Just In
- 5 hrs ago
ಭಾರೀ ಬದಲಾವಣೆಯೊಂದಿಗೆ ಮಾರುಕಟ್ಟೆ ಪ್ರವೇಶಿಸಲಿದೆ ನ್ಯೂ ಜನರೇಷನ್ ಸ್ಕಾರ್ಪಿಯೋ
- 7 hrs ago
ಹೊಸ ಬಣ್ಣದ ಆಯ್ಕೆಯನ್ನು ಪಡೆದುಕೊಂಡ 2021ರ ಯಮಹಾ ವೈಝಡ್ಎಫ್-ಆರ್25 ಬೈಕ್
- 7 hrs ago
ಮಾಲಿನ್ಯ ಉಂಟುಮಾಡುವ ವಾಹನಗಳಿಗೆ ಬ್ರೇಕ್ ಹಾಕಲು 'ಹಸಿರು ತೆರಿಗೆ' ಅಸ್ತ್ರ
- 9 hrs ago
ಒಂದೂವರೆ ವರ್ಷದಲ್ಲಿ ದಾಖಲೆ ಸಂಖ್ಯೆಯ ಕಾರುಗಳನ್ನು ಮಾರಾಟ ಮಾಡಿದ ಕಿಯಾ ಮೋಟಾರ್ಸ್
Don't Miss!
- News
ಹಿರಿಯೂರು ಕೆಎಸ್ಆರ್ಟಿಸಿ ಬಸ್ ನಿಲ್ದಾಣಕ್ಕೆ ಹೊಸ ರೂಪ
- Finance
ಗಣರಾಜ್ಯೋತ್ಸವಕ್ಕೆ ಬಿಎಸ್ಎನ್ಎಲ್ನಿಂದ ವಿಶೇಷ ಆಫರ್
- Sports
ಅಪರೂಪದ ಖಾಯಿಲೆಗೆ ಭಾರತದ ಮಾಜಿ ಗೋಲ್ ಕೀಪರ್ ಪ್ರಶಾಂತ ಬಲಿ
- Movies
ರಾಜಮೌಳಿಯ RRR ಚಿತ್ರಕ್ಕೆ ಎದುರಾಗಿ ಅಜಯ್ ದೇವಗನ್ ಸಿನಿಮಾ?
- Lifestyle
ನೀವು ಬಳಸಬಹುದಾದ ಡೈರಿ ಉತ್ಪನ್ನವಲ್ಲದ ಹಾಲುಗಳ ಬಗ್ಗೆ ಇಲ್ಲಿದೆ ಮಾಹಿತಿ
- Education
Republic Day Speech And Essay Ideas: ಗಣರಾಜ್ಯೋತ್ಸವ ಪ್ರಯುಕ್ತ ಭಾಷಣ ಮತ್ತು ಪ್ರಬಂಧ ಬರೆಯಲು ಇಲ್ಲಿದೆ ಮಾಹಿತಿ
- Technology
ಒನ್ಪ್ಲಸ್ ನಾರ್ಡ್ ಜುಲೈ 15 ರಿಂದ ಅಮೆಜಾನ್ ತಾಣದಲ್ಲಿ ಪ್ರಿ-ಆರ್ಡರ್ಗೆ ಲಭ್ಯವಿದೆ; ಖರೀದಿಸುವಲ್ಲಿ ಮೊದಲಿಗರಾಗಿರಿ!
- Travel
ಭಾರತದಲ್ಲಿ ಜೂನ್ 1 ರಿಂದ ಚಲಿಸಲಿರುವ ರೈಲುಗಳ ಸಂಪೂರ್ಣ ಪಟ್ಟಿ
ಹೊಸ ವಿನ್ಯಾಸದಲ್ಲಿ ಬಿಡುಗಡೆಯಾಗಲಿದೆ ಮಾರುತಿ ಸೆಲೆರಿಯೊ ಕಾರು
ಜನಪ್ರಿಯ ಕಾರು ಉತ್ಪಾದನಾ ಕಂಪನಿಯಾಗಿರುವ ಮಾರುತಿ ಸುಜುಕಿ ತನ್ನ ಹೊಸ ತಲೆಮಾರಿನ ಸೆಲೆರಿಯೊ ಕಾರನ್ನು ಭಾರತೀಯ ಮಾರುಕಟ್ಟೆಯಲ್ಲಿ ಬಿಡುಗಡೆಗೊಳಿಸಲು ಸಜ್ಜಾಗುತ್ತಿದೆ. ಇದರ ಭಾಗವಾಗಿ ಹೊಸ ಮಾರುತಿ ಸುಜುಕಿ ಸೆಲೆರಿಯೊ ಹ್ಯಾಚ್ಬ್ಯಾಕ್ ಭಾರತದಲ್ಲಿ ಮತ್ತೊಮ್ಮೆ ಸ್ಪಾಟ್ ಟೆಸ್ಟ್ ಅನ್ನು ನಡೆಸಿದೆ.

ಹೊಸ ತಲೆಮಾರಿನ ಮಾರುತಿ ಸುಜುಕಿ ಸೆಲೆರಿಯೊ ಹ್ಯಾಚ್ಬ್ಯಾಕ್ ಈ ವರ್ಷದ ದೀಪಾವಳಿಯ ಹಬ್ಬದ ಸಮಯದಲ್ಲಿ ಬಿಡುಗಡೆಯಾಗಬಹುದೆಂದು ನಿರೀಕ್ಷಿಸಲಾಗಿತ್ತು. ಆದರೆ ಮಾರುತಿ ಸುಜುಕಿ ಸೆಲೆರಿಯೊ ಹ್ಯಾಚ್ಬ್ಯಾಕ್ ಬಿಡುಗಡೆಯನ್ನು ಮುಂದಿನ ವರ್ಷದ ಆರಂಭಕ್ಕೆ ಮುಂದೂಡಿದ್ದರು. ಭಾರತದಲಿ ಸೆಲಿರಿಯೊ ಹ್ಯಾಚ್ಬ್ಯಾಕ್ ಅನ್ನು ಮೊದಲ ಬಾರಿಗೆ 2014ರಲ್ಲಿ ಬಿಡುಗಡೆಗೊಳಿಸಿದರು. ಆದರೆ ಇತರ ಮಾದರಿಗಳ ಮಾದರಿಯಂತೆ ದೊಡ್ಡ ಯಶ್ವಸಿಯನ್ನು ಪಡೆದುಕೊಳ್ಳಲು ಸಾಧ್ಯವಾಗಿಲ್ಲ. ಆದರೆ ಇದೀಗ ಹೊಸ ವಿನ್ಯಾಸದಲ್ಲಿ ನ್ಯೂ ಜನರೇಷನ್ ಸೆಲೆರಿಯೊ ಕಾರನ್ನು ಮಾರುತಿ ಸುಜುಕಿ ಕಂಪನಿ ಬಿಡುಗಡೆಗೊಳಿಸಲು ಸಜ್ಜಾಗಿದೆ.

ನ್ಯೂ ಜನರೇಷನ್ ಮಾರುತಿ ಸುಜುಕಿ ಸೆಲೆರಿಯೊ ಭಾರತದಲ್ಲಿ ಮತ್ತೊಮ್ಮೆ ಸ್ಪಾಟ್ ಟೆಸ್ಟ್ ಅನ್ನು ನಡೆಸಿದೆ. ಈ ಹೊಸ ಸೆಲೆರಿಯೊ ಕಾರು ಸ್ಪಾಟ್ ಟೆಸ್ಟ್ ನಡೆಸುತ್ತಿರುವ ಸ್ಪೈ ಚಿತ್ರಗಳು ಬಹಿರಂಗವಾಗಿವೆ. ಸ್ಪೈ ಚಿತ್ರಗಳಲ್ಲಿ ಕಂಡುಬಂದಂತೆ, ಹೊಸ ಸೆಲೆರಿಯೊ ಹ್ಯಾಚ್ಬ್ಯಾಕ್ ಸ್ವಲ್ಪ ಭಿನ್ನವಾದ ವಿನ್ಯಾಸವನ್ನು ಹೊಂದಿದೆ. ಉದ್ದವಾದ ವ್ಹೀಲ್ಬೇಸ್ ಅನ್ನು ಹೊಂದಿದೆ.
MOST READ: ಕ್ರ್ಯಾಶ್ ಟೆಸ್ಟ್ನಲ್ಲಿ ಶೂನ್ಯ ಸ್ಟಾರ್ ರೇಟಿಂಗ್ ಪಡೆದ ಜನಪ್ರಿಯ ಮಾರುತಿ ಎಸ್-ಪ್ರೆಸ್ಸೊ ಕಾರು

ಈ ಸೆಲೆರಿಯೊ ಕಾರು ಕ್ರಾಸ್ಒವರ್ನಂತೆ ವಿನ್ಯಾಸವಿರುತ್ತದೆ. ಎಸ್-ಪ್ರೆಸ್ಸೊ, ವ್ಯಾಗನ್ಆರ್, ಸ್ವಿಫ್ಟ್ ಮತ್ತು ಬಲೆನೊಗಳಂತಹ ಇತರ ಮಾರುತಿ ಕಾರುಗಳೊಂದಿಗೆ ಪ್ಲಾಟ್ಫಾರ್ಮ್ ಹಂಚಿಕೊಳ್ಳುವ ಹೊಸ ಸೆಲೆರಿಯೊವನ್ನು ಕ್ರಾಸ್ಒವರ್ ಆಗಿ ಮಾರಾಟ ಮಾಡಬಹುದು.

ಈ ಹೊಸ ಕಾರಿನಲ್ಲಿ ಎಲ್ಇಡಿ ಡಿಆರ್ಎಲ್, ಪ್ರೊಜೆಕ್ಟರ್ ಹೆಡ್ಲೈಟ್, ಸ್ಟೈಲಿಶ್ ಅಲಾಯ್ ವ್ಹೀಲ್ ಗಳು, ಎಲ್ಇಡಿ ಟೈಲ್ ಲೈಟ್ಗಳು, ರಿಯರ್ ವೈಪರ್, ಚಂಕಿಯರ್ ಬಂಪರ್ ಗಳೂ, ಹೆಚ್ಚಿನ ಗ್ರೌಂಡ್ ಕ್ಲಿಯರೆನ್ಸ್, ಎಲ್ಇಡಿ ಟರ್ನ್ ಇಂಡಿಕೇಟರ್ಗಳನ್ನು ಹೊಂದಿರುವ ಒಆರ್ವಿಎಂಗಳು ಮುಂತಾದ ಫೀಚರುಗಳನ್ನು ಹೊಂದಿರಲಿದೆ.
MOST READ: ಅನಾವರಣವಾಯ್ತು ಟೊಯೊಟಾ ಕೊರೊಲ್ಲಾ ಟೂರಿಂಗ್ ರಿಬ್ಯಾಡ್ಜ್ ಆವೃತ್ತಿ ಸುಜುಕಿ ಸ್ವೇಸ್

ಮಾರುಕಟ್ಟೆಯಲ್ಲಿರುವ ಸೆಲೆರಿಯೊ 1.0 ಲೀಟರ್ 3 ಸಿಲಿಂಡರ್ ಪೆಟ್ರೋಲ್ ಬಿಎಸ್ 6 ಎಂಜಿನ್ ಆಯ್ಕೆಯನ್ನು ಹೊಂದಿದೆ. ಹೊಸ ತಲೆಮಾರಿನ ಸೆಲೆರಿಯೊದಲ್ಲಿ ಅದೇ ಎಂಜಿನ್ ಆಯ್ಜೆಯನ್ನು ಹೊಂದಿರಲಿದೆ. ಈ ಎಂಜಿನ್ 67 ಬಿಹೆಚ್ಪಿ ಪವರ್ ಮತ್ತು 90 ಎನ್ಎಂ ಟಾರ್ಕ್ ಅನ್ನು ಉತ್ಪಾದಿಸುತ್ತದೆ

ಇನ್ನು ನ್ಯೂ ಜನರೇಷನ್ ಸೆಲೆರಿಯೊ ಸಂಪೂರ್ಣವಾಗಿ ಇಂಟಿರಿಯರ್ ಅನ್ನು ನವೀಕರಿಸಲಾಗಿದೆ. ಸ್ಪೈ ಚಿತ್ರಗಳಲ್ಲಿ ಕಂಡುಬಂದಂತೆ, ಕ್ಯಾಬಿನ್ ಹೊಸ ವಿನ್ಯಾಸವನ್ನು ಪಡೆದುಕೊಂಡಿದೆ. ನ್ಯೂ ಜನರೇಷನ್ ಸೆಲೆರಿಯೊ ಆಕರ್ಷಕ ಇಂಟಿರಿಯರ್ ಅನ್ನು ಹೊಂದಿರಲಿದೆ.
MOST READ: 2020ರ ಸಿಟಿ ಕಾರಿನ ಉತ್ಪಾದನೆಯನ್ನು ಪ್ರಾರಂಭಿಸಿದ ಹೋಂಡಾ

ನ್ಯೂ ಜನರೇಷನ್ ಸೆಲೆರಿಯೊ ಕಾರಿನ ಇಂಟಿರಿಯರ್ ನಲ್ಲಿ ಎರಡು ಕಪ್ ಹೋಲ್ಡರ್ಗಳು ಮತ್ತು ಮೌಂಟಡ್ ಫ್ರಂಟ್ ಪವರ್ ವಿಂಡೋ ಸ್ವಿಚ್ಗಳೊಂದಿಗೆ ಹೊಸ ಸೆಂಟರ್ ಕನ್ಸೋಲ್ ಅನ್ನು ಪಡೆಯುತ್ತದೆ. ಸೆಂಟ್ರಲ್ ಕನ್ಸೋಲ್ನಲ್ಲಿ 12ವ್ಯಾಟ್ ಪವರ್ ಸಾಕೆಟ್ ಸಹ ಕಂಡುಬರುತ್ತದೆ. ಇನ್ಸ್ ಟ್ರೂಮೆಂಟ್ ಕ್ಲಸ್ಟರ್ ಪ್ರಸ್ತುತ ಮಾದರಿಯಲ್ಲಿ ಕಂಡುಬರುವಂತೆಯೇ ಇದೆ.

ಇನ್ನು ಹೊಸ ಸೆಲೆರಿಯೊ ಕಾರಿನ ಇಂಟಿರಿಯರ್ ನಲ್ಲಿ ಮೌಂಟಡ್ ಟಚ್ಸ್ಕ್ರೀನ್ ಇನ್ಫೋಟೈನ್ಮೆಂಟ್ ಸಿಸ್ಟಂ ಅನ್ನು ಹೊಂದಿರಲಿದೆ. ಇದರಲ್ಲಿ ಆಪಲ್ ಕಾರ್ ಪ್ಲೇ ಮತ್ತು ಆಂಡ್ರಾಯ್ಡ್ ಆಟೋ ಒಳಗೊಂಡಿರುತ್ತದೆ. ಈ ಹೊಸ ಕಾರಿನಲ್ಲಿ ಫ್ಯಾಬ್ರಿಕ್ ಸೀಟುಗಳು, ಆಟೋಮ್ಯಾಟಿಕ್ ಎಸಿ, ಸ್ಟೀಯರಿಂಗ್ ಮೌಂಟೆಡ್ ಕಂಟ್ರೋಲ್ಗಳೊಂದಿಗೆ ಇತರ ಫೀಚರುಗಳನ್ನು ಹೊಂದಿರುತ್ತದೆ.

ಮಾರುತಿ ಸುಜುಕಿ ಸೆಲೆರಿಯೊ ಭಾರತೀಯ ಮಾರುಕಟ್ಟೆಯಲ್ಲಿ ಬಿಡುಗಡೆಯಾಗಲಿರುವ ಬಹುನಿರೀಕ್ಷಿತ ಕಾರುಗಳಲ್ಲಿ ಒಂದಾಗಿದೆ. ಹೊಸ ತಲೆಮಾರಿನ ಮಾರುತಿ ಸುಜುಕಿ ಸೆಲೆರಿಯೊ ಕಾರು ಭಾರತೀಯ ಮಾರುಕಟ್ಟೆಯಲ್ಲಿ ಬಿಡುಗಡೆಯಾದ ಬಳಿಕ ಟಾಟಾ ಟಿಯಾಗೋ, ಹ್ಯುಂಡೈ ಸ್ಯಾಂಟ್ರೊ ಮತ್ತು ರೆನಾಲ್ಟ್ ಕ್ವಿಡ್ ಕಾರುಗಳಿಗೆ ಪೈಪೋಟಿ ನೀಡುತ್ತದೆ.