ಬಿಡುಗಡೆಯಾಗಲಿರುವ ಹೊಸ ಎಸ್-ಕ್ರಾಸ್ ಪೆಟ್ರೋಲ್ ಕಾರಿನ ತಾಂತ್ರಿಕ ಮಾಹಿತಿ ಬಹಿರಂಗ

ಮಾರುತಿ ಸುಜುಕಿ ಕಂಪನಿಯು ತನ್ನ ಹೊಸ ಎಸ್-ಕ್ರಾಸ್ ಪೆಟ್ರೋಲ್ ಕಾರು ಮಾದರಿಯನ್ನು ಮುಂದಿನ ತಿಂಗಳು ಅಗಸ್ಟ್ 5ಕ್ಕೆ ಬಿಡುಗಡೆ ಮಾಡಲಿದ್ದು, ಹೊಸ ಕಾರು ಈ ಬಾರಿ ಪೆಟ್ರೋಲ್ ಎಂಜಿನ್ ಮಾತ್ರವಲ್ಲದೆ ಸಾಕಷ್ಟು ಹೊಸ ಬದಲಾವಣೆಯೊಂದಿಗೆ ಮಾರುಕಟ್ಟೆ ಪ್ರವೇಶಿಸಲಿದೆ.

ಹೊಸ ಎಸ್-ಕ್ರಾಸ್ ಪೆಟ್ರೋಲ್ ಕಾರಿನ ತಾಂತ್ರಿಕ ಮಾಹಿತಿ ಬಹಿರಂಗ

ಹೊಸ ಎಸ್-ಕ್ರಾಸ್‌ನಲ್ಲಿ ಈ ಬಾರಿ ಪೆಟ್ರೋಲ್ ಮಾದರಿಯನ್ನು ಮಾತ್ರವೇ ಪರಿಚಯಿಸಲಾಗುತ್ತಿದ್ದು, ಏಪ್ರಿಲ್ 1ರಿಂದ ಕಡ್ಡಾಯವಾಗಿ ಜಾರಿಗೆ ಬಂದಿರುವ ಬಿಎಸ್-6 ಎಮಿಷನ್ ಜಾರಿಯಿಂದಾಗಿ ಈ ಹಿಂದಿ ನೀಡಲಾಗುತ್ತಿದ್ದ 1.3-ಲೀಟರ್ ಡೀಸೆಲ್ ಎಂಜಿನ್ ಅನ್ನು ಸ್ಥಗಿತಗೊಳಿಸಲಾಗಿದೆ. ಎಸ್-ಕ್ರಾಸ್ ಮಾತ್ರವಲ್ಲದೆ ಮಾರುತಿ ಸುಜುಕಿ ನಿರ್ಮಾಣದ ಎಲ್ಲಾ ಕಾರು ಮಾದರಿಗಳಲ್ಲೂ ಇದೀಗ ಡೀಸೆಲ್ ಎಂಜಿನ್ ಸ್ಥಗಿತಗೊಳಿಸಲಾಗಿದ್ದು, ಪೆಟ್ರೋಲ್, ಪೆಟ್ರೋಲ್ ಹೈಬ್ರಿಡ್ ಮತ್ತು ಸಿಎನ್‌ಜಿ ಆಯ್ಕೆಗಳನ್ನು ನೀಡಲಾಗುತ್ತಿದೆ.

ಹೊಸ ಎಸ್-ಕ್ರಾಸ್ ಪೆಟ್ರೋಲ್ ಕಾರಿನ ತಾಂತ್ರಿಕ ಮಾಹಿತಿ ಬಹಿರಂಗ

ವಿಟಾರಾ ಬ್ರೆಝಾ ಕಾರು ಮಾದರಿಯು ಈಗಾಗಲೇ ಹೊಸದಾಗಿ ಅಭಿವೃದ್ದಿಗೊಳಿಸಲಾದ 1.5-ಲೀಟರ್ ಪೆಟ್ರೋಲ್ ಎಂಜಿನ್‌ನೊಂದಿಗೆ ಬಿಡುಗಡೆಗೊಂಡಿದ್ದು, ಇದೀಗ ಎಸ್-ಕ್ರಾಸ್ ಮಾದರಿಯು ಸಹ ವಿಟಾರಾ ಬ್ರೆಝಾ ಮಾದರಿಯಲ್ಲಿ ಅಳವಡಿಸಲಾಗುತ್ತಿರುವ ಪೆಟ್ರೋಲ್ ಎಂಜಿನ್ ಮಾದರಿಯನ್ನು ಪಡೆದುಕೊಳ್ಳಲಿದೆ.

ಹೊಸ ಎಸ್-ಕ್ರಾಸ್ ಪೆಟ್ರೋಲ್ ಕಾರಿನ ತಾಂತ್ರಿಕ ಮಾಹಿತಿ ಬಹಿರಂಗ

ಹೊಸ ಎಸ್-ಕ್ರಾಸ್ ಕಾರಿನಲ್ಲಿ ಜೋಡಣೆ ಮಾಡಲಾಗುತ್ತಿರುವ 1.5-ಲೀಟರ್ ಪೆಟ್ರೋಲ್ ಮಾದರಿಯು ಸ್ಮಾರ್ಟ್ ಹೈಬ್ರಿಡ್ ತಂತ್ರಜ್ಞಾನ ಪ್ರೇರಣೆ ಹೊಂದಿದ್ದು, 103-ಬಿಎಚ್‌ಪಿ ಮತ್ತು 138-ಎನ್‌ಎಂ ಟಾರ್ಕ್‌ನೊಂದಿಗೆ ಅತ್ಯುತ್ತಮ ಮೈಲೇಜ್ ಹಿಂದಿರುಗಿಸಲಿದೆ.

ಹೊಸ ಎಸ್-ಕ್ರಾಸ್ ಪೆಟ್ರೋಲ್ ಕಾರಿನ ತಾಂತ್ರಿಕ ಮಾಹಿತಿ ಬಹಿರಂಗ

ಜೊತೆಗೆ ಹೊಸ ಕಾರು 5-ಸ್ಪೀಡ್ ಮ್ಯಾನುವಲ್ ಮತ್ತು 4-ಸ್ಪೀಡ್ ಟಾರ್ಕ್ ಕನ್ವರ್ಟರ್ ಆಟೋಮ್ಯಾಟಿಕ್ ಗೇರ್‌ಬಾಕ್ಸ್ ಆಯ್ಕೆ ಹೊಂದಿದ್ದು, ಎರಡು ಮಾದರಿಯಲ್ಲೂ ಸ್ಮಾರ್ಟ್ ಹೈಬ್ರಿಡ್ ತಂತ್ರಜ್ಞಾನ ಜೋಡಣೆ ಮಾಡಬಹುದಾಗಿದೆ.

ಹೊಸ ಎಸ್-ಕ್ರಾಸ್ ಪೆಟ್ರೋಲ್ ಕಾರಿನ ತಾಂತ್ರಿಕ ಮಾಹಿತಿ ಬಹಿರಂಗ

ಇನ್ನು ಹೊಸ ಎಸ್-ಕ್ರಾಸ್ ಕಾರಿನಲ್ಲಿ ಗ್ರಾಹಕರ ಬೇಡಿಕೆಯೆಂತೆ ಒಟ್ಟು 7 ವೆರಿಯೆಂಟ್ ಖರೀದಿಗೆ ಲಭ್ಯವಿರಲಿದ್ದು, ಈ ಹಿಂದಿನ ಸಿಗ್ಮಾ, ಡೆಲ್ಟಾ, ಜೆಟಾ, ಅಲ್ಫಾ ಮತ್ತು ಹೊಸದಾಗಿ ಡೆಲ್ಟಾ ಎಟಿ, ಜೆಟಾ ಎಟಿ, ಅಲ್ಫಾ ಎಟಿ ವೆರಿಯೆಂಟ್‌ಗಳನ್ನು ಪಡೆದುಕೊಳ್ಳಲಿದೆ.

MOST READ: ರೂ.5 ಲಕ್ಷಕ್ಕಿಂತ ಕಡಿಮೆ ಬೆಲೆಯ ಜನಪ್ರಿಯ ಕಾರುಗಳಿವು

ಹೊಸ ಎಸ್-ಕ್ರಾಸ್ ಪೆಟ್ರೋಲ್ ಕಾರಿನ ತಾಂತ್ರಿಕ ಮಾಹಿತಿ ಬಹಿರಂಗ

ಇದಲ್ಲದೆ ಹೊಸ ಕಾರು ಬಿಎಸ್-4 ಡೀಸೆಲ್ ಎಸ್-ಕ್ರಾಸ್ ಕಾರಿನಂತೆಯೇ ಬೆಲೆಗಳನ್ನು ಪಡೆದುಕೊಳ್ಳುವ ಸಾಧ್ಯತೆಗಳಿದ್ದು, ದೆಹಲಿ ಎಕ್ಸ್‌ಶೋರೂಂ ಪ್ರಕಾರ ರೂ. 9 ಲಕ್ಷದಿಂದ ಟಾಪ್ ಎಂಡ್ ಮಾದರಿಯು ರೂ. 12 ಲಕ್ಷ ಬೆಲೆ ಅಂತರದಲ್ಲಿ ಮಾರಾಟವಾಗಲಿದೆ.

ಹೊಸ ಎಸ್-ಕ್ರಾಸ್ ಪೆಟ್ರೋಲ್ ಕಾರಿನ ತಾಂತ್ರಿಕ ಮಾಹಿತಿ ಬಹಿರಂಗ

ಮಾಲಿನ್ಯ ನಿಯಂತ್ರಣಕ್ಕಾಗಿ ಕೇಂದ್ರ ಸರ್ಕಾರವು ಕೆಲವು ಕಠಿಣ ನಿಯಮಗಳನ್ನು ಜಾರಿಗೆ ತಂದಿರುವುದೇ ಡೀಸೆಲ್ ಎಂಜಿನ್ ಕಾರುಗಳ ಮಾರಾಟದಲ್ಲಿ ಮಹತ್ವದ ಬದಲಾವಣೆಗೆ ಕಾರಣವಾಗಿದ್ದು, ಮಾರುತಿ ಸುಜುಕಿ ಸೇರಿದಂತೆ ಬಹುತೇಕ ಕಾರು ಉತ್ಪಾದನಾ ಸಂಸ್ಥೆಗಳು ಕಡಿಮೆ ಸಾಮರ್ಥ್ಯದ ಡೀಸೆಲ್ ಕಾರುಗಳ ಮಾರಾಟವನ್ನು ಸ್ಥಗಿತಗೊಳಿಸಿವೆ.

MOST READ: ಪ್ರತಿ ಚಾರ್ಜ್‌ಗೆ 480 ಕಿ.ಮೀ ಮೈಲೇಜ್ ನೀಡುವ ಎಲೆಕ್ಟ್ರಿಕ್ ಎಸ್‌ಯುವಿ ಬಿಡುಗಡೆ ಮಾಡಲಿದೆ ನಿಸ್ಸಾನ್

ಹೊಸ ಎಸ್-ಕ್ರಾಸ್ ಪೆಟ್ರೋಲ್ ಕಾರಿನ ತಾಂತ್ರಿಕ ಮಾಹಿತಿ ಬಹಿರಂಗ

ಮಾರುತಿ ಸುಜುಕಿಯು ಸದ್ಯಕ್ಕೆ 800ಸಿಸಿ, 1.0-ಲೀಟರ್, 1.2-ಲೀಟರ್ ಮತ್ತು 1.5-ಲೀಟರ್ ಪೆಟ್ರೋಲ್ ಕಾರು ಮಾದರಿಗಳನ್ನು ಮಾತ್ರವೇ ಮಾರಾಟ ಮಾಡುತ್ತಿದ್ದು, ಮುಂಬರುವ ದಿನಗಳಲ್ಲಿ ಹ್ಯಾಚ್‌ಬ್ಯಾಕ್ ಕಾರುಗಳನ್ನು ಹೊರತುಪಡಿಸಿ ಸೆಡಾನ್, ಎಸ್‌ಯುವಿ ಮತ್ತು ಎಂಪಿವಿ ಕಾರು ಮಾದರಿಗಳಲ್ಲಿ ಮಾತ್ರವೇ ಹೊಸ ತಂತ್ರಜ್ಞಾನ ಪ್ರೇರಿತ 1.5-ಲೀಟರ್ ಡೀಸೆಲ್ ಎಂಜಿನ್ ಅನ್ನು ಬಿಡುಗಡೆಗೊಳಿಸಬಹುದಾದ ಸಾಧ್ಯತೆಗಳಿವೆ ಎನ್ನಲಾಗಿದೆ.

Article Published On: Saturday, July 25, 2020, 11:21 [IST]
English summary
2020 Maruti Suzuki S-Cross Variant & Colour Details. Read in Kannada.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+