ಮತ್ತೊಮ್ಮೆ ಸ್ಪಾಟ್ ಟೆಸ್ಟ್ ನಡೆಸಿದ ಹೊಸ ಮಾರುತಿ ಸುಜುಕಿ ಸೆಲೆರಿಯೊ

ಜನಪ್ರಿಯ ಕಾರು ಉತ್ಪಾದನಾ ಕಂಪನಿಯಾಗಿರುವ ಮಾರುತಿ ಸುಜುಕಿ ತನ್ನ ಹೊಸ ತಲೆಮಾರಿನ ಸೆಲೆರಿಯೊ ಕಾರನ್ನು ಭಾರತೀಯ ಮಾರುಕಟ್ಟೆಯಲ್ಲಿ ಬಿಡುಗಡೆಗೊಳಿಸಲು ಸಜ್ಜಾಗುತ್ತಿದೆ. ಹೊಸ ತಲೆಮಾರಿನ ಸೆಲೆರಿಯೊ ಕಾರು ಭಾರತದಲ್ಲಿ ಮತ್ತೊಮ್ಮೆ ಸ್ಪಾಟ್ ಟೆಸ್ಟ್ ನಡೆಸಿದೆ.

ಮತ್ತೊಮ್ಮೆ ಸ್ಪಾಟ್ ಟೆಸ್ಟ್ ನಡೆಸಿದ ಹೊಸ ಮಾರುತಿ ಸುಜುಕಿ ಸೆಲೆರಿಯೊ

ಈ ಹೊಸ ತಲೆಮಾರಿನ ಸೆಲೆರಿಯೊ ಕಾರನ್ನು ಈ ವರ್ಷದ ಅಂತ್ಯದಲ್ಲಿ ಅಥವಾ ಮುಂದಿನ ವರ್ಷದ ಆರಂಭದಲ್ಲಿ ಬಿಡುಗಡೆಗೊಳಿಸಬಹುದು ಎಂದು ನಿರೀಕ್ಷಿಸುತ್ತೇವೆ. ಭಾರತದಲಿ ಸೆಲಿರಿಯೊ ಹ್ಯಾಚ್‌ಬ್ಯಾಕ್ ಅನ್ನು ಮೊದಲ ಬಾರಿಗೆ 2014ರಲ್ಲಿ ಬಿಡುಗಡೆಗೊಳಿಸಿದರು. ಆದರೆ ಇತರ ಮಾದರಿಗಳ ಮಾದರಿಯಂತೆ ದೊಡ್ಡ ಯಶ್ವಸಿಯನ್ನು ಪಡೆದುಕೊಳ್ಳಲು ಸಾಧ್ಯವಾಗಿಲ್ಲ. ಆದರೆ ಸದ್ಯ ಭಾರತೀಯ ಮಾರುಕಟ್ಟೆಯಲ್ಲಿ ಕರೋನಾ ಸೋಂಕಿನಿಂದ ಸಣ್ಣ ಕಾರುಗಳ ಮಾರಾಟ ಹೆಚ್ಚಾಗಿದೆ.

ಮತ್ತೊಮ್ಮೆ ಸ್ಪಾಟ್ ಟೆಸ್ಟ್ ನಡೆಸಿದ ಹೊಸ ಮಾರುತಿ ಸುಜುಕಿ ಸೆಲೆರಿಯೊ

ಕರೋನಾ ಸೋಂಕಿನ ಭೀತಿಯಿಂದ ಜನರು ಸಾರ್ವಜನಿಕ ವಾಹನಗಳಲ್ಲಿ ಓಡಾಡುವುದು ಅಷ್ಟು ಸುರಕ್ಷಿತವಲ್ಲವೆಂದು ಸಣ್ಣ ಕಾರುಗಳ ಮೊರೆ ಹೋಗುತ್ತಿದ್ದಾರೆ. ಇಂತಹ ಸಂದರ್ಭದಲ್ಲಿ ಮಾರುತಿ ಸುಜುಕಿ ಕಂಪನಿಯು ಸಣ್ಣ ಕಾರುಗಳನ್ನು ಬಿಡುಗಡೆಗೊಳಿಸಿದರೆ ಮಾರಾಟವನ್ನು ಹೆಚ್ಚಿಸಲು ಸಹಾಯವಾಗುತ್ತದೆ.

MOST READ: ಅನಾವರಣವಾಯ್ತು ಟೊಯೊಟಾ ಕೊರೊಲ್ಲಾ ಟೂರಿಂಗ್ ರಿಬ್ಯಾಡ್ಜ್ ಆವೃತ್ತಿ ಸುಜುಕಿ ಸ್ವೇಸ್

ಮತ್ತೊಮ್ಮೆ ಸ್ಪಾಟ್ ಟೆಸ್ಟ್ ನಡೆಸಿದ ಹೊಸ ಮಾರುತಿ ಸುಜುಕಿ ಸೆಲೆರಿಯೊ

ಇದೇ ಕಾರಣದಿಂದ ಸೆಲೆರಿಯೊ ಕಾರನ್ನು ಶೀಘ್ರದಲ್ಲೇ ಬಿಡುಗಡೆಗೊಳಿಸಬಹುದು ಎಂದು ನಿರೀಕ್ಷಿಸುತ್ತೇವೆ. ಇನ್ನು ಈ ಹೊಸ ಮಾರುತಿ ಸೆಲೆರಿಯೊ ಸ್ಪಾಟ್ ಟೆಸ್ಟ್ ನಡೆಸಿರುವುದನ್ನು ಇಂಡಿಯನ್ ಆಟೋ ಬಹಿರಂಗಪಡಿಸಿದೆ. ಮಾರುತಿ ಸುಜುಕಿ ಕಂಪನಿಯು ಹಾರ್ಟ್‌ಟೆಕ್ಟ್ ಪ್ಲಾಟ್‌ಫಾರ್ಮ್ ಅನ್ನು ಆಧರಿಸಿ ಹೊಸ ಸೆಲೆರಿಯೊ ಕಾರನ್ನು ಅಭಿವೃದ್ದಿಪಡಿಸಲಾಗುತ್ತದೆ.

ಮತ್ತೊಮ್ಮೆ ಸ್ಪಾಟ್ ಟೆಸ್ಟ್ ನಡೆಸಿದ ಹೊಸ ಮಾರುತಿ ಸುಜುಕಿ ಸೆಲೆರಿಯೊ

ಹೊಸ ಸೆಲೆರಿಯೊ ಹ್ಯಾಚ್‌ಬ್ಯಾಕ್‌ ಸ್ವಲ್ಪ ಭಿನ್ನವಾದ ವಿನ್ಯಾಸವನ್ನು ಹೊಂದಿದೆ. ಈ ಸೆಲೆರಿಯೊ ಕಾರು ಕ್ರಾಸ್‌ಒವರ್‌ನಂತೆ ವಿನ್ಯಾಸವಿರುತ್ತದೆ. ಎಸ್-ಪ್ರೆಸ್ಸೊ, ವ್ಯಾಗನ್ಆರ್, ಸ್ವಿಫ್ಟ್ ಮತ್ತು ಬಲೆನೊಗಳಂತಹ ಇತರ ಮಾರುತಿ ಕಾರುಗಳೊಂದಿಗೆ ಪ್ಲಾಟ್‌ಫಾರ್ಮ್ ಹಂಚಿಕೊಳ್ಳುವ ಹೊಸ ಸೆಲೆರಿಯೊವನ್ನು ಕ್ರಾಸ್‌ಒವರ್ ಆಗಿ ಮಾರಾಟ ಮಾಡಲಾಗುವುದು.

MOST READ: ಮಾರಾಟದಲ್ಲಿ ಹೊಸ ಮೈಲಿಗಲ್ಲು ಸಾಧಿಸಿದ ಹೋಂಡಾ ಆಮೇಜ್ ಕಾರು

ಮತ್ತೊಮ್ಮೆ ಸ್ಪಾಟ್ ಟೆಸ್ಟ್ ನಡೆಸಿದ ಹೊಸ ಮಾರುತಿ ಸುಜುಕಿ ಸೆಲೆರಿಯೊ

ಈ ಹೊಸ ಕಾರಿನಲ್ಲಿ ಎಲ್‌ಇಡಿ ಡಿಆರ್‌ಎಲ್‌, ಪ್ರೊಜೆಕ್ಟರ್ ಹೆಡ್‌ಲೈಟ್, ಸ್ಟೈಲಿಶ್ ಅಲಾಯ್ ವ್ಹೀಲ್ ಗಳು, ಎಲ್‌ಇಡಿ ಟೈಲ್ ಲೈಟ್‌ಗಳು, ರಿಯರ್ ವೈಪರ್, ಚಂಕಿಯರ್ ಬಂಪರ್ ಗಳೂ, ಹೆಚ್ಚಿನ ಗ್ರೌಂಡ್ ಕ್ಲಿಯರೆನ್ಸ್, ಎಲ್‌ಇಡಿ ಟರ್ನ್ ಇಂಡಿಕೇಟರ್‌ಗಳನ್ನು ಹೊಂದಿರುವ ಒಆರ್‌ವಿಎಂಗಳು ಮುಂತಾದ ಫೀಚರುಗಳನ್ನು ಹೊಂದಿರಲಿದೆ.

ಮತ್ತೊಮ್ಮೆ ಸ್ಪಾಟ್ ಟೆಸ್ಟ್ ನಡೆಸಿದ ಹೊಸ ಮಾರುತಿ ಸುಜುಕಿ ಸೆಲೆರಿಯೊ

ಮಾರುಕಟ್ಟೆಯಲ್ಲಿರುವ ಸೆಲೆರಿಯೊ 1.0 ಲೀಟರ್ 3 ಸಿಲಿಂಡರ್ ಪೆಟ್ರೋಲ್ ಬಿಎಸ್ 6 ಎಂಜಿನ್ ಆಯ್ಕೆಯನ್ನು ಹೊಂದಿದೆ. ಹೊಸ ತಲೆಮಾರಿನ ಸೆಲೆರಿಯೊದಲ್ಲಿ ಅದೇ ಎಂಜಿನ್ ಆಯ್ಜೆಯನ್ನು ಹೊಂದಿರಲಿದೆ. ಈ ಎಂಜಿನ್ 67 ಬಿಹೆಚ್‍ಪಿ ಪವರ್ ಮತ್ತು 90 ಎನ್ಎಂ ಟಾರ್ಕ್ ಅನ್ನು ಉತ್ಪಾದಿಸುತ್ತದೆ.

MOST READ: ಮರ್ಸಿಡಿಸ್ ಬೆಂಝ್ ಜಿಎಲ್ಇ ಎಸ್‍ಯುವಿಯ ಎರಡು ಹೊಸ ರೂಪಾಂತರಗಳು ಬಿಡುಗಡೆ

ಮತ್ತೊಮ್ಮೆ ಸ್ಪಾಟ್ ಟೆಸ್ಟ್ ನಡೆಸಿದ ಹೊಸ ಮಾರುತಿ ಸುಜುಕಿ ಸೆಲೆರಿಯೊ

ಇನ್ನು ಹೊಸ ಸೆಲೆರಿಯೊ ಕಾರಿನ ಇಂಟಿರಿಯರ್ ನಲ್ಲಿ ಮೌಂಟಡ್ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಂ ಅನ್ನು ಹೊಂದಿರಲಿದೆ. ಇದರಲ್ಲಿ ಆಪಲ್ ಕಾರ್ ಪ್ಲೇ ಮತ್ತು ಆಂಡ್ರಾಯ್ಡ್ ಆಟೋ ಒಳಗೊಂಡಿರುತ್ತದೆ.

ಮತ್ತೊಮ್ಮೆ ಸ್ಪಾಟ್ ಟೆಸ್ಟ್ ನಡೆಸಿದ ಹೊಸ ಮಾರುತಿ ಸುಜುಕಿ ಸೆಲೆರಿಯೊ

ಇನ್ನು ಈ ಹೊಸ ಕಾರಿನಲ್ಲಿ ಫ್ಯಾಬ್ರಿಕ್ ಸೀಟುಗಳು, ಕಪ್ ಹೋಲ್ಡರ್‌ಗಳು, ಆಟೋಮ್ಯಾಟಿಕ್ ಎಸಿ, ಸ್ಟೀಯರಿಂಗ್ ಮೌಂಟೆಡ್ ಕಂಟ್ರೋಲ್‌ಗಳೊಂದಿಗೆ ಇತರ ಫೀಚರುಗಳನ್ನು ಹೊಂದಿರುತ್ತದೆ.

ಮತ್ತೊಮ್ಮೆ ಸ್ಪಾಟ್ ಟೆಸ್ಟ್ ನಡೆಸಿದ ಹೊಸ ಮಾರುತಿ ಸುಜುಕಿ ಸೆಲೆರಿಯೊ

ಹೊಸ ತಲೆಮಾರಿನ ಮಾರುತಿ ಸುಜುಕಿ ಸೆಲೆರಿಯೊ ಕಾರು ಭಾರತೀಯ ಮಾರುಕಟ್ಟೆಯಲ್ಲಿ ಬಿಡುಗಡೆಯಾದ ಬಳಿಕ ಟಾಟಾ ಟಿಯಾಗೋ, ಹ್ಯುಂಡೈ ಸ್ಯಾಂಟ್ರೊ ಮತ್ತು ರೆನಾಲ್ಟ್ ಕ್ವಿಡ್ ಕಾರುಗಳಿಗೆ ಪೈಪೋಟಿ ನೀಡುತ್ತದೆ. ಮಾರುತಿ ಸುಜುಕಿ ಕಂಪನಿಯು ಬಿಡುಗಡೆಗೊಳಿಸಲಿರುವ ಬಹುನಿರೀಕ್ಷಿತ ಕಾರು ಇದಾಗಿದೆ.

Article Published On: Saturday, October 3, 2020, 16:04 [IST]
English summary
Next Generation Maruti Suzuki Celerio Spotted Testing Once Again. Read In Kannada.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+