Just In
- 11 hrs ago ಸ್ವಂತ ದುಡಿಮೆಯಲ್ಲಿ ಹೊಸ ಕಾರು ಖರೀದಿಸಿ ಯುವ ನಟಿಯ ಭಾವನಾತ್ಮಕ ಪೋಸ್ಟ್
- 13 hrs ago Suzuki Access Electric: ಸುಜುಕಿ ಆಕ್ಸೆಸ್ ಎಲೆಕ್ಟ್ರಿಕ್ ಸ್ಕೂಟರ್ ಈ ವರ್ಷ ಬಿಡುಗಡೆ ಸಾಧ್ಯತೆ!
- 13 hrs ago Royal Enfield Himalayan ಸುಲಭವಾಗಿ ಖರೀದಿಸುವುದು ಹೇಗೆ?: ಇಲ್ಲಿದೆ ಡೌನ್ಪೇಮೆಂಟ್, EMI ಮಾಹಿತಿಗಳು!
- 14 hrs ago ಮಿಂಚಿನ ವೇಗಕ್ಕೆ ಸರಿಸಾಟಿಯಾಗಿ ಬೆಂಗಳೂರಿನ ಹೊಸ ಅಲ್ಟ್ರಾವೈಲೆಟ್ ಬೈಕ್ ಬಿಡುಗಡೆ: 323KM ರೇಂಜ್
Don't Miss!
- Finance ಡಾ. ರಾಜ್ಕುಮಾರ್ ಜನ್ಮದಿನದಂದು ಹೊಸ ಉದ್ಯಮ ಆರಂಭಿಸಿದ ಅಶ್ವಿನಿ ಪುನೀತ್ ರಾಜ್ಕುಮಾರ್
- Lifestyle ಮಲೆನಾಡ ಶೈಲಿನ ಮೃದುವಾದ ಕಡುಬು ಮಾಡೋದು ಹೇಗೆ.? ಸಿಂಪಲ್ ತಿಂಡಿ ರೆಸಿಪಿ
- News Realme Narzo 70: ಭರ್ಜರಿ ಕ್ಯಾಮೆರಾ ಫೀಚರ್ಗಳೊಂದಿಗೆ ರಿಯಲ್ಮಿ ನಾರ್ಜೊ 70 ಗ್ರ್ಯಾಂಡ್ ಲಾಂಚ್
- Movies ನೀಲಿ ಪ್ರಪಂಚದ ಕರಾಳ ಸತ್ಯವನ್ನ ಹೇಳಿದ ಲಾನಾ ರೋಡ್ಸ್
- Sports DC vs GT IPL 2024: ಅಕ್ಷರ್, ರಿಷಭ್ ಶೈನಿಂಗ್; ಗುಜರಾತ್ ವಿರುದ್ಧ ಡೆಲ್ಲಿ ಜಯಭೇರಿ
- Technology ಒಪ್ಪೋ ಫೈಂಡ್ X7 ಅಲ್ಟ್ರಾ ಕ್ಯಾಮೆರಾ: ಮೊಬೈಲ್ ಫೋಟೋಗ್ರಫಿಗೆ ಅತ್ಯುತ್ತಮ ಫೋನ್!
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಶೀಘ್ರದಲ್ಲೇ ಬಿಡುಗಡೆಯಾಗಲಿದೆ ಬಿಎಸ್-6 ಮಾರುತಿ ಸುಜುಕಿ ಇಗ್ನಿಸ್
ಮಾರುತಿ ಸುಜುಕಿ ಕಂಪನಿಯು ತನ್ನ ಇಗ್ನಿಸ್ ಫೇಸ್ಲಿಫ್ಟ್ ಅನ್ನು ಭಾರತದಲ್ಲಿ ಶೀಘ್ರದಲ್ಲೇ ಭಾರತದಲ್ಲಿ ಬಿಡುಗಡೆಗೊಳಿಸಲಿದೆ. ಮಾರುತಿ ಸುಜುಕಿ ಇಗ್ನಿಸ್ ಫೇಸ್ಲಿಫ್ಟ್ 2020ರ ಆಟೋ ಎಕ್ಸ್ ಪೋದಲ್ಲಿ ಬಿಡುಗಡೆಯಾಗಲಿದೆ.
ಹೊಸ ಇಗ್ನಿಸ್ ಕಾರು ಐಎಂ-4 ಕಾನ್ಸೆಪ್ಟ್ ಆಧರಿಸಿದೆ ಮತ್ತು ಹಳೆಯ ಸುಜುಕಿ ಮಾದರಿಗಳ ಕೆಲವು ವಿನ್ಯಾಸ ಅಂಶಗಳನ್ನು ಒಳಗೊಂಡಿದೆ. ಹಳೆ ಮಾದರಿಗೆ ಹೋಲಿಸಿದರೆ ಹಲವಾರು ಬದಲಾವಣೆಗಳನ್ನು ಮಾಡಲಾಗಿದೆ. ಇಗ್ನಿಸ್ ಪ್ರೊಡಕ್ಷನ್-ಸ್ಪೆಕ್ ಮಾದರಿಯನ್ನು ಕಿಯೋ ಮೋಟಾರ್ ಶೋನಲ್ಲಿ ಪ್ರದರ್ಶಿಸಿದರು. ಭಾರತದಲ್ಲಿ ಹೊಸದಾಗಿ ಪ್ರಾರಂಭಿಸಿದ ನೆಕ್ಸಾ ಪ್ರೀಮಿಯಂ ಮಳಿಗೆಗಳಲ್ಲಿ ಮಾರಾಟವಾಗಲಿರುವ ಮೂರನೇ ವಾಹನ ಇಗ್ನಿಸ್ ಆಗಬಹುದು. ಬಜೆಟ್ ಆಧಾರಿತ ಹ್ಯಾಚ್ಬ್ಯಾಕ್ಗಳಿಂದಾಗಿ ಮಾರುತಿ ಸುಜುಕಿ ಕಂಪನಿಯು ಹೆಚ್ಚು ಹೆಸರುವಾಸಿಯಾಗಿದೆ.
ಇಗ್ನಿಸ್ ಕಾರನ್ನು ಮೊದಲ ಬಾರಿಗೆ 2016ರ ಆಟೋ ಎಕ್ಸ್ಪೋದಲ್ಲಿ ಪ್ರದರ್ಶಿಸಿದರು. ಭಾರತೀಯ ಮಾರುಕಟ್ಟೆಯಲ್ಲಿ ನಂತರ ರಿಟ್ಜ್ ಅನ್ನು ಬದಲಾಯಿಸಿ ಆ ಸ್ಥಾನಕ್ಕೆ ಇಗ್ನಿಸ್ ಅನ್ನು ಬಿಡುಗಡೆಗೊಳಿಸಿದರು. ಭಾರತೀಯ ಮಾರುಕಟ್ಟೆಯಲ್ಲಿ ಹ್ಯಾಚ್ಬ್ಯಾಕ್ ಸೆಗ್ಮೆಂಟ್ನಲ್ಲಿ ಉತ್ತಮ ಪೈಪೋಟಿ ನಡೆಯುತ್ತಿದೆ.
ಇದೇ ಕಾರಣದಿಂದ ಮಾರುತಿ ಸುಜುಕಿಯು ಎಸ್-ಪ್ರೆಸ್ಸೊ ಮತ್ತು ಮೂರನೇ ತಲೆಮಾರಿನ ವ್ಯಾಗನ್ಆರ್ ಕಾರುಗಳನ್ನು ಬಿಡುಗಡೆಗೊಳಿಸಿದರು. ಇಗ್ನಿಸ್ ಕಾರನ್ನು ಮಿಡ್-ಸೈಕಲ್ ಅಪ್ಡೇಟ್ಗೊಳಿಸಿದ ಬಳಿಕ ಮುಂಭಾಗದಲ್ಲಿ ಕೆಲವು ಬದಲಾವಣೆಗಳು ಆಗಿದೆ. ಕಾರಿನ ಮುಂಭಾಗ ಬಂಪರ್ನ ಸ್ಪೋರ್ಟಿ ಲುಕ್ ಅನ್ನು ಹೆಚ್ಚಿಸಿದೆ.
ಇಗ್ನಿಸ್ ಕಾರಿನಲ್ಲಿ ಯು-ಆಕಾರದ ಫ್ರಂಟ್ ಗ್ರಿಲ್ ಕ್ರೋಮ್ ಸ್ಲ್ಯಾಟ್ ಅನ್ನು ಬದಲಾಯಿಸಿರುವುದು ಮತ್ತೊಂದು ಪ್ರಮುಖ ಅಂಶವಾಗಿದೆ. ಎಸ್-ಪ್ರೆಸ್ಸೊದಂತಹ ಮಾದರಿಗಳಿಗೆ ಅನುಗುಣವಾಗಿ 2020ರ ಮಾರುತಿ ಸುಜುಕಿ ಇಗ್ನಿಸ್ ಕಾರಿನ ಮುಂಭಾಗದಲ್ಲಿ ಬದಲಾವಣೆಗಳನ್ನು ಮಾಡಲಾಗಿದೆ.
ಕಾರಿನ ಹಿಂಭಾಗದಲ್ಲಿ ಕೆಲವು ಸೂಕ್ಷ್ಮ ಬದಲಾವಣೆಗಳನ್ನು ಮಾಡಲಾಗಿದೆ. ಹೊಸ ಫೀಚರ್ಸ್ಗಳು ಮತ್ತು ಹಲವಾರು ಸುರಕ್ಷತಾ ಫೀಚರ್ಸ್ಗಳನ್ನು ಅಳವಡಿಸಲಾಗಿದೆ. ಮಾರುತಿ ಸುಜುಕಿ ಇಗ್ನಿಸ್ ಇತ್ತೀಚೆಗೆ ಸ್ಪಾಟ್ ಟೆಸ್ಟ್ ನಡೆಸಿದ್ದರು.
ಹೊಸ ಇಗ್ನಿಸ್ ಫೇಸ್ಲಿಫ್ಟ್ ಕಾರಿನಲ್ಲಿ ಇಂಟಿರಿಯರ್ ಕ್ಯಾಬಿನ್ ಅನ್ನು ನವೀಕರಿಸಬಹುದು. ಇನ್ನೂ ಕಾರಿನ ಇಂಟಿರಿಯರ್ನಲ್ಲಿ ಅ್ಯಪಲ್ ಕಾರ್ಪ್ಲೇ ಮತ್ತು ಆಂಡ್ರಾಯ್ಡ್ ಆಟೋ ಕನೆಕ್ಟಿವಿಟ್ಯೊಂದಿಗೆ ಸ್ಮಾರ್ಟ್ಪ್ಲೇ ಟಚ್ಸ್ಕ್ರೀನ್ ಇನ್ಫೋಟೇನ್ಮೆಂಟ್ ಸಿಸ್ಟಂ ಅನ್ನು ಅಳವಡಿಸಲಾಗಿದೆ. ಇದೇ ಇನ್ಫೋಟೇನ್ ಸಿಸ್ಟಂ ಅನ್ನು ಮಾರುತಿ ಸುಜಿಕಿ ಬಲೆನೊ ಕಾರಿನಲ್ಲಿಯು ಹೊಂದಿದೆ.
ಭಾರತದ ಅಗ್ರಗಣ್ಯ ಕಾರು ತಯಾರಕ ಕಂಪನಿಯಾದ ಮಾರುತಿ ಸುಜುಕಿ ತನ್ನ ಸರಣಿಯ ಕಾರುಗಳನ್ನು ಬಿಎಸ್-6 ಮಾಲಿನ್ಯ ನಿಯಮಕ್ಕೆ ಅನುಗುಣವಾಗಿ ನವೀಕರಿಸುತ್ತಿದೆ. ಇದರಂತೆ ಮಾರುತಿ ಸುಜುಕಿ ಇಗ್ನಿಸ್ ಫೇಸ್ಲಿಫ್ಟ್ ಕೂಡ ಬಿಎಸ್-6 ಮಾಲಿನ್ಯ ನಿಯಮಕ್ಕೆ ಅನುಗುಣವಾಗಿರಲಿದೆ.
ಹೊಸ ಇಗ್ನಿಸ್ ಫೇಸ್ಲಿಫ್ಟ್ ಕಾರಿನಲ್ಲಿ 1.2 ಲೀಟರ್ ಕೆ-ಸೀರಿಸ್ ಪೆಟ್ರೋಲ್ ಎಂಜಿನ್ ಅನ್ನು ಹೊಂದಿದೆ. ಈ ಎಂಜಿನ್ 6,000 ಆರ್ಪಿಎಂನಲ್ಲಿ 83 ಬಿಹೆಚ್ಪಿ ಪವರ್ ಮತ್ತು 4,200 ಆರ್ಪಿಎಂನಲ್ಲಿ 113 ಎನ್ಎಂ ಟಾರ್ಕ್ ಅನ್ನು ಉತ್ಪಾದಿಸುತ್ತದೆ. ಈ ಎಂಜಿನ್ನೊಂದಿಗೆ 5 ಸ್ಪೀಡ್ ಮ್ಯಾನುವಲ್ ಗೇರ್ಬಾಕ್ಸ್ ಅನ್ನು ಸ್ಟ್ಯಾಂಡರ್ಡ್ ಆಗಿ ಅಳವಡಿಸಲಾಗಿದೆ. ಇದರೊಂದಿಗೆ 5 ಸ್ಪೀಡ್ ಎಎಂಟಿಯನ್ನು ಆಯ್ಕೆಯಾಗಿ ನೀಡಲಾಗಿದೆ.
ಮಾರುತಿ ಸುಜುಕಿ ಇಗ್ನಿಸ್ ಫೇಸ್ಲಿಫ್ಟ್ ಕಾರಿನ ಬೆಲೆಯು ತುಸು ಹೆಚ್ಚಿರಲಿದೆ. ಬಿಎಸ್-6 ಮಾಲಿನ್ಯ ನಿಯಮಕ್ಕೆ ಅನುಗುಣವಾಗಿ ನವೀಕರಿಸುವುದರಿಂದ ಮಾರುತಿ ಸುಜುಕಿ ಇಗ್ನಿಸ್ ಕಾರು ತುಸು ದುಬಾರಿಯಾಗಿರಲಿದೆ. ಮಾರುತಿ ಸುಜುಕಿ ಇಗ್ನಿಸ್ ಕಾರು ಭಾರತೀಯ ಮಾರುಕಟ್ಟೆಯಲ್ಲಿ ಬಿಡುಗಡೆಯಾದ ಬಳಿಕ ಹ್ಯುಂಡೈ ಹ್ಯಾಚ್ಬ್ಯಾಕ್ಗಳಿಗೆ ಪೈಪೋಟಿ ನೀಡುತ್ತದೆ.