ಹೊಸ ಮಾರುತಿ ಎಸ್-ಕ್ರಾಸ್ ಪೆಟ್ರೋಲ್ ಆವೃತ್ತಿಯ ಬಿಡುಗಡೆ ದಿನಾಂಕ ಬಹಿರಂಗ

ದೇಶದ ಅತಿ ದೊಡ್ಡ ಕಾರು ಉತ್ಪಾದನಾ ಸಂಸ್ಥೆಯಾಗಿರುವ ಮಾರುತಿ ಸುಜುಕಿ ತನ್ನ ಎಸ್-ಕ್ರಾಸ್ ಪೆಟ್ರೋಲ್ ಆವೃತ್ತಿಯನ್ನು ಬಿಡುಗಡೆಗೊಳಿಸಲು ಸಜ್ಜಾಗಿದೆ. ಈ ಹೊಸ ಮಾರುತಿ ಎಸ್-ಕ್ರಾಸ್ ಪೆಟ್ರೋಲ್ ಆವೃತ್ತಿಯ ಬಿಡುಗಡೆಯ ದಿನಾಂಕ ಬಹಿರಂಗವಾಗಿದೆ.

ಹೊಸ ಮಾರುತಿ ಎಸ್-ಕ್ರಾಸ್ ಪೆಟ್ರೋಲ್ ಆವೃತ್ತಿಯ ಬಿಡುಗಡೆ ದಿನಾಂಕ ಬಹಿರಂಗ

ಮಾರುತಿ ಸುಜುಕಿ ಕಂಪನಿಯು ತನ್ನ ಎಸ್-ಕ್ರಾಸ್ ಪೆಟ್ರೋಲ್ ಆವೃತ್ತಿಯು ಇದೇ ತಿಂಗಳ 29 ರಂದು ಭಾರತೀಯ ಮಾರುಕಟ್ಟೆಯಲ್ಲಿ ಬಿಡುಗಡೆಗೊಳಿಸಲಿದೆ. ಈ ಎಸ್-ಕ್ರಾಸ್ ಪೆಟ್ರೋಲ್ ಆವೃತ್ತಿಯನ್ನು ಪ್ರೀಮಿಯಂ ನೆಕ್ಸಾ ಡೀಲರ್‍‍ಗಳ ಮೂಲಕ ಮಾರಾಟ ಮಾಡಲಾಗುತ್ತದೆ. ಇದಕ್ಕಾಗಿ ಮಾರುತಿ ಸುಜುಕಿ ಕಂಪನಿಯು ನೆಕ್ಸಾ ಡೀಲರ್‍‍ಗಳಿಗೆ ಮಾರಾಟದ ಬಗ್ಗೆ ತರಬೇತಿಯನ್ನು ನೀಡುತ್ತಿದೆ.ಇನ್ನು ಈ ಮಾರುತಿ ಎಸ್-ಕ್ರಾಸ್ ಪೆಟ್ರೋಲ್ ಆವೃತ್ತಿಯನ್ನು ದೆಹಲಿಯಲ್ಲಿ ನಡೆದ 2020ರ ಆಟೋ ಎಕ್ಸ್ ಪೋದಲ್ಲಿ ಅನಾವರಣಗೊಳಿಸಲಾಗಿತ್ತು

ಹೊಸ ಮಾರುತಿ ಎಸ್-ಕ್ರಾಸ್ ಪೆಟ್ರೋಲ್ ಆವೃತ್ತಿಯ ಬಿಡುಗಡೆ ದಿನಾಂಕ ಬಹಿರಂಗ

ಡೀಸೆಲ್ ಎಸ್-ಕ್ರಾಸ್ ಕಾರಿನ ಮಾರಾಟದಲ್ಲಿ ಕುಸಿತ ಕಂಡ ಹಿನ್ನೆಲೆಯಲ್ಲಿ ಫೆಬ್ರವರಿ ತಿಂಗಳ ಕೊನೆಯಲ್ಲಿ ಈ ಮಾದರಿಯನ್ನು ಸ್ಥಗಿತಗೊಳಿಸಲಾಗಿತ್ತು. ಇದರಿಂದಾಗಿ ಮಾರುತಿ ಸುಜುಕಿ ಕಂಪನಿಯು ಎಸ್-ಕ್ರಾಸ್ ಕಾರನ್ನು ಪೆಟ್ರೋಲ್ ಆವೃತ್ತಿಯಲ್ಲಿ ಬಿಡುಗಡೆಗೊಳಿಸುತ್ತಿದೆ.

MOST READ: ಬೆಂಗಳೂರಿನಲ್ಲಿ ಸ್ಪಾಟ್ ಟೆಸ್ಟ್ ನಡೆಸಿದ ನಿಸ್ಸಾನ್ ಮ್ಯಾಗ್ನೆಟ್ ಎಸ್‍ಯುವಿ

ಹೊಸ ಮಾರುತಿ ಎಸ್-ಕ್ರಾಸ್ ಪೆಟ್ರೋಲ್ ಆವೃತ್ತಿಯ ಬಿಡುಗಡೆ ದಿನಾಂಕ ಬಹಿರಂಗ

ಮಾರುತಿ ಇತ್ತೀಚೆಗೆ ಮುಂಬರುವ ಎಸ್-ಕ್ರಾಸ್‌ನ ಟೀಸರ್ ಅನ್ನು ಭಾರತೀಯ ಮಾರುಕಟ್ಟೆಯಲ್ಲಿ ಬಿಡುಗಡೆ ಮಾಡಿದ್ದರು. 2020ರ ಮಾರುತಿ ಎಸ್-ಕ್ರಾಸ್ ಪೆಟ್ರೋಲ್ ಆವೃತ್ತಿಯ ಬೆಲೆಯು ಭಾರತದ ಎಕ್ಸ್ ಶೋರೂಂ ಪ್ರಕಾರ ರೂ.9.90 ಲಕ್ಷಗಳಾಗಿರಬಹುದು ಎಂದು ನಿರೀಕ್ಷಿಸುತ್ತೇವೆ.

ಹೊಸ ಮಾರುತಿ ಎಸ್-ಕ್ರಾಸ್ ಪೆಟ್ರೋಲ್ ಆವೃತ್ತಿಯ ಬಿಡುಗಡೆ ದಿನಾಂಕ ಬಹಿರಂಗ

2020ರ ಎಸ್-ಕ್ರಾಸ್‌ ಪೆಟ್ರೋಲ್ ಮಾದರಿಯ ಬುಕ್ಕಿಂಗ್ ಅನ್ನು ಪ್ರಾರಂಭಿಸಿದೆ. ಗ್ರಾಹಕರು ಎಸ್-ಕ್ರಾಸ್‌ ಪೆಟ್ರೋಲ್ ಮಾದರಿಗಾಗಿ ಟೋಕನ್ ಮೊತ್ತ ರೂ.11,000 ಪಾವತಿಸಿ ಬುಕ್ಕಿಂಗ್ ಅನ್ನು ಮಾಡಿಕೊಳ್ಳಬಹುದಾಗಿದೆ. ಈ ಹೊಸ ಕಾರನ್ನು ಬಿಡುಗಡೆಗೊಳಿಸಿದ ಬಳಿಕ ವಿತರಣೆಯು ಪ್ರಾರಂಭಿಸಲಿದೆ.

MOST READ: ಸ್ಥಗಿತಗೊಂಡಿಲ್ಲ ಫೋಕ್ಸ್‌ವ್ಯಾಗನ್ ಕಾರಿನ ಈ ಮಾದರಿಗಳು

ಹೊಸ ಮಾರುತಿ ಎಸ್-ಕ್ರಾಸ್ ಪೆಟ್ರೋಲ್ ಆವೃತ್ತಿಯ ಬಿಡುಗಡೆ ದಿನಾಂಕ ಬಹಿರಂಗ

ಹೊಸ ಎಸ್-ಕ್ರಾಸ್ ನಲ್ಲಿ 1.5 ಪೆಟ್ರೋಲ್ ಬಿಎಸ್- ಎಂಜಿನ್ ಅನ್ನು ಅಳವಡಿಸಲಾಗಿದೆ. ಈ ಎಂಜಿನ್ 103.5 ಬಿ‍ಹೆಚ್‍‍ಪಿ ಪವರ್ ಮತ್ತು 138 ಎನ್‍ಎಂ ಟಾರ್ಕ್ ಅನ್ನು ಉತ್ಪಾದಿಸುತ್ತದೆ. ಇದೇ ಎಂಜಿನ್ ಅನ್ನು ಮಾರುತಿ ಸುಜುಕಿ ಕಂಪನಿಯ ಇತರ ಮಾದರಿಗಳಾದ ಸಿಯಾಜ್, ಎರ್ಟಿಗಾ ಮತ್ತು ಎಕ್ಸ್‌ಎಲ್ 6 ನಲ್ಲಿ ಅಳವಡಿಸಲಾಗಿದೆ.

ಹೊಸ ಮಾರುತಿ ಎಸ್-ಕ್ರಾಸ್ ಪೆಟ್ರೋಲ್ ಆವೃತ್ತಿಯ ಬಿಡುಗಡೆ ದಿನಾಂಕ ಬಹಿರಂಗ

ಈ ಹೊಸ ಕಾರಿನಲ್ಲಿ ಡಿಜಿಟಲ್ ಇನ್ಸ್ ಟ್ರೂಮೆಂಟ್ ಕ್ಲಸ್ಟರ್, ಟಚ್ ಸ್ಕ್ರೀನ್ ಇನ್ಪೋಟೇನ್‍‍ಮೆಂಟ್ ಸಿಸ್ಟಂ, ಸ್ಮಾರ್ಟ್‌ಪ್ಲೇ ಸ್ಟುಡಿಯೋ ಸಿಸ್ಟಂ, ಆ್ಯಪಲ್ ಕಾರ್ ಪ್ಲೇ, ಆಂಡ್ರಾಯ್ಡ್ ಆಟೋವನ್ನು ಹೊಂದಿರಲಿದೆ.

MOST READ: ಮರ್ಸಿಡಿಸ್ ಬೆಂಝ್ ಜಿಎಲ್ಇ ಎಸ್‍ಯುವಿಯ ಎರಡು ಹೊಸ ರೂಪಾಂತರಗಳು ಬಿಡುಗಡೆ

ಹೊಸ ಮಾರುತಿ ಎಸ್-ಕ್ರಾಸ್ ಪೆಟ್ರೋಲ್ ಆವೃತ್ತಿಯ ಬಿಡುಗಡೆ ದಿನಾಂಕ ಬಹಿರಂಗ

ಇನ್ನೂ ಎಸಿ ವೆಂಟ್ಸ್, ಸ್ಟಿಯರಿಂಗ್ ಮೌಟೆಂಡ್ ಕಂಟ್ರೋಲ್ ಅನ್ನು ಅಳವಡಿಸಲಿದೆ. ಪ್ರಯಾಣಿಕರ ಸುರಕ್ಷತೆಗೆ ಹೆಚ್ಚಿನ ಪ್ರಾಮುಖ್ಯತೆ ನೀಡಲಾಗಿದ್ದು, ಇದರಲ್ಲಿ ಏರ್‍‍ಬ್ಯಾಗ್, ಎಬಿಎಸ್ ಜೊತೆ ಇಬಿಡಿ, ಐಎಸ್ಒ‍ಫಿಕ್ಸ್ ಚೈಲ್ಡ್ ಸೀಟ್, ಸ್ಪೀಡ್ ವಾರ್ನಿಂಗ್ ಸಿಸ್ಟಂ ಮತ್ತು ರೇರ್ ಪಾರ್ಕಿಂಗ್ ಸೆನ್ಸಾರ್ ಅನ್ನು ಹೊಂದಿರಲಿದೆ.

ಹೊಸ ಮಾರುತಿ ಎಸ್-ಕ್ರಾಸ್ ಪೆಟ್ರೋಲ್ ಆವೃತ್ತಿಯ ಬಿಡುಗಡೆ ದಿನಾಂಕ ಬಹಿರಂಗ

ಹೊಸ ಮಾರುತಿ ಎಸ್-ಕ್ರಾಸ್ ಪೆಟ್ರೋಲ್ ಆವೃತ್ತಿಯು ಇದೇ ತಿಂಗಳ 29 ರಂದು ಬಿಡುಗಡೆಯಾಗಲಿದೆ. ಹೊಸ ಎಸ್-ಕ್ರಾಸ್ ಪೆಟ್ರೋಲ್ ಆವೃತ್ತಿಯು ಬಿಡುಗಡೆಯಾದ ಬಳಿಕ ಹ್ಯುಂಡೈ ಕ್ರೆಟಾ ಮತ್ತು ಫೋರ್ಡ್ ಇಕೋಸ್ಪೋರ್ಟ್ ಕಾರುಗಳಿಗೆ ಪೈಪೋಟಿ ನೀಡಲಿದೆ.

Article Published On: Friday, July 17, 2020, 10:41 [IST]
English summary
Maruti Suzuki S-cross Petrol Launch On July 29. Read In Kannada.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+