ಹೊಸ ಸೆಲೆರಿಯೊ ಕಾರಿನ ಬಿಡುಗಡೆಯನ್ನು ಮುಂದೂಡಿದ ಮಾರುತಿ ಸುಜುಕಿ

ಜನಪ್ರಿಯ ಕಾರು ಉತ್ಪಾದನಾ ಕಂಪನಿಯಾಗಿರುವ ಮಾರುತಿ ಸುಜುಕಿ ತನ್ನ ಹೊಸ ತಲೆಮಾರಿನ ಸೆಲೆರಿಯೊ ಕಾರನ್ನು ಭಾರತೀಯ ಮಾರುಕಟ್ಟೆಯಲ್ಲಿ ಬಿಡುಗಡೆಗೊಳಿಸಲು ಸಜ್ಜಾಗುತ್ತಿದೆ. ಆದರೆ ಮಾರುತಿ ಸುಜುಕಿ ಕಂಪನಿಯು ತನ್ನ ಹೊಸ ಸೆಲೆರಿಯೊ ಹ್ಯಾಚ್‌ಬ್ಯಾಕ್ ಬಿಡುಗಡೆಯನ್ನು ಭಾರತೀಯ ಮಾರುಕಟ್ಟೆಯಲ್ಲಿ ಮುಂದೂಡಲಾಗಿದೆ.

ಹೊಸ ಸೆಲೆರಿಯೊ ಕಾರಿನ ಬಿಡುಗಡೆಯನ್ನು ಮುಂದೂಡಿದ ಮಾರುತಿ ಸುಜುಕಿ

ಹೊಸ ತಲೆಮಾರಿನ ಮಾರುತಿ ಸುಜುಕಿ ಸೆಲೆರಿಯೊ ಹ್ಯಾಚ್‌ಬ್ಯಾಕ್ ಈ ವರ್ಷದ ದೀಪಾವಳಿಯ ಹಬ್ಬದ ಸಮಯದಲ್ಲಿ ಬಿಡುಗಡೆಯಾಗಬಹುದೆಂದು ನಿರೀಕ್ಷಿಸಲಾಗಿತ್ತು.ಆಟೋಕಾರ್ ಇಂಡಿಯಾದ ವರದಿ ಪ್ರಕಾರ, ಮಾರುತಿ ಸುಜುಕಿ ಸೆಲೆರಿಯೊ ಹ್ಯಾಚ್‌ಬ್ಯಾಕ್ ಬಿಡುಗಡೆಯನ್ನು ಮುಂದಿನ ವರ್ಷದ ಆರಂಭಕ್ಕೆ ಮುಂದೂಡಲಾಗಿದೆ. ಭಾರತದಲಿ ಸೆಲಿರಿಯೊ ಹ್ಯಾಚ್‌ಬ್ಯಾಕ್ ಅನ್ನು ಮೊದಲ ಬಾರಿಗೆ 2014ರಲ್ಲಿ ಬಿಡುಗಡೆಗೊಳಿಸಿದರು. ಆದರೆ ಇತರ ಮಾದರಿಗಳ ಮಾದರಿಯಂತೆ ದೊಡ್ಡ ಯಶ್ವಸಿಯನ್ನು ಪಡೆದುಕೊಳ್ಳಲು ಸಾಧ್ಯವಾಗಿಲ್ಲ.

ಹೊಸ ಸೆಲೆರಿಯೊ ಕಾರಿನ ಬಿಡುಗಡೆಯನ್ನು ಮುಂದೂಡಿದ ಮಾರುತಿ ಸುಜುಕಿ

ಆದರೆ ಸದ್ಯ ಭಾರತೀಯ ಮಾರುಕಟ್ಟೆಯಲ್ಲಿ ಕರೋನಾ ಸೋಂಕಿನಿಂದ ಸಣ್ಣ ಕಾರುಗಳ ಮಾರಾಟ ಹೆಚ್ಚಾಗಿದೆ.ಕರೋನಾ ಸೋಂಕಿನ ಭೀತಿಯಿಂದ ಜನರು ಸಾರ್ವಜನಿಕ ವಾಹನಗಳಲ್ಲಿ ಓಡಾಡುವುದು ಅಷ್ಟು ಸುರಕ್ಷಿತವಲ್ಲವೆಂದು ಸಣ್ಣ ಕಾರುಗಳ ಮೊರೆ ಹೋಗುತ್ತಿದ್ದಾರೆ.

MOST READ: ಅನಾವರಣವಾಯ್ತು ಟೊಯೊಟಾ ಕೊರೊಲ್ಲಾ ಟೂರಿಂಗ್ ರಿಬ್ಯಾಡ್ಜ್ ಆವೃತ್ತಿ ಸುಜುಕಿ ಸ್ವೇಸ್

ಹೊಸ ಸೆಲೆರಿಯೊ ಕಾರಿನ ಬಿಡುಗಡೆಯನ್ನು ಮುಂದೂಡಿದ ಮಾರುತಿ ಸುಜುಕಿ

ಇಂತಹ ಸಂದರ್ಭದಲ್ಲಿ ಮಾರುತಿ ಸುಜುಕಿ ಕಂಪನಿಯು ಸಣ್ಣ ಕಾರುಗಳನ್ನು ಬಿಡುಗಡೆಗೊಳಿಸಿದರೆ ಮಾರಾಟವನ್ನು ಹೆಚ್ಚಿಸಲು ಸಹಾಯವಾಗುತ್ತಿತ್ತು. ಆದರೆ ಮಾರುತಿ ಸುಜುಕಿ ಕಂಪನಿಯು ಸೆಲೆರಿಯೊ ಕಾರಿನ ಬಿಡುಗಡೆಯನ್ನು ಮುಂದೂಡಲಾಗಿದೆ. ಮಾರುತಿ ಸುಜುಕಿ ಕಂಪನಿಯು ಹಾರ್ಟ್‌ಟೆಕ್ಟ್ ಪ್ಲಾಟ್‌ಫಾರ್ಮ್ ಅನ್ನು ಆಧರಿಸಿ ಹೊಸ ಸೆಲೆರಿಯೊ ಕಾರನ್ನು ಅಭಿವೃದ್ದಿಪಡಿಸಲಾಗುತ್ತದೆ.

ಹೊಸ ಸೆಲೆರಿಯೊ ಕಾರಿನ ಬಿಡುಗಡೆಯನ್ನು ಮುಂದೂಡಿದ ಮಾರುತಿ ಸುಜುಕಿ

ಹೊಸ ಸೆಲೆರಿಯೊ ಹ್ಯಾಚ್‌ಬ್ಯಾಕ್‌ ಸ್ವಲ್ಪ ಭಿನ್ನವಾದ ವಿನ್ಯಾಸವನ್ನು ಹೊಂದಿದೆ. ಈ ಸೆಲೆರಿಯೊ ಕಾರು ಕ್ರಾಸ್‌ಒವರ್‌ನಂತೆ ವಿನ್ಯಾಸವಿರುತ್ತದೆ. ಎಸ್-ಪ್ರೆಸ್ಸೊ, ವ್ಯಾಗನ್ಆರ್, ಸ್ವಿಫ್ಟ್ ಮತ್ತು ಬಲೆನೊಗಳಂತಹ ಇತರ ಮಾರುತಿ ಕಾರುಗಳೊಂದಿಗೆ ಪ್ಲಾಟ್‌ಫಾರ್ಮ್ ಹಂಚಿಕೊಳ್ಳುವ ಹೊಸ ಸೆಲೆರಿಯೊವನ್ನು ಕ್ರಾಸ್‌ಒವರ್ ಆಗಿ ಮಾರಾಟ ಮಾಡಲಾಗುವುದು.

MOST READ: ಮಾರಾಟದಲ್ಲಿ ಹೊಸ ಮೈಲಿಗಲ್ಲು ಸಾಧಿಸಿದ ಹೋಂಡಾ ಆಮೇಜ್ ಕಾರು

ಹೊಸ ಸೆಲೆರಿಯೊ ಕಾರಿನ ಬಿಡುಗಡೆಯನ್ನು ಮುಂದೂಡಿದ ಮಾರುತಿ ಸುಜುಕಿ

ಈ ಹೊಸ ಕಾರಿನಲ್ಲಿ ಎಲ್‌ಇಡಿ ಡಿಆರ್‌ಎಲ್‌, ಪ್ರೊಜೆಕ್ಟರ್ ಹೆಡ್‌ಲೈಟ್, ಸ್ಟೈಲಿಶ್ ಅಲಾಯ್ ವ್ಹೀಲ್ ಗಳು, ಎಲ್‌ಇಡಿ ಟೈಲ್ ಲೈಟ್‌ಗಳು, ರಿಯರ್ ವೈಪರ್, ಚಂಕಿಯರ್ ಬಂಪರ್ ಗಳೂ, ಹೆಚ್ಚಿನ ಗ್ರೌಂಡ್ ಕ್ಲಿಯರೆನ್ಸ್, ಎಲ್‌ಇಡಿ ಟರ್ನ್ ಇಂಡಿಕೇಟರ್‌ಗಳನ್ನು ಹೊಂದಿರುವ ಒಆರ್‌ವಿಎಂಗಳು ಮುಂತಾದ ಫೀಚರುಗಳನ್ನು ಹೊಂದಿರಲಿದೆ.

ಹೊಸ ಸೆಲೆರಿಯೊ ಕಾರಿನ ಬಿಡುಗಡೆಯನ್ನು ಮುಂದೂಡಿದ ಮಾರುತಿ ಸುಜುಕಿ

ಮಾರುಕಟ್ಟೆಯಲ್ಲಿರುವ ಸೆಲೆರಿಯೊ 1.0 ಲೀಟರ್ 3 ಸಿಲಿಂಡರ್ ಪೆಟ್ರೋಲ್ ಬಿಎಸ್ 6 ಎಂಜಿನ್ ಆಯ್ಕೆಯನ್ನು ಹೊಂದಿದೆ. ಹೊಸ ತಲೆಮಾರಿನ ಸೆಲೆರಿಯೊದಲ್ಲಿ ಅದೇ ಎಂಜಿನ್ ಆಯ್ಜೆಯನ್ನು ಹೊಂದಿರಲಿದೆ. ಈ ಎಂಜಿನ್ 67 ಬಿಹೆಚ್‍ಪಿ ಪವರ್ ಮತ್ತು 90 ಎನ್ಎಂ ಟಾರ್ಕ್ ಅನ್ನು ಉತ್ಪಾದಿಸುತ್ತದೆ.

MOST READ: 2020ರ ಸಿಟಿ ಕಾರಿನ ಉತ್ಪಾದನೆಯನ್ನು ಪ್ರಾರಂಭಿಸಿದ ಹೋಂಡಾ

ಹೊಸ ಸೆಲೆರಿಯೊ ಕಾರಿನ ಬಿಡುಗಡೆಯನ್ನು ಮುಂದೂಡಿದ ಮಾರುತಿ ಸುಜುಕಿ

ಇನ್ನು ಹೊಸ ಸೆಲೆರಿಯೊ ಕಾರಿನ ಇಂಟಿರಿಯರ್ ನಲ್ಲಿ ಮೌಂಟಡ್ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಂ ಅನ್ನು ಹೊಂದಿರಲಿದೆ. ಇದರಲ್ಲಿ ಆಪಲ್ ಕಾರ್ ಪ್ಲೇ ಮತ್ತು ಆಂಡ್ರಾಯ್ಡ್ ಆಟೋ ಒಳಗೊಂಡಿರುತ್ತದೆ.

ಹೊಸ ಸೆಲೆರಿಯೊ ಕಾರಿನ ಬಿಡುಗಡೆಯನ್ನು ಮುಂದೂಡಿದ ಮಾರುತಿ ಸುಜುಕಿ

ಈ ಹೊಸ ಕಾರಿನಲ್ಲಿ ಫ್ಯಾಬ್ರಿಕ್ ಸೀಟುಗಳು, ಕಪ್ ಹೋಲ್ಡರ್‌ಗಳು, ಆಟೋಮ್ಯಾಟಿಕ್ ಎಸಿ, ಸ್ಟೀಯರಿಂಗ್ ಮೌಂಟೆಡ್ ಕಂಟ್ರೋಲ್‌ಗಳೊಂದಿಗೆ ಇತರ ಫೀಚರುಗಳನ್ನು ಹೊಂದಿರುತ್ತದೆ.

ಹೊಸ ಸೆಲೆರಿಯೊ ಕಾರಿನ ಬಿಡುಗಡೆಯನ್ನು ಮುಂದೂಡಿದ ಮಾರುತಿ ಸುಜುಕಿ

ಮಾರುತಿ ಸುಜುಕಿ ಕಂಪನಿಯು ಬಿಡುಗಡೆಗೊಳಿಸಲಿರುವ ಬಹುನಿರೀಕ್ಷಿತ ಕಾರು ಇದಾಗಿದೆ. ಹೊಸ ತಲೆಮಾರಿನ ಮಾರುತಿ ಸುಜುಕಿ ಸೆಲೆರಿಯೊ ಕಾರು ಭಾರತೀಯ ಮಾರುಕಟ್ಟೆಯಲ್ಲಿ ಬಿಡುಗಡೆಯಾದ ಬಳಿಕ ಟಾಟಾ ಟಿಯಾಗೋ, ಹ್ಯುಂಡೈ ಸ್ಯಾಂಟ್ರೊ ಮತ್ತು ರೆನಾಲ್ಟ್ ಕ್ವಿಡ್ ಕಾರುಗಳಿಗೆ ಪೈಪೋಟಿ ನೀಡುತ್ತದೆ.

Most Read Articles
ಹೊಸ ಕೊಡಿಯಾಕ್ ಎಸ್‍ಯುವಿಯು ಮುಂದಿನ ವರ್ಷದ ಆರಂಭದಲ್ಲಿ ಬಿಡುಗಡೆಗೊಳಿಸಬಹುದು ಎಂದು ನಿರೀಕ್ಷಿಸುತ್ತೇವೆ. ಇದರ ಬಗ್ಗೆ ಹೆಚ್ಚಿನ ಮಾಹಿತಿ ಇಲ್ಲಿ ನೋಡೋಣ.

Kannada
English summary
New-Generation Maruti Celerio India Launch Postponed To Early-2021. Read In Kannada.
Story first published: Saturday, October 17, 2020, 14:20 [IST]
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X