Just In
- 14 min ago
ಐಷಾರಾಮಿ ಕಾರು ಚಾಲಕನ ನಿರ್ಲಕ್ಷ್ಯಕ್ಕೆ ಪ್ರಾಣ ತೆತ್ತ ಪೊಲೀಸ್ ಕಾನ್ಸ್ಟೆಬಲ್ಗಳು
- 1 hr ago
ಭಾರತದಲ್ಲಿ 3 ಸೀರಿಸ್ ಗ್ರ್ಯಾನ್ ಲಿಮೊಸಿನ್ ಬಿಡುಗಡೆ ಮಾಡಿದ ಬಿಎಂಡಬ್ಲ್ಯು
- 2 hrs ago
2020ರ ಡಿಸೆಂಬರ್ ತಿಂಗಳಿನಲ್ಲಿ ಭರ್ಜರಿಯಾಗಿ ಮಾರಾಟವಾದ ಟಾಟಾ ಹ್ಯಾರಿಯರ್
- 3 hrs ago
ಭಾರತದಲ್ಲಿ ಬಿಡುಗಡೆಯಾದ ಐದು ವರ್ಷಗಳಲ್ಲಿ ಹೊಸ ದಾಖಲೆಗೆ ಕಾರಣವಾದ ಹ್ಯುಂಡೈ ಕ್ರೆಟಾ
Don't Miss!
- News
ಗಡಿಯಲ್ಲಿ ಮತ್ತೆ ಶಿವಸೇನೆ ಪುಂಡಾಟ; ಕರ್ನಾಟಕ ಪ್ರವೇಶ ಯತ್ನ ವಿಫಲ
- Movies
ಸುದೀಪ್ 'ಫ್ಯಾಂಟಮ್' ಸಿನಿಮಾದಲ್ಲಿ ಬಾಲಿವುಡ್ ಬಿಗ್ ಬಿ ಅಮಿತಾಬ್ ಬಚ್ಚನ್?
- Sports
ಆಸ್ಟ್ರೇಲಿಯಾ ತಂಡದ ಬದ್ಧತೆ ಹಾಗೂ ಪೈಯ್ನ್ ನಾಯಕತ್ವವನ್ನು ಪ್ರಶ್ನಿಸಿದ ಮಾಜಿ ಆಸಿಸ್ ಕ್ರಿಕೆಟಿಗ
- Lifestyle
ಈ 3 ವಸ್ತುಗಳನ್ನು ಹಾಕಿ ಮಾಡಿದ ಜ್ಯೂಸ್ ಕುಡಿದರೆ ಬೊಜ್ಜು ಕರುಗುತ್ತೆ, ಸೌಂದರ್ಯ ಹೆಚ್ಚುತ್ತೆ
- Finance
1986ರಿಂದ 2021 ಸೆನ್ಸೆಕ್ಸ್ ಪ್ರಮುಖ ಮೈಲುಗಲ್ಲುಗಳು: 50,000 ಪಾಯಿಂಟ್ ದಾಖಲೆ ಹಾದಿ
- Education
BMRCL Recruitment 2021: ಸೀನಿಯರ್ ಅರ್ಬನ್ ಮತ್ತು ಟ್ರಾನ್ಸ್ ಪೋರ್ಟ್ ಪ್ಲಾನರ್ ಹುದ್ದೆಗಳಿಗೆ ಅರ್ಜಿ ಆಹ್ವಾನ
- Technology
ಒನ್ಪ್ಲಸ್ ನಾರ್ಡ್ ಜುಲೈ 15 ರಿಂದ ಅಮೆಜಾನ್ ತಾಣದಲ್ಲಿ ಪ್ರಿ-ಆರ್ಡರ್ಗೆ ಲಭ್ಯವಿದೆ; ಖರೀದಿಸುವಲ್ಲಿ ಮೊದಲಿಗರಾಗಿರಿ!
- Travel
ಭಾರತದಲ್ಲಿ ಜೂನ್ 1 ರಿಂದ ಚಲಿಸಲಿರುವ ರೈಲುಗಳ ಸಂಪೂರ್ಣ ಪಟ್ಟಿ
ಹೊಸ ಬದಲಾವಣೆಯೊಂದಿಗೆ ಬಿಡುಗಡೆಗೆ ಸಿದ್ದವಾದ ಮಹೀಂದ್ರಾ ಬಿಎಸ್-6 ಟಿಯುವಿ300
ಮಹೀಂದ್ರಾ ಕಂಪನಿಯು ಈಗಾಗಲೇ ತನ್ನ ಪ್ರಮುಖ ಕಾರು ಮಾದರಿಗಳನ್ನು ಏಪ್ರಿಲ್ 1ರಿಂದ ಕಡ್ಡಾಯವಾಗಿ ಜಾರಿ ತರಲಾದ ಬಿಎಸ್-6 ಎಮಿಷನ್ ನಿಯಮ ಅನುಸಾರವಾಗಿ ಮಾರಾಟಗೊಳಿಸಿದ್ದು, ಬಾಕಿ ಉಳಿದಿರುವ ಟಿಯುವಿ300 ಕಂಪ್ಯಾಕ್ಟ್ ಎಸ್‌ಯುವಿ ಮಾದರಿಯನ್ನು ಸಹ ಶೀಘ್ರದಲ್ಲೇ ಹೊಸ ಎಂಜಿನ್ ಆಯ್ಕೆ ಸೇರಿ ಪ್ರಮುಖ ಬದಲಾವಣೆಯೊಂದಿಗೆ ಬಿಡುಗಡೆ ಮಾಡಲು ಸಜ್ಜುಗೊಂಡಿದೆ.

ಬಿಎಸ್-6 ಎಮಿಷನ್ ಜಾರಿ ನಂತರ ಹಲವು ಕಾರು ಮಾದರಿಗಳಲ್ಲಿನ ಎಂಜಿನ್ ಆಯ್ಕೆಯಲ್ಲಿ ಬದಲಾವಣೆ ಪರಿಚಯಿಸಿರುವುದಲ್ಲದೆ ನ್ಯೂ ಜನರೇಷನ್ ಮಾದರಿಗಳನ್ನು ಸಹ ಬಿಡುಗಡೆ ಮಾಡಿದ್ದು, ಕರೋನಾ ವೈರಸ್ ಪರಿಣಾಮ ಟಿಯುವಿ300 ಮಾದರಿಯ ಉನ್ನತೀಕರಣ ಪ್ರಕ್ರಿಯೆಯನ್ನು ತಟಸ್ಥವಾಗಿಟ್ಟಿತ್ತು. ಕಳೆದ ಕೆಲ ದಿನಗಳಿಂದಚೆಗೆ ಹೊಸ ಕಾರಿನ ಟೆಸ್ಟಿಂಗ್ ಪ್ರಕ್ರಿಯೆಗಳನ್ನು ಪೂರ್ಣಗೊಳಿಸಲಾಗುತ್ತಿದ್ದು, ಮುಂಬರುವ ಜನವರಿ ಮಧ್ಯಂತರದಲ್ಲಿ ಹೊಸ ಟಿಯುವಿ300 ರಸ್ತೆಗಿಳಿಯಲಿದೆ.

ಟಿಯುವಿ300 ಜೊತೆಗೆ ಟಿಯುವಿ300 ಪ್ಲಸ್ ಮಾದರಿಯನ್ನು ಸಹ ಹೊಸ ಎಂಜಿನ್ ಆಯ್ಕೆಯೊಂದಿಗೆ ರೋಡ್ ಟೆಸ್ಟಿಂಗ್ ಪ್ರಕ್ರಿಯೆಯನ್ನು ಪೂರ್ಣಗೊಳಿಸಲಾಗುತ್ತಿದ್ದು, ಹೊಸ ಕಾರುಗಳು ಬಿಎಸ್-6 ಎಂಜಿನ್ ಆಯ್ಕೆಯೊಂದಿಗೆ ವಿನ್ಯಾಸದಲ್ಲೂ ಕೆಲವು ಸಣ್ಣಪುಟ್ಟ ಬದಲಾವಣೆ ಪಡೆದುಕೊಳ್ಳಲಿವೆ.

ಮಹೀಂದ್ರಾ ಕಂಪನಿಯು ಈ ಬಾರಿ ಹೊಸ ಕಾರುಗಳಲ್ಲಿ ಸುರಕ್ಷಿತ ವಿಚಾರಕ್ಕೆ ಹೆಚ್ಚಿನ ಆದ್ಯತೆ ನೀಡುತ್ತಿರುವುದು ಕೂಡಾ ಪ್ರಯಾಣಿಕರಿಗೆ ಗರಿಷ್ಠ ಸುರಕ್ಷತೆಯನ್ನು ಖಾತ್ರಿಪಡಿಸಲಾಗುತ್ತಿದ್ದು, ನ್ಯೂ ಜನರೇಷನ್ ಥಾರ್ ಕಾರು ಮಾದರಿಯಲ್ಲೇ ಟಿಯುವಿ300 ಕ್ರ್ಯಾಶ್ ಟೆಸ್ಟಿಂಗ್‌ನಲ್ಲಿ ಗಮನಸೆಳೆಯಲಿದೆ.

ಹಾಗೆಯೇ ಹೊಸ ಎಸ್‍ಯುವಿ ಕಾರುಗಳಲ್ಲಿ ನವೀಕರಿಸಲಾದ ಇಂಟಿರಿಯರ್ ಸೌಲಭ್ಯಗಳನ್ನು ಜೋಡಣೆ ಮಾಡಲಾಗಿದ್ದು, ಆಪಲ್ ಕಾರ್‌ಪ್ಲೇ ಮತ್ತು ಆಂಡ್ರಾಯ್ಡ್ ಆಟೋ ಕನೆಕ್ಟಿವಿಟಿ ಸೌಲಭ್ಯವು ಸ್ಟ್ಯಾಂಡರ್ಡ್ ಆಗಿ ನೀಡಲಾಗುತ್ತಿದೆ. ಪ್ರೀಮಿಯಂ ಕ್ಯಾಬಿನ್ ಫೀಚರ್ಸ್‌ಗಳಿಂದಾಗಿ ಕಾರಿನ ಪ್ರಯಾಣವು ಮತ್ತಷ್ಟು ಆರಾಮದಾಯಕವಾಗಿರಲಿದ್ದು, ಕೀ ಲೆಸ್ ಎಂಟ್ರಿ, ಸಾಫ್ಟ್ ಟಚ್ ಪ್ಲಾಸ್ಟಿಕ್, ಎತ್ತರ ಹೊಂದಾಣಿಕೆ ಮಾಡಬಹುದಾದ ಚಾಲಕನ ಆಸನ ಗಮನಸೆಳೆಯಲಿದೆ.

ಹೊಸ ಕಾರುಗಳಲ್ಲಿ ಸುರಕ್ಷತೆಗಾಗಿ ಡ್ಯುಯಲ್ ಫ್ರಂಟ್ ಏರ್‌ಬ್ಯಾಗ್, ಎಬಿಎಸ್ ಜೊತೆ ಇಬಿಡಿ, ರಿಯರ್ ಪಾರ್ಕಿಂಗ್ ಸೆನ್ಸಾರ್ ಸೇರಿದಂತೆ ಹಲವಾರು ಹೊಸ ಫೀಚರ್ಸ್‌ಗಳು ಸ್ಟ್ಯಾಂಡರ್ಡ್ ಆಗಿ ದೊರಲಿದ್ದು, ಹೊಸ ಕಾರಿನ ಎಂಜಿನ್ ಆಯ್ಕೆ ಈ ಬಾರಿ ಪ್ರಮುಖ ಆಕರ್ಷಣೆಯಾಗಲಿದೆ.

ಬಿಎಸ್-4 ಮಾದರಿಯಲ್ಲಿ 1.5-ಲೀಟರ್ ಡೀಸೆಲ್ ಎಂಜಿನ್ ಹೊಂದಿದ್ದ ಟಿಯುವಿ300 ಕಾರು ಮಾದರಿಯು ಬಿಎಸ್-6 ಮಾದರಿಯಲ್ಲೂ ಉನ್ನತೀಕರಿಸಲಾದ 1.5-ಲೀಟರ್ ಡೀಸೆಲ್ ಎಂಜಿನ್‌ನೊಂದಿಗೆ ಹೊಸದಾಗಿ ಟರ್ಬೋ ಪೆಟ್ರೋಲ್ ಎಂಜಿನ್ ಪಡೆದುಕೊಳ್ಳುವ ಸಾಧ್ಯತೆಗಳಿವೆ.

ಹೌದು, ಮಹೀಂದ್ರಾ ಹೊಸದಾಗಿ ಅಭಿವೃದ್ದಿಗೊಳಿಸಿರುವ 1.2-ಲೀಟರ್ ಎಂ-ಸ್ಟಾಲಿನ್ ಟರ್ಬೋ ಪೆಟ್ರೋಲ್ ಮಾದರಿಯನ್ನು ಬಿಎಸ್-6 ಟಿಯುವಿ300 ಮಾದರಿಯಲ್ಲಿ ಜೋಡಿಸುವ ಸಾಧ್ಯತೆಗಳಿದ್ದು, ಎಕ್ಸ್‌ಯುವಿ300 ಟರ್ಬೋ ಪೆಟ್ರೋಲ್ ಮಾದರಿಯಲ್ಲೂ ಇದೇ ಎಂಜಿನ್ ಅನ್ನು ಜೋಡಿಸಲಾಗುತ್ತಿದೆ.
MOST READ: 2020ರ ಅವಧಿಯಲ್ಲಿ ಬಿಡುಗಡೆಯಾದ ಪ್ರಮುಖ ಹತ್ತು ಕಾರುಗಳಿವು..!

ಶೀಘ್ರದಲ್ಲೇ 1.2-ಲೀಟರ್ ಎಂ-ಸ್ಟಾಲಿನ್ ಟರ್ಬೋ ಪೆಟ್ರೋಲ್ ಎಂಜಿನ್ ಹೊಂದಿರುವ ಎಕ್ಸ್‌ಯುವಿ300 ಕಾರು ಬಿಡುಗಡೆಯಾಗುತ್ತಿದ್ದು, ಇದಾದ ಬಳಿಕ ಟಿಯುವಿ300 ಮಾದರಿಯಲ್ಲೂ ಹೊಸ ಪೆಟ್ರೋಲ್ ಎಂಜಿನ್ ಪರಿಚಯಿಸಲು ನಿರ್ಧರಿಸಲಾಗಿದೆ.

ಮಹೀಂದ್ರಾ ಹೊಸ ಎಂ-ಸ್ಟಾಲಿನ್ 1.2-ಲೀಟರ್ ಪೆಟ್ರೋಲ್ ಮಾದರಿಯು 129-ಬಿಎಚ್‌ಪಿ ಉತ್ಪಾದನಾ ಶಕ್ತಿ ಹೊಂದಿದ್ದು, ಇದು ಮಧ್ಯಮ ಗಾತ್ರದ ಕಾರುಗಳಲ್ಲಿ ಅತಿ ಬಿಎಚ್‌ಪಿ ಉತ್ಪಾದನಾ ಟರ್ಬೋ ಪೆಟ್ರೋಲ್ ಮಾದರಿಯಾಗಿದೆ.
MOST READ: ಪ್ರತಿ ಚಾರ್ಜ್‌ಗೆ ಗರಿಷ್ಠ 509ಕಿ.ಮೀ ಮೈಲೇಜ್ ನೀಡಲಿದೆ ಸ್ಕೋಡಾ ಎನ್ಯಾಕ್ ಎಲೆಕ್ಟ್ರಿಕ್ ಎಸ್ಯುವಿ..!

ಹೀಗಾಗಿ ಹೊಸ ಎಂಜಿನ್ ಬಳಿಕ ಟಿಯುವಿ300 ಮಾದರಿಯು ಈ ಮಾದರಿಗಿಂತಲೂ ಹೆಚ್ಚುವರಿಯಾಗಿ ರೂ.50 ಸಾವಿರದಿಂದ ರೂ.80 ಸಾವಿರ ತನಕ ಹೆಚ್ಚುವರಿ ಬೆಲೆ ಪಡೆದುಕೊಳ್ಳುವ ಸಾಧ್ಯತೆಗಳಿದ್ದು, ಹೊಸ ಕಾರು ಫೋರ್ಡ್ ಇಕೋಸ್ಪೋರ್ಟ್, ಹ್ಯುಂಡೈ ವೆನ್ಯೂ, ಟಾಟಾ ನೆಕ್ಸಾನ್, ಹೋಂಡಾ ಡಬ್ಲ್ಯುಆರ್-ವಿ ಮತ್ತು ಮಾರುತಿ ಸುಜುಕಿ ವಿಟಾರಾ ಬ್ರೆಝಾ ಕಾರುಗಳಿಗೆ ಮತ್ತಷ್ಟು ಪೈಪೋಟಿ ನೀಡಲಿದೆ.
Image Courtesy: Sridhar Sri/4x4 India