ್ಲೇಟ್, ರಿಯರ್ ಎಸಿ ವೆಂಟ್ಸ್, ಲೆದರ್ ಸೀಟುಗಳು, 6 ಹಂತದಲ್ಲಿ ಹೊಂದಾಣಿಕೆ ಮಾಡಿಕೊಳ್ಳಬಹುದಾದ ಡ್ರೈವರ್ ಸೀಟು ಮತ್ತು ಒಂದೇ ಸೂರಿನಡಿ ವಿವಿಧ ಮಾಹಿತಿಗಳನ್ನು ನೀಡಬಲ್ಲ ಟಚ್ ಸ್ಕ್ರಿನ್ ಇನ್ಪೋಟೈನ್‌ಟೆಂಟ್ ಸಿಸ್ಟಂ ಜೋಡಣೆ ಮಾಡಲಾಗಿದೆ.

ಬಿಡುಗಡೆಯ ಸನಿಹದಲ್ಲಿ ಬಿಎಸ್-6 ಮಹೀಂದ್ರಾ ಟಿಯುವಿ 300 ಪ್ಲಸ್

ಅದಕ್ಕಿಂತಲೂ ಮುಖ್ಯವಾಗಿ ಸ್ಕಾರ್ಪಿಯೋ, ಎಕ್ಸ್‌ಯುವಿ500, ಎಕ್ಸ್‌ಯುವಿ300, ಟಿಯುವಿ300 ಪ್ಲಸ್ ಮತ್ತು ಥಾರ್ ನ್ಯೂ ಜನರೇಷನ್ ಕಾರುಗಳಲ್ಲಿ ಬಿಎಸ್-6 ಎಂಜಿನ್ ಅಳವಡಿಸಿರುವುದು ಮಾಲಿನ್ಯ ತಡೆಯುವಲ್ಲಿ ಸಾಕಷ್ಟು ಸಹಕಾರಿಯಾಗಲಿದ್ದು, ಶೇ.25ರಷ್ಚು ಹೊಗೆ ಉಗುಳುವ ಪ್ರಮಾಣ ಕಡಿಮೆಯಾಗಿದ್ದಲ್ಲಿ ಶೇ. 10ರಷ್ಟು ಮೈಲೇಜ್ ಪ್ರಮಾಣದಲ್ಲೂ ಏರಿಕೆಯಾಗಲಿದೆ.

Source: Electricvehicleweb

More from DriveSpark

Article Published On: Sunday, April 5, 2020, 8:45 [IST]
English summary
New Mahindra TUV300 Plus spotted testing details. Read in Kannada.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+