ಡೀಲರ್ ಬಳಿ ಕಾಣಿಸಿಕೊಂಡ ಮಾರುತಿ ಎಸ್-ಕ್ರಾಸ್ ಪೆಟ್ರೋಲ್ ಆವೃತ್ತಿ
ದೇಶದ ಅತಿ ದೊಡ್ಡ ಕಾರು ಉತ್ಪಾದನಾ ಸಂಸ್ಥೆಯಾಗಿರುವ ಮಾರುತಿ ಸುಜುಕಿ ತನ್ನ ಜನಪ್ರಿಯ ಎಸ್-ಕ್ರಾಸ್ ಮಾದರಿಯನ್ನು ಪೆಟ್ರೋಲ್ ಆವೃತ್ತಿಯಲ್ಲಿ ಭಾರತದ ಮಾರುಕಟ್ಟೆಯಲ್ಲಿ ಬಿಡುಗಡೆಗೊಳಿಸಲು ಸಜ್ಜಾಗಿದೆ. ಈ ಮಾರುತಿ ಎಸ್-ಕ್ರಾಸ್ ಪೆಟ್ರೋಲ್ ಆವೃತ್ತಿಯು ಮುಂದಿನ ತಿಂಗಳು ಅಗಸ್ಟ್ 5ಕ್ಕೆ ಅಧಿಕೃತವಾಗಿ ಬಿಡುಗಡೆಗೊಳಿಸಲಿದೆ.

ಇದೀಗ ಈ ಹೊಸ ಮಾರುತಿ ಎಸ್-ಕ್ರಾಸ್ ಪೆಟ್ರೋಲ್ ಆವೃತ್ತಿಯು ಬಿಡುಗಡೆಯಾಗುವ ಮುನ್ನ ಡೀಲರ್ ಬಳಿ ಕಾಣಿಸಿಕೊಂಡಿದೆ. ಡೀಲರ್ ಬಳಿ ಮಾರುತಿ ಎಸ್-ಕ್ರಾಸ್ ಪೆಟ್ರೋಲ್ ಆವೃತ್ತಿಯು ತಲುಪಿರುವುದನ್ನು ಗಾಡಿವಾಡಿ ಬಹಿರಂಗಪಡಿಸಿದೆ. ಈ ಎಸ್-ಕ್ರಾಸ್ ಪೆಟ್ರೋಲ್ ಆವೃತ್ತಿಯನ್ನು ಪ್ರೀಮಿಯಂ ನೆಕ್ಸಾ ಡೀಲರ್‍ಗಳ ಮೂಲಕ ಮಾರಾಟ ಮಾಡಲಾಗುತ್ತದೆ. ಇದಕ್ಕಾಗಿ ಮಾರುತಿ ಸುಜುಕಿ ಕಂಪನಿಯು ನೆಕ್ಸಾ ಡೀಲರ್‍ಗಳಿಗೆ ಮಾರಾಟದ ಬಗ್ಗೆ ತರಬೇತಿಯನ್ನು ನೀಡುತ್ತಿದೆ.

ಇನ್ನು ಈ ಮಾರುತಿ ಎಸ್-ಕ್ರಾಸ್ ಪೆಟ್ರೋಲ್ ಆವೃತ್ತಿಯನ್ನು ದೆಹಲಿಯಲ್ಲಿ ನಡೆದ 2020ರ ಆಟೋ ಎಕ್ಸ್ ಪೋದಲ್ಲಿ ಅನಾವರಣಗೊಳಿಸಲಾಗಿತ್ತು. ಡೀಸೆಲ್ ಎಸ್-ಕ್ರಾಸ್ ಕಾರಿನ ಮಾರಾಟದಲ್ಲಿ ಕುಸಿತ ಕಂಡ ಹಿನ್ನೆಲೆಯಲ್ಲಿ ಫೆಬ್ರವರಿ ತಿಂಗಳ ಕೊನೆಯಲ್ಲಿ ಈ ಮಾದರಿಯನ್ನು ಸ್ಥಗಿತಗೊಳಿಸಲಾಗಿತ್ತು.
MOST READ: ಮರ್ಸಿಡಿಸ್ ಬೆಂಝ್ ಜಿಎಲ್ಇ ಎಸ್‍ಯುವಿಯ ಎರಡು ಹೊಸ ರೂಪಾಂತರಗಳು ಬಿಡುಗಡೆ

ಇದರಿಂದಾಗಿ ಮಾರುತಿ ಸುಜುಕಿ ಕಂಪನಿಯು ಎಸ್-ಕ್ರಾಸ್ ಕಾರನ್ನು ಪೆಟ್ರೋಲ್ ಆವೃತ್ತಿಯಲ್ಲಿ ಬಿಡುಗಡೆಗೊಳಿಸುತ್ತಿದೆ. ಮಾರುತಿ ಇತ್ತೀಚೆಗೆ ಮುಂಬರುವ ಎಸ್-ಕ್ರಾಸ್‌ನ ಟೀಸರ್ ಅನ್ನು ಬಿಡುಗಡೆ ಮಾಡಿದ್ದರು.

ಹೊಸ ಎಸ್-ಕ್ರಾಸ್ ಪೆಟ್ರೋಲ್ ಮಾದರಿಯ ಅಧಿಕೃತ ಬುಕ್ಕಿಂಗ್ ಅನ್ನು ಪ್ರಾರಂಭಿಸಿದೆ. ಗ್ರಾಹಕರು ಎಸ್-ಕ್ರಾಸ್ ಪೆಟ್ರೋಲ್ ಮಾದರಿಗಾಗಿ ಟೋಕನ್ ಮೊತ್ತ ರೂ.11,000 ಪಾವತಿಸಿ ಬುಕ್ಕಿಂಗ್ ಅನ್ನು ಮಾಡಿಕೊಳ್ಳಬಹುದಾಗಿದೆ. ಈ ಹೊಸ ಕಾರನ್ನು ಬಿಡುಗಡೆಗೊಳಿಸಿದ ಬಳಿಕ ವಿತರಣೆಯು ಪ್ರಾರಂಭಿಸಲಿದೆ.
MOST READ: ಗ್ಲೋಬಲ್ ಎನ್‌ಸಿಎಪಿಯ ಸುರಕ್ಷತಾ ಟೆಸ್ಟ್ನಲ್ಲಿ ಅಗ್ರಸ್ಥಾನಗಳಿಸಿದ ಮಹೀಂದ್ರಾ ಕಾರು

ಹೊಸ ಎಸ್-ಕ್ರಾಸ್ ನಲ್ಲಿ 1.5 ಪೆಟ್ರೋಲ್ ಬಿಎಸ್-6 ಎಂಜಿನ್ ಅನ್ನು ಅಳವಡಿಸಲಾಗಿದೆ. ಈ ಎಂಜಿನ್ 103.5 ಬಿಹೆಚ್‍ಪಿ ಪವರ್ ಮತ್ತು 138 ಎನ್‍ಎಂ ಟಾರ್ಕ್ ಅನ್ನು ಉತ್ಪಾದಿಸುತ್ತದೆ. ಇದೇ ಎಂಜಿನ್ ಅನ್ನು ಮಾರುತಿ ಸುಜುಕಿ ಕಂಪನಿಯ ಇತರ ಮಾದರಿಗಳಾದ ಸಿಯಾಜ್, ಎರ್ಟಿಗಾ ಮತ್ತು ಎಕ್ಸ್‌ಎಲ್6 ನಲ್ಲಿ ಅಳವಡಿಸಲಾಗಿದೆ.

ಈ ಹೊಸ ಕಾರಿನಲ್ಲಿ ಡಿಜಿಟಲ್ ಇನ್ಸ್ ಟ್ರೂಮೆಂಟ್ ಕ್ಲಸ್ಟರ್, ಟಚ್ ಸ್ಕ್ರೀನ್ ಇನ್ಪೋಟೇನ್‍ಮೆಂಟ್ ಸಿಸ್ಟಂ, ಸ್ಮಾರ್ಟ್‌ಪ್ಲೇ ಸ್ಟುಡಿಯೋ ಸಿಸ್ಟಂ, ಆ್ಯಪಲ್ ಕಾರ್ ಪ್ಲೇ, ಆಂಡ್ರಾಯ್ಡ್ ಆಟೋವನ್ನು ಹೊಂದಿರಲಿದೆ.
MOST READ: ಸ್ಪಾಟ್ ಟೆಸ್ಟ್ನಲ್ಲಿ ಕಾಣಿಸಿಕೊಂಡ ಟೊಯೊಟಾ ಫಾರ್ಚೂನರ್ ಫೇಸ್‌ಲಿಫ್ಟ್

ಇನ್ನೂ ಎಸಿ ವೆಂಟ್ಸ್, ಸ್ಟಿಯರಿಂಗ್ ಮೌಟೆಂಡ್ ಕಂಟ್ರೋಲ್ ಅನ್ನು ಅಳವಡಿಸಲಿದೆ. ಪ್ರಯಾಣಿಕರ ಸುರಕ್ಷತೆಗೆ ಹೆಚ್ಚಿನ ಪ್ರಾಮುಖ್ಯತೆ ನೀಡಲಾಗಿದ್ದು, ಇದರಲ್ಲಿ ಏರ್‍ಬ್ಯಾಗ್, ಎಬಿಎಸ್ ಜೊತೆ ಇಬಿಡಿ, ಐಎಸ್ಒಫಿಕ್ಸ್ ಚೈಲ್ಡ್ ಸೀಟ್, ಸ್ಪೀಡ್ ವಾರ್ನಿಂಗ್ ಸಿಸ್ಟಂ ಮತ್ತು ರೇರ್ ಪಾರ್ಕಿಂಗ್ ಸೆನ್ಸಾರ್ ಅನ್ನು ಹೊಂದಿರಲಿದೆ.

ಈ ಹೊಸ ಮಾರುತಿ ಎಸ್-ಕ್ರಾಸ್ ಪೆಟ್ರೋಲ್ ಆವೃತ್ತಿಯು ಇದೇ ತಿಂಗಳು ಭಾರತೀಯ ಮಾರುಕಟ್ಟೆಯಲ್ಲಿ ಬಿಡುಗಡೆಯಾಗಲಿದೆ. ಹೊಸ ಎಸ್-ಕ್ರಾಸ್ ಪೆಟ್ರೋಲ್ ಆವೃತ್ತಿಯು ಬಿಡುಗಡೆಯಾದ ಬಳಿಕ ಹ್ಯುಂಡೈ ಕ್ರೆಟಾ ಮತ್ತು ಫೋರ್ಡ್ ಇಕೋಸ್ಪೋರ್ಟ್ ಕಾರುಗಳಿಗೆ ಪೈಪೋಟಿ ನೀಡುತ್ತದೆ.


Click it and Unblock the Notifications