ಬಿಡುಗಡೆಯಾಗಲಿದೆ ಹೊಸ ಮಹೀಂದ್ರಾ ಎಕ್ಸ್‌ಯುವಿ500
ಮಹೀಂದ್ರಾ ಅಂಡ್ ಮಹೀಂದ್ರಾ ಲಿಮಿಟೆಡ್ ಕಂಪನಿಯು ತನ್ನ ಹೊಸ ಎಕ್ಸ್‌ಯುವಿ500 ಎಸ್‍ಯುವಿಯನ್ನು ಭಾರತೀಯ ಮಾರುಕಟ್ಟೆಯಲ್ಲಿ ಬಿಡುಗಡೆಗೊಳಿಸಲು ಸಜ್ಜಾಗುತ್ತಿದೆ. ಮಹೀಂದ್ರಾ ಕಂಪನಿಯು ಹೊಸ ಎಕ್ಸ್‌ಯುವಿ500 ಎಸ್‍ಯುವಿಯನ್ನು ಭಾರತೀಯ ರಸ್ತೆಗಳಲ್ಲಿ ಟೆಸ್ಟ್ ಮಾಡಲಾಗುತ್ತಿದೆ.

ಬಿಎಸ್-6 ಎಕ್ಸ್‌ಯುವಿ500 ಎಸ್‍ಯುವಿಯನ್ನು2021ರ ಮಾರ್ಚ್ ಒಳಗೆ ಭಾರತದಲ್ಲಿ ಬಿಡುಗಡೆಗೊಳಿಸಲಿದೆ ಎಂದು ಮಹೀಂದ್ರಾ ಕಂಪನಿಯು ಖಚಿತಪಡಿಸಿದೆ. ಹೊಸ ಎಕ್ಸ್‌ಯುವಿ500 ಎಸ್‍ಯುವಿಯು 2020ರ ಆಟೋ ಎಕ್ಸ್ ಪೋದಲ್ಲಿ ಪ್ರದರ್ಶಿಸಲಾದ ಮಹೀಂದ್ರಾ ಫನ್‍ಸ್ಟರ್ ಕಾನ್ಸೆಪ್ಟ್ ಎಸ್‍ಯುವಿಯ ಮಾದರಿಯ ಬಾಡಿ ಪಾನೆಲ್‍ಗಳು ಮತ್ತು ಇಂಟಿರಿಯರ್ ಹೊಂದಿರುತ್ತದೆ ಎಂದು ನಿರೀಕ್ಷಿಸುತ್ತೇವೆ.

ಹೊಸ ಎಕ್ಸ್‌ಯುವಿ500 ಎಸ್‍ಯುವಿಯ ಮುಂಭಾಗದಲ್ಲಿ ಫ್ಯಾಮಿಲಿ ಗ್ರಿಲ್ ಮತ್ತು ಹೆಡ್‍ಲ್ಯಾಂಪ್‍ಗಳನ್ನು ಹೊಂದಿರುತ್ತದೆ. ಇದರೊಂದಿಗೆ ಎಲ್ಇಡಿ ಹೆಡ್‍ಲ್ಯಾಂಪ್‍ಗಳು ಮತ್ತು ಡೇಟೈಮ್ ರನ್ನಿಂಗ್ ಲ್ಯಾಂಪ್‍ಗಳನ್ನು ಸ್ಟ್ಯಾಂಡರ್ಡ್ ಆಗಿ ನೀಡಬಹುದು ಎಂದು ನಿರೀಕ್ಷಿಸುತ್ತೇವೆ.

ಇಂಟಿರಿಯರ್‍ನಲ್ಲಿ ಹಲವಾರು ಉನ್ನತ ಮಟ್ಟದ ನೂತನ ಫೀಚರ್ಸ್‍ಗಳನ್ನು ಅಳವಡಿಸಲಾಗಿದೆ. ಹೊಸ ಎಕ್ಸ್‌ಯುವಿ500 ಎಸ್‍ಯುವಿಯಲ್ಲಿ ಫ್ಲಶ್-ಫಿಟ್ಟಿಂಗ್ ಡೋರ್ ಹ್ಯಾಂಡಲ್‌ಗಳು ಹೊಂದಿರಬಹುದು.

ಮುಂಬರುವ 2020ರ ಮಹೀಂದ್ರಾ ಎಕ್ಸ್‌ಯುವಿ 500 ಎಸ್‍ಯುವಿಯ ಇಂಟಿರಿಯರ್‍ನಲ್ಲಿ ಬ್ಲೂಟೂತ್ ಆಡಿಯೊ ಕಂಟ್ರೋಲ್‍ಗಳನ್ನು ಕನೆಕ್ಟ್ ಮಾಡಿರುವ ಎಲ್ಲಾ ಹೊಸ ಫ್ಲಾಟ್ ಬಾಟಮ್ ಸ್ಟೀರಿಂಗ್ ವ್ಹೀಲ್ ಅನ್ನು ಅಳವಡಿಸಲಾಗಿದೆ. ಹೊಸ ಎಸ್‍ಯುವಿಯಲ್ಲಿ ಆಟೋಮ್ಯಾಟಿಕ್ ಕ್ಲೈಮೆಂಟ್ ಕಂಟ್ರೋಲ್, ಡಿಜಿಟಲ್ ಎಂಐಡಿ ಮತ್ತು ದೊಡ್ಡ ಟಚ್‍ಸ್ಕ್ರೀನ್ ಇನ್ಪೋಟೇನ್‍ಮೆಂಟ್ ಸಿಸ್ಟಂ ಅನ್ನು ಒಳಗೊಂಡಿದೆ.

ಇದರೊಂದಿಗೆ 6 ಏರ್‌ಬ್ಯಾಗ್‌ಗಳು, ಫ್ರಂಟ್ ಪಾರ್ಕಿಂಗ್ ಸೆನ್ಸಾರ್, ರೇರ್ ಪಾರ್ಕಿಂಗ್ ಕ್ಯಾಮೆರಾ, ಆಯ್ದ ವೆರಿಯೆಂಟ್‌ಗಳಲ್ಲಿ ಸನ್‌ರೂಫ್, ರೂಫ್ ರೈಲ್ಸ್, ಎಲ್‌ಇಡಿ ಫಾಗ್ ಲ್ಯಾಂಪ್, ಟರ್ನ್ ಇಂಡಿಕೇಟಕ್ ಲೈಟ್, ಸಿಲ್ವರ್ ಸ್ಕೀಡ್ ಪ್ಲೇಟ್, ರೇರ್ ಎಸಿ ವೆಂಟ್ಸ್, ಲೆದರ್ ಸೀಟುಗಳು ಮತ್ತು ಒಂದೇ ಸೂರಿನಡಿ ವಿವಿಧ ಮಾಹಿತಿಗಳನ್ನು ನೀಡಬಲ್ಲ ಟಚ್ ಸ್ಕ್ರಿನ್ ಇನ್ಪೋಟೇನ್ ಸಿಸ್ಟಂ ಅನ್ನು ಕೂಡ ಅಳವಡಿಸಲಾಗಿದೆ.

ಪ್ರಸ್ತುತ ದೇಶಿಯ ಮಾರುಕಟ್ಟೆಯಲ್ಲಿ ಮಾರಾಟವಾಗುತ್ತಿರುವ ಎಕ್ಸ್‌ಯುವಿ 500ನಲ್ಲಿ 2.2 ಲೀಟರ್ ಎಮ್ಹಾಕ್ ಟರ್ಬೊ ಜಾರ್ಜ್ಡ್ ಪೆಟ್ರೋಲ್ ಮತ್ತು ಡೀಸೆಲ್ ಎಂಜಿನ್ ಅನ್ನು ಹೊಂದಿದೆ. ಡೀಸೆಲ್ ಎಂಜಿನ್ 155 ಬಿಹೆಚ್‍ಪಿ ಪವರ್ ಮತ್ತು 360 ಎನ್‍ಎಂ ಟಾರ್ಕ್ ಅನ್ನು ಉತ್ಪಾದಿಸಿದರೆ, ಪೆಟ್ರೋಲ್ ಎಂಜಿನ್ 140 ಬಿಹೆಚ್‍ಪಿ ಪವರ್ ಮತ್ತು 320 ಎನ್‍ಎಂ ಟಾರ್ಕ್ ಅನ್ನು ಉತ್ಪಾದಿಸುತ್ತದೆ.

2020ರ ಮಹೀಂದ್ರಾ ಎಕ್ಸ್‌ಯುವಿ500ನಲ್ಲಿ ಬಿಎಸ್-6 ಮಾಲಿನ್ಯ ನಿಯಮಕ್ಕೆ ಅನುಸಾರವಾಗಿ ಎಂಜಿನ್ ಅನ್ನು ಅಳವಡಿಸಲಾಗಿದೆ. ಹೊಸ 2.0 ಲೀಟರ್ ಡೀಸೆಲ್ ಎಂಜಿನ್ ಅನ್ನು ಅಳವಡಿಸಲಿದೆ. ಈ ಎಂಜಿನ್ 180 ಬಿಹೆಚ್‍ಪಿ ಪವರ್ ಅನ್ನು ಉತ್ಪಾದಿಸುತ್ತದೆ. ಎಂಜಿನ್‍ನೊಂದಿಗೆ 6 ಸ್ಪೀಡ್ ಮ್ಯಾನುವಲ್ ಮತ್ತು ಆಟೋಮ್ಯಾಟಿಕ್ ಗೇರ್‍ಬಾಕ್ಸ್ ಅನ್ನು ಹೊಂದಿರಲಿದೆ.

ಪ್ರಸ್ತುತ ಮಾರುಕಟ್ಟೆಯಲ್ಲಿ ಮಾರಾಟವಾಗುತ್ತಿರುವ ಎಕ್ಸ್‌ಯುವಿ 500 ಹೋಲಿಸಿದರೆ ಹೊಸ ಬಿಎಸ್-6 ಮಾದರಿಯು ಹೆಚ್ಚಿನ ಬೆಲೆಯನ್ನು ಹೊಂದಿರಲಿದೆ. ದೇಶಿಯ ಮಾರುಕಟ್ಟೆಯಲ್ಲಿ ಬಿಡುಗಡೆಯಾದ ಬಳಿಕ ಎಕ್ಸ್‌ಯುವಿ 500, ಬಿಡುಗಡೆಯಾದ ಬಳಿಕ ಎಂಜಿ ಹೆಕ್ಟರ್, ಜೀಪ್ ಕಂಪಾಸ್, ಟಾಟಾ ಹ್ಯಾರಿಯರ್ ಮತ್ತು ಕಿಯಾ ಸೆಲ್ಟೋಸ್ ಎಸ್‍ಯುವಿಗಳಿಗೆ ಪೈಪೋಟಿಯನ್ನು ನೀಡಲಿದೆ.


Click it and Unblock the Notifications