Just In
Don't Miss!
- News
ಶಶಿಕಲಾ ಈಗ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಸಾಮಾನ್ಯ ರೋಗಿ
- Finance
ಹೊಸ ಸಾರ್ವಕಾಲಿಕ ದಾಖಲೆ ಬರೆದ ಪೆಟ್ರೋಲ್- ಡೀಸೆಲ್ ದರ; ಯಾವ ನಗರದಲ್ಲಿ ಎಷ್ಟು?
- Movies
ರೈತರ ಪ್ರತಿಭಟನೆ: ಕೆಂಪುಕೋಟೆ ಮೇಲೆ ಬಾವುಟ ಹಾರಿಸಿದ್ದು ಸಿನಿಮಾ ನಟ ದೀಪ್ ಸಿಧು?
- Lifestyle
ಹೊಟ್ಟೆಯ ಬಲಭಾಗದಲ್ಲಿ ನೋವು, ಈ ತೊಂದರೆಗಳಿರಬಹುದು
- Sports
ವಿರಾಟ್ ಕೊಹ್ಲಿ ಮತ್ತು ನನ್ನ ಮಧ್ಯೆ ಏನೂ ಬದಲಾಗಿಲ್ಲ: ಅಜಿಂಕ್ಯ ರಹಾನೆ
- Education
ECIL Recruitment 2021: 3 ಟೆಕ್ನಿಕಲ್ ಅಧಿಕಾರಿ ಹುದ್ದೆಗಳಿಗೆ ನೇರ ಸಂದರ್ಶನ
- Technology
ಒನ್ಪ್ಲಸ್ ನಾರ್ಡ್ ಜುಲೈ 15 ರಿಂದ ಅಮೆಜಾನ್ ತಾಣದಲ್ಲಿ ಪ್ರಿ-ಆರ್ಡರ್ಗೆ ಲಭ್ಯವಿದೆ; ಖರೀದಿಸುವಲ್ಲಿ ಮೊದಲಿಗರಾಗಿರಿ!
- Travel
ಭಾರತದಲ್ಲಿ ಜೂನ್ 1 ರಿಂದ ಚಲಿಸಲಿರುವ ರೈಲುಗಳ ಸಂಪೂರ್ಣ ಪಟ್ಟಿ
ಐಷಾರಾಮಿ ಫೀಚರ್ಸ್ ಪಡೆದುಕೊಳ್ಳಲಿದೆ ನ್ಯೂ ಜನರೇಷನ್ ಮಹೀಂದ್ರಾ ಎಕ್ಸ್‌ಯುವಿ500
ನ್ಯೂ ಜನರೇಷನ್ ಎಕ್ಸ್‌ಯುವಿ500 ಕಾರು ಮಾದರಿಯ ಬಿಡುಗಡೆಗಾಗಿ ಮಹೀಂದ್ರಾ ಕಂಪನಿಯು ಅಂತಿಮ ಹಂತದ ರೋಡ್ ಟೆಸ್ಟಿಂಗ್ ಪ್ರಕ್ರಿಯೆಗಳನ್ನು ಪೂರ್ಣಗೊಳಿಸುತ್ತಿದ್ದು, ಹೊಸ ಕಾರು ಐಷಾರಾಮಿ ಕಾರುಗಳ ಮಾದರಿಯಲ್ಲಿ ಹಲವಾರು ಫೀಚರ್ಸ್ ಪಡೆದುಕೊಳ್ಳಲಿದೆ.

ಎರಡನೇ ತಲೆಮಾರಿನ ವೈಶಿಷ್ಟ್ಯತೆಗಳೊಂದಿಗೆ ಬಿಡುಗಡೆಯಾಗುತ್ತಿರುವ ಎಕ್ಸ್‌ಯುವಿ500 ಕಾರು ಮಾದರಿಯು ಭಾರೀ ಬದಲಾವಣೆಯೊಂದಿಗೆ ಮಾರುಕಟ್ಟೆ ಪ್ರವೇಶಿಸುತ್ತಿದ್ದು, ವಿವಿಧ ಹಂತದ ರೋಡ್ ಟೆಸ್ಟಿಂಗ್ ಪ್ರಕ್ರಿಯೆಗಳನ್ನು ಪೂರ್ಣಗೊಳಿಸುತ್ತಿದೆ. ಸದ್ಯ ಬಿಎಸ್-6 ಎಕ್ಸ್‌ಯುವಿ500 ಮಾದರಿಯು ಸದ್ಯ ಡೀಸೆಲ್ ಎಂಜಿನ್‌ನೊಂದಿಗೆ ಮಾತ್ರವೇ ಖರೀದಿಗೆ ಲಭ್ಯವಿದ್ದು, ನ್ಯೂ ಜನರೇಷನ್ ಮಾದರಿಯು ಪೆಟ್ರೋಲ್ ಎಂಜಿನ್ ಸೇರಿದಂತೆ ಹಲವು ಹೊಸ ಬದಲಾವಣೆಗಳೊಂದಿಗೆ ಮಾರುಕಟ್ಟೆ ಪ್ರವೇಶಿಸುವ ಸಿದ್ದತೆಯಲ್ಲಿದೆ.

ಹೊಸ ತಲೆಮಾರಿನ ಎಕ್ಸ್‌ಯುವಿ500 ಕಾರು ಮಾದರಿಯನ್ನು ಮೊನೊಕೊಕ್ ಪ್ಲಾಟ್‌ಫಾರ್ಮ್‌ನ ಅಡಿಯಲ್ಲಿ ಅಭಿವೃದ್ಧಿಪಡಿಸಲಾಗುತ್ತದ್ದು, ಕಾರಿನ ವಿನ್ಯಾಸ ಮತ್ತು ಸ್ಟೈಲಿಂಗ್‌ನಲ್ಲಿ ಗಮನಾರ್ಹ ಬದಲಾವಣೆಗಳ ಜೊತೆಗೆ ಹಲವಾರು ನವೀಕರಣಗಳು ಮತ್ತು ಹೆಚ್ಚುವರಿ ಫೀಚರ್ಸ್‌ಗಳನ್ನು ಸಹ ಹೊಂದಿರಲಿದೆ.

ನ್ಯೂ ಜನರೇಷನ್ ಮಾದರಿಯಲ್ಲಿ ನವೀಕರಿಸಲಾದ ಮುಂಭಾಗದ ಗ್ರಿಲ್, ಹೊಸ ವಿನ್ಯಾಸದ ಎಲ್ಇಡಿ ಹೆಡ್‌ಲ್ಯಾಂಪ್ ಮತ್ತು ಹಿಂಭಾಗದಲ್ಲಿ ನವೀಕರಿಸಲಾದ ಬಂಪರ್ ಪ್ರಮುಖ ಆಕರ್ಷಣೆಯಾಗಲಿದ್ದು, ಮಧ್ಯಮ ಗಾತ್ರದ ಎಸ್‌ಯುವಿ ಕಾರು ಮಾರಾಟದಲ್ಲಿ ಹೊಸ ಸಂಚಲನಕ್ಕೆ ಕಾರಣವಾಗಲಿದೆ.

ಹಾಗೆಯೇ ಹೊಸ ಕಾರು ಪ್ರಸ್ತುತ ಮಾದರಿಗಿಂತಲೂ ಭಾರೀ ಬದಲಾವಣೆಯನ್ನು ಪಡೆದುಕೊಂಡಿದ್ದು, ನವೀಕೃತ ಮುಂಭಾಗದ ಗ್ರಿಲ್, ಬ್ಯಾನೆಟ್, ಬಂಪರ್ ಮತ್ತು ಎಲ್ಇಡಿ ಹೆಡ್‌ಲ್ಯಾಂಪ್ ಕ್ಲಸ್ಟರ್, ಹಿಂಭಾಗ ಬಂಪರ್, ಟೈಲ್‌ಗೆಟ್ ವಿನ್ಯಾಸವು ಆಕರ್ಷಕವಾಗಿರಲಿವೆ. ಹಾಗೆಯೇ ಕಾರಿನ ಒಳಭಾಗದ ತಾಂತ್ರಿಕ ಅಂಶಗಳಲ್ಲೂ ಸಾಕಷ್ಟು ಬದಲಾವಣೆಗೊಳಿಸಲಾಗಿದ್ದು, ವೆಂಟೆಲೆಟೆಡ್ ಆಸನ ಸೇರಿದಂತೆ ಹಲವು ಐಷಾರಾಮಿ ಫೀಚರ್ಸ್ ಹೊಸ ಕಾರಿನಲ್ಲಿರಲಿವೆ.

ಇದರೊಂದಿಗೆ ಹೊಸ ಕಾರಿನಲ್ಲಿ ರಸ್ತೆಗುಂಡಿಗಳನ್ನು ಪತ್ತೆಹಚ್ಚಲು ರಡಾರ್ ಸೌಲಭ್ಯವನ್ನು ಅಳವಡಿಸಲಾಗಿದ್ದು, ಅಗತ್ಯ ಸಂದರ್ಭಗಳಲ್ಲಿ ಅಟೊನೊಮಸ್ ಬ್ರೇಕಿಂಗ್ ಸಿಸ್ಟಂ ಕಾರ್ಯ ನಿರ್ವಹಣೆ ಮಾಡಲಿದೆ. ಈ ಮೂಲಕ ಟ್ರ್ಯಾಕ್ ಮೇಲೆ ನಿಗಾ ಇಡಲಿರುವ ಹೊಸ ತಂತ್ರಜ್ಞಾನ ಸೌಲಭ್ಯವು ವಾಯ್ಸ್ ಮೂಲಕ ಚಾಲಕನಿಗೆ ಎಚ್ಚರಿಕೆಯ ಸಂದೇಶ ನೀಡಲಿದ್ದು, ರಿವರ್ಸ್ ಸಂದರ್ಭದಲ್ಲಿ 3ಡಿ ಪನೊರಮಿಕ್ ವ್ಯೂ ಸೌಲಭ್ಯ ಒದಗಿಸುತ್ತದೆ.
ಕ್ಲಾಸಿಕ್ ಬೈಕ್ ಪ್ರಿಯರಿಗಾಗಿ ಬಿಡುಗಡೆಯಾದ ರಾಯಲ್ ಎನ್‌ಫೀಲ್ಡ್ ಹೊಸ ಮಿಟಿಯೊರ್ 350 ಹೇಗಿದೆ? ಈ ವಿಡಿಯೋ ನೋಡಿ..
ಜೊತೆಗೆ ಹೊಸ ಕಾರಿನ ಕ್ಯಾಬಿನ್ ವಿನ್ಯಾಸವನ್ನು ಕೂಡಾ ಸಾಕಷ್ಟು ಬದಲಾವಣೆ ಪಡೆದುಕೊಂಡಿದ್ದು, 6 ಮತ್ತು 7 ಸೀಟುಗಳ ಆಯ್ಕೆಗಳನ್ನು ಹೊಂದಿರಲಿದೆ. ಇದು ಎಂಜಿ ಹೆಕ್ಟರ್ ಪ್ಲಸ್ 6-ಸೀಟರ್ ಮತ್ತು ಮುಂಬರುವ ಟಾಟಾ ಗ್ರಾವಿಟಾಸ್ ಎಸ್‍ಯುವಿಗಳಿಗೆ ನೇರವಾಗಿ ಪೈಪೋಟಿ ನೀಡುತ್ತದೆ.

ಎಂಜಿನ್ ಮತ್ತು ಪರ್ಫಾಮೆನ್ಸ್
ನ್ಯೂ ಜನರೇಷನ್ ಎಕ್ಸ್‌ಯುವಿ500 ಕಾರು ಮಾದರಿಯು 2.2 ಡೀಸೆಲ್ ಎಂಜಿನ್ ಜೊತೆ ಹೊಸ ಥಾರ್‌ನಲ್ಲಿ ನೀಡಲಾಗಿರುವ 2.0-ಲೀಟರ್ ಎಂ-ಸ್ಟಾಲಿನ್ ಪೆಟ್ರೋಲ್ ಎಂಜಿನ್ ಆಯ್ಕೆಯನ್ನು ಸಹ ಪಡೆದುಕೊಳ್ಳಲಿದ್ದು, ಹಲವಾರು ಸ್ಟ್ಯಾಂಡರ್ಡ್ ಸೇಫ್ಟಿ ಫೀಚರ್ಸ್‌ಗಳೊಂದಿಗೆ ಗ್ರಾಹಕರನ್ನು ಗಮನಸೆಳೆಯಲಿವೆ.

ಸದ್ಯ ಮಾರುಕಟ್ಟೆಯಲ್ಲಿರುವ ಎಕ್ಸ್‌ಯುವಿ500 ಕಾರು ಮಾದರಿಯು ಪ್ರಮುಖ ನಾಲ್ಕು ವೆರಿಯೆಂಟ್‌ಗಳಲ್ಲಿ ಖರೀದಿಗೆ ಲಭ್ಯವಿದ್ದು, 2.2-ಲೀಟರ್ ಡೀಸೆಲ್ ಎಂಜಿನ್‌ನೊಂದಿಗೆ ಮಾರಾಟಕ್ಕೆ ಲಭ್ಯವಿದ್ದು, 6-ಸ್ಪೀಡ್ ಮ್ಯಾನುವಲ್ ಮತ್ತು 6-ಸ್ಪೀಡ್ ಆಟೋಮ್ಯಾಟಿಕ್ ಗೇರ್‌ಬಾಕ್ಸ್ ಹೊಂದಿದೆ. ಈ ಮೂಲಕ 153-ಬಿಎಚ್‌ಪಿ ಮತ್ತು 360-ಎನ್ಎಂ ಟಾರ್ಕ್ ಉತ್ಪಾದನೆಯೊಂದಿಗೆ ಇಂಧನ ದಕ್ಷತೆಯಲ್ಲೂ ಗ್ರಾಹಕರನ್ನು ಗಮನಸೆಳೆಯಲಿದೆ.