ಮೊದಲ ಬಾರಿಗೆ ಸ್ಪಾಟ್ ಟೆಸ್ಟ್​ನಲ್ಲಿ ಕಾಣಿಸಿಕೊಂಡ ಮಾರುತಿ ಸುಜುಕಿ ಜಿಮ್ನಿ

ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಮೆಚ್ಚುಗೆಯನ್ನು ಪಡೆದುಕೊಂಡ ಸುಜುಕಿ ಜಿಮ್ನಿ ಮಿನಿ-ಎಸ್‌ಯುವಿಯು ಭಾರತೀಯ ಮಾರುಕಟ್ಟೆಗೆ ಲಗ್ಗೆ ಇಡಲಿದೆ. ಮಾರುತಿ ಸುಜುಕಿ ಜಿಮ್ನಿ ಭಾರತೀಯ ಮಾರುಕಟ್ಟೆಯಲ್ಲಿ ಬಿಡುಗಡೆಯಾಗಲಿರುವ ಬಹುನೀರಿಕ್ಷಿತ ಎಸ್‍‍ಯುವಿಗಳಲ್ಲಿ ಒಂದಾಗಿದೆ.

ಮೊದಲ ಬಾರಿಗೆ ಸ್ಪಾಟ್ ಟೆಸ್ಟ್​ನಲ್ಲಿ ಕಾಣಿಸಿಕೊಂಡ ಮಾರುತಿ ಸುಜುಕಿ ಜಿಮ್ನಿ

ಮಾರುತಿ ಸುಜುಕಿ ಜಿಮ್ನಿ ಮೊಟ್ಟ ಮೊದಲ ಬಾರಿಗೆ ಭಾರತದಲ್ಲಿ ಸ್ಪಾಟ್ ಟೆಸ್ಟ್ ನಡೆಸಿದೆ. ಮಾರುತಿ ಸುಜುಕಿ ಕಂಪನಿಯ ಗುರಗಾಂವ್‌ನ ಉತ್ಪಾದನಾ ಕೇಂದ್ರದ ಬಳಿ ಸ್ಪಾಟ್ ಟೆಸ್ಟ್ ನಡೆಸುವ ಸ್ಪೈ ಚಿತ್ರಗಳು ಬಹಿರಂಗವಾಗಿವೆ. ಸ್ಪಾಟ್ ಟೆಸ್ಟ್ ವೇಳೆ ಅಲಾಯ್ ವ್ಹೀಲ್ ಗಳನ್ನು ಬ್ಲ್ಯಾಕ್ ಕ್ಲಾಡಿಂಗ್ ನೊಂದಿಗೆ ಬಳಸಿದೆ. ಭಾರತದ ಆಫ್-ರೋಡ್ ಪ್ರಿಯರು ಬಹುಕಾತರದಿಂದ ಸುಜುಕಿ ಜಿಮ್ನಿ ಎಸ್‍ಯುವಿಯನ್ನು ಕಾಯುತ್ತಿದ್ದಾರೆ.

ಮೊದಲ ಬಾರಿಗೆ ಸ್ಪಾಟ್ ಟೆಸ್ಟ್​ನಲ್ಲಿ ಕಾಣಿಸಿಕೊಂಡ ಮಾರುತಿ ಸುಜುಕಿ ಜಿಮ್ನಿ

ಮಿನಿ ಎಸ್‍ಯುವಿಯಲ್ಲಿ 1.5-ಲೀಟರ್ ಕೆ-ಸೀರೀಸ್ ಪೆಟ್ರೋಲ್ ಎಂಜಿನ್ ಅನ್ನು ಅಳವಡಿಸಬಹುದು. ಈ ಎಂಜಿನ್ 103.2 ಬಿಹೆಚ್‌ಪಿ ಪವರ್ ಮತ್ತು 138 ಎನ್ಎಂ ಟಾರ್ಕ್ ಅನ್ನು ಉತ್ಪಾದಿಸುತ್ತದೆ. ಈ ಎಂಜಿನ್‍ನೊಂದಿಗೆ 5 ಸ್ಪೀಡ್ ಅಥವಾ 4 ಸ್ಪೀಡ್ ಗೇರ್‍‍ಬಾಕ್ಸ್ ಅನ್ನು ಅಳವಡಿಸಲಾಗುತ್ತದೆ.

MOST READ: ಬಿಡುಗಡೆಯ ಸನಿಹದಲ್ಲಿ ಹೊಸ ಮಾರುತಿ ಸುಜುಕಿ ಸೆಲೆರಿಯೊ

ಮೊದಲ ಬಾರಿಗೆ ಸ್ಪಾಟ್ ಟೆಸ್ಟ್​ನಲ್ಲಿ ಕಾಣಿಸಿಕೊಂಡ ಮಾರುತಿ ಸುಜುಕಿ ಜಿಮ್ನಿ

ಈ ಮಿನಿ ಎಸ್‍ಯುವಿಯನ್ನು 2018ರಲ್ಲಿ ಜಾಗತಿಕವಾಗಿ ಅನಾವರಣಗೊಂಡಿತು. ಜಿಮ್ನಿ ಮಿನಿ ಎಸ್‍ಯುವಿಯು ಜಾಗತಿಕವಾಗಿ ಅನಾವರಣಗೊಂಡು 1.5 ವರ್ಷಗಳ ಬಳಿಕ ಭಾರತದ ಮಾರುಕಟ್ಟೆಯಲ್ಲಿ ಅನಾವರಣಗೊಳಿಸಿದೆ. ಮಿನಿ-ಎಸ್‌ಯುವಿ 2019 ರ 'ವರ್ಲ್ಡ್ ಅರ್ಬನ್ ಕಾರ್ ಅಫ್ ದಿ ಇಯರ್' ಎಂಬ ಪ್ರತಿಷ್ಠಿತ ಪ್ರಶಸ್ತಿಯನ್ನು ತನ್ನದಾಗಿಸಿಕೊಂಡಿದೆ.

ಮೊದಲ ಬಾರಿಗೆ ಸ್ಪಾಟ್ ಟೆಸ್ಟ್​ನಲ್ಲಿ ಕಾಣಿಸಿಕೊಂಡ ಮಾರುತಿ ಸುಜುಕಿ ಜಿಮ್ನಿ

ಸುಜುಕಿ ಸಂಸ್ಥೆಯು ಭಾರತೀಯ ಮಾರುಕಟ್ಟೆಯನ್ನು ಜಿಮ್ನಿ ಎಸ್‍ಯುವಿಯ ಉತ್ಪಾದನಾ ಕೇಂದ್ರವನ್ನಾಗಿ ಮಾಡಲು ಯೋಜಿಸಿದೆ. ಸುಜುಕಿ ಕಂಪನಿಯು ಆರಂಭದಲ್ಲಿ ಭಾರತಕ್ಕೆ 3-ಡೋರಿನ ಜಿಮ್ನಿ ಯುನಿಟ್ ಗಳನ್ನು ಆಮದು ಮಾಡಿಕೊಳ್ಳಬಹುದು.

MOST READ: ಅನಾವರಣವಾಯ್ತು ಟೊಯೊಟಾ ಕೊರೊಲ್ಲಾ ಟೂರಿಂಗ್ ರಿಬ್ಯಾಡ್ಜ್ ಆವೃತ್ತಿ ಸುಜುಕಿ ಸ್ವೇಸ್

ಮೊದಲ ಬಾರಿಗೆ ಸ್ಪಾಟ್ ಟೆಸ್ಟ್​ನಲ್ಲಿ ಕಾಣಿಸಿಕೊಂಡ ಮಾರುತಿ ಸುಜುಕಿ ಜಿಮ್ನಿ

ಮಾರುತಿ ಸುಜುಕಿಯ ಗುರುಗ್ರಾಮ್ ಆಧಾರಿತ ಸ್ಥಾವರದಲ್ಲಿ ಜೋಡಿಸಬಹುದು. ನಂತರ 2022-23ರ ವೇಳೆಗೆ ಸುಜುಕಿ ಮೋಟಾರ್ ಭಾರತದಲ್ಲಿ 3 ಮತ್ತು 5-ಡೋರಿನ ಜಿಮ್ನಿ ತಯಾರಿಸಲು ಯೋಜಿಸಿದೆ.

ಮೊದಲ ಬಾರಿಗೆ ಸ್ಪಾಟ್ ಟೆಸ್ಟ್​ನಲ್ಲಿ ಕಾಣಿಸಿಕೊಂಡ ಮಾರುತಿ ಸುಜುಕಿ ಜಿಮ್ನಿ

ಈ ಜಿಮ್ನಿ ಎಸ್‍‍ಯುವಿಯನ್ನು ಭಾರತದಲ್ಲಿ ಬಿಡುಗಡೆಗೊಳಿಸುವ ಬಗ್ಗೆ ಕಂಪನಿ ನಿರ್ಧರಿಸಿರಲಿಲ್ಲ. ಆದರೆ ಆಟೋ ಎಕ್ಸ್ ಪೋದಲ್ಲಿ ಗ್ರಾಹಕರಿಂದ ಉತ್ತಮ ಪ್ರತಿಕ್ರಿಯೆನ್ನು ಲಭಿಸಿರುವುದರಿಂದ ಭಾರತದಲ್ಲಿ ಬಿಡುಗಡೆಗೊಳಿಸಲು ನಿರ್ಧರಿಸಿದೆ. ಹೊಸ ಜಿಮ್ನಿ ಲ್ಯಾಡರ್-ಫ್ರೇಮ್ ಚಾಸಿಸ್ ಅನ್ನು ಆಧರಿಸಿದೆ.

MOST READ: ಸ್ಪಾಟ್ ಟೆಸ್ಟ್​ನಲ್ಲಿ ಕಾಣಿಸಿಕೊಂಡ ಟೊಯೊಟಾ ಫಾರ್ಚೂನರ್ ಫೇಸ್‌ಲಿಫ್ಟ್‌

ಈ ಮಿನಿ ಎಸ್‍ಯುವಿಯಲ್ಲಿ 3 ಲಿಂಕ್ ಆಕ್ಸಲ್ ಸಸ್ಪೆಂಷನ್ ಅನ್ನು ಹೊಂದಿದೆ. ಇದು ಕಠಿಣ ಭೂಪ್ರದೇಶಗಳಲ್ಲಿ ಸುಗಮವಾಗಿ ಸಾಗಲು ನೆರವಾಗುತ್ತದೆ. ಈ ಮಿನಿ ಎಸ್‍‍ಯುವಿಯನ್ನು ಡೀಸೆಲ್ ಅಥವಾ ಹೈಬ್ರಿಡ್ ಆಯ್ಕೆಗಳಲ್ಲಿ ಬಿಡುಗಡೆಗೊಳಿಸುವುದಿಲ್ಲ. ಭಾರತದಲ್ಲಿ ಬಿಡುಗಡೆಯಾದರೆ ಈ ಜಿಮ್ನಿ ಎಸ್‍‍ಯುವಿ 33 ವರ್ಷಗಳ ಕಾಲ ದೇಶದಲ್ಲಿ ಮಾರಾಟವಾಗಿದ್ದ ಜನಪ್ರಿಯ ಜಿಪ್ಸಿ ಎಸ್‍‍ಯುವಿಯ ಉತ್ತರಾಧಿಕಾರಿಯಾಗಲಿದೆ.

ಮೊದಲ ಬಾರಿಗೆ ಸ್ಪಾಟ್ ಟೆಸ್ಟ್​ನಲ್ಲಿ ಕಾಣಿಸಿಕೊಂಡ ಮಾರುತಿ ಸುಜುಕಿ ಜಿಮ್ನಿ

ಮಾರುತಿ ಸುಜುಕಿ ಕಂಪನಿಯು 5-ಡೋರಿನ ಜಿಮ್ನಿ ಎಸ್‍ಯುವಿಯನ್ನು ಭಾರತೀಯ ಮಾರುಕಟ್ಟೆಯಲ್ಲಿ ಬಿಡುಗಡೆಗೊಳಿಸಬಹುದು ಎಂದು ನಿರೀಕ್ಷಿಸುತ್ತೇವೆ. ಈ ಜನಪ್ರಿಯ ಮಾರುತಿ ಸುಜುಕಿ ಜಿಮ್ನಿ ಭಾರತೀಯ ಮಾರುಕಟ್ಟೆಯಲ್ಲಿ ಹೊಸ ಮಹೀಂದ್ರಾ ಥಾರ್ ಎಸ್‍ಯುವಿಗೆ ನೇರವಾಗಿ ಪೈಪೋಟಿ ನೀಡುತ್ತದೆ.

Image Courtesy: Kar DIY

Article Published On: Monday, October 19, 2020, 12:01 [IST]
English summary
Maruti Suzuki Jimny Spied Testing In India. Read In Kannada.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+