ಹೊಸ ವಿನ್ಯಾಸದಲ್ಲಿ ಬಿಡುಗಡೆಯಾಗಲಿದೆ ಮಾರುತಿ ಸೆಲೆರಿಯೊ ಕಾರು

ಜನಪ್ರಿಯ ಕಾರು ಉತ್ಪಾದನಾ ಕಂಪನಿಯಾಗಿರುವ ಮಾರುತಿ ಸುಜುಕಿ ತನ್ನ ಹೊಸ ತಲೆಮಾರಿನ ಸೆಲೆರಿಯೊ ಕಾರನ್ನು ಭಾರತೀಯ ಮಾರುಕಟ್ಟೆಯಲ್ಲಿ ಬಿಡುಗಡೆಗೊಳಿಸಲು ಸಜ್ಜಾಗುತ್ತಿದೆ. ಇದರ ಭಾಗವಾಗಿ ಹೊಸ ಮಾರುತಿ ಸುಜುಕಿ ಸೆಲೆರಿಯೊ ಹ್ಯಾಚ್‌ಬ್ಯಾಕ್ ಭಾರತದಲ್ಲಿ ಮತ್ತೊಮ್ಮೆ ಸ್ಪಾಟ್ ಟೆಸ್ಟ್ ಅನ್ನು ನಡೆಸಿದೆ.

ಹೊಸ ವಿನ್ಯಾಸದಲ್ಲಿ ಬಿಡುಗಡೆಯಾಗಲಿದೆ ಮಾರುತಿ ಸೆಲೆರಿಯೊ ಕಾರು

ಹೊಸ ತಲೆಮಾರಿನ ಮಾರುತಿ ಸುಜುಕಿ ಸೆಲೆರಿಯೊ ಹ್ಯಾಚ್‌ಬ್ಯಾಕ್ ಈ ವರ್ಷದ ದೀಪಾವಳಿಯ ಹಬ್ಬದ ಸಮಯದಲ್ಲಿ ಬಿಡುಗಡೆಯಾಗಬಹುದೆಂದು ನಿರೀಕ್ಷಿಸಲಾಗಿತ್ತು. ಆದರೆ ಮಾರುತಿ ಸುಜುಕಿ ಸೆಲೆರಿಯೊ ಹ್ಯಾಚ್‌ಬ್ಯಾಕ್ ಬಿಡುಗಡೆಯನ್ನು ಮುಂದಿನ ವರ್ಷದ ಆರಂಭಕ್ಕೆ ಮುಂದೂಡಿದ್ದರು. ಭಾರತದಲಿ ಸೆಲಿರಿಯೊ ಹ್ಯಾಚ್‌ಬ್ಯಾಕ್ ಅನ್ನು ಮೊದಲ ಬಾರಿಗೆ 2014ರಲ್ಲಿ ಬಿಡುಗಡೆಗೊಳಿಸಿದರು. ಆದರೆ ಇತರ ಮಾದರಿಗಳ ಮಾದರಿಯಂತೆ ದೊಡ್ಡ ಯಶ್ವಸಿಯನ್ನು ಪಡೆದುಕೊಳ್ಳಲು ಸಾಧ್ಯವಾಗಿಲ್ಲ. ಆದರೆ ಇದೀಗ ಹೊಸ ವಿನ್ಯಾಸದಲ್ಲಿ ನ್ಯೂ ಜನರೇಷನ್ ಸೆಲೆರಿಯೊ ಕಾರನ್ನು ಮಾರುತಿ ಸುಜುಕಿ ಕಂಪನಿ ಬಿಡುಗಡೆಗೊಳಿಸಲು ಸಜ್ಜಾಗಿದೆ.

ಹೊಸ ವಿನ್ಯಾಸದಲ್ಲಿ ಬಿಡುಗಡೆಯಾಗಲಿದೆ ಮಾರುತಿ ಸೆಲೆರಿಯೊ ಕಾರು

ನ್ಯೂ ಜನರೇಷನ್ ಮಾರುತಿ ಸುಜುಕಿ ಸೆಲೆರಿಯೊ ಭಾರತದಲ್ಲಿ ಮತ್ತೊಮ್ಮೆ ಸ್ಪಾಟ್ ಟೆಸ್ಟ್ ಅನ್ನು ನಡೆಸಿದೆ. ಈ ಹೊಸ ಸೆಲೆರಿಯೊ ಕಾರು ಸ್ಪಾಟ್ ಟೆಸ್ಟ್ ನಡೆಸುತ್ತಿರುವ ಸ್ಪೈ ಚಿತ್ರಗಳು ಬಹಿರಂಗವಾಗಿವೆ. ಸ್ಪೈ ಚಿತ್ರಗಳಲ್ಲಿ ಕಂಡುಬಂದಂತೆ, ಹೊಸ ಸೆಲೆರಿಯೊ ಹ್ಯಾಚ್‌ಬ್ಯಾಕ್‌ ಸ್ವಲ್ಪ ಭಿನ್ನವಾದ ವಿನ್ಯಾಸವನ್ನು ಹೊಂದಿದೆ. ಉದ್ದವಾದ ವ್ಹೀಲ್‌ಬೇಸ್ ಅನ್ನು ಹೊಂದಿದೆ.

MOST READ: ಕ್ರ್ಯಾಶ್ ಟೆಸ್ಟ್‌ನಲ್ಲಿ ಶೂನ್ಯ ಸ್ಟಾರ್ ರೇಟಿಂಗ್ ಪಡೆದ ಜನಪ್ರಿಯ ಮಾರುತಿ ಎಸ್-ಪ್ರೆಸ್ಸೊ ಕಾರು

ಹೊಸ ವಿನ್ಯಾಸದಲ್ಲಿ ಬಿಡುಗಡೆಯಾಗಲಿದೆ ಮಾರುತಿ ಸೆಲೆರಿಯೊ ಕಾರು

ಈ ಸೆಲೆರಿಯೊ ಕಾರು ಕ್ರಾಸ್‌ಒವರ್‌ನಂತೆ ವಿನ್ಯಾಸವಿರುತ್ತದೆ. ಎಸ್-ಪ್ರೆಸ್ಸೊ, ವ್ಯಾಗನ್ಆರ್, ಸ್ವಿಫ್ಟ್ ಮತ್ತು ಬಲೆನೊಗಳಂತಹ ಇತರ ಮಾರುತಿ ಕಾರುಗಳೊಂದಿಗೆ ಪ್ಲಾಟ್‌ಫಾರ್ಮ್ ಹಂಚಿಕೊಳ್ಳುವ ಹೊಸ ಸೆಲೆರಿಯೊವನ್ನು ಕ್ರಾಸ್‌ಒವರ್ ಆಗಿ ಮಾರಾಟ ಮಾಡಬಹುದು.

ಹೊಸ ವಿನ್ಯಾಸದಲ್ಲಿ ಬಿಡುಗಡೆಯಾಗಲಿದೆ ಮಾರುತಿ ಸೆಲೆರಿಯೊ ಕಾರು

ಈ ಹೊಸ ಕಾರಿನಲ್ಲಿ ಎಲ್‌ಇಡಿ ಡಿಆರ್‌ಎಲ್‌, ಪ್ರೊಜೆಕ್ಟರ್ ಹೆಡ್‌ಲೈಟ್, ಸ್ಟೈಲಿಶ್ ಅಲಾಯ್ ವ್ಹೀಲ್ ಗಳು, ಎಲ್‌ಇಡಿ ಟೈಲ್ ಲೈಟ್‌ಗಳು, ರಿಯರ್ ವೈಪರ್, ಚಂಕಿಯರ್ ಬಂಪರ್ ಗಳೂ, ಹೆಚ್ಚಿನ ಗ್ರೌಂಡ್ ಕ್ಲಿಯರೆನ್ಸ್, ಎಲ್‌ಇಡಿ ಟರ್ನ್ ಇಂಡಿಕೇಟರ್‌ಗಳನ್ನು ಹೊಂದಿರುವ ಒಆರ್‌ವಿಎಂಗಳು ಮುಂತಾದ ಫೀಚರುಗಳನ್ನು ಹೊಂದಿರಲಿದೆ.

MOST READ: ಅನಾವರಣವಾಯ್ತು ಟೊಯೊಟಾ ಕೊರೊಲ್ಲಾ ಟೂರಿಂಗ್ ರಿಬ್ಯಾಡ್ಜ್ ಆವೃತ್ತಿ ಸುಜುಕಿ ಸ್ವೇಸ್

ಹೊಸ ವಿನ್ಯಾಸದಲ್ಲಿ ಬಿಡುಗಡೆಯಾಗಲಿದೆ ಮಾರುತಿ ಸೆಲೆರಿಯೊ ಕಾರು

ಮಾರುಕಟ್ಟೆಯಲ್ಲಿರುವ ಸೆಲೆರಿಯೊ 1.0 ಲೀಟರ್ 3 ಸಿಲಿಂಡರ್ ಪೆಟ್ರೋಲ್ ಬಿಎಸ್ 6 ಎಂಜಿನ್ ಆಯ್ಕೆಯನ್ನು ಹೊಂದಿದೆ. ಹೊಸ ತಲೆಮಾರಿನ ಸೆಲೆರಿಯೊದಲ್ಲಿ ಅದೇ ಎಂಜಿನ್ ಆಯ್ಜೆಯನ್ನು ಹೊಂದಿರಲಿದೆ. ಈ ಎಂಜಿನ್ 67 ಬಿಹೆಚ್‍ಪಿ ಪವರ್ ಮತ್ತು 90 ಎನ್ಎಂ ಟಾರ್ಕ್ ಅನ್ನು ಉತ್ಪಾದಿಸುತ್ತದೆ

ಹೊಸ ವಿನ್ಯಾಸದಲ್ಲಿ ಬಿಡುಗಡೆಯಾಗಲಿದೆ ಮಾರುತಿ ಸೆಲೆರಿಯೊ ಕಾರು

ಇನ್ನು ನ್ಯೂ ಜನರೇಷನ್ ಸೆಲೆರಿಯೊ ಸಂಪೂರ್ಣವಾಗಿ ಇಂಟಿರಿಯರ್ ಅನ್ನು ನವೀಕರಿಸಲಾಗಿದೆ. ಸ್ಪೈ ಚಿತ್ರಗಳಲ್ಲಿ ಕಂಡುಬಂದಂತೆ, ಕ್ಯಾಬಿನ್ ಹೊಸ ವಿನ್ಯಾಸವನ್ನು ಪಡೆದುಕೊಂಡಿದೆ. ನ್ಯೂ ಜನರೇಷನ್ ಸೆಲೆರಿಯೊ ಆಕರ್ಷಕ ಇಂಟಿರಿಯರ್ ಅನ್ನು ಹೊಂದಿರಲಿದೆ.

MOST READ: 2020ರ ಸಿಟಿ ಕಾರಿನ ಉತ್ಪಾದನೆಯನ್ನು ಪ್ರಾರಂಭಿಸಿದ ಹೋಂಡಾ

ಹೊಸ ವಿನ್ಯಾಸದಲ್ಲಿ ಬಿಡುಗಡೆಯಾಗಲಿದೆ ಮಾರುತಿ ಸೆಲೆರಿಯೊ ಕಾರು

ನ್ಯೂ ಜನರೇಷನ್ ಸೆಲೆರಿಯೊ ಕಾರಿನ ಇಂಟಿರಿಯರ್ ನಲ್ಲಿ ಎರಡು ಕಪ್ ಹೋಲ್ಡರ್‌ಗಳು ಮತ್ತು ಮೌಂಟಡ್ ಫ್ರಂಟ್ ಪವರ್ ವಿಂಡೋ ಸ್ವಿಚ್‌ಗಳೊಂದಿಗೆ ಹೊಸ ಸೆಂಟರ್ ಕನ್ಸೋಲ್ ಅನ್ನು ಪಡೆಯುತ್ತದೆ. ಸೆಂಟ್ರಲ್ ಕನ್ಸೋಲ್‌ನಲ್ಲಿ 12ವ್ಯಾಟ್ ಪವರ್ ಸಾಕೆಟ್ ಸಹ ಕಂಡುಬರುತ್ತದೆ. ಇನ್ಸ್ ಟ್ರೂಮೆಂಟ್ ಕ್ಲಸ್ಟರ್ ಪ್ರಸ್ತುತ ಮಾದರಿಯಲ್ಲಿ ಕಂಡುಬರುವಂತೆಯೇ ಇದೆ.

ಹೊಸ ವಿನ್ಯಾಸದಲ್ಲಿ ಬಿಡುಗಡೆಯಾಗಲಿದೆ ಮಾರುತಿ ಸೆಲೆರಿಯೊ ಕಾರು

ಇನ್ನು ಹೊಸ ಸೆಲೆರಿಯೊ ಕಾರಿನ ಇಂಟಿರಿಯರ್ ನಲ್ಲಿ ಮೌಂಟಡ್ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಂ ಅನ್ನು ಹೊಂದಿರಲಿದೆ. ಇದರಲ್ಲಿ ಆಪಲ್ ಕಾರ್ ಪ್ಲೇ ಮತ್ತು ಆಂಡ್ರಾಯ್ಡ್ ಆಟೋ ಒಳಗೊಂಡಿರುತ್ತದೆ. ಈ ಹೊಸ ಕಾರಿನಲ್ಲಿ ಫ್ಯಾಬ್ರಿಕ್ ಸೀಟುಗಳು, ಆಟೋಮ್ಯಾಟಿಕ್ ಎಸಿ, ಸ್ಟೀಯರಿಂಗ್ ಮೌಂಟೆಡ್ ಕಂಟ್ರೋಲ್‌ಗಳೊಂದಿಗೆ ಇತರ ಫೀಚರುಗಳನ್ನು ಹೊಂದಿರುತ್ತದೆ.

ಹೊಸ ವಿನ್ಯಾಸದಲ್ಲಿ ಬಿಡುಗಡೆಯಾಗಲಿದೆ ಮಾರುತಿ ಸೆಲೆರಿಯೊ ಕಾರು

ಮಾರುತಿ ಸುಜುಕಿ ಸೆಲೆರಿಯೊ ಭಾರತೀಯ ಮಾರುಕಟ್ಟೆಯಲ್ಲಿ ಬಿಡುಗಡೆಯಾಗಲಿರುವ ಬಹುನಿರೀಕ್ಷಿತ ಕಾರುಗಳಲ್ಲಿ ಒಂದಾಗಿದೆ. ಹೊಸ ತಲೆಮಾರಿನ ಮಾರುತಿ ಸುಜುಕಿ ಸೆಲೆರಿಯೊ ಕಾರು ಭಾರತೀಯ ಮಾರುಕಟ್ಟೆಯಲ್ಲಿ ಬಿಡುಗಡೆಯಾದ ಬಳಿಕ ಟಾಟಾ ಟಿಯಾಗೋ, ಹ್ಯುಂಡೈ ಸ್ಯಾಂಟ್ರೊ ಮತ್ತು ರೆನಾಲ್ಟ್ ಕ್ವಿಡ್ ಕಾರುಗಳಿಗೆ ಪೈಪೋಟಿ ನೀಡುತ್ತದೆ.

Most Read Articles

Kannada
English summary
New-Gen (2021) Maruti Celerio Exteriors Revealed. Read In Kannada.
Story first published: Monday, November 30, 2020, 20:04 [IST]
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X