ಸ್ಪಾಟ್ ಟೆಸ್ಟ್‌ನಲ್ಲಿ ಕಾಣಿಸಿಕೊಂಡ ಹೊಸ ಮಾರುತಿ ಬಲೆನೊ ಕಾರು
ದೇಶದ ಅತಿ ದೊಡ್ಡ ಕಾರು ತಯಾರಕ ಕಂಪನಿಯಾದ ಮಾರುತಿ ಸುಜುಕಿ ತನ್ನ ಜನಪ್ರಿಯ ಬಲೆನೊ ಹ್ಯಾಚ್‌ಬ್ಯಾಕ್‌ನ ಹೊಸ ಟೀಸರ್ ವೀಡಿಯೋವನ್ನು ಇತ್ತೀಚೆಗೆ ಬಿಡುಗಡೆಗೊಳಿಸಿತ್ತು. ಬಲೆನೊ ಹ್ಯಾಚ್‌ಬ್ಯಾಕ್ ಮಾರುತಿ ಸುಜುಕಿ ಕಾರುಗಳ ಸರಣಿಯಲ್ಲಿ ಅತ್ಯಂತ ಯಶಸ್ವಿ ಮಾದರಿಗಳಲ್ಲಿ ಒಂದಾಗಿದೆ.

ಬಲೆನೊ ಟೀಸರ್ ವೀಡಿಯೋದಲ್ಲಿ 'ಎ ಬಿಗ್ ಸರ್ಪ್ರೈಸ್ ಕಮಿಂಗ್ ಸೂನ್ ಎಂಬ'ಟ್ಯಾಗ್‌ಲೈನ್ ಅನ್ನು ಹೊಂದಿತ್ತು. ಇದು ಮಾರುತಿ ಸುಜುಕಿ ಶೀಘ್ರದಲ್ಲೇ ಬಲೆನೊ ಹ್ಯಾಚ್‌ಬ್ಯಾಕ್‌ನಲ್ಲಿ ಅತ್ಯಾಕರ್ಷಕ ನವೀಕರಣವನ್ನು ಪರಿಚಯಿಸಲಿದ್ದಾರೆ ಎಂದು ಇದು ಸ್ಪಷ್ಟವಾಗಿ ಸೂಚಿಸುತ್ತದೆ. ಅದರಂತೆ ಹೊಸ ಮಾರುತಿ ಸುಜುಕಿ ಬಲೆನೊ ಹ್ಯಾಚ್‌ಬ್ಯಾಕ್ ಇತ್ತೀಚೆಗೆ ಸ್ಪಾಟ್ ಟೆಸ್ಟ್ ಅನ್ನು ನಡೆಸಿದೆ. ಹೊಸ ಮಾರುತಿ ಸುಜುಕಿ ಬಲೆನೊ ಕಾರು ಸ್ಪಾಟ್ ಟೆಸ್ಟ್ ನಡೆಸುತ್ತಿರುವ ಸ್ಪೈ ಚಿತ್ರಗಳು ಬಹಿರಂಗವಾಗಿವೆ.

ವರದಿಗಳ ಪ್ರಕಾರ ಇತ್ತೀಚೆಗೆ ಸ್ಪಾಟ್ ಟೆಸ್ಟ್ ನಲ್ಲಿ ಕಾಣಿಸಿಕೊಂಡಿರುವ ಮಾದರಿಯು ಮಾರುತಿ ಸುಜುಕಿ ಬಲೆನೊ ಹೈಬ್ರಿಡ್ ಆವೃತ್ತಿಯಾಗಿದೆ. ಇನ್ನು ಈ ಹೊಸ ಮಾರುತಿ ಸುಜುಕಿ ಬಲೆನೊ ಹೈಬ್ರಿಡ್ ಆವೃತ್ತಿಯಲ್ಲಿ ಎರಡು ಎಲೆಕ್ಟ್ರಿಕ್ ಮೋಟಾರ್ ಅನ್ನು ಅಳವಡಿಸಬಹುದು.
MOST READ: ಅನಾವರಣವಾಯ್ತು ಟೊಯೊಟಾ ಕೊರೊಲ್ಲಾ ಟೂರಿಂಗ್ ರಿಬ್ಯಾಡ್ಜ್ ಆವೃತ್ತಿ ಸುಜುಕಿ ಸ್ವೇಸ್

ಈ ಹಿಂದೆ ಮಾರುತಿ ಸುಜುಕಿ ಬಲೆನೊ ಹೈಬ್ರಿಡ್ ಆವೃತ್ತಿಯು ಸ್ಪಾಟ್ ಟೆಸ್ಟ್ ನಲ್ಲಿ ಕಾಣಿಸಿಕೊಂಡಿತ್ತು. ಇಂಡೋ-ಜಪಾನೀಸ್ ಕಾರು ತಯಾರಕರಾದ ಮಾರುತಿ ಸುಜುಕಿಯು ಬಾಷ್ ಸಹಯೋಗದೊಂದಿಗೆ ಹೈಬ್ರಿಡ್ ಪವರ್‌ಟ್ರೇನ್ ಅನ್ನು ಅಭಿವೃದ್ಧಿಪಡಿಸುತ್ತಿದೆ.

ಇದು ಹೊಸ 48ವಿ "ಸ್ಟ್ರಾಂಗ್ ಹೈಬ್ರಿಡ್" ತಂತ್ರಜ್ಞಾನವನ್ನು "ಎಸ್‌ಹೆಚ್‌ಇವಿ 48ವಿ ಯಾಗಿರಬಹುದು. ಸ್ಟ್ಯಾಂಡರ್ಡ್ ಮಾದರಿಗೆ ಹೋಲಿಸಿದರೆ, ಪೂರ್ಣ-ಹೈಬ್ರಿಡ್ ಆವೃತ್ತಿಯು ಹೆಚ್ಚಿನ ಮೈಲೇಜ್ ಅನ್ನು ನೀಡುತ್ತದೆ.
MOST READ: 2020ರ ಸಿಟಿ ಕಾರಿನ ಉತ್ಪಾದನೆಯನ್ನು ಪ್ರಾರಂಭಿಸಿದ ಹೋಂಡಾ

ಆದರೆ ಇದರ ಬಗ್ಗೆ ಮಾರುತಿ ಸುಜುಕಿ ಕಂಪನಿಯು ಯಾವುದೇ ಮಾಹಿತಿಯನ್ನು ಬಹಿರಂಗಪಡಿಸಿಲ್ಲ. ಆದರೆ ಹೊಸ ಮಾರುತಿ ಸುಜುಕಿ ಬಲೆನೊ ಕಾರು ಶೀಘ್ರದಲ್ಲೇ ಭಾರತೀಯ ಮಾರುಕಟ್ಟೆ ಪವೇಶಿಸಲಿದೆ ಎಂದು ನಿರೀಕ್ಷಿಸುತ್ತೇವೆ.

ದೇಶದ ಅತಿದೊಡ್ಡ ಕಾರು ತಯಾರಕ ಕಂಪನಿಯಾದ ಮಾರುತಿ ಸುಜುಕಿ ಇಂಡಿಯಾ ಲಿಮಿಟೆಡ್ (ಎಂಎಸ್ಐಎಲ್) 2015ರ ಅಕ್ಟೋಬರ್ ತಿಂಗಳಲ್ಲಿ ಬಲೆನೊ ಬಿ2 ವಿಭಾಗದ ಹ್ಯಾಚ್‌ಬ್ಯಾಕ್ ಅನ್ನು ಭಾರತೀಯ ಮಾರುಕಟ್ಟೆಯಲ್ಲಿ ಬಿಡುಗಡೆಗೊಳಿಸಿತ್ತು.
MOST READ: ಬಿಡುಗಡೆಯ ಸನಿಹದಲ್ಲಿ ಹೊಸ ಮಾರುತಿ ಸುಜುಕಿ ಸೆಲೆರಿಯೊ

ಈ ಬಲೆನೊ ಹ್ಯಾಚ್‌ಬ್ಯಾಕ್ ಅನ್ನು ಮಾರುತಿ ಸುಜುಕಿ ಕಂಪನಿಯ ಪ್ರೀಮಿಯಂ ನೆಕ್ಸಾ ಡೀಲರ್ ಮೂಲಕ ಮಾರಾಟ ಮಾಡಲಾಗುತ್ತಿದೆ. ವರ್ಷಗಳಲ್ಲಿ ಬಲೆನೊ ಕಾರುಗಳ ಮಾರಾಟವು ಉತ್ತಮ ಬೆಳವಣಿಗೆಯನ್ನು ಸಾಧಿಸುತ್ತಿದೆ. ಬಲೆನೊ ಹ್ಯಾಚ್‌ಬ್ಯಾಕ್ ಐದನೇ ತಲೆಮಾರಿನ ಹರ್ಟೆಕ್ಟ್ ಅರ್ಟಿಟೆಕ್ಜರ್ ಅನ್ನು ಆಧರಿಸಿದೆ.

ಬಲೆನೊ ಭಾರತೀಯ ಮಾರುಕಟ್ಟೆಗೆ ಪಾದಾರ್ಪಣೆ ಮಾಡಿ ಕೇವಲ ಅರ್ಧ ದಶಕವಾಗಿದೆ. ಇಂಡೋ-ಜಪಾನೀಸ್ ತಯಾರಕ ಮಾರುತಿ ಸುಜುಕಿ ತನ್ನ ಬಲೆನೊ ಕಾರು ಭಾರತದಲ್ಲಿ ಎಂಟು ಲಕ್ಷ ಮಾರಾಟದ ಮೈಲಿಗಲ್ಲು ಸಾಧಿಸಿದೆ. ದೇಶದಲ್ಲಿ ಆತಿ ಹೆಚ್ಚು ವೇಗವಾಗಿ ಮಾರಾಟವಾಗುವ ಹ್ಯಾಚ್‌ಬ್ಯಾಕ್ ಆಗಿದೆ.

ಬಲೆನೊ ಕಾರು ಆಸ್ಟ್ರೇಲಿಯಾ, ಯುರೋಪ್, ಲ್ಯಾಟಿನ್ ಅಮೆರಿಕ, ಆಫ್ರಿಕಾ, ಮಧ್ಯಪ್ರಾಚ್ಯ ಮತ್ತು ಆಗ್ನೇಯ ಏಷ್ಯಾದಂತಹ ಅನೇಕ ಅಂತರರಾಷ್ಟ್ರೀಯ ಮಾರುಕಟ್ಟೆಗಳಿಗೆ ರಫ್ತು ಮಾಡಲಾಗುತ್ತದೆ. ಬಲೆನೊ ಕೇವಲ 59 ತಿಂಗಳಲ್ಲಿ ಎಂಟು ಲಕ್ಷ ಮಾರಾಟದ ಮೈಲಿಗಲ್ಲು ತಲುಪಿದೆ.

ಜನಪ್ರಿಯ ಮಾರುತಿ ಸುಜುಕಿ ಬಲೆನೊ ಭಾರತೀಯ ಮಾರುಕಟ್ಟೆಯಲ್ಲಿ ಹ್ಯುಂಡೈ ಎಲೈಟ್ ಐ20, ಟಾಟಾ ಆಲ್ಟ್ರೊಜ್, ಫೋಕ್ಸ್‌ವ್ಯಾಗನ್ ಪೊಲೊ ಮತ್ತು ಹೋಂಡಾ ಜಾಝ್ ಕಾರುಗಳಿಗೆ ಪೈಪೋಟಿ ನೀಡುತ್ತದೆ. ಒಟ್ಟಾರೆಯಾಗಿ ಸಾಕಷ್ಟು ಕುತೂಹಲತೆ ಸೃಷ್ಟಿಸಿದ ಹೊಸ ಮಾರುತಿ ಸುಜುಕಿ ಬಲೆನೊ ಕಾರು ಶೀಘ್ರದಲ್ಲೇ ಭಾರತೀಯ ಮಾರುಕಟ್ಟೆಯಲ್ಲಿ ಬಿಡುಗಡೆಯಾಗಲಿದೆ.


Click it and Unblock the Notifications