Just In
- 50 min ago ಭೂಮಿಯ ಸ್ವರ್ಗ: 1.50 ಕೋಟಿಯ ಟೊಯೊಟಾ ವೆಲ್ಫೈರ್ಗೆ ಮನಸೋತ ಖ್ಯಾತ ನಟ.. ಈ ಕಾರಿನಲ್ಲಿ ಏನಿದೆ?
- 50 min ago ಬರಲಿದೆ ಮತ್ತೊಂದು ಫ್ಯಾಮಿಲಿ ಎಲೆಕ್ಟ್ರಿಕ್ ಸ್ಕೂಟರ್: ಕಡಿಮೆ ಖರ್ಚಿನಲ್ಲಿ ಓಡಾಡಬಹುದು!
- 1 hr ago ಮಾರುತಿ ಸ್ವಿಫ್ಟ್ ಖರೀದಿಸುತ್ತಿದ್ದೀರಾ? ಸ್ವಲ್ಪ ಕಾಯಿರಿ... ಹೊಸ ಸ್ವಿಫ್ಟ್ ಬರುತ್ತಿದೆ! 35 ಕಿ.ಮೀ ಮೈಲೇಜ್
- 2 hrs ago ನಟಿ ಶಿಲ್ಪಾ ಶೆಟ್ಟಿಗೆ ಮತ್ತೊಂದು ಸಮಸ್ಯೆ ತಂದಿಟ್ಟ ಪತಿ: ಐಷಾರಾಮಿ ಕಾರುಗಳು ಸೀಜ್!
Don't Miss!
- Finance ಅನಂತ್ ಅಂಬಾನಿ ರಾಧಿಕ ಮರ್ಚೆಂಟ್ ವಿವಾಹ ಪೂರ್ವ ಕಾರ್ಯಕ್ರಮಕ್ಕೆ ಖರ್ಚಾದ ಹಣ?
- News ಜನ ಸೇವಕನಾಗಿ ದುಡಿಯಲು ನನಗೊಂದು ಅವಕಾಶ ಕೊಡಿ: ವಿನೋದ್ ಅಸೂಟಿ
- Technology OnePlus: ಒನ್ಪ್ಲಸ್ 13 ಸ್ಮಾರ್ಟ್ಫೋನ್ ಡಿಸ್ಪ್ಲೇ, ವಿನ್ಯಾಸ ಲೀಕ್!..ಯಾವಾಗ ಲಾಂಚ್?
- Movies ತಾತನಿಗೆ ಧನ್ಯಾ ರಾಮ್ಕುಮಾರ್ ಟ್ರಿಬ್ಯೂಟ್; ಕಿಶನ್ ಜೊತೆ ಡ್ಯುಯೆಟ್
- Sports RCB: ಯುಜ್ವೇಂದ್ರ ಚಹಾಲ್ ಮರಳಿ ಬರುವಂತೆ ಬೇಡಿಕೊಳ್ಳಿ; ಆರ್ಸಿಬಿಗೆ ಸಲಹೆ ನೀಡಿದ ರಾಬಿನ್ ಉತ್ತಪ್ಪ
- Lifestyle ಗರಿ ಗರಿಯಾದ ಕೋಡುಬಳೆ ಮನೆಯಲ್ಲೇ ಮಾಡಿ.! 4 ವಸ್ತು ಇದ್ದರೆ ಸಾಕು
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
9 ಹೊಸ ಬಣ್ಣಗಳ ಆಯ್ಕೆಯೊಂದಿಗೆ ಬಿಡುಗಡೆಯಾಗಲಿದೆ ಮಾರುತಿ ಸುಜುಕಿ ಇಗ್ನಿಸ್ ಫೇಸ್ಲಿಫ್ಟ್
ಮಾರುತಿ ಸುಜುಕಿ ಕಂಪನಿಯು ತನ್ನ ಇಗ್ನಿಸ್ ಫೇಸ್ಲಿಫ್ಟ್ ಅನ್ನು ಭಾರತದಲ್ಲಿ ಶೀಘ್ರದಲ್ಲೇ ಭಾರತದಲ್ಲಿ ಬಿಡುಗಡೆಗೊಳಿಸಲಿದೆ. ಮಾರುತಿ ಸುಜುಕಿ ಇಗ್ನಿಸ್ ಫೇಸ್ಲಿಫ್ಟ್ 2020ರ ಆಟೋ ಎಕ್ಸ್ ಪೋದಲ್ಲಿ ಬಿಡುಗಡೆಗೊಳಿಸುವ ನಿರೀಕ್ಷೆಗಳಿದೆ.
ಮುಂದಿನ ದಿನಗಳಲ್ಲಿ ಬಿಡುಗಡೆಯಾಗಲಿರುವ ಇಗ್ನಿಸ್ ಫೇಸ್ಲಿಫ್ಟ್ ಕಾರಿನ ಬ್ರೊಷರ್ ಆನ್ಲೈನ್ನಲ್ಲಿ ಬಹಿರಂಗವಾಗಿದೆ. ಬಹಿರಂಗವಾಗಿರುವ ಬ್ರೊಷರ್ ಮಾಹಿತಿಯ ಪ್ರಕಾರ ಇಗ್ನಿಸ್ ಫೇಸ್ಲಿಫ್ಟ್ ಕಾರಿನ ಮುಂಭಾಗದಲ್ಲಿ ವಿಟಾರಾ ಬ್ರಿಝಾ ಕಾರಿನ ಮಾದರಿ ವಿನ್ಯಾಸವನ್ನು ಮಾಡಲಾಗಿದೆ. ಈ ಕಾರು ಸಿಗ್ಮಾ, ಡೆಲ್ಟಾ, ಝೆಲ್ಟಾ ಮತ್ತು ಅಲ್ಫಾ ಎಂಬ ನಾಲ್ಕು ವೆರಿಯೆಂಟ್ಗಳಲ್ಲಿ ಲಭ್ಯವಿದೆ. ಇಗ್ನಿಸ್ ಫೇಸ್ಲಿಫ್ಟ್ ಕಾರಿನಲ್ಲಿ ಯು-ಆಕಾರದ ಕ್ರೋಮ್ನೊಂದಿಗೆ ಹೊಸ ಗ್ರಿಲ್ ಆಕಾರದ ಎಲ್ಇಡಿ ಡೇಟೈಮ್ ರನ್ನಿಂಗ್ ಲೈಟ್ಗಳನ್ನು ಅಳವಡಿಸಲಾಗಿದೆ.
ಇದರೊಂದಿಗೆ ಪ್ರೊಜೆಕ್ಟರ್ ಹೆಡ್ಲೈಟ್ಗಳು ಹೊಸ ಮತ್ತು ಸ್ಕಿಡ್ ಪ್ಲೇಟ್ ಅನ್ನು ಹೊಂದಿವೆ. ಮಾರುತಿ ಸುಜುಕಿ ಇಗ್ನಿಸ್ ಫೇಸ್ಲಿಫ್ಟ್ ಕಾರು 9 ಬಣ್ಣಗಳಲ್ಲಿ ಬಿಡುಗಡೆಯಾಗಲಿದೆ. ಇದರಲ್ಲಿ 6 ಸಿಂಗಲ್ ಟೋನ್ ಬಣ್ಣಗಳು ಮತ್ತು 3 ಡ್ಯುಯಲ್ ಟೋಣ ಬಣ್ಣಗಳಾಗಿರಲಿದೆ.
ಹೊಸ ಇಗ್ನಿಸ್ ಕಾರು ಐಎಂ-4 ಕಾನ್ಸೆಪ್ಟ್ ಆಧರಿಸಿದೆ ಮತ್ತು ಹಳೆಯ ಸುಜುಕಿ ಮಾದರಿಗಳ ಕೆಲವು ವಿನ್ಯಾಸ ಅಂಶಗಳನ್ನು ಒಳಗೊಂಡಿದೆ. ಹಳೆ ಮಾದರಿಗೆ ಹೋಲಿಸಿದರೆ ಹಲವಾರು ಬದಲಾವಣೆಗಳನ್ನು ಮಾಡಲಾಗಿದೆ.
ಭಾರತದಲ್ಲಿ ಹೊಸದಾಗಿ ಪ್ರಾರಂಭಿಸಿದ ನೆಕ್ಸಾ ಪ್ರೀಮಿಯಂ ಮಳಿಗೆಗಳಲ್ಲಿ ಮಾರಾಟವಾಗಲಿರುವ ಮೂರನೇ ವಾಹನ ಇಗ್ನಿಸ್ ಆಗಬಹುದು. ಬಜೆಟ್ ಆಧಾರಿತ ಹ್ಯಾಚ್ಬ್ಯಾಕ್ಗಳಿಂದಾಗಿ ಮಾರುತಿ ಸುಜುಕಿ ಕಂಪನಿಯು ಹೆಚ್ಚು ಹೆಸರುವಾಸಿಯಾಗಿದೆ.
ಇಗ್ನಿಸ್ ಕಾರನ್ನು ಮೊದಲ ಬಾರಿಗೆ 2016ರ ಆಟೋ ಎಕ್ಸ್ಪೋದಲ್ಲಿ ಪ್ರದರ್ಶಿಸಲಾಗಿತ್ತು. ಭಾರತೀಯ ಮಾರುಕಟ್ಟೆಯಲ್ಲಿ ನಂತರ ರಿಟ್ಜ್ ಕಾರಿನ ಬದಲಿಗೆ ಇಗ್ನಿಸ್ ಕಾರ್ ಅನ್ನು ಬಿಡುಗಡೆಗೊಳಿಸಲಾಗಿದೆ. ಭಾರತೀಯ ಮಾರುಕಟ್ಟೆಯಲ್ಲಿ ಹ್ಯಾಚ್ಬ್ಯಾಕ್ ಸೆಗ್ಮೆಂಟ್ನಲ್ಲಿ ಉತ್ತಮ ಪೈಪೋಟಿ ನಡೆಯುತ್ತಿದೆ.
ಇದೇ ಕಾರಣದಿಂದ ಮಾರುತಿ ಸುಜುಕಿಯು ಎಸ್-ಪ್ರೆಸ್ಸೊ ಮತ್ತು ಮೂರನೇ ತಲೆಮಾರಿನ ವ್ಯಾಗನ್ಆರ್ ಕಾರುಗಳನ್ನು ಬಿಡುಗಡೆಗೊಳಿಸಿದೆ. ಇಗ್ನಿಸ್ ಕಾರನ್ನು ಮಿಡ್-ಸೈಕಲ್ ಅಪ್ಡೇಟ್ಗೊಳಿಸಿದ ಬಳಿಕ ಮುಂಭಾಗದಲ್ಲಿ ಕೆಲವು ಬದಲಾವಣೆಗಳು ಆಗಿದೆ. ಕಾರಿನ ಮುಂಭಾಗ ಬಂಪರ್ನ ಸ್ಪೋರ್ಟಿ ಲುಕ್ ಅನ್ನು ಹೆಚ್ಚಿಸಿದೆ.
ಕಾರಿನ ಹಿಂಭಾಗದಲ್ಲಿ ಕೆಲವು ಸೂಕ್ಷ್ಮ ಬದಲಾವಣೆಗಳನ್ನು ಮಾಡಲಾಗಿದೆ. ಹೊಸ ಫೀಚರ್ಸ್ಗಳು ಮತ್ತು ಹಲವಾರು ಸುರಕ್ಷತಾ ಫೀಚರ್ಸ್ಗಳನ್ನು ಅಳವಡಿಸಲಾಗಿದೆ. ಮಾರುತಿ ಸುಜುಕಿ ಇಗ್ನಿಸ್ ಇತ್ತೀಚೆಗೆ ಸ್ಪಾಟ್ ಟೆಸ್ಟ್ ನಡೆಸಿದ್ದರು.
ಹೊಸ ಇಗ್ನಿಸ್ ಫೇಸ್ಲಿಫ್ಟ್ ಕಾರಿನಲ್ಲಿ ಇಂಟಿರಿಯರ್ ಕ್ಯಾಬಿನ್ ಅನ್ನು ನವೀಕರಿಸಬಹುದು. ಇನ್ನೂ ಕಾರಿನ ಇಂಟಿರಿಯರ್ನಲ್ಲಿ ಅ್ಯಪಲ್ ಕಾರ್ಪ್ಲೇ ಮತ್ತು ಆಂಡ್ರಾಯ್ಡ್ ಆಟೋ ಕನೆಕ್ಟಿವಿಟಿಯೊಂದಿಗೆ ಸ್ಮಾರ್ಟ್ಪ್ಲೇ ಟಚ್ಸ್ಕ್ರೀನ್ ಇನ್ಫೋಟೇನ್ಮೆಂಟ್ ಸಿಸ್ಟಂ ಅನ್ನು ಅಳವಡಿಸಲಾಗಿದೆ. ಇದೇ ಇನ್ಫೋಟೇನ್ ಸಿಸ್ಟಂ ಅನ್ನು ಮಾರುತಿ ಸುಜುಕಿ ಬಲೆನೊ ಕಾರಿನಲ್ಲಿಯೂ ಅಳವಡಿಸಿದೆ.
ಹೊಸ ಇಗ್ನಿಸ್ ಫೇಸ್ಲಿಫ್ಟ್ ಕಾರಿನಲ್ಲಿ 1.2 ಲೀಟರ್ ಕೆ-ಸೀರಿಸ್ ಪೆಟ್ರೋಲ್ ಎಂಜಿನ್ ಅನ್ನು ಹೊಂದಿದೆ. ಈ ಎಂಜಿನ್ 6,000 ಆರ್ಪಿಎಂನಲ್ಲಿ 83 ಬಿಹೆಚ್ಪಿ ಪವರ್ ಮತ್ತು 4,200 ಆರ್ಪಿಎಂನಲ್ಲಿ 113 ಎನ್ಎಂ ಟಾರ್ಕ್ ಅನ್ನು ಉತ್ಪಾದಿಸುತ್ತದೆ. ಈ ಎಂಜಿನ್ನೊಂದಿಗೆ 5 ಸ್ಪೀಡ್ ಮ್ಯಾನುವಲ್ ಗೇರ್ಬಾಕ್ಸ್ ಅನ್ನು ಸ್ಟ್ಯಾಂಡರ್ಡ್ ಆಗಿ ಅಳವಡಿಸಲಾಗಿದೆ. ಇದರೊಂದಿಗೆ 5 ಸ್ಪೀಡ್ ಎಎಂಟಿಯನ್ನು ಆಯ್ಕೆಯಾಗಿ ನೀಡಲಾಗಿದೆ. ಮಾರುತಿ ಸುಜುಕಿ ಇಗ್ನಿಸ್ ಫೇಸ್ಲಿಫ್ಟ್ ಕಾರಿನ ಬೆಲೆಯು ತುಸು ಹೆಚ್ಚಿರಲಿದೆ.
ಬಿಎಸ್-6 ಮಾಲಿನ್ಯ ನಿಯಮಕ್ಕೆ ಅನುಗುಣವಾಗಿ ನವೀಕರಿಸುವುದರಿಂದ ಮಾರುತಿ ಸುಜುಕಿ ಇಗ್ನಿಸ್ ಕಾರು ತುಸು ದುಬಾರಿಯಾಗಿರಲಿದೆ. ಮಾರುತಿ ಸುಜುಕಿ ಇಗ್ನಿಸ್ ಕಾರು ಭಾರತೀಯ ಮಾರುಕಟ್ಟೆಯಲ್ಲಿ ಬಿಡುಗಡೆಯಾದ ಬಳಿಕ ಹ್ಯುಂಡೈ ಕಂಪನಿಯ ಹ್ಯಾಚ್ಬ್ಯಾಕ್ಗಳಿಗೆ ಪೈಪೋಟಿ ನೀಡುತ್ತದೆ.