ಲಾಕ್‌ಡೌನ್ ಸಂಕಷ್ಟ: ನ್ಯೂ ಜನರೇಷನ್ ಎಕ್ಸ್‌ಯುವಿ500 ಮತ್ತು ಸ್ಕಾರ್ಪಿಯೋ ಬಿಡುಗಡೆ ಮುಂದೂಡಿಕೆ

ಮಾಹಾಮಾರಿ ಕರೋನಾ ವೈರಸ‌್‌ನಿಂದಾಗಿ ಆಟೋ ಉದ್ಯಮವು ಭಾರೀ ಪ್ರಮಾಣದ ನಷ್ಟ ಅನುಭವಿಸುತ್ತಿದ್ದು, ವೈರಸ್ ಭೀತಿ ಹಿನ್ನಲೆಯಲ್ಲಿ ಹಲವಾರು ಕಾರು ಮಾದರಿಗಳ ಬಿಡುಗಡೆಯು ಮುಂದೂಡಿಕೆಯಾಗಿರುವುದಲ್ಲದೆ ಕೆಲ ಕಾರು ಮಾದರಿಗಳ ಬಿಡುಗಡೆಯ ಯೋಜನೆಯನ್ನೇ ಕೈಬಿಡಲಾಗುತ್ತಿದೆ.

ನ್ಯೂ ಜನರೇಷನ್ ಎಕ್ಸ್‌ಯುವಿ500 ಮತ್ತು ಸ್ಕಾರ್ಪಿಯೋ ಬಿಡುಗಡೆ ಮುಂದೂಡಿಕೆ

ಮಹೀಂದ್ರಾ ಕಂಪನಿಯು ಸಹ ಸಂಕಷ್ಟದ ಸಮಯದಲ್ಲೂ ಸರ್ಕಾರದ ಜೊತೆ ಕೈಜೋಡಿಸುವ ಮೂಲಕ ಕರೋನಾ ವೈರಸ್ ವಿರುದ್ಧ ಹೋರಾಟಕ್ಕಾಗಿ ದೇಣಿಗೆ ನೀಡಿರುವುದಲ್ಲದೇ ಹೊಸ ಸುರಕ್ಷಾ ಕ್ರಮಗಳೊಂದಿಗೆ ಉದ್ಯಮ ವ್ಯವಹಾರಗಳನ್ನು ಮುನ್ನಡೆಸುತ್ತಿದ್ದು, ಲಾಕ್‌ಡೌನ್ ಸಡಿಲಿಕೆ ನಂತರ ಬಿಡುಗಡೆಯಾಗಬೇಕಿದ್ದ ಕೆಲವು ಪ್ರಮುಖ ಕಾರುಗಳ ಬಿಡುಗಡೆಯನ್ನು ಸದ್ಯಕ್ಕೆ ಮುಂದೂಡಿಕೆ ಮಾಡಿದೆ.

ನ್ಯೂ ಜನರೇಷನ್ ಎಕ್ಸ್‌ಯುವಿ500 ಮತ್ತು ಸ್ಕಾರ್ಪಿಯೋ ಬಿಡುಗಡೆ ಮುಂದೂಡಿಕೆ

ಹೌದು, ಮುಂಬರುವ ಕೆಲವೇ ದಿನಗಳಲ್ಲಿ ಬಿಡುಗಡೆಯಾಗಬೇಕಿದ್ದ ನ್ಯೂ ಜನರೇಷನ್ ಎಕ್ಸ್‌ಯುವಿ500 ಮತ್ತು ಸ್ಕಾರ್ಪಿಯೋ ಕಾರುಗಳ ಬಿಡುಗಡೆಯನ್ನು ಮುಂದೂಡಿಕೆ ಮಾಡಲಾಗಿದ್ದು, 2021-22ರ ಹಣಕಾಸು ವರ್ಷದಲ್ಲಿ ಬಿಡುಗಡೆ ಮಾಡಲಿದೆ.

MOST READ: ಲಾಕ್‌ಡೌನ್ ಸಂಕಷ್ಟ: ಸೆಕೆಂಡ್ ಹ್ಯಾಂಡ್ ಕಾರು ಮಾರಾಟ ಉದ್ಯಮ ಆರಂಭಿಸಿದ ಫೋಕ್ಸ್‌ವ್ಯಾಗನ್

ನ್ಯೂ ಜನರೇಷನ್ ಎಕ್ಸ್‌ಯುವಿ500 ಮತ್ತು ಸ್ಕಾರ್ಪಿಯೋ ಬಿಡುಗಡೆ ಮುಂದೂಡಿಕೆ

ಸದ್ಯ ಎಕ್ಸ್‌ಯುವಿ500 ಮತ್ತು ಸ್ಕಾರ್ಪಿಯೋ ಕಾರುಗಳ 2020ರ ಮಾದರಿಗಳನ್ನು ಬಿಎಸ್-6 ಎಂಜಿನ್‌ನೊಂದಿಗೆ ಮಾತ್ರವೇ ಬಿಡುಗಡೆ ಮಾಡಲಾಗಿದ್ದು, ಹೊಸ ವಿನ್ಯಾಸ ಮತ್ತು ವಿವಿಧ ಎಂಜಿನ್ ಆಯ್ಕೆ ಹೊಂದಿದ್ದ ನ್ಯೂ ಜನರೇಷನ್ ಮಾದರಿಗಳ ಬಿಡುಗಡೆಯನ್ನು ಮುಂದೂಡಲಾಗಿದೆ.

ನ್ಯೂ ಜನರೇಷನ್ ಎಕ್ಸ್‌ಯುವಿ500 ಮತ್ತು ಸ್ಕಾರ್ಪಿಯೋ ಬಿಡುಗಡೆ ಮುಂದೂಡಿಕೆ

ಇನ್ನು ಆಟೋ ಉದ್ಯಮ ಸೇರಿದಂತೆ ಎಲ್ಲಾ ವಲಯದಲ್ಲೂ ಕರೋನಾ ಮಹಾಮಾರಿಯಿಂದಾಗಿ ಆರ್ಥಿಕ ಸಂಕಷ್ಟ ಎದುರಾಗಿದ್ದು, ವ್ಯಾಪಾರ ಅಭಿವೃದ್ದಿಯು ಇದೀಗ ಹೊಸ ಸವಾಲಾಗಿ ಪರಿಣಮಿಸಿದೆ. ಸದ್ಯಕ್ಕೆ ಆಟೋ ಉದ್ಯಮಕ್ಕೆ ಕೆಲವು ವಿನಾಯ್ತಿಗಳನ್ನು ನೀಡಲಾಗಿದ್ದರೂ ಕೂಡಾ ವಾಹನ ಖರೀದಿದಾರರು ಇಲ್ಲದೆ ಪರದಾಡುವಂತಹ ಪರಿಸ್ಥಿತಿ ಎದುರಾಗಿದೆ.

MOST READ: ಹೆಚ್ಚಿದ ಕರೋನಾ ಭೀತಿ: ವಾಹನ ದಾಖಲೆಗಳ ಮಾನ್ಯತಾ ಅವಧಿಯು ಮತ್ತೊಮ್ಮೆ ವಿಸ್ತರಣೆ

ನ್ಯೂ ಜನರೇಷನ್ ಎಕ್ಸ್‌ಯುವಿ500 ಮತ್ತು ಸ್ಕಾರ್ಪಿಯೋ ಬಿಡುಗಡೆ ಮುಂದೂಡಿಕೆ

ಲಾಕ್‌ಡೌನ್‌ನಿಂದ ಬಹುತೇಕ ವಾಣಿಜ್ಯ ಚಟುವಟಿಕೆಗಳು ನೆಲಕಚ್ಚಿದ್ದು, ಎಲ್ಲಾ ಕ್ಷೇತ್ರಗಳಲ್ಲೂ ಉದ್ಯೋಗದ ಅಭದ್ರತೆ ಇದೀಗ ಅತಿ ದೊಡ್ಡ ಸಮಸ್ಯೆಯಾಗಿ ಕಾಡತೋಡಗಿದೆ. ಹೀಗಿರುವಾಗ ಹೊಸ ವಾಹನಗಳ ಮಾರಾಟವನ್ನು ಸರಿದಾರಿಗೆ ತರಲು ಯತ್ನಿಸುತ್ತಿರುವ ಆಟೋ ಕಂಪನಿಯು ಕೆಲವು ಮಹತ್ವದ ನಿರ್ಧಾರಗಳನ್ನು ಪ್ರಕಟಿಸಿದ್ದು, ಹೊಸ ವಾಹನ ಖರೀದಿದಾರರಿಗೆ ಇಎಂಐ ತಗ್ಗಿಸಿ ಅತಿ ಸುಲಭವಾದ ಸಾಲ ಸೌಲಭ್ಯಗಳನ್ನು ನೀಡಲಾಗುತ್ತಿದೆ.

ನ್ಯೂ ಜನರೇಷನ್ ಎಕ್ಸ್‌ಯುವಿ500 ಮತ್ತು ಸ್ಕಾರ್ಪಿಯೋ ಬಿಡುಗಡೆ ಮುಂದೂಡಿಕೆ

ಲಾಕ್‌ಡೌನ್‌ಗೂ ಮೊದಲು ಬುಕ್ಕಿಂಗ್ ಮಾಡಿ ವಾಹನ ಖರೀದಿಯ ಸಂಭ್ರಮದಲ್ಲಿದ್ದ ಗ್ರಾಹಕರು ಇದೀಗ ಖರೀದಿ ಪ್ರಕ್ರಿಯೆಯಿಂದ ಹಿಂದೆ ಸರಿಯುತ್ತಿದ್ದು, ಮಾರಾಟ ಮಳಿಗೆಗಳು ಪುನಾರಂಭಗೊಂಡ ನಂತರವೂ ವಾಹನ ಖರೀದಿ ಬದಲು ಬುಕ್ಕಿಂಗ್ ಹಣ ವಾಪಸ್ ನೀಡುವಂತೆ ಬೇಡಿಕೆಯಿಡುತ್ತಿರುವುದು ಆಟೋ ಕಂಪನಿಗಳನ್ನು ಚಿಂತೆಗೀಡು ಮಾಡಿದೆ.

MOST READ: ರೂ.5 ಲಕ್ಷಕ್ಕಿಂತ ಕಡಿಮೆ ಬೆಲೆಯ ಜನಪ್ರಿಯ ಕಾರುಗಳಿವು

ನ್ಯೂ ಜನರೇಷನ್ ಎಕ್ಸ್‌ಯುವಿ500 ಮತ್ತು ಸ್ಕಾರ್ಪಿಯೋ ಬಿಡುಗಡೆ ಮುಂದೂಡಿಕೆ

ಹೀಗಾಗಿ ಸದ್ಯ ಮಾರುಕಟ್ಟೆಯಲ್ಲಿರುವ ಕಾರುಗಳ ಮಾರಾಟದ ಮೇಲೆ ಮಾತ್ರವೇ ಹೆಚ್ಚು ಗಮನಹರಿಸಿರುವ ಆಟೋ ಕಂಪನಿಗಳು ಹೊಸ ಮಾದರಿಯ ಕಾರುಗಳ ಬಿಡುಗಡೆಯನ್ನು ಮುಂದೂಡಿಕೆ ಮಾಡುತ್ತಿದ್ದು, ಪರಿಸ್ಥಿತಿ ಸುಧಾರಣೆ ನಂತರವಷ್ಟೇ ಹಲವು ಹೊಸ ಕಾರುಗಳು ಮಾರುಕಟ್ಟೆ ಪ್ರವೇಶಿಸಲಿವೆ.

Most Read Articles

Kannada
English summary
New Mahindra XUV500 And Scorpio Launch Postponed To Next Financial Year Details, Read in Kannada.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X